ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಭಯ ಹೋಗಲಾಡಿಸಿ ಪರೀಕ್ಷೆ ಬಗ್ಗೆ ಆತ್ಮವಿಶ್ವಾಸ ಮೂಡಿಸುವ ಸಲುವಾಗಿ 6 ಮತ್ತು 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ಅವರು ತಿಳಿಸಿದರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಬಳಿಕ ಬುಧವಾರ ಮೊದಲ ಬಾರಿಗೆ ಚಾಮರಾಜನಗರ ಜಿಲ್ಲೆಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಅವರು ಬ್ಯಾಡಮೂಡ್ಲು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಪರೀಕ್ಷೆ ಬಗ್ಗೆ ಚರ್ಚಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು.
ವಿದ್ಯಾರ್ಥಿಗಳು ನೇರವಾಗಿ ಎಸ್ಎಸ್ಎಲ್ಸಿಯಲ್ಲಿ ಪಬ್ಲಿಕ್ ಪರೀಕ್ಷೆ ಎದುರಿಸುವುದರಿಂದ ಕೆಲವೊಮ್ಮೆ ಆತಂಕ ಎದುರಿಸಬೇಕಾತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಭಯ ಹೋಗಲಾಡಿಸಲು 6 ಮತ್ತು 8ನೇ ತರಗತಿಯಲ್ಲಿ ಪಬ್ಲಿಕ್ ಪರೀಕ್ಷೆ ನಡೆಸುವಂತೆ ವಿಧಾನ ಪರಿಷತ್ ಸದಸ್ಯರು ಮತ್ತು ಪೋಷಕರು ಒತ್ತಾಯ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಇದರ ಬಗ್ಗೆ ಚಿಂತನೆ ನಡಸಲಾಗಿದೆ ಎಂದರು.
ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಹೆಚ್ಚಿನ ಬೇಡಿಕೆ ಇದ್ದು, ಪ್ರತಿ ತರಗತಿಗೆ 30 ಬದಲು 60 ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳುವಂತೆ ಒತ್ತಡ ಬಂದಿದೆ. ಇದರ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಮತ್ತು ಪಬ್ಲಿಕ್ ಶಾಲೆಯ ಶಿಕ್ಷಣ ಮಾಧ್ಯಮದ ಬಗ್ಗೆ ಸಾಹಿತಿಗಳು ಆಕ್ಷೇಪ ವ್ಯಕ್ತಪಡಿಸಿಕಿದ್ದಾರೆ. ಇದರ ಬಗ್ಗೆ ಸಾಹಿತಿಗಳ ಜೊತೆಗೆ ಚರ್ಚಿಸಿ ಅಂತಿಮವಾಗಿ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಅಭಿವೃದ್ಧಿ ಕಾರ್ಯದ ವಿಚಾರದಲ್ಲಿ ರಾಜಕೀಯ ಮಾಡಬಾರದು. ಮಕ್ಕಳ ಭವಿಷ್ಯ ನಿಟ್ಟಿನಲ್ಲಿ ಒಳ್ಳೆಯ ಕಾರ್ಯಮಾಡಲು ಪ್ರತಿಯೊಬ್ಬರು ಮುಂದಾಗಬೇಕು ಎಂದು ಸಲಹೆ ನೀಡಿದರು. ಬ್ಯಾಡಮೂಡ್ಲು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ವಿಟಮಿನ್ ಮಾತ್ರೆ ನುಂಗಿಸಿದ ಸಚಿವ ಸುರೇಶ್ ಕುಮಾರ್ ಅವರು ವಿದ್ಯಾರ್ಥಿಗಳಿಂದ ಮಗ್ಗಿ ಹೇಳಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಯ್ಯಪ್ಪ ಸ್ವಾಮಿ ಭಕ್ತರ ತೀವ್ರ ಪ್ರತಿಭಟನೆ ಹೊರತಾಗಿಯೂ 50 ವರ್ಷದೊಳಗಿನ ಇಬ್ಬರು ಮಹಿಳೆಯರು ಇಂದು ಮುಂಜಾನೆ ಶಬರಿಮಲೆಯಲ್ಲಿ ದರ್ಶನ ಪಡೆದಿದ್ಜಾರೆ ಎಂದು ಹೇಳಲಾಗುತ್ತಿದೆ.50 ವರ್ಷ ಮೀರದ ಇಬ್ಬರು ಮಹಿಳೆಯರು ಶಬರಿಮಲೆ ದೇವಾಲಯವನ್ನು ಪ್ರವೇಶಿಸಿ ಇತಿಹಾಸ ನಿರ್ಮಿಸಿದ್ದು, ಇದೀಗ ಭಾರೀ ಚರ್ಚೆಯಾಗುತ್ತಿದೆ. ಮಧ್ಯರಾತ್ರಿ ಬೆಟ್ಟವನ್ನು ಹತ್ತಲು ಆರಂಭಿಸಿದ ಮಹಿಳೆಯರು ಇಂದು ಬೆಳಗ್ಗೆ 3.45ರ ವೇಳೆಗೆ ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ.ದರ್ಶನ ಪಡೆದ ಮಹಿಳೆಯರನ್ನು ಮಲಪ್ಪುರಂನ ಕನಕ ದುರ್ಗ ಮತ್ತು ಕಲ್ಲಿಕೋಟೆಯ ಬಿಂದು ಎಂದು ಗುರುತಿಸಲಾಗಿದೆ. ಈ ಮಹಿಳೆಯರಿಗೆ…
ಲಕ್ನೋ: ಗೂಡ್ಸ್ ರೈಲು ಹಳಿ ತಪ್ಪಿದ್ದ ಸುದ್ದಿಯನ್ನು ವರದಿ ಮಾಡಲು ಹೋಗಿದ್ದ ಪತ್ರಕರ್ತನ ಮೇಲೆ ಹಲ್ಲೆ ಮಾಡಿ, ಆತನ ಬಟ್ಟೆ ಬಿಚ್ಚಿಸಿ ಬಲವಂತವಾಗಿ ಮೂತ್ರ ಕುಡಿಸಿರುವ ಘಟನೆ ಉತ್ತರ ಪ್ರದೇಶದ ಶಾಮ್ಲಿಯಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಧೀಮಾನ್ಪುರಾದಲ್ಲಿ ಗೂಡ್ಸ್ ರೈಲು ಹಳಿತಪ್ಪಿದ ಸಂದರ್ಭದಲ್ಲಿ ಪತ್ರಕರ್ತ ವರದಿ ಮಾಡಲು ಹೋದಾಗ ಈ ಘಟನೆ ನಡೆದಿದೆ. ಸರ್ಕಾರಿ ರೈಲ್ವೇ ಪೊಲೀಸ್(ಜಿಆರ್ ಪಿ) ಅಧಿಕಾರಿ ರಾಕೇಶ್ ಕುಮಾರ್ ನೇತೃತ್ವದ ಸಿಬ್ಬಂದಿ ಪತ್ರಕರ್ತನ ಮೇಲೆ ಹಲ್ಲೆ ಮಾಡಿದ್ದಾರೆ. ಪತ್ರಕರ್ತನ ಮೇಲೆ ಹಲ್ಲೆ ಮಾಡಿರುವ…
ರಾಜ್ಯದ ಜನರಿಗೆ, ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಹಾಗೂ ನೆಲ-ಜಲ, ನಾಡು-ನುಡಿ ರಕ್ಷಣೆಗಾಗಿ ಹಾಗೂ ನೀರಾವರಿ ಯೋಜನೆಗಳು ಹಾಗೂ ಸಾಲ ಮನ್ನಾಕ್ಕೆ
ಹೌದು. ಆನೆಮರಿಯೊಂದು ಓಡಿ ಬಂದು ಪುಟ್ಟ ಮಗುವಿನಂತೆ ಬಾಟಲಿಯಲ್ಲಿ ಹಾಲು ಕುಡಿಯುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಹಾಗಿದೆ. ಈ ವಿಡಿಯೋ 39 ಸೆಕೆಂಡ್ ಇದ್ದು ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡಲಾಗಿದೆ, ಇದುವರೆಗೂ ಈ ವಿಡಿಯೋವನ್ನು ಸಾವಿರಾರು ಬಾರಿ ನೋಡಿದ್ದಾರೆ. ತಾಯಿಯನ್ನು ಕಳೆದುಕೊಂಡಿರುವ ಈ ಪುಟ್ಟ ಆನೆಯನ್ನು ಶೆಲ್ಡ್ರಿಕ್ ವೈಲ್ಡ್ ಲೈಫ್ ಸಂಸ್ಥೆ ಸಿಬ್ಬಂದಿ ನೋಡಿಕೊಳ್ಳುತ್ತಿದೆ ಈ ಆನೆಮರಿಗೆ ದಿನನಿತ್ಯ ಹಾಲಿನ ಬಾಟಲಿನಲ್ಲಿ ಹಾಲನ್ನು ನೀಡುತ್ತಿದ್ದಾರೆ. ಈ ಆನೆಮರಿ ಹಾಲಿನ ಬಾಟಲ್ ಅನ್ನು ನೋಡಿದರೆ ಸಾಕು ತನ್ನ…
ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.
ಅಪಾಯಕಾರಿ ಬಂಡೆಗಳನ್ನು ಸುಲಭವಾಗಿ ಏರಿ ರಾಜ್ಯದ ಜನರ ಮನೆಮಾತಾಗಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ಗೆ ಫೆ.27 ಕೊನೆಯ ದಿನವಾಗಲಿದೆಯೆ ? ಸ್ವತಃ ಅವರೇ ನೀಡಿದ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.ಬೆಂಗಳೂರು ಹೊರವಲಯದ ನೆಲಮಂಗಲದ ಖಾಸಗಿ ಶಾಲೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜ್ಯೋತಿರಾಜ್, ಮುಂದಿನ ವರ್ಷ ಫೆಬ್ರವರಿ 26-27 ನನ್ನ ಕೊನೆಯ ದಿನ ಎಂದು ಹೇಳಿ ಭಾವುಕರಾಗಿದ್ದಾರೆ.ಸರ್ಕಾರದಿಂದ ಚಿತ್ರದುರ್ಗದ ಅಭಿವೃದ್ಧಿಗೆ ಯಾವುದೇ ಪ್ರಯೋಜನವಾಗಿಲ್ಲ. ಆದ ಕಾರಣ ನಾನು ಮುಂಬರುವ ಫೆ.26 ಮತ್ತು 27 ರಂದು ಜಗತ್ತಿನ ಅತಿ ಎತ್ತರದ ಅಮೆರಿಕದ…