budget

2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ

By KOLAR NEWS CHANDRU

February 01, 2023

ಪಾರ್ಲಿಮೆಂಟ್​​ನಲ್ಲಿ 2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman) ಅವರು ಕೇಂದ್ರ ಬಜೆಟ್(Union Budget)​ ಮಂಡಿಸುತ್ತಿದ್ದಾರೆ. ಇದು ಅವರ ಐದನೇ ಮತ್ತು ಈ ಸರ್ಕಾರದ ಅವಧಿಯ ಕೊನೆಯ ಪೂರ್ಣ ಬಜೆಟ್ ಆಗಿದೆ.

ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನವೇ, ಈ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮೂಲಕ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ. ಇದರ ಜೊತೆಗೆ ಮಧ್ಯಮ ವರ್ಗಕ್ಕೆ ಬಂಪರ್​ ನ್ಯೂಸ್​ ನೀಡಿದೆ. 5 ರಿಂದ 7 ಲಕ್ಷದವರೆಗೆ ಯಾವುದೇ ಟ್ಯಾಕ್ಸ್ ಇಲ್ಲ ಎಂದು ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್​ ಘೋಷಿಸಿದ್ದಾರೆ.