ಸಾಮಾಜಿಕ ಜಾಲತಾಣಗಳಲ್ಲಿ ಹೊಸತೊಂದು ಚಾಲೆಂಜ್ ಬಂದಿದೆ; ಅದೇ ಬಾಟಲ್ ಕ್ಯಾಪ್ ಚ್ಯಾಲೆಂಜ್. ಇದರಲ್ಲಿ ಚಾಲೆಂಜ್ ತಗೊಂಡವರು ರೌಂಡ್ ಹೌಸ್ ಕಿಕ್ ಹೊಡೆದು ಬಾಟಲ್‌ಗೆ ಹಾಕಿದ ಮುಚ್ಚಳವನ್ನು ತೆಗೆಯಬೇಕು.
ಜೇಸನ್ ಸ್ಟ್ಯಾಥಮ್, ಅಕ್ಷಯ್ ಕುಮಾರ್, ಟೈಗರ್ ಶ್ರಾಫ್‌ರಂತಹ ನಟರು ಹಾಗೂ ಹಲವು ಫೈಟರ್‌ಗಳು ಇದರಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಇಲ್ಲೊಬ್ಬ ಗಾಯಕಿ ಕೇವಲ ತನ್ನ ಧ್ವನಿಯಿಂದಲೇ ಬಾಟಲ್ ಕ್ಯಾಪ್ ಎಗರಿಸಿರುವಂತೆ ಕಾಣುತ್ತದೆ.
ಮರಿಯಾ ಕ್ಯಾರಿ ಎನ್ನುವ ಅಮೆರಿಕಾದ ಗಾಯಕಿ ಟ್ವೀಟರ್‌ನಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಅವರು ಹೈ ಪಿಚ್‌ನಲ್ಲಿ ರಾಗ ಎಳೆಯುತ್ತಿದ್ದಂತೆ ಬಾಟಲ್ ಮುಚ್ಚಳ ಹಾರಿ ಹೋಗುತ್ತದೆ.
ವಿಡಿಯೋ ನೆಟ್ಟಿಗರ ತಲೆ ಕೆಡಿಸಿದೆ. ಇದು ಎಡಿಟ್ ಮಾಡಿದಂತೆ ಕಂಡು ಬಂದರೂ ಹಲವರು ಮರಿಯಾ ಈ ಚಾಲೆಂಜ್ ಗೆದ್ದಿದ್ದಾರೆ ಎಂದು ಷರಾ ಬರೆದಿದ್ದಾರೆ. ಏನೇ ಆಗಲಿ ಈ ವಿಡಿಯೋ ಬಹಳ ವೈರಲ್ ಆಗಿದ್ದು, 20ಮಿಲಿಯನ್‌ಗಿಂತಲೂ ಹೆಚ್ಚು ಜನ ನೋಡಿದ್ದಾರೆ.