ಸುದ್ದಿ

ಸೇತುವೆ ಮೇಲಿಂದ ಬಸ್ ಪಲ್ಟಿ…..29 ಪ್ರಯಾಣಿಕರ ಮರಣ…..!

By admin

July 08, 2019

ಯಮುನಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಬಸ್ ವೊಂದು ಜಾರಿ ಹದಿನೈದು ಅಡಿ ಆಳದ ದೊಡ್ಡ ಮೋರಿಯಲ್ಲಿ ಬಿದ್ದ ಪರಿಣಾಮ ಇಪ್ಪತ್ತೊಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ನೂರಾ ಅರವತ್ತೈದು ಕಿ.ಮೀ. ಉದ್ದ ಎಕ್ಸ್ ಪ್ರೆಸ್ ಹೈವೆ ಉತ್ತರಪ್ರದೇಶದಲ್ಲಿ ನೋಯ್ಡಾ ಹಾಗೂ ಆಗ್ರಾದ ಮಧ್ಯೆ ಸಂಪರ್ಕ ಕಲ್ಪಿಸುತ್ತದೆ.ರಾಜ್ಯ ರಸ್ತೆ ಸಾರಿಗೆ ಬಸ್ ಸ್ಕಿಡ್ ಆಗಿ 50 ಅಡಿ ಆಳದ ಚರಂಡಿಗೆ ಬಿದ್ದ ಪರಿಣಾಮ ಸ್ಥಳದಲ್ಲಿಯೇ 29 ಮಂದಿ ಪ್ರಯಾಣಿಕರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.

ಚಾಲಕ ನಿದ್ದೆ ಮಂಪರಿನಲ್ಲಿದ್ದನು,ಹೀಗಾಗಿ ಬಸ್ ಸ್ಕಿಡ್ ಆಗಿ ಆಗ್ರಾ ಎಕ್ಸ್‌ಪ್ರೆಸ್‌ವೇ ಬಳಿ ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಆಳದ ಚರಂಡಿಗೆ ಬಿದ್ದಿದೆ. ಈ ವರೆಗೆ ಇಪ್ಪತ್ತು ಪ್ರಯಾಣಿಕರ ರಕ್ಷಣೆ ಮಾಡಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸರು ಟ್ವೀಟ್ ನಲ್ಲಿ ತಿಳಿಸಿದ್ದಾರೆ. ವರದಿ ಪ್ರಕಾರ, ಈ ಭಾರೀ ವಾಹನದ ನಿಯಂತ್ರಣ ಕಳೆದುಕೊಳ್ಳುವ ಮುನ್ನ ಚಾಲಕ ನಿದ್ರೆಗೆ ಜಾರಿದ್ದ.

ಪರಿಣಾಮ 29 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ 17 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಪೊಲೀಸರು ಮತ್ತು ರಕ್ಷಣಾ ಪಡೆದ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ. ಅಪಘಾತವಾದ ತಕ್ಷಣ ಸ್ಥಳದಲ್ಲಿದ್ದ ಸಾರ್ವಜನಿಕರು ಕೂಡ ಚರಂಡಿಗೆ ಇಳಿದು ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ. ಸದ್ಯಕ್ಕೆ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ಸಿನಲ್ಲಿರುವ ಮೃತದೇಹವನ್ನು ಹೊರತೆಗೆಯಲಾಗುತ್ತಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಸ್ ದುರಂತಕ್ಕೆ ಸಂತಾಪ ಸೂಚಿಸಿದ್ದು, ಗಾಯಗೊಂಡವರಿಗೆ ಮತ್ತು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಎಲ್ಲ ರೀತಿಯ ಸಹಾಯವನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜೊತೆಗೆ ಉತ್ತರ ಪ್ರದೇಶ ಸರ್ಕಾರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಫೋಷಿಸಿದೆ.