ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಮುನಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಬಸ್ ವೊಂದು ಜಾರಿ ಹದಿನೈದು ಅಡಿ ಆಳದ ದೊಡ್ಡ ಮೋರಿಯಲ್ಲಿ ಬಿದ್ದ ಪರಿಣಾಮ ಇಪ್ಪತ್ತೊಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ನೂರಾ ಅರವತ್ತೈದು ಕಿ.ಮೀ. ಉದ್ದ ಎಕ್ಸ್ ಪ್ರೆಸ್ ಹೈವೆ ಉತ್ತರಪ್ರದೇಶದಲ್ಲಿ ನೋಯ್ಡಾ ಹಾಗೂ ಆಗ್ರಾದ ಮಧ್ಯೆ ಸಂಪರ್ಕ ಕಲ್ಪಿಸುತ್ತದೆ.ರಾಜ್ಯ ರಸ್ತೆ ಸಾರಿಗೆ ಬಸ್ ಸ್ಕಿಡ್ ಆಗಿ 50 ಅಡಿ ಆಳದ ಚರಂಡಿಗೆ ಬಿದ್ದ ಪರಿಣಾಮ ಸ್ಥಳದಲ್ಲಿಯೇ 29 ಮಂದಿ ಪ್ರಯಾಣಿಕರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.
ಚಾಲಕ ನಿದ್ದೆ ಮಂಪರಿನಲ್ಲಿದ್ದನು,ಹೀಗಾಗಿ ಬಸ್ ಸ್ಕಿಡ್ ಆಗಿ ಆಗ್ರಾ ಎಕ್ಸ್ಪ್ರೆಸ್ವೇ ಬಳಿ ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಆಳದ ಚರಂಡಿಗೆ ಬಿದ್ದಿದೆ. ಈ ವರೆಗೆ ಇಪ್ಪತ್ತು ಪ್ರಯಾಣಿಕರ ರಕ್ಷಣೆ ಮಾಡಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸರು ಟ್ವೀಟ್ ನಲ್ಲಿ ತಿಳಿಸಿದ್ದಾರೆ. ವರದಿ ಪ್ರಕಾರ, ಈ ಭಾರೀ ವಾಹನದ ನಿಯಂತ್ರಣ ಕಳೆದುಕೊಳ್ಳುವ ಮುನ್ನ ಚಾಲಕ ನಿದ್ರೆಗೆ ಜಾರಿದ್ದ.
ಪರಿಣಾಮ 29 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ 17 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಪೊಲೀಸರು ಮತ್ತು ರಕ್ಷಣಾ ಪಡೆದ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ. ಅಪಘಾತವಾದ ತಕ್ಷಣ ಸ್ಥಳದಲ್ಲಿದ್ದ ಸಾರ್ವಜನಿಕರು ಕೂಡ ಚರಂಡಿಗೆ ಇಳಿದು ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ. ಸದ್ಯಕ್ಕೆ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ಸಿನಲ್ಲಿರುವ ಮೃತದೇಹವನ್ನು ಹೊರತೆಗೆಯಲಾಗುತ್ತಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಸ್ ದುರಂತಕ್ಕೆ ಸಂತಾಪ ಸೂಚಿಸಿದ್ದು, ಗಾಯಗೊಂಡವರಿಗೆ ಮತ್ತು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಎಲ್ಲ ರೀತಿಯ ಸಹಾಯವನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜೊತೆಗೆ ಉತ್ತರ ಪ್ರದೇಶ ಸರ್ಕಾರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಫೋಷಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುಟ್ಟುಹಬ್ಬ ಆಚರಿಸುವಾಗ ಕೇಕ್ ಮೇಲೆ ಕ್ಯಾಂಡಲ್ ಗಳನ್ನು ಉರಿಸಿ ಅದನ್ನು ಆರಿಸೋದು ಕಾಮನ್. ಎಲ್ಲರೂ ಖುಷಿ ಖುಷಿಯಾಗಿ ಮೋಂಬತ್ತಿಗಳನ್ನು ಆರಿಸಿ ನಂತರ ಆ ಕೇಕ್ ಅನ್ನು ಕತ್ತರಿಸ್ತಾರೆ. ಆದ್ರೆ ಹೀಗೆ ಮಾಡೋದ್ರಿಂದ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳು ತುಂಬಿಕೊಳ್ಳುತ್ತವೆ. ದಕ್ಷಿಣ ಕೆರೊಲಿನಾದ ಕ್ಲೆಮ್ಸನ್ ಯೂನಿವರ್ಸಿಟಿ ವಿಜ್ಞಾನಿಗಳು ನಡೆಸಿದ ಸಂಶೋಧನೆಯಲ್ಲಿ ಈ ವಿಷಯ ಬಹಿರಂಗವಾಗಿದೆ. ಮೋಂಬತ್ತಿ ಆರಿಸುವ ವೇಳೆ ಉಗುಳು ಕೂಡ ಕೇಕ್ ಮೇಲೆ ಬೀಳುತ್ತದೆ. ಇದರಿಂದಾಗಿ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳ ಸಂಖ್ಯೆ ಶೇ. 1400 ರಷ್ಟು ಜಾಸ್ತಿಯಾಗುತ್ತದೆ. ಕ್ಯಾಂಡಲ್…
ನಮ್ಮ ದೇಶದಲ್ಲಿ ಮಕ್ಕಳು 21 ವರ್ಷದವರಾದರೆ ಅವರು ಇನ್ನು ಬಹುತೇಕ ಕಾಲೇಜಿನಲ್ಲಿರುತ್ತಾರೆ. ಪ್ರಮುಖವಾಗಿ ತಮ್ಮ ಓದನ್ನು ಮುಗಿಸಿಕೊಳ್ಳುವ ಒತ್ತಡವಿರುತ್ತದೆ. ಪ್ರವಾಸವೊಂದು ಐಷಾರಾಮಿ ಬದುಕಾಗಿರುತ್ತದಷ್ಟೇ. ಆದರೆ ಅಮೆರಿಕದ ಲೆಕ್ಸಿ ಅಲ್ಫೋರ್ಡ್ ಎನ್ನುವ ಯುವತಿ 21 ವರ್ಷ ದಾಟುವಷ್ಟರಲ್ಲಿ 196 ದೇಶಗಳಲ್ಲಿ ಹೋಗಿ ಜಗತ್ತಿನ ಎಲ್ಲ ದೇಶಗಳಲ್ಲಿ ಪ್ರಯಾಣಿಸಿದ, ಅತ್ಯಂತ ಕಿರಿಯ ವ್ಯಕ್ತಿ ಎಂದು ಗಿನ್ನಿಸ್ ಬುಕ್ ಆಫ್ ರೇಕಾರ್ಡ್ಸ್ನಲ್ಲಿ ಸೇರಿದ್ದಾರೆ. ಮೇ 31ರಂದು ಉತ್ತರ ಕೊರಿಯಾ ಪ್ರವೇಶಿಸಿದ ನಂತರ ಅವರು ಈ ದಾಖಲೆಗೆ ಭಾಜನರಾಗಿದ್ದಾರೆ. ಈ ಹಿಂದೆ ಈ…
2016 ರಲ್ಲಿ ಚಿತ್ರದುರ್ಗದ ಈ ಗಣಪತಿ ಅತಿ ಹೆಚ್ಚು ಜನ ಸೇರಿದರಿಂದ ಕರ್ನಾಟಕದ ಹೆಚ್ಚು ಜನ ಆಕರ್ಷಿಸಿದ ಗಣಪ ಎಂದು ತಿಳಿದು ಬಂದಿದೆ.
ಮಂಡ್ಯದಲ್ಲಿ ಪ್ರಚಾರಕ್ಕೆ ಹೊರಗಿನಿಂದ ಜನ ಕರೆಸುತ್ತಿದ್ದಾರಾ ಎಂಬ ಅನುಮಾನವೊಂದು ಕ್ಷೇತ್ರದ ಮತದಾರರನ್ನು ಕಾಡುತ್ತಿದೆ. ಯಾಕಂದ್ರೆ ಸಂಸದ ಶಿವರಾಮೇಗೌಡರು, ಜೆಡಿಎಸ್ ಕಾರ್ಯಕರ್ತನ ಜೊತೆ ಮಾತನಾಡಿರುವ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಜೆಡಿಎಸ್ ಸಂಸದ ಎಲ್.ಆರ್. ಶಿವರಾಮೇಗೌಡ ಅವರು, ನಾಗಮಂಗಲ ತಾಲ್ಲೂಕಿನ ಚೀಣ್ಯ ಗ್ರಾಮದ ರಮೇಶ್ ಅವರೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಈ ಆಡಿಯೋದಲ್ಲಿ ರಮೇಶ್, ಜೆಡಿಎಸ್ ಪರ ಪ್ರಚಾರಕ್ಕೆ ಜನರನ್ನು ಕರೆ ತರುವುದಾಗಿ ಹೇಳಿದ್ದಾರೆ. ಈ ಆಡಿಯೋ ನೋಡಿ… ಬೆಂಗಳೂರಿನಿಂದ ಪ್ರಚಾರಕ್ಕೆ ಜನರನ್ನು…
ಗುಜರಾತ್ನ ಬನಸ್ಕಾಂತ ಜಿಲ್ಲೆಯ ಠಾಕೂರ್ ಸಮುದಾಯದಲ್ಲಿ ಯುವತಿಯರು ಮೊಬೈಲ್ ಪೋನ್ ಬಳಕೆ ಮಾಡದಂತೆ ನಿಷೇಧವೇರಿದೆ. ಇನ್ನು ಬೇರೆ ಜಾತಿ ಯುವಕರನ್ನು ಮದುವೆಯಾದರೇ ಭಾರಿ ಮೊತ್ತದ ದಂಡವನ್ನು ಪಾಲಕರಿಗೆ ವಿಧಿಸಲಾಗುವುದು ಜಿಲ್ಲೆಯ 12 ಗ್ರಾಮಗಳಲ್ಲಿ ಈ ಕಾನೂನು ಜಾರಿಗೆ ಬರಲಿದೆ ಎಂದು ಸಮುದಾಯದ ನಾಯಕರು ಹಾಗೂ ಸ್ಥಳೀಯ ಶಾಸಕರು ತಿಳಿಸಿದ್ದಾರೆ. ಮದುವೆಗೂ ಮುನ್ನ ಯುವತಿಯರು ಮೊಬೈಲ್ ಬಳಸಬಾರದು. ಒಂದೆ ವೇಳೆ ಬಳಸಿದರೆ, ಅದಕ್ಕೆ ಹೆತ್ತವರೇ ಜವಾಬ್ದಾರಿಯಾಗಲಿದ್ದಾರೆ. ಇನ್ನು ಸಮುದಾಯದ ಯುವತಿ ಹಾಗೂ ಯುವಕರು ಬೇರೆ ಜಾತಿಯವರನ್ನು ಪ್ರೀತಿಸಿ ಮದುವೆಯಾದರೆ,…
ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ…