ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಬಿಎಂಟಿಸಿ ಕಿರಿಯ ಸಹಾಯಕ ಕಂ ಡಾಟಾ ಎಂಟ್ರಿ ಆಪರೇಟರ್ ಗಳ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ.
2018 ರ ಮಾರ್ಚ್ 23 ರಂದು 100 ಕಿರಿಯ ಸಹಾಯಕರ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ 6 ತಿಂಗಳ ಕಂಪ್ಯೂಟರ್ ತರಬೇತಿ ಪಡೆದಿರಬೇಕು. ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು ಎಂದು ತಿಳಿಸಲಾಗಿತ್ತು.
26 ಸಾವಿರಕ್ಕೂ ಹೆಚ್ಚು ಮಂದಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಜೂನ್ 10 ರಂದು ಪರೀಕ್ಷೆ ಬರೆದಿದ್ದರು. ಮೂಲ ದಾಖಲಾತಿಗಳ ಪರಿಶೀಲನೆಗೆ 1:5 ಅನುಪಾತದಲ್ಲಿ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿತ್ತು. ಮೂಲ ದಾಖಲಾತಿ ಪರಿಶೀಲನೆ ನಡೆಸಿದ ಬಿಎಂಟಿಸಿ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಿದೆ.
ಒಂದು ವರ್ಷದಿಂದ ನೇಮಕಾತಿಗಾಗಿ ಕಾಯುತ್ತಿದ್ದ ಅಭ್ಯರ್ಥಿಗಳಿಗೆ ನಿರಾಸೆಯಾಗಿದೆ. ದಾಖಲಾತಿ ಪರಿಶೀಲನೆ ಸಂದರ್ಭದಲ್ಲಿ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಕಂಪ್ಯೂಟರ್ ತರಬೇತಿ ಪಡೆದಿರುವ ಪ್ರಮಾಣ ಪತ್ರವನ್ನು ಹಾಜರು ಪಡಿಸದ ಹಿನ್ನಲೆಯಲ್ಲಿ ಅರ್ಹರು ಇಲ್ಲ ಎಂದು ಪರಿಗಣಿಸಿ ನೇಮಕಾತಿ ಪ್ರಕ್ರಿಯೆ ರದ್ದುಗೊಳಿಸಲಾಗಿದೆ. ಅಭ್ಯರ್ಥಿಗಳ ಅರ್ಜಿ ಶುಲ್ಕವನ್ನು ವಾಪಸ್ ಕೊಡಲಾಗುವುದು ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನನಿತ್ಯ ಅಡುಗೆ ಮಾಡುವುದು ಸಾಮಾನ್ಯ. ಅದರಲ್ಲೂ ನಾವು ತಿನ್ನುವ ಪ್ರಮುಖ ಅಡುಗೆ ಪದಾರ್ತವೆಂದರೇ ಅಕ್ಕಿ. ನಮ್ಮ ದೇಹದ ಪೌಷ್ಟಿಕತೆಗೆ ಬೇಕಾದ ಅಕ್ಕಿಯನ್ನು ಅನ್ನ ಮಾಡುವಾಗ ಅದನ್ನು ಚೆನ್ನಾಗಿ ತೊಳೆದು ಬಳಸುತ್ತೇವೆ. ಆ ನೀರನ್ನು ಚೆಲ್ಲುತ್ತೇವೆ. ಆದರೆ ಚೆಲ್ಲುವ ಮುನ್ನ ಈ ಸುದ್ದಿಯತ್ತ ಗಮನಿಸಿ. ನಮ್ಮ ಸಧೃಡ ಕೂದಲಿಗೆ ವಿಧ-ವಿಧವಾದ ಎಣ್ಣೆ, ಶ್ಯಾಂಪೂ, ಹೇರ್ ಪ್ಯಾಕ್ ಬಳಸುತ್ತೇವೆ. ಅದರಲ್ಲೂ ಕೂದಲು ಉದುರುವ ಸಮಸ್ಯೆ ಇದ್ದರಂತೂ ಎಲ್ಲರ ಸಲಹೆ ಪಡೆದು ದಿನಕ್ಕೊಂದು ಮನೆ ಮದ್ದು ಮಾಡುತ್ತೇವೆ. ಆದರೆ ಇಷ್ಟೆಲ್ಲ ಮಾಡುವ…
ಅಭಿಮಾನಿ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ರಷ್ಯಾದ ಅಭಿಮಾನಿಯೊಬ್ಬರು ವಿಡಿಯೋ ಮಾಡಿ ಅವರ ಮೆಚ್ಚುಗೆ ಸೂಚಿಸಿದ್ದಾರೆ. ಈ ವಿಡಿಯೋ ನೋಡಿ ಕಿಚ್ಚ ಸುದೀಪ್ ಅವರು ರಷ್ಯಾದ ಅಭಿಮಾನಿಗೆ ಬೆರಗಾಗಿದ್ದಾರೆ ಮರೀನಾ ಕಾರ್ಟಿಂಕಾ ಎಂಬವರು ಈ ವಿಡಿಯೋದಲ್ಲಿ ಸುದೀಪ್ ಅವರ ನಟನೆ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ ಮುಂಬರುವ ದಿನಗಳಲ್ಲಿ ನಿಮ್ಮನ್ನು ಭೇಟಿ ಮಾಡುತ್ತೇನೆ ಎಂದು ಮರೀನಾ ವಿಡಿಯೋದಲ್ಲಿ ತಿಳಿಸಿದ್ದಾರೆ . ವಿಡಿಯೋದಲ್ಲಿ ಏನಿದೆ? :ನಾನು ನಿಮ್ಮ ಬಹುದೊಡ್ಡ ಅಭಿಮಾನಿ. ನೀವು ನಡೆಸಿಕೊಡುವ ಬಿಗ್ ಬಾಸ್ ಕಾರ್ಯಕ್ರಮವನ್ನು ನಾನು ನೋಡಲು…
100 ವರ್ಷ ವಯಸ್ಸಿನ ವೃದ್ಧ ತಾಯಿಯ ಪಿಂಚಣಿ ಹಣಕ್ಕಾಗಿ ಮಗಳು ಮಂಚದ ಸಮೇತ ಆಕೆಯನ್ನು ಬ್ಯಾಂಕಿಗೆ ಕರೆತಂದ ಘಟನೆಯೊಂದು ನಡೆದಿದೆ. ಮಗಳು ತನ್ನ ತಾಯಿಯನ್ನು ಮಂಚದ ಸಮೇತ ಕರೆದೊಯ್ಯುವುದನ್ನು ಸ್ಥಳೀಯರು ವಿಡಿಯೋ ಮಾಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪಿಂಚಣಿ ಹಣವನ್ನು ಡ್ರಾ ಮಾಡಲು ಆಕೆಯೇ ಬರಬೇಕು ಎಂದು ಬ್ಯಾಂಕ್ ಸಿಬ್ಬಂದಿ ಸೂಚನೆ ನೀಡಿದ್ದಾರೆ. ಆದರೆ ತಾಯಿಗೆ ಎದ್ದು ನಡೆಯಲು ಸಾಧ್ಯವಿಲ್ಲ. ಹೀಗಾಗಿ ಅವರು ಬ್ಯಾಂಕಿಗೆ ಬರಲು ಆಗುತ್ತಿಲ್ಲ ಎಂದು ಹೇಳಿದರೂ ಸಿಬ್ಬಂದಿ…
ಕರಬೂಜ ಹಣ್ಣಿಗೆ ತನ್ನದೇ ಆದ ಸುಗಂಧವಿದೆ. ತನ್ನದೇ ರುಚಿಯೆದೆ. ಕಳಿತ ಹಣ್ಣು ಮೃದುವಾಗಿರುತ್ತದೆ. ಈ ಹಣ್ಣಿಗೆ ಇಂಗ್ಲಿಷ್ ಹೆಸರು ಮಸ್ಕ್ ಮಿಲನ್, ಸಸ್ಯಶಾಸ್ತ್ರೀಯವಾಗಿ ‘ ಕುಕ್ಕುಮೀಸ್ ಮೆಲೊ’ ಎನ್ನುತ್ತಾರೆ.
ದೇವರಿಗೆ ತನ್ನ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರೆದ ಭಕ್ತನೊಬ್ಬ ಅದನ್ನು ಹುಂಡಿಯಲ್ಲಿ ಹಾಕಿದ್ದಾನೆ…
ಈ ಮಗು ತಿಂಗಳಿಗೆ 2 ಕೆಜಿ ಜಾಸ್ತಿ ಆಗ್ತಾ ಇದೆಯಂತೆ! ಮಗುವಿನ ತೂಕ ಹೆಚ್ಚಾಗದಂತೆ ತಡೆಯಲು ಹೆತ್ತವರು ಚಿಕಿತ್ಸೆ ಕೊಡಿಸುತ್ತಿದ್ದಾರೆ. ಚಿಕಿತ್ಸೆಗಾಗಿಯೇ ತಿಂಗಳಿಗೆ ಬರೋಬ್ಬರಿ 2.5 ಇಂದ 3 ಲಕ್ಷ ರೂಪಾಯಿ ಖರ್ಚಾಗುತ್ತಿದೆಯಂತೆ.