ಸುದ್ದಿ

ಯಡಿಯೂರಪ್ಪನವರ ಕಡೆಯಿಂದ ರಾಜ್ಯದ ವಾಹನ ಸವಾರರಿಗೆ ಸಿಹಿಸುದ್ದಿ.! ಏನದು ಗೊತ್ತೇ..??

29

ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗುಜರಾತ್ ಮಾದರಿಯಲ್ಲಿ ಇದೀಗ ಕರ್ನಾಕಟವೂ ದುಬಾರಿ ಟ್ರಾಫಿಕ್ ದಂಡದ ಮೊತ್ತವನ್ನು ಕಡಿತಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ದಂಡದ ಮೊತ್ತವನ್ನು10 ಪಟ್ಟು ಹೆಚ್ಚಿಸಲಾಗಿತ್ತು. ಇದೀಗ ಕರ್ನಾಟಕ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದರೆ ಕರ್ನಾಟಕ ಸರ್ಕಾರ ಟ್ರಾಫಿಕ್ ದಂಡವನ್ನು ಎಷ್ಟು ಕಡಿತಗೊಳಿಸಿದೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಸಂಚಾರ ನಿಯಮ ಉಲ್ಲಂಘಿಸಿದರೆ ದುಬಾರಿ ಮೊತ್ತದ ದಂಡ ವಿಧಿಸುವುದರಿಂದ ಜನರಿಗೆ ತೊಂದರೆಯಾಗುತ್ತಿದೆ. ಕೂಡಲೇ ದಂಡದ ಮೊತ್ತವನ್ನು ಇಳಿಸುವಂತೆ ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.ಮೋಟಾರು ವಾಹನ ಕಾಯಿದೆ ಉಲ್ಲಂಘನೆ ಸಂಬಂಧಿಸಿದಂತೆ ದಂಡದ ಮೊತ್ತವನ್ನು ಇಳಿಸುವ ಬಗ್ಗೆ ಗುಜರಾತ್ ಸರ್ಕಾರ ಹೊರಡಿಸಿರುವ ಆದೇಶವನ್ನು ತರಿಸಿಕೊಂಡು ರಾಜ್ಯ ಸರ್ಕಾರ ಪರಿಶೀಲನೆ ನಡೆಸಿದೆ. ಹೀಗಾಗಿ ದುಬಾರಿ ದಂಡದಿಂದ ತೀವ್ರ ತೊಂದರೆಯಾಗುತ್ತಿದೆ. ಕೂಡಲೇ ದಂಡ ಇಳಿಸುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.

ಗುಜರಾತ್  ಸರ್ಕಾರ ಹೊರಡಿಸಿರುವ ಆದೇಶವನ್ನು ತರಿಸಿಕೊಂಡು ಪರಿಶೀಲನೆ ನಡೆಸಲಾಗುವುದು. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕಾಯ್ದೆಯನ್ನು ರಾಜ್ಯ ಸರ್ಕಾರಗಳು ಮಾರ್ಪಡಿಸುವ,ಬದಲಿಸುವ ಅಧಿಕಾರ ಹೊಂದಿರುತ್ತದೆ. ಈ ನಿಟ್ಟಿನಲ್ಲಿ ದಂಡದ ದರಗಳನ್ನು ಕಡಿತಗೊಳಿಸಲಾಗುತ್ತದೆ’ಎಂದು ಸಿಎಂ ತಿಳಿಸಿದರು.ಇಳಿಕೆಯಾಗುವ ದರಗಳ ಸುತ್ತೋಲೆಯನ್ನು ಕೆಲವೇ ದಿನಗಳಲ್ಲಿ ಪ್ರಕಟಿಸಲಾಗುತ್ತದೆ.ನೂತನ ಕಾಯ್ದೆ ಸಾರ್ವಜನಿಕರಿಗೆ ವಿಪರೀತ ಹೊರೆಯಾಗಿತ್ತು. ರಾಜ್ಯದ ನಾನಾ ಭಾಗಗಳಲ್ಲಿನ ಸವಾರರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಸಂಚಾರಿ ನಿಯಮ ಉಲ್ಲಂಘನೆಗೆ ಭಾರಿ ಮೊತ್ತದ ದಂಡ ವಿಧಿಸುವ ಮೋಟಾರು ವಾಹನ ತಿದ್ದುಪಡಿ ಕಾಯ್ದೆ 2019 ಸೆಪ್ಟೆಂಬರ್ 1 ರಿಂದ ದೇಶಾದ್ಯಂತ ಜಾರಿಗೆ ಬಂದಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಲಕ್ಷಾಂತರ ರೂಪಾಯಿ ದಂಡ ಸಂಗ್ರಹವಾಗಿದೆ.ಗುಜರಾತ್‌ನಲ್ಲಿ ಹೆಲ್ಮೆಟ್ ರಹಿತಪ್ರಯಾಣಕ್ಕೆ ಇರುವ ದಂಡವನ್ನು 2000 ದಿಂದ 500ಕ್ಕೆ, ಡಿಎಲ್ ಇಲ್ಲದ ಪ್ರಯಾಣಕ್ಕೆ5000 ರಿಂದ 2 ಸಾವಿರಕ್ಕೆ ಇಳಿಸುವ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ತ್ರಿಬಲ್  ರೈಡಿಂಗ್ ಮಾಡುವವರಿಗೆ ವಿಧಿಸಲಾಗುತ್ತಿದ್ದ 1 ಸಾವಿರ ರೂ. ದಂಡವನ್ನು100 ರೂ.ಗಳಿಗೆ ಕಡಿಮೆ ಮಾಡಲಾಗಿದೆ.ಮಾಲಿನ್ಯ ಪ್ರಮಾಣ ಪತ್ರ ಪಡೆಯದವಾಹನಗಳಿಗೆ ನಿಗದಿ ಮಾಡಿದ್ದ 10 ಸಾವಿರಗಳನ್ನುಸಣ್ಣ ವಾಹನಗಳಿಗೆ 1 ಸಾವಿರ ರೂ. ಭಾರೀವಾಹನಗಳಿಗೆ 3 ಸಾವಿರ ರೂ.ಗೆಇಳಿಸಲಾಗಿದೆ.

ಕರ್ನಾಟಕದಲ್ಲೂ ಯಡಿಯೂರಪ್ಪ ಸೂಚನೆ ಮೇರೆಗೆ ದಂಡಮೊತ್ತ ಕಡಿಮೆ ಮಾಡುವ ಕುರಿತು ಶೀಘ್ರವೇ ನಿರ್ಧಾರ ಪ್ರಕಟಿಸಿಲಿದ್ದಾರೆ.ಸಾರಿಗೆ ಸಚಿವ ಹಾಗೂ ವಡಿಸಿಎಂ ಲಕ್ಷ್ಮಣ ಸವದಿ ಅವರು,ದಂಡದ ಮೊತ್ತ ಜಾಸ್ತಿಯಾಗಿರುವ ಅಭಿಪ್ರಾಯ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಬೇರೆಬೇರೆ ರಾಜ್ಯಗಳಲ್ಲಿ ಕಡಿಮೆ ಮಾಡಿರುವಂತೆ ನಮ್ಮಲ್ಲೂ ಕಡಿತ ಮಾಡುವ ಯೋಚನೆ ಇದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಮಳೆಗಾಲದಲ್ಲಿ ಬರುವ ರೋಗಗಳು, ಅವುಗಳ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ತಿಳಿಯಲು ಈ ಲೇಖನ ಓದಿ…

    ಈಗಾಗಲೇ ಮಳೆಗಾಲ ಪ್ರಾರಂಭವಾಗಿದೆ. ಮಳೆಗಾಲದಲ್ಲಿ ಹಲವು ರೋಗಾಣುಗಳ ಚಟುವಟಿಕೆ ಹೆಚ್ಚು. ಇದರೊಂದಿಗೆ ನಮ್ಮ ದೇಹದಲ್ಲಿ ಜೀರ್ಣಕ್ರಿಯೆಯ ಶಕ್ತಿಯೂ ಕಡಿಮೆಯಾಗಿ ರೋಗಗಳಿಗೆ, ವೈರಾಣು ಜ್ವರಗಳಿಗೆ ಕಾರಣವಾಗುತ್ತದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 25 ಜನವರಿ, 2019 ಏಕೆಂದರೆ ಅದು ಮಗುವನ್ನು ಬಾಧಿಸಬಹುದು. ರಿಯಲ್ ಎಸ್ಟೇಟ್ ಮತ್ತು ಆರ್ಥಿಕ ವ್ಯವಹಾರಗಳಿಗೆ…

  • ಸುದ್ದಿ

    ತಾಯಿಗೆ ಡಿಕ್ಕಿ ಹೊಡೆದ ಕಾರಿಗೆ ಒದ್ದ ಬಾಲಕ. ಎಲ್ಲೆಡೆ ವಿಡಿಯೋ ವೈರಲ್.!

    ತಾಯಿಗೆ ಕಾರು ಡಿಕ್ಕಿ ಹೊಡೆದ ನಂತರ ಪುಟ್ಟ ಬಾಲಕ ಸಿಟ್ಟಿನಿಂದ ಕಾರಿಗೆ ಒದೆಯುವ ಮೂಲಕ ತಾಯಿಯ ಮೇಲಿನ ಪ್ರೀತಿಯನ್ನು ಹೊರಹಾಕಿದ್ದಾನೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚೀನಾದ ಚಾಂಗ್ಕಿಂಗ್ ನಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. ತಾಯಿ ಝೀಬ್ರಾ ಕ್ರಾಸ್ ಮೂಲಕ ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ. ಆಗ ತಾಯಿ ನೆಲಕ್ಕೆ ಬಿದ್ದಿದ್ದು, ತಕ್ಷಣ ಎಚ್ಚೆತ್ತ ಬಾಲಕ ಮೊದಲು ತಾಯಿಯನ್ನು ಮಾತನಾಡಿಸುತ್ತಾನೆ. ನಂತರ ಸಿಟ್ಟಿಗೆದ್ದು ಕಾರಿಗೆ ಒದೆಯಲು…

  • ದೇಗುಲ ದರ್ಶನ

    ಕಣ್ಮರೆಯಾಗಿ ಮತ್ತೆ ಪ್ರತ್ಯಕ್ಷ ವಾಗುವ ಶಿವನ ದೇವಾಲಯ. ಈ ವೇಳೆ ಹೊಳಗೆ ಹೋಗುವ ಹಾಗಿಲ್ಲ.!

    ಸ್ತಂಭೇಶ್ವರ ಮಹಾದೇವ ದೇವಸ್ಥಾನವು 150 ವರ್ಷಗಳಷ್ಟು ಹಳೆಯದಾದ ಹಿಂದೂ ದೇವಾಲಯ. ಇದು ಗುಜರಾತ್ನ ವಡೋದರಾ ಬಳಿಯ ಕವಿ ಕಾಂಬೊಯ್ ಪಟ್ಟಣದಲ್ಲಿದ್ದು, ವಡೋದರಾ ಬಳಿಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಒಂದಾಗಿದೆ. 4 ಅಡಿ ಎತ್ತರದ ಶಿವಲಿಂಗ ಸ್ತಂಭೇಶ್ವರ ಮಹಾದೇವ ದೇವಾಲಯವು ಶಿವನಿಗೆ ಅರ್ಪಿತವಾಗಿದೆ. ವಾಸ್ತುಶಿಲ್ಪವು ತುಂಬಾ ಸರಳವಾಗಿದ್ದು, ದೇವಾಲಯವು ಮುಖ್ಯವಾಗಿ ಸ್ತಂಭಗಳ ಮೇಲೆ ಬೆಂಬಲಿತವಾಗಿದೆ. ಆದ್ದರಿಂದ ಇದನ್ನು ‘ಸ್ತಂಭೇಶ್ವರ ಮಹಾದೇವ’ ಎಂದು ಕರೆಯುತ್ತಾರೆ. ಕಣ್ಮರೆಯಾಗುವ ಶಿವ ದೇವಾಲಯ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಈ ದೇವಾಲಯವು ವಿಶಿಷ್ಟವಾಗಿದೆ. ಏಕೆಂದರೆ ಈ…

  • ಸುದ್ದಿ

    ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಕಟ್ಟಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ…ಕಾರಣ?

    ಅಮರಾವತಿ: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರ್ಮಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ.ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಅವರು ನಿರ್ಮಿಸಿದ್ದ ಪ್ರಜಾ ವೇದಿಕೆ ಹೆಸರಿನ ಸರ್ಕಾರಿ ಕಟ್ಟಡವನ್ನು ರಾತ್ರೋರಾತ್ರಿ ಒಡೆದು ಹಾಕಲಾಗಿದೆ. 2 ದಿನಗಳಿಂದ ಇಲ್ಲಿದ್ದ ಎಲ್ಲಾ ಪೀಠೋಪಕರಣ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿತ್ತು. ನಿನ್ನೆ 6 ಬುಲ್ಡೋಜರ್‍ಗಳು ಮತ್ತು 12 ಮಂದಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಟ್ಟಡವನ್ನು ಧ್ವಂಸಗೊಳಿಸಿದ್ದಾರೆ. 2017ರಲ್ಲಿ ಸಿಆರ್‍ಡಿಎ ಆಂದ್ರಪ್ರದೇಶದ ರಾಜಧಾನಿ…