ಸುದ್ದಿ

ಕನ್ನಡಿಗರಿಗೆ ಹೆಚ್ಚು ಉದ್ಯೋಗ ಆದ್ಯತೆ ಸಿಎಂ ಯಡಿಯೂರಪ್ಪ ಭರವಸೆ…!

26

ಇಂಗ್ಲಿಷ್ ಸಂಬಳಕ್ಕಾದರೆ, ಕನ್ನಡ ಉಂಬಳಕ್ಕೆ ಎಂಬ ಮಾತು ನಾಡಿನಲ್ಲಿ ಪ್ರಚಲಿತದಲ್ಲಿದೆ. ಆದರೆ, ಕನ್ನಡ ನಮ್ಮ ಸಂಬಳ ಹಾಗೂ ಉಂಬಳ ಎರಡಕ್ಕೂ ಆಗಬೇಕು. ಈ ದಿಸೆಯಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿದ್ದು, ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ದೊರಕಿಸಿಕೊಡುವ ದಿಸೆಯಲ್ಲಿ ಪ್ರಯತ್ನ ನಡೆಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ ಎರಡು ಸಂಸ್ಥೆಗಳು ಸೇರಿ ವಿವಿಧ ಕ್ಷೇತ್ರಗಳ ಸಾಧಕರಿಗೆ ೨೦೧೯ನೇ ಸಾಲಿನ ‘ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ ಮಾಡಿ. ಮಾತನಾಡಿದ ಅವರು, ಖಾಸಗಿ ಕ್ಷೇತ್ರವು ಸೇರಿದಂತೆ ಎಲ್ಲಾ ರಂಗ ಗಳಲ್ಲೂ ಕನ್ನಡಿಗರಿಗೆ ಉದ್ಯೋಗಾವಕಾಶ ಹೆಚ್ಚಾಗ ಬೇಕು. ಈ ದಿಸೆಯಲ್ಲಿ ರಾಜ್ಯ ಸರ್ಕಾರ ಕಾರ್ಯೋನ್ಮುಖವಾಗಿದ್ದು, ಈಗಾಗಲೇ ಖಾಸಗಿ ಸಂಸ್ಥೆಗಳಲ್ಲಿನ ಡಿ ಹಾಗೂ ಸಿ ವರ್ಗದ ಉದ್ಯೋಗಗಳಿಗೆ ಕನ್ನಡಿಗರ ನೇಮಕಾತಿ ಕಡ್ಡಾಯಗೊಳಿಸಲಾಗಿದೆ ಎಂದರು.

ನಾಡು, ನುಡಿ, ನೆಲ, ಜಲ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ಈ ವಿಚಾರದಲ್ಲಿ ಯಾರಿಗೂ ಬಿಜೆಪಿ ಸರ್ಕಾರದ ಬಗ್ಗೆ ಅನುಮಾನ ಬೇಡ ಎಂದರು. ಭಾಷೆ-ಸಂಸ್ಕೃತಿಗೆ ಸಂಬಂಧ : ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ ಮಾತನಾಡಿ, ಸಂಸ್ಕೃತಿ ಹಾಗೂ ಭಾಷೆ ಒಂದನ್ನೊಂದು ಬಿಟ್ಟು ಇರಲಾರವು. ನಾವು ಭಾಷೆ ಕಳೆದುಕೊಂಡರೆ ಸಂಸ್ಕೃತಿಯನ್ನೂ ಕಳೆದುಕೊಳ್ಳು ತ್ತೇವೆ.

ಎರಡನ್ನೂ ಉಳಿಸಿಕೊಳ್ಳುವುದು ವರ್ತಮಾನದ ಸವಾಲು. ಈ ಸವಾಲನ್ನು ನಾವೆಲ್ಲ ಸ್ವೀಕರಿಸಬೇಕು. ನಾವು ಎಷ್ಟೇ ಚೆನ್ನಾಗಿ ಇಂಗ್ಲಿಷ್ ಕಲಿತರೂ ಮಾತೃಭಾಷೆ ಕನ್ನಡವೇ ಆಗಿರುತ್ತದೆ. ಹಾಗಾಗಿ ಇಂಗ್ಲಿಷ್ ಸೇರಿ ಇತರೆ ನೂರು ಭಾಷೆಗಳನ್ನು ಕಲಿಯೋಣ ಎಂದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Sports

    ಕ್ರಿಕೆಟ್ ವೃತ್ತಿಯಲ್ಲಿ ಆಟವಾಡದೆಯೇ ಗಳಿಸಬಹುದು 20 ಲಕ್ಷದವರೆಗೆ ಸಂಬಳ…!

    ಕ್ರಿಕೆಟ್ ಬಹುತೇಕರ ಕನಸು. ಆದ್ರೆ ಅಂತರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆಯುವುದು ಸುಲಭದ ಕೆಲಸವಲ್ಲ. ಕ್ರೀಡೆ ಗೊತ್ತಿಲ್ಲದವರಿಗೂ ಕ್ರಿಕೆಟ್ ಜಗತ್ತಿನಲ್ಲಿ ಕೆಲಸ ಸಿಗುತ್ತದೆ. ಒಳ್ಳೆ ವಿದ್ಯಾಭ್ಯಾಸ ಹೊಂದಿರುವವರು ಕ್ರಿಕೆಟ್ ವೃತ್ತಿಯನ್ನಾಗಿ ಆಯ್ಕೆ ಮಾಡಿಕೊಂಡು ಲಕ್ಷಾಂತರ ರೂಪಾಯಿ ಗಳಿಕೆ ಮಾಡ್ತಿದ್ದಾರೆ. ಬ್ಯಾಟಿಂಗ್, ಬೌಲಿಂಗ್ ಮಾತ್ರವಲ್ಲ, ಮೈದಾನದಲ್ಲಿ ಹಾಗೂ ಮೈದಾನದ ಹೊರಗೆ ಕ್ರಿಕೆಟ್ ಗೆ ಸಂಬಂಧಿಸಿದ ಅನೇಕ ಕೆಲಸಗಳಿವೆ. ಪಂದ್ಯದ ತೀರ್ಪುಗಾರನಾಗಿ ನೀವು ಕೆಲಸ ಮಾಡಬಹುದು. ಪ್ರತಿ ಪಂದ್ಯಕ್ಕೆ 30 ಸಾವಿರ ರೂಪಾಯಿ ನೀಡಲಾಗುತ್ತದೆ. ಐಸಿಸಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ…

  • inspirational

    ವಿಶ್ವದ ಎಲ್ಲಾ ಆಗುಹೋಗುಗಳ ಜೊತೆ ಅವುಗಳ ಬಗೆಗಿನ ವಿಮರ್ಶಾತ್ಮಕ ದೃಷ್ಟಿಕೋನವನ್ನು ನೀಡುತ್ತಿದ್ದರು

    ಒಂದು ಕಾಲದಲ್ಲಿ ಮಾಧ್ಯಮ ಎಂದರೆ ಜ್ಞಾನದ ಕಣಜ ಎಂದೇ ಕರೆಯಲಾಗುತ್ತಿತ್ತು. ವಿಶ್ವದ ಎಲ್ಲಾ ಆಗುಹೋಗುಗಳ ಜೊತೆ ಅವುಗಳ ಬಗೆಗಿನ ವಿಮರ್ಶಾತ್ಮಕ ದೃಷ್ಟಿಕೋನವನ್ನು ನೀಡುತ್ತಿದ್ದರು.

  • ಸುದ್ದಿ

    ಮಾತ್ರೆಯಿಲ್ಲದೆ ಕ್ಷಣ ಮಾತ್ರದಲ್ಲಿ ತಲೆನೋವು ಮಾಯವಾಗಲು ಸುಲಭ ಪರಿಹಾರಗಳು; ಹೀಗೆ ಮಾಡಿ..!

    ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು: 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…

  • ಸುದ್ದಿ, ಸ್ಪೂರ್ತಿ

    ಕೇವಲ ಒಂದೇ ವಾರದಲ್ಲಿ ತನ್ನ ಊರಿಗೆ ಏಕಾಂಗಿಯಾಗಿ ರಸ್ತೆ ನಿರ್ಮಿಸಿದ ಮಾಂಜಿ..!

    ತನ್ನ ಹೆಂಡತಿಗಾಗಿ ರಸ್ತೆಯನ್ನೇ ನಿರ್ಮಿಸಿದ್ದ ಮಾಂಜಿಯ ಕಥೆ ನಮಗೆಲ್ಲಾ ಗೊತ್ತಿದೆ. ಇದೀಗ ಕೀನ್ಯಾದಲ್ಲೂ ಒಬ್ಬ ಮಾಂಜಿ ಇದ್ದಾರೆ. ಆದ್ರೆ, ಈತ ತನ್ನ ಹೆಂಡತಿಗಾಗಿ ಅಲ್ಲ, ಇಡೀ ಊರಿನ ಜನರಿಗೆ ನೆರವಾಗಲಿ ಅಂತ ತಾನೇ ರಸ್ತೆ ನಿರ್ಮಿಸಿ ಈಗ ಎಲ್ಲರ ದೃಷ್ಟಿಯಲ್ಲೂ ಹೀರೋ ಆಗಿದ್ದಾರೆ. ಕೀನ್ಯಾದ ಕಗಂಡಾ ಗ್ರಾಮದ ಬಳಿ ದಟ್ಟ ಅರಣ್ಯ ಪ್ರದೇಶವಿದೆ. ಅದರ ಬಳಿ ವಾಸಿಸುವ ಜನರಿಗೆ ಊರಿನ ಸಂಪರ್ಕ ಮಾಡೋಕೆ ಸರಿಯಾದ ರಸ್ತೆಯೇ ಇರಲಿಲ್ಲ. ಈ ಬಗ್ಗೆ ಗ್ರಾಮದ ನಿಕೋಲಸ್ ಮುಚಾಮಿ ಹಲವು ಬಾರಿ…

  • ಸಿನಿಮಾ

    ನಟ ಯಶ್ ಮನೆ ಮುಂದೆ ಆತ್ಮಹತ್ಯಗೆ ಯತ್ನಿಸಿದ ಅಭಿಮಾನಿ..!

    ಕನ್ನಡ ಚಿತ್ರಗಳನ್ನು ಕೀಳುಮಟ್ಟದಲ್ಲಿ ನೋಡುತ್ತಿದ್ದ ಪರಭಾಷಿಕರನ್ನು ಕನ್ನಡ ಚಿತ್ರರಂಗದ ಕಡೆ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ.ಇದನು ಯಶ್ ರವರ ಹುಟ್ಟು ಹಬ್ಬವಾಗಿದ್ದು ಯಶ್ ರವರನ್ನು ನೋಡಲು ಅಭಿಮಾನಿಯನ್ನು ಬಿಡದ್ದಕ್ಕೆ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ರವಿ ಆತ್ಮಹತ್ಯೆಗೆ ಯತ್ನಿಸಿದ ಯಶ್ ಅಭಿಮಾನಿ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಇಂದು ತನ್ನ ನೆಚ್ಚಿನ ನಟನ ಹುಟ್ಟುಹಬ್ಬ ಇರುವ ಕಾರಣ ಯಶ್ ಅವರನ್ನು ಭೇಟಿ ಮಾಡಲು ಬೆಂಗಳೂರಿನ ಹೊಸಕೆರೆಹಳ್ಳಿ ಮನೆಗೆ ಆಗಮಿಸಿದ್ದ. ಮನೆಗೆ ಆಗಮಿಸಿದರೂ ಭೇಟಿಗೆ…

  • ದೇಗುಲ ದರ್ಶನ, ದೇವರು, ದೇವರು-ಧರ್ಮ

    ಪರಮಪೂಜ್ಯ ಶಿವಕುಮಾರ ಶ್ರೀಗಳ 50 ಕೆ.ಜಿಯ ಬೆಳ್ಳಿ ವಿಗ್ರಹ ಪ್ರತಿಷ್ಠಾಪನೆ.

    ತ್ರಿವಿಧ ದಾಸೋಹಿ, ಪರಮಪೂಜ್ಯ ಶಿವೈಕ್ಯ ಶಿವಕುಮಾರ ಶ್ರೀಗಳ 50 ಕೆ.ಜಿಯ ಬೆಳ್ಳಿ ವಿಗ್ರಹವನ್ನು ಇಂದು ಗದ್ದುಗೆಯಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಹಳೇ ಮಠದಲ್ಲಿ ಬೆಳ್ಳಿ ವಿಗ್ರಹಕ್ಕೆ ಪೂಜೆ ಸಲ್ಲಿಸಲಾಯಿತು. ಸಿದ್ಧಗಂಗಾ ಸ್ವಾಮಿಜಿಗಳು ಸೇರಿದಂತೆ ಹಲವು ಮಠಾಧೀಶರು ಮಂತ್ರಘೋಷಗಳ ಮೂಲಕ ಮಂಗಳಾರತಿ ಮಾಡಿದರು. ಬಳಿಕ ಮಠದಿಂದ ಮೆರವಣಿಗೆ ಹೊರಟು ಉದ್ದಾನೇಶ್ವರ ಗದ್ದುಗೆಗೆ ಪೂಜೆ ಸಲ್ಲಿಸಿ, ಅಲ್ಲಿಂದ ಶಿವಕುಮಾರ ಶ್ರೀಗಳ ಗದ್ದುಗೆಗೆ ಮೆರವಣಿಗೆ ತಲುಪಿತು. ಅಲ್ಲಿ ಗದ್ದುಗೆ ಸುತ್ತ ಐದು ಪ್ರದಕ್ಷಿಣೆ ಆದ ಬಳಿಕ ನೇರವಾಗಿ ಗದ್ದುಗೆಯ…