ಸುದ್ದಿ

‘ಮಜಾ’ಕ್ಕಾಗಿ ಶೈನ್ ಶೆಟ್ಟಿಯನ್ನು ಬಳಸಿಕೊಳ್ಳುತ್ತಿದ್ದಾರೆಯೇ ಚೈತ್ರ ಕೊಟ್ಟೂರು.. ಹೀಗೆಲ್ಲ ಮಾಡ್ತಿರೋದು ಯಾಕೆ ಗೊತ್ತಾ?

68

ಪಾಸಿಟೀವೋ, ನೆಗೆಟಿವೋ.. ಒಟ್ನಲ್ಲಿ ಪ್ರಚಾರ ಸಿಕ್ಕರೆ ಸಾಕು ಅಂತ ಕೆಲ ಸಿನಿಮಾ ತಂಡವರು ಏನೇನೋ ಪ್ಲಾನ್ ಮಾಡ್ತಾರೆ. ನೆಗೆಟಿವ್ ಪಬ್ಲಿಸಿಟಿ ಆದರೂ ಪರ್ವಾಗಿಲ್ಲ, ಒಟ್ನಲ್ಲಿ ಹೆಚ್ಚು ಜನರನ್ನು ತಲುಪಲು ಗಾಂಧಿನಗರದ ಕೆಲ ಮಂದಿ ಸರ್ಕಸ್ ಮಾಡುವುದು ನಿಮಗೆಲ್ಲ ಗೊತ್ತೇ ಇದೆ.

ಸೇಮ್ ಟು ಸೇಮ್ ಇದೇ ಸ್ಟ್ರಾಟೆಜಿಯನ್ನ ನಟಿ ಮತ್ತು ಬರಹಗಾರ್ತಿ ಚೈತ್ರ ಕೊಟ್ಟೂರು ‘ಬಿಗ್ ಬಾಸ್’ ಮನೆಯಲ್ಲಿ ಅಪ್ಲೈ ಮಾಡುತ್ತಿರುವ ಹಾಗಿದೆ. ‘ಬಿಗ್ ಬಾಸ್’ ಮನೆಯಲ್ಲಿ ಮೂರು ಹೊತ್ತು ಸುಮ್ಮನೆ ಇದ್ದರೆ, ಕ್ಯಾಮರಾಗಳು ಕೂಡ ಝೂಮ್ ಹಾಕಲ್ಲ. ಹೀಗಾಗಿ ಫುಟೇಜ್ ಪಡೆಯಬೇಕು ಅಂದ್ರೆ ಏನಾದರು ಒಂದನ್ನ ಮಾಡುತ್ತಲೇ ಇರಬೇಕು.

ಕಾಲು ಕೆರೆದುಕೊಂಡು ರಗಳೆ ಮಾಡಿಕೊಳ್ಳದ ಚೈತ್ರ ಕೊಟ್ಟೂರು, ‘ಬಿಗ್ ಬಾಸ್’ ಮನೆಯೊಳಗೆ ಪ್ರೀತಿ-ಪ್ರೇಮದ ಆಟ ಆಡುತ್ತಿದ್ದಾರೆ. ಕಳೆದ ವಾರ ಶೈನ್ ಶೆಟ್ಟಿ ಹಿಂದೆ ಬಿದ್ದು ಇಡೀ ಮನೆಯಲ್ಲಿ ಹಾಟ್ ಟಾಪಿಕ್ ಆಗಿದ್ದ ಚೈತ್ರ ಕೊಟ್ಟೂರು ಈ ವಾರವೂ ಅದನ್ನೇ ಮುಂದುವರೆಸಿದ್ದಾರೆ.ಹೇಳಿ ಕೇಳಿ ಚೈತ್ರ ಕೊಟ್ಟೂರು ಬರಹಗಾರ್ತಿ ಆಗಿರುವುದರಿಂದ ‘ಬಚ್ಚಿಟ್ಟ ಒಲವ ಹೇಳಿಬಿಡು ಗೆಳೆಯ..’ ಎಂದು ಆರಂಭವಾಗುವ ಒಂದು ಕವನವನ್ನ ಬರೆದು ಯಾರಿಗೂ ಗೊತ್ತಾಗದಂತೆ ಶೈನ್ ಶೆಟ್ಟಿ ಸೂಟ್ ಕೇಸ್ ಒಳಗೆ ಹಾಕಿದ್ದಾರೆ.

”ಸುಮ್ನೆ ಒಂದು ಸಣ್ಣ ಕವನ ಬರೆದಿದ್ದೇನೆ. ಬರೆಯಬೇಕು ಅಂತ ಬರೆದಿದ್ದಲ್ಲ, ಸುಮ್ನೆ ಆಟಕ್ಕಾಗಿ ಬರೆದಿದ್ದೇನೆ. ತಪ್ಪಾಗಿದ್ದರೆ ಕ್ಷಮಿಸಿ. ಇದನ್ನ ಶೈನ್ ಬ್ಯಾಗ್ ಒಳಗೆ ಇಡಬೇಕು ಅಂದುಕೊಂಡಿದ್ದೇನೆ. ಇದರಲ್ಲಿ ನನ್ನ ಹೆಸರು ಬರೆದಿಲ್ಲ. ನಾನೇ ಬರೆದಿದ್ದು ಅಂತ ಯಾವ ಕಾರಣಕ್ಕೂ ಒಪ್ಪಿಕೊಳ್ಳಲ್ಲ. ಮಜಾ ಇರುತ್ತೆ ಅಂತ ಮಾಡ್ತಾ ಇದ್ದೀನಿ” ಎಂದು ಶೈನ್ ಶೆಟ್ಟಿ ಸೂಟ್ ಕೇಸ್ ಒಳಗೆ ಕವನವನ್ನ ಇಟ್ಟು ‘ಬಿಗ್ ಬಾಸ್’ ಮುಂದೆ ಚೈತ್ರ ಕೊಟ್ಟೂರು ಹೇಳಿಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು-ಧರ್ಮ

    ಕಲಿಯುಗ ಅಂತ್ಯವಾಗುತ್ತಿದೆ ಎಂಬುದು ನಮಗೆ ತಿಳಿಯುವುದಾದರೂ ಹೇಗೆ..?ವೇದಗಳು ಹೇಳಿರುವ ಈ ಸಂಕೇತಗಳು ನಡೆಯುತ್ತಿವೆ ಅಲ್ಲವೇ?ತಿಳಿಯಲು ಮುಂದೆ ಓದಿ…

    ಪ್ರಸ್ತುತ ನಾವೆಲ್ಲರೂ ಇರುವುದು ಕಲಿಯುಗದಲ್ಲಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಈ ಯುಗದಲ್ಲೇ ಯುಗಾಂತ್ಯವಾಗುತ್ತದೆ ಎಂದು ಪುರಾಣಗಳು ಹೇಳುತ್ತಿವೆ. ಕಲಿಯುಗದಲ್ಲಿ ಮನುಷ್ಯರು ಉನ್ನತ ಸ್ಥಾನಕ್ಕೆ ಸೇರಿಕೊಳ್ಳಲು ವಿಧವಿಧವಾಗಿ ಪ್ರಯತ್ನಿಸುತ್ತಾರೆಂದು, ಅಗತ್ಯ ಬಿದ್ದರೆ ಅಡ್ಡದಾರಿ ಸಹ ತುಳಿಯುತ್ತಾರೆ, ವಯಸ್ಸು, ಎತ್ತರ, ಬಲ, ಜ್ಞಾನ, ಆಕರ್ಷಣೆಯಂತಹವು ಬರುಬರುತ್ತಾ ಕಲಿಯುಗದಲ್ಲಿ ಕಡಿಮೆಯಾಗುತ್ತವೆ ಎಂದು ಪುರಾಣಗಳು ಹೇಳುತ್ತಿವೆ. ಅವೆಲ್ಲಾ ನಡೆಯುತ್ತಿರುವುದನ್ನು ನೋಡುತ್ತಿದ್ದೇವೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…!

    ಶ್ರೀ ಕಟೀಲು ದುರ್ಗಾಪರಮೇಶ್ವರಿ ತಾಯಿಯ ಆಶೀರ್ವಾದದೊಂದಿಗೆ ಈ ರಾಶಿಗಳಿಗೆ ಶುಭಯೋಗ.! ನಿಮ್ಮ ರಾಶಿಯೂ ಇದೆಯಾ ನೋಡಿ.. ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ : (21 ಅಕ್ಟೋಬರ್, 2019)ಅನಂತ ಚೈತನ್ಯ ಮತ್ತು ಉತ್ಸಾಹ ನಿಮ್ಮನ್ನು ಆವರಿಸುತ್ತದೆ ಮತ್ತು ನೀವು ಯಾವುದೇ ಅವಕಾಶವನ್ನು ನಿಮ್ಮ ಅನುಕೂಲಕ್ಕೆ ಬಳಸಿಕೊಳ್ಳುತ್ತೀರಿ. ಆರ್ಥಿಕ ನಿರ್ಬಂಧಗಳನ್ನು…

  • ಸುದ್ದಿ

    ವಯಸ್ಕರಿಗೆ ಬಿಳಿ ಕೂದಲಿನ ಕಾಟವೇ ಆಗಾದರೆ ಈ ನ್ಯಾಚುರಲ್ ರೆಮಿಡಿ ಒಮ್ಮೆ ಟ್ರೈ ಮಾಡಿ ನೋಡಿ,.!

    ಬೆಳ್ಳಗಿನ ಕೂದಲು ಇರುವ ವ್ಯಕ್ತಿಗಳನ್ನು ಕಂಡರೆ ನಾವು ಅಜ್ಜಿ-ತಾತ ಎಂದು ಸಂಭೋಧಿಸುತ್ತೇವೆ. ಅಂದರೆ ಈ ನರೆ (ಬೆಳ್ಳಗಿನ) ಕೂದಲು ಸಂಭವಿಸುವುದು 50ರ ಮೇಲೆ ಎಂದಾಯಿತು. ಆದರೆ ಇತ್ತೀಚಿನ ದಿನಗಳಲ್ಲಿ ಈ ನರೆ ಕೂದಲು 12 ರಿಂದ 20ರ ವಯಸ್ಸಿನಲ್ಲೇ ಕಂಡುಬರುತ್ತಿರುವುದು ಆತಂಕಕಾರಿ ವಿಚಾರ. ಆದರೆ ನರೆ ಕೂದಲು ಇಷ್ಟು ಚಿಕ್ಕ ವಯಸ್ಸಿಗೆ ಕಾಣಿಸಿಕೊಳ್ಳಲು ಕಾರಣವೇನು? ಸಮಸ್ಯೆಗೆ ಪರಿಹಾರ ಅಥವಾ ಮನೆಮದ್ದು ಏನೆಂಬುದನ್ನು ಇಲ್ಲಿ ತಿಳಿಸಲಾಗಿದೆ ನೋಡಿ. ಬಿಳಿ ಕೂದಲಿಗೆ ಕಾರಣವೇನು? : *ಆನುವಂಶಿಕತೆ, *ವಿಟಿಲಿಗೊ, ಟ್ಯೂಬೆರಸ್ ಸ್ಕ್ಲೆರೋಸಿಸ್,…

  • ಸುದ್ದಿ

    5 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡುತ್ತೇನೆ, ಬಾಬಾ ರಾಮ್‍ದೇವ್.

    ಪತಂಜಲಿ ಸಂಸ್ಥೆ 5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಯೋಗ ಗುರು ಬಾಬಾ ರಾಮ್‍ದೇವ್ ಹೇಳಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಮತ್ತು ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಅತ್ಯುತ್ತಮ ಮಾರ್ಗ. ಕಳೆದ 40 ವರ್ಷಗಳಿಂದ ನಾನು ಬೆಳಗ್ಗೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಚಟುವಟಿಕೆಯಿಂದ ಜೀವನ ನಡೆಸುತ್ತಿದ್ದೇನೆ ಎಂದು ಯೋಗ ಗುರು ಬಾಬಾ ರಾಮ್‍ದೇವ್ ಹೇಳಿದ್ದಾರೆ. ಮಾಧ್ಯವೊಂದರ ಜೊತೆ ಬಾಬಾ ರಾಮ್‍ದೇವ್ ಮಾತನಾಡಿ ಸ್ವಾವಲಂಬಿ (ಆತ್ಮನಿರ್ಭರ್) ಭಾರತಕ್ಕಾಗಿ ಅಳವಡಿಸಿಕೊಳ್ಳಬಹುದಾದ…

  • ಸುದ್ದಿ

    ನಟ ಕಮಲ್ ಹಾಸನ್ ಅವರ ಮೇಲೆ ಚಪ್ಪಲಿ ತೂರಾಟ….ಧೂರು ದಾಕಲು….!

    ಮಕ್ಕಳ ನೀಧಿ ಮಯ್ಯಂ ಪಕ್ಷದ ನಾಯಕ ಕಮಲ್ ಹಾಸನ್ ಅವರ ಮೇಲೆ ಅಪರಿಚಿತರು ಚಪ್ಪಲಿ ಎಸೆದ ಘಟನೆ ಬುಧವಾರ ನಡೆದಿದೆ. ಬುಧವಾರ ಸಂಜೆ ತಮಿಳುನಾಡಿನ ತಿರುಪ್ಪರನಕುಂಡ್ರಂ ವಿಧಾನಸಭೆ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದ ಕಮಲ್ ಹಾಸನ್ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುತ್ತಿದ್ದ ಸಮಯದಲ್ಲ ಚಪ್ಪಲಿ ಎಸೆಯಲಾಗಿದ್ದು, ಅದು ಅವರಿಗೆ ತಾಕದೆ, ಜನರ ಗುಂಪಿನ ನಡುವೆ ಬಂದು ಬಿದ್ದಿದೆ.ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ಮತ್ತು ಹನುಮಾನ್ ಸೇನೆಯ ಒಟ್ಟು ಹನ್ನೊಂದು ಜನರ ಮೇಲೆ ಪೊಲೀಸರಿಗೆ ದೂರು ನೀಡಲಾಗಿದೆ. ತಮಿಳುನಾಡಿನ ಅರವಕುರಿಚಿಯಲ್ಲಿ ಮೇ 19…

  • ಸುದ್ದಿ

    ಅಧಿಕಾರಿಗಳ ನಿರ್ಲಕ್ಷ್ಯದಿಂದ ರೈತರ ನೂರಾರು ಎಕರೆ ಬೆಳೆ ನಾಶ…!

    ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಮಗಾರಿ ಹಂತದ ಕಾಲುವೆಗೆ ನೀರು ಬಿಟ್ಟ ಹಿನ್ನೆಲೆ ಕಾಲುವೆ ಒಡೆದು ನೂರಾರು ಎಕರೆ ಬೆಳೆ ಹಾಳಾಗಿದೆ. ರಾಯಚೂರಿನ ಗೋನಾಳ ಬಳಿ ನಿರ್ಮಾಣ ಹಂತದಲ್ಲಿರುವ ನಾರಾಯಣಪುರ ಬಲದಂಡೆ ಕಾಲುವೆಗೆ ನೀರನ್ನು ಹರಿಸಿರುವುದರಿಂದ ಹತ್ತಿ, ತೊಗರಿ ಸೇರಿ ಲಕ್ಷಾಂತರ ರೂಪಾಯಿ ಬೆಳೆ ಹಾಳಾಗಿದೆ. ಕೃಷ್ಣ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿ 126 ಕಿ.ಮೀ ನಿಂದ 186 ಕಿ.ಮೀ ವರೆಗಿನ ನಾರಾಯಣಪುರ ಬಲದಂಡೆ ಕಾಲುವೆ ವಿಸ್ತರಣೆ ಇನ್ನೂ ನಡೆದಿದೆ. ಅಧಿಕಾರಿಗಳು ಕಾಲುವೆಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದ್ದರಿಂದ…