ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಭಯ ಹೋಗಲಾಡಿಸಿ ಪರೀಕ್ಷೆ ಬಗ್ಗೆ ಆತ್ಮವಿಶ್ವಾಸ ಮೂಡಿಸುವ ಸಲುವಾಗಿ 6 ಮತ್ತು 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ಅವರು ತಿಳಿಸಿದರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಬಳಿಕ ಬುಧವಾರ ಮೊದಲ ಬಾರಿಗೆ ಚಾಮರಾಜನಗರ ಜಿಲ್ಲೆಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಅವರು ಬ್ಯಾಡಮೂಡ್ಲು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಪರೀಕ್ಷೆ ಬಗ್ಗೆ ಚರ್ಚಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು.
ವಿದ್ಯಾರ್ಥಿಗಳು ನೇರವಾಗಿ ಎಸ್ಎಸ್ಎಲ್ಸಿಯಲ್ಲಿ ಪಬ್ಲಿಕ್ ಪರೀಕ್ಷೆ ಎದುರಿಸುವುದರಿಂದ ಕೆಲವೊಮ್ಮೆ ಆತಂಕ ಎದುರಿಸಬೇಕಾತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಭಯ ಹೋಗಲಾಡಿಸಲು 6 ಮತ್ತು 8ನೇ ತರಗತಿಯಲ್ಲಿ ಪಬ್ಲಿಕ್ ಪರೀಕ್ಷೆ ನಡೆಸುವಂತೆ ವಿಧಾನ ಪರಿಷತ್ ಸದಸ್ಯರು ಮತ್ತು ಪೋಷಕರು ಒತ್ತಾಯ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಇದರ ಬಗ್ಗೆ ಚಿಂತನೆ ನಡಸಲಾಗಿದೆ ಎಂದರು.
ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಹೆಚ್ಚಿನ ಬೇಡಿಕೆ ಇದ್ದು, ಪ್ರತಿ ತರಗತಿಗೆ 30 ಬದಲು 60 ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳುವಂತೆ ಒತ್ತಡ ಬಂದಿದೆ. ಇದರ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಮತ್ತು ಪಬ್ಲಿಕ್ ಶಾಲೆಯ ಶಿಕ್ಷಣ ಮಾಧ್ಯಮದ ಬಗ್ಗೆ ಸಾಹಿತಿಗಳು ಆಕ್ಷೇಪ ವ್ಯಕ್ತಪಡಿಸಿಕಿದ್ದಾರೆ. ಇದರ ಬಗ್ಗೆ ಸಾಹಿತಿಗಳ ಜೊತೆಗೆ ಚರ್ಚಿಸಿ ಅಂತಿಮವಾಗಿ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಅಭಿವೃದ್ಧಿ ಕಾರ್ಯದ ವಿಚಾರದಲ್ಲಿ ರಾಜಕೀಯ ಮಾಡಬಾರದು. ಮಕ್ಕಳ ಭವಿಷ್ಯ ನಿಟ್ಟಿನಲ್ಲಿ ಒಳ್ಳೆಯ ಕಾರ್ಯಮಾಡಲು ಪ್ರತಿಯೊಬ್ಬರು ಮುಂದಾಗಬೇಕು ಎಂದು ಸಲಹೆ ನೀಡಿದರು. ಬ್ಯಾಡಮೂಡ್ಲು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ವಿಟಮಿನ್ ಮಾತ್ರೆ ನುಂಗಿಸಿದ ಸಚಿವ ಸುರೇಶ್ ಕುಮಾರ್ ಅವರು ವಿದ್ಯಾರ್ಥಿಗಳಿಂದ ಮಗ್ಗಿ ಹೇಳಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರಕು ಸೇವಾ ತೆರಿಗೆ (GST) ಜಾರಿಗೆ ಬಂದಲ್ಲಿ ಬಿಂದಾಸ್ ಆಗಿ ಒಳ್ಳೆಯ ಊಟ, ಉಪಾಹಾರ ನೀವು ತೃಪ್ತಿಯಾಗುವಷ್ಟು ಮಾಡಬಹುದು. ಹಾಗೂ ಒಂದು ಸಿನೆಮಾ ನೋಡಿದ ಮೇಲೂ ಮತ್ತೊಂದು ನೋಡಿಯೇ ಬಿಡೋಣ ಎನ್ನುವ ಧೈರ್ಯ ಬಂದರೂ ಬರಬಹುದು.
ನಾವೆಲ್ಲಾ ತಿಳಿದಂತೆ ಪಾರ್ವತಿ-ಪರಶಿವನ ಪುತ್ರನಾದ ಗಣೇಶನ ಶಿರವನ್ನು ಶಿವ ತನ್ನ ತ್ರಿಶೂಲದಿಂದ ಕಡಿದುರುಳಿಸಿದ ಬಳಿಕ ಆತನಿಗೆ ಆನೆಯ ಮುಖವೊಂದನ್ನು ಜೋಡಿಸಲಾಗುತ್ತದೆ. ಅಂದಿನಿಂದ ಇಂದಿನವರೆಗೂ ಗಣಪತಿಯನ್ನು ಗಜಮುಖ ರೂಪದಲ್ಲಿಯೇ ಪೂಜಿಸುತ್ತೇವೆ. ಆದರೆ ನಮಗೆಲ್ಲ ತಿಳಿಯದಿರುವ ವಿಚಾರವೆಂದರೆ ತಮಿಳುನಾಡಿನ ತಿಲತರ್ಪಣ ಪುರಿಯಲ್ಲಿ ನರ ಮುಖದ ಗಣೇಶನನ್ನು ಪೂಜಿಸಲಾಗುತ್ತದೆ ಎನ್ನುವುದು. ಗಣೇಶನನ್ನು ಆತನ ಮೂಲ ರೂಪವಾದ ‘ಆದಿ ವಿನಾಯಕ’ ರೂಪದಲ್ಲಿ ಪೂಜಿಸುವ ಜಗತ್ತಿನ ಏಕೈಕ ದೇವಾಲಯವಿದು. ತಮಿಳುನಾಡಿನ ಕುತ್ನೂರಿನಿಂದ ಎರಡು ಕಿ.ಮೀ ದೂರದಲ್ಲಿರುವ ತಿಲತರ್ಪಣ ಪುರಿ ದೇವಸ್ಥಾನದಲ್ಲಿ ನರಮುಖ ಆದಿವಿನಾಯಕನನ್ನು ಪೂಜಿಸಲಾಗುತ್ತದೆ….
ಇದು ಸೆಲ್ಫಿ ಯುಗ. ಕೈನಲ್ಲಿ ಮೊಬೈಲ್ ಪ್ರತಿಯೊಂದು ಕ್ಷಣದ ಫೋಟೋ ಸೆಲ್ಫಿಯಾಗಿ ಹೊರಬರುತ್ತದೆ. ಸೆಲ್ಫಿ ವಿಶೇಷತೆ ಹೊಂದಿರುವ ಮೊಬೈಲ್ ಫೋನುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ವಿಶ್ವದಾದ್ಯಂತ ಸೆಲ್ಫಿ ಕಾರಣಕ್ಕೆ ನಡೆಯುತ್ತಿರುವ ಸಾವಿನಲ್ಲಿ ಶೇಕಡಾ 60ರಷ್ಟು ಪಾಲು ಭಾರತದ್ದಿದೆ. ಕಳೆದ ಎರಡು ವರ್ಷಗಳ ಅಂಕಿ-ಅಂಶ ಇದನ್ನು ಸ್ಪಷ್ಟಪಡಿಸಿದೆ.
ಇತಿಹಾಸ ಸೃಷ್ಟಿಸಿದ RRR ಚಿತ್ರ ದಕ್ಷಿಣ ಭಾರತ ಚಲನಚಿತ್ರ ಒಂದಕ್ಕೆ ಮೊದಲ ಆಸ್ಕರ್ ಪ್ರಶಸ್ತಿಯ ಗೌರವ ನಾಟು ನಾಟು..’, ‘ಲಿಫ್ಟ್ ಮಿ ಅಪ್’, ‘ದಿಸ್ ಈಸ್ ಲೈಫ್’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್ ಹಾಡುಗಳು ರೇಸ್ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ. ‘ಆರ್ಆರ್ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್ ಒರಿಜಿನಲ್ ಸಾಂಗ್’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ…
ನಿಮ್ಮ ಮನೆಯಲ್ಲಿ ಗುಲಾಬಿ ಗಿಡಗಳು ಇವೆಯಲ್ಲಾ ಆ ಗಿಡಗಳಿಗೆ ಕಸಿ ಮಾಡುವುದರಿಂದ ಕೊಂಬೆಗೊಂದೊಂದು ಬಣ್ಣದ ಹೂಗಳನ್ನೂ ಸಹ ಪಡೆಯಬಹುದು.ಕಸಿ ಎಂದರೆ ನಿಮಗೆ ತಿಳಿಯದ್ದೇನಲ್ಲ ಆದರೆ ಈ ಮೊದಲಿನ ಸಾಂಪ್ರದಾಯಿಕ ಕಸಿ ಪದ್ಧತಿಯಂತೆ ಗಿಡದ ಕೊಂಬೆಯನ್ನೇ ಕತ್ತರಿಸಿ ಮತ್ತೊಂದು ಗಿಡಕ್ಕೆ ಜೋಡಿಸಿದ ನಂತರ ಅದೇನಾದರೂ ನೆಟ್ಟದೆ ಬೆಳೆಯದೆ ಹಳ್ಳ ಹಿಡಿದು ಮಕಾಡೆ ಮಲಗಿತೆಂದರೆ ಸಾಕು .
ಬಾಯಿಯಿಂದ ಬಾಯಿಗೆ ಹಬ್ಬಿದ ಸುಳ್ಳು ಸುದ್ದಿಯಿಂದಾಗಿ ಆತಂಕಗೊಂಡ ಮಹಿಳೆಯರು ರಾತ್ರಿಯೆಲ್ಲ ನಿದ್ದೆಗೆಟ್ಟಿದ್ದು ಮಾಂಗಲ್ಯ ಸರದಲ್ಲಿ ಇದ್ದ ಕೆಂಪು ಹವಳವನ್ನು ತೆಗೆದು ಕುಟ್ಟಿ ಪುಡಿ ಮಾಡಿದ್ದಾರೆ.