ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗುಜರಾತ್ ಮಾದರಿಯಲ್ಲಿ ಇದೀಗ ಕರ್ನಾಕಟವೂ ದುಬಾರಿ ಟ್ರಾಫಿಕ್ ದಂಡದ ಮೊತ್ತವನ್ನು ಕಡಿತಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ದಂಡದ ಮೊತ್ತವನ್ನು10 ಪಟ್ಟು ಹೆಚ್ಚಿಸಲಾಗಿತ್ತು. ಇದೀಗ ಕರ್ನಾಟಕ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದರೆ ಕರ್ನಾಟಕ ಸರ್ಕಾರ ಟ್ರಾಫಿಕ್ ದಂಡವನ್ನು ಎಷ್ಟು ಕಡಿತಗೊಳಿಸಿದೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಸಂಚಾರ ನಿಯಮ ಉಲ್ಲಂಘಿಸಿದರೆ ದುಬಾರಿ ಮೊತ್ತದ ದಂಡ ವಿಧಿಸುವುದರಿಂದ ಜನರಿಗೆ ತೊಂದರೆಯಾಗುತ್ತಿದೆ. ಕೂಡಲೇ ದಂಡದ ಮೊತ್ತವನ್ನು ಇಳಿಸುವಂತೆ ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.ಮೋಟಾರು ವಾಹನ ಕಾಯಿದೆ ಉಲ್ಲಂಘನೆ ಸಂಬಂಧಿಸಿದಂತೆ ದಂಡದ ಮೊತ್ತವನ್ನು ಇಳಿಸುವ ಬಗ್ಗೆ ಗುಜರಾತ್ ಸರ್ಕಾರ ಹೊರಡಿಸಿರುವ ಆದೇಶವನ್ನು ತರಿಸಿಕೊಂಡು ರಾಜ್ಯ ಸರ್ಕಾರ ಪರಿಶೀಲನೆ ನಡೆಸಿದೆ. ಹೀಗಾಗಿ ದುಬಾರಿ ದಂಡದಿಂದ ತೀವ್ರ ತೊಂದರೆಯಾಗುತ್ತಿದೆ. ಕೂಡಲೇ ದಂಡ ಇಳಿಸುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.

ಗುಜರಾತ್ ಸರ್ಕಾರ ಹೊರಡಿಸಿರುವ ಆದೇಶವನ್ನು ತರಿಸಿಕೊಂಡು ಪರಿಶೀಲನೆ ನಡೆಸಲಾಗುವುದು. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕಾಯ್ದೆಯನ್ನು ರಾಜ್ಯ ಸರ್ಕಾರಗಳು ಮಾರ್ಪಡಿಸುವ,ಬದಲಿಸುವ ಅಧಿಕಾರ ಹೊಂದಿರುತ್ತದೆ. ಈ ನಿಟ್ಟಿನಲ್ಲಿ ದಂಡದ ದರಗಳನ್ನು ಕಡಿತಗೊಳಿಸಲಾಗುತ್ತದೆ’ಎಂದು ಸಿಎಂ ತಿಳಿಸಿದರು.ಇಳಿಕೆಯಾಗುವ ದರಗಳ ಸುತ್ತೋಲೆಯನ್ನು ಕೆಲವೇ ದಿನಗಳಲ್ಲಿ ಪ್ರಕಟಿಸಲಾಗುತ್ತದೆ.ನೂತನ ಕಾಯ್ದೆ ಸಾರ್ವಜನಿಕರಿಗೆ ವಿಪರೀತ ಹೊರೆಯಾಗಿತ್ತು. ರಾಜ್ಯದ ನಾನಾ ಭಾಗಗಳಲ್ಲಿನ ಸವಾರರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಸಂಚಾರಿ ನಿಯಮ ಉಲ್ಲಂಘನೆಗೆ ಭಾರಿ ಮೊತ್ತದ ದಂಡ ವಿಧಿಸುವ ಮೋಟಾರು ವಾಹನ ತಿದ್ದುಪಡಿ ಕಾಯ್ದೆ 2019 ಸೆಪ್ಟೆಂಬರ್ 1 ರಿಂದ ದೇಶಾದ್ಯಂತ ಜಾರಿಗೆ ಬಂದಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಲಕ್ಷಾಂತರ ರೂಪಾಯಿ ದಂಡ ಸಂಗ್ರಹವಾಗಿದೆ.ಗುಜರಾತ್‌ನಲ್ಲಿ ಹೆಲ್ಮೆಟ್ ರಹಿತಪ್ರಯಾಣಕ್ಕೆ ಇರುವ ದಂಡವನ್ನು 2000 ದಿಂದ 500ಕ್ಕೆ, ಡಿಎಲ್ ಇಲ್ಲದ ಪ್ರಯಾಣಕ್ಕೆ5000 ರಿಂದ 2 ಸಾವಿರಕ್ಕೆ ಇಳಿಸುವ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ತ್ರಿಬಲ್ ರೈಡಿಂಗ್ ಮಾಡುವವರಿಗೆ ವಿಧಿಸಲಾಗುತ್ತಿದ್ದ 1 ಸಾವಿರ ರೂ. ದಂಡವನ್ನು100 ರೂ.ಗಳಿಗೆ ಕಡಿಮೆ ಮಾಡಲಾಗಿದೆ.ಮಾಲಿನ್ಯ ಪ್ರಮಾಣ ಪತ್ರ ಪಡೆಯದವಾಹನಗಳಿಗೆ ನಿಗದಿ ಮಾಡಿದ್ದ 10 ಸಾವಿರಗಳನ್ನುಸಣ್ಣ ವಾಹನಗಳಿಗೆ 1 ಸಾವಿರ ರೂ. ಭಾರೀವಾಹನಗಳಿಗೆ 3 ಸಾವಿರ ರೂ.ಗೆಇಳಿಸಲಾಗಿದೆ.
ಕರ್ನಾಟಕದಲ್ಲೂ ಯಡಿಯೂರಪ್ಪ ಸೂಚನೆ ಮೇರೆಗೆ ದಂಡಮೊತ್ತ ಕಡಿಮೆ ಮಾಡುವ ಕುರಿತು ಶೀಘ್ರವೇ ನಿರ್ಧಾರ ಪ್ರಕಟಿಸಿಲಿದ್ದಾರೆ.ಸಾರಿಗೆ ಸಚಿವ ಹಾಗೂ ವಡಿಸಿಎಂ ಲಕ್ಷ್ಮಣ ಸವದಿ ಅವರು,ದಂಡದ ಮೊತ್ತ ಜಾಸ್ತಿಯಾಗಿರುವ ಅಭಿಪ್ರಾಯ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಬೇರೆಬೇರೆ ರಾಜ್ಯಗಳಲ್ಲಿ ಕಡಿಮೆ ಮಾಡಿರುವಂತೆ ನಮ್ಮಲ್ಲೂ ಕಡಿತ ಮಾಡುವ ಯೋಚನೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದರು. ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ…
karnataka ಎಲ್ಲಾ ಜಿಲ್ಲೆಯ ಎಲ್ಲಾ ತಾಲೂಕಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತದಾರರ ಲಿಸ್ಟ್ ಅನ್ನು ನೋಡಬಹುದು ಇದು ಎಲ್ಲರಿಗೂ ತುಂಬಾ ಅನುಕೂಲವಾಗುತ್ತದೆ. ನಿಮ್ಮ ನಿಮ್ಮ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಿ. 2023 ರ ಅಂತಿಮ ಮತದಾರರ ಪಟ್ಟಿ – ವಿಧಾನಸಭೆ ಕ್ಷೇತ್ರಗಳ ಹೆಸರುಗಳ ಪಟ್ಟಿಯನ್ನು ವೀಕ್ಷಿಸಲು ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ https://ceo.karnataka.gov.in/FinalRoll_2023/
ಇಂದಿನ ದಿನಗಳಲ್ಲಿ ಪ್ರಾಮಾಣಿಕತೆ ಎಂಬುದು ಎಲ್ಲಿದೆ. ಬಹುತೇಕ ಮಂದಿ ಪ್ರಾಮಾಣಿಕವಾಗಿ ಇರುವುದಿಲ್ಲ. ಆ ರೀತಿ ಇರುವವರು ನೂರಕ್ಕೋ, ಕೋಟಿಗೋ ಒಬ್ಬರಿರುತ್ತಾರೆ. ಅಂತಹವರಲ್ಲಿ ಈಗ ನಾವು ಹೇಳಲಿರುವ ಈತನೂ ಇದ್ದಾನೆ. ಆತನೊಬ್ಬ ಆಟೋಡ್ರೈವರ್. ಆದರೆ ಪ್ರಾಮಾಣಿಕತೆಗೆ ಹೆಸರುವಾಸಿ. ಮಹಿಳೆಯೊಬ್ಬರು ತನ್ನ ಆಟೋದಲ್ಲಿ ತನ್ನ ಬ್ಯಾಗ್ ಮರೆತಿದ್ದರೆ ಅದನ್ನು ಅವರಿಗೆ ಹಿಂತಿರುಗಿಸಿದ. ಆತನಿಗೆ ಆ ಮಹಿಳೆ ಊಹಿಸದಂತಹ ಬಹುಮಾನ ನೀಡಿದರು.
ಜಿಯೋ ಸೆಟ್ ಟಾಪ್ ಬಾಕ್ಸ್ನ ಚಿತ್ರಗಳು ಈಗಾಗಲೇ ಮಾಧ್ಯಮಗಳಿಗೆ ಸೋರಿ ಹೋಗಿವೆ. ಜಿಯೋ ಸ್ಯಾಟಲೈಟ್ ಸೇವೆಯು 50ಕ್ಕೂ ಹೆಚ್ಚು ಎಚ್ಡಿ ಚ್ಯಾನಲ್ಗಳು ಸೇರಿದಂತೆ 300ಕ್ಕೂ ಹೆಚ್ಚು ಚ್ಯಾನಲ್ಗಳನ್ನು ಒಳಗೊಂಡಿರುತ್ತವೆ ಎನ್ನಲಾಗಿದೆ.
ರಾಮಾಯಣ ಗೊತ್ತಿದ್ದ ಮೇಲೆ ರಾವಣ ಗೊತ್ತಿರುತ್ತಾನೆ.ರಾವಣ ರಾಕ್ಷಸನಾದರೂ ಮಹಾನ್ ಶಿವ ಭಕ್ತ, ಮತ್ತು ಮಹಾನ್ ವಿಧ್ವಾಂಸ ಕೂಡ.ಏನೇ ಆದ್ರೂ ರಾವಣ ರಾಕ್ಷಸನಾಗಿದ್ದರಿಂದ ರಾವಣನನ್ನು ಎಲ್ಲೂ ಪೂಜಿಸವುದಿಲ್ಲ.ಆದ್ರೆ ನೀವೂ ನಂಬಿದ್ರೆ ನಂಬಿ, ಇಲ್ಲಂದ್ರೆ ಬಿಡಿ ಈ ಹಳ್ಳಿಯಲ್ಲಿ ರಾವಣನನ್ನು ಸಹ ಪೂಜಿಸುತ್ತಾರೆ. ಆ ಹಳ್ಳಿ ಯಾವುದು ಗೊತ್ತಾ? ಮುಂದೆ ಓದಿ..
ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಅಂತರ್ಜಾಲ ಸಂಪರ್ಕವನ್ನು ಕಲ್ಪಿಸಲಾಗುತ್ತಿದ್ದು, ಅಂತರ್ಜಾಲದ ಮೂಲಕ ಪಡಿತರ ಚೀಟಿ ಪಡೆಯಬಹುದಾಗಿದೆ. ಜೊತೆಗೆ ರಾಜ್ಯದ ಯಾವುದೇ ಮೂಲೆಯಲ್ಲಿ ವಾಸವಾಗಿದ್ದರೂ, ಆ ಪ್ರದೇಶದ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆದುಕೊಳ್ಳ ಬಹುದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ.