ಸುದ್ದಿ

ಇಂದು ಚಂದನ್ ಶೆಟ್ಟಿ-ನಿವೇದಿತಾ ಗೌಡ ನಿಶ್ಚಿತಾರ್ಥ..ಎಲ್ಲಿ ಗೊತ್ತ ?

27

ಗಾಯಕ ಚಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ಗೌಡ ನಿಶ್ಚಿತಾರ್ಥ ಇಂದು (ಸೋಮವಾರ) ನಡೆಯಲಿದೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಮಾತ್ರ ಭಾಗಿಯಾಗಲಿದ್ದಾರೆ.

ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ನಿವೇದಿತಾ ಮತ್ತು ಚಂದನ್ ಪ್ರೇಮ ಜೋಡಿಗಳ ರೀತಿಯಲ್ಲಿಯೇ ಬಿಂಬಿತವಾಗಿದ್ದರು. ರಿಯಾಲಿಟಿ ಶೋ ಬಳಿಕ ನಾವಿಬ್ಬರು ಜಸ್ಟ್ ಫ್ರೆಂಡ್ಸ್ ಅಂತಾ ಹೇಳಿದ್ದರು. ಕಳೆದ ಎರಡು ವರ್ಷಗಳಿಂದ ಚಂದನ್ ಮತ್ತು ನಿವೇದಿತಾ ನಡುವೆ ಪ್ರೇಮಾಂಕುರವಾಗಿದೆ ಎಂಬಿತ್ಯಾದಿ ಸುದ್ದಿಗಳು ಹರಿದಾಡಿದ್ದವು. ಆದ್ರೆ ಎಲ್ಲಿಯೂ ಚಂದನ್ ಮತ್ತು ನಿವೇದಿತಾ ತಮ್ಮ ಸಂಬಂಧದ ಬಗ್ಗೆ ಸ್ಪಷ್ಟವಾಗಿ ಹೇಳಿಕೊಂಡಿರಲಿಲ್ಲ

ಯುವ ದಸರಾ ವೇದಿಕೆ ಮೇಲೆ ತಮ್ಮ ಹಾಡಿನ ನಂತರ ನಿವೇದಿತಾ ಗೌಡಗೆ ಚಂದನ್ ಪ್ರಪೋಸ್ ಮಾಡಿದ್ದರು. ಇದು ದೊಡ್ಡ ವಿವಾದಕ್ಕೆ ಕಾರಣ ಆಗಿತ್ತು. ಸರ್ಕಾರಿ ಕಾರ್ಯಕ್ರಮವನ್ನು ಖಾಸಗಿ ವಿಷಯಕ್ಕೆ ಬಳಸಿಕೊಂಡ ಬಿಗ್ ಬಾಸ್ ಜೋಡಿ, ಮುಂದೆ ದೊಡ್ಡ ವಿರೋಧ ಎದುರಿಸಬೇಕಾಗಿ ಬಂತು. ತಿಳಿಯದೆ ಈ ರೀತಿ ಮಾಡಿದೆ ಎಂದು ಚಂದನ್ ಶೆಟ್ಟಿ ಕ್ಷಮೆ ಹೇಳಿದ್ದು, ಒಂದೆರಡು ದಿನಗಳ ನಂತರ ಆ ವಿವಾದ ತಣ್ಣಗೆ ಆಯ್ತು.

ಅಂದಹಾಗೆ, ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಬಿಗ್ ಬಾಸ್ ಕನ್ನಡ ಸೀಸನ್ 5ರ ಸ್ಪರ್ಧಿ ಆಗಿದ್ದರು. ಇಲ್ಲೇ ಮೊದಲ ಬಾರಿಗೆ ಈ ಇಬ್ಬರು ಭೇಟಿಯಾಗಿದ್ದರು. ಕಾರ್ಯಕ್ರಮದಲ್ಲಿ ಸ್ನೇಹಿತರಾಗಿದ್ದ ಈ ಜೋಡಿ, ಬಿಗ್ ಬಾಸ್ ಮನೆಯಿಂದ ಆಚೆ ಬಂದ ಮೇಲೆ ಪ್ರೇಮಿಗಳಾದರು. ಇವರ ಪ್ರೀತಿಗೆ ಇಬ್ಬರ ಮನೆಯಲ್ಲಿಯೂ ಒಪ್ಪಿಗೆ ಸಿಕ್ಕಿದ್ದು, ಇದೀಗ ನಿಶ್ಚಿತಾರ್ಥಕ್ಕೆ ಸಜ್ಜಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಪ್ರೇಮ

    ಸಂಸದ ಮುನಿಸ್ವಾಮಿಗೆ ಕಿಸ್ ಕೊಟ್ಟ ಮಾಜಿ ಸಚಿವ ವರ್ತೂರ್ ಪ್ರಕಾಶ್

    ಕೋಲಾರ: ಸಂಸದ ಮುನಿಸ್ವಾಮಿಗೆ #s.Muniswamy ಮಾಜಿ ಸಚಿವ ವರ್ತೂರ್ ಪ್ರಕಾಶ್ #r.varthur prakash ಕೋಲಾರಮ್ಮ ದೇವಾಲಯದ ಬಳಿ ಕಿಸ್ ಕೊಟ್ಟಿದ್ದಾರೆ. ಬಿಜೆಪಿ ಪಕ್ಷ ಹಾಗೂ ಸಂಸದ ಮುನಿಸ್ವಾಮಿ ನಡುವೆ ಗೊಂದಲವಿದೆಯಾ ಎನ್ನುವ ಪ್ರಶ್ನೆ ಕೇಳುತ್ತಿದ್ದಂತೆಯೇ ಪಕ್ಕದಲ್ಲೇ ಇದ್ದ ಮುನಿಸ್ವಾಮಿಗೆ ವರ್ತೂರ್ ಪ್ರಕಾಶ್ ಕಿಸ್ ಮಾಡಿ ಗೊಂದಲವಿಲ್ಲ ಎಂದಿದ್ದಾರೆ. ಹೊಸ ವರ್ಷದ ಹಿನ್ನೆಲೆಯಲ್ಲಿ ಕೋಲಾರದ ಶಕ್ತಿದೇವತೆ ಕೋಲಾರಮ್ಮಗೆ ಪೂಜೆ ಸಲ್ಲಿಸಿದ್ದು, ನಾವೆಲ್ಲಾ ಒಟ್ಟಾಗಿ ಇರ್ತೀವಿ ಎಂದು ಕೋಲಾರಮ್ಮನ ಎದುರು ಪ್ರಮಾಣ ಮಾಡಿದ್ದೇವೆ. ನಮ್ಮ ನಾಯಕರು ಸಂಸದ ಮುನಿಸ್ವಾಮಿ ಎಂದು…

  • ಸುದ್ದಿ

    ಹುಟ್ಟುಹಬ್ಬಕ್ಕೆ ಸರ್ಕಾರಿ ಶಾಲೆ ದತ್ತು ಪಡೆದ ಪ್ರಜ್ವಲ್ ದೇವರಾಜ್ ಸಾಮಾಜಿಕ ಕಳಕಳಿ ಮೆಚ್ಚಿದ ದರ್ಶನ್…!

    ನಟ ಪ್ರಜ್ವಲ್ ದೇವರಾಜ್ ಇಂದು (ಜುಲೈ 4) ತಮ್ಮ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಅದ್ಧೂರಿ ಆಚರಣೆಗೆ ಬ್ರೇಕ್ ಹಾಕಿರುವ ಅವರು ಸಾಮಾಜಿಕ ಕೆಲಸಕ್ಕೆ ಮುಂದಾಗಿದ್ದಾರೆ. ಒಂದು ಸಂಸ್ಥೆಯ ಜೊತೆಗೆ ಕೈ ಜೋಡಿಸಿ ಒಂದು ಸರ್ಕಾರಿ ಶಾಲೆಯನ್ನು ಪ್ರಜ್ವಲ್ ದತ್ತು ಪಡೆದಿದ್ದಾರೆ. ಹೀಗಾಗಿ ಬರ್ತ್ ಡೇ ಗೆ ಗಿಫ್ಟ್ ಬದಲು ಶಾಲಾ ಮಕ್ಕಳಿಗೆ ಸಹಾಯ ಆಗುವಂತೆ ನೋಟ್ ಬುಕ್, ಪೆನ್ಸಿಲ್ ನೀಡಿ ಎಂದು ಮನವಿ ಮಾಡಿದ್ದರು. ಪ್ರಜ್ವಲ್ ಅವರ ಈ ಕೆಲಸಕ್ಕೆ ನಟ ದರ್ಶನ್ ಖುಷಿಯಾಗಿದ್ದಾರೆ. “ನಮ್ಮ ಹುಡ್ಗ…

  • ಸುಳ್ಳು ಸುದ್ದಿ

    ಹೋಟಲ್ನಲ್ಲಿ ಊಟ ಆರ್ಡರ್ ಮಾಡೋದಕ್ಕೆ ಮುಂಚೆ, ನಿಮ್ಮ ಹೊಟ್ಟೆಯ ಸುತ್ತಳತೆ ನೀಡಲೇಬೇಕು..!

    ಹೋಟೆಲ್‌ ಹಾಗೂ ರೆಸ್ಟೋರೆಂಟ್‌ಗಳಲ್ಲಿ ಗ್ರಾಹಕರಿಗೆ ನೀಡಲಾಗುವ ಆಹಾರಕ್ಕೆ ಮಿತಿ ಹೇರಲು ಕೇಂದ್ರ ಸರ್ಕಾರ ಮುಂದಾಗಿದೆ. ಅಲ್ಲದೇ, ಒಬ್ಬ ವ್ಯಕ್ತಿ ಗರಿಷ್ಠ ಎಷ್ಟುಆಹಾರ ಸೇವಿಸಬಲ್ಲ ಎಂಬುದನ್ನು ಹೋಟೆಲ್‌ನವರೇ ತಿಳಿಸಬೇಕು ಹೇಳಿದೆ.

  • ವಿಚಿತ್ರ ಆದರೂ ಸತ್ಯ

    ನೆರೆಹೊರೆಯ ಜಗಳದಲ್ಲಿ ಜೈಲು ಪಾರಾದ ನಾಯಿ..!ತಿಳಿಯಲು ಈ ಲೇಖನ ಓದಿ…

    ಈ ಸುದ್ದಿಯ ಶೀರ್ಷಿಕೆ ಓದುವಾಗಲೇ ಓದುಗರಿಗೆ ಗೊಂದಲವಾಗಿರಬಹುದು. ಹೌದು ಇಂತಹದ್ದೊಂದು ಘಟನೆಯು ಉತ್ತರಪ್ರದೇಶ ರಾಜ್ಯದ ಬದೌನ್ ಎಂಬ ನಗರದಲ್ಲಿ ನಡೆದಿದೆ. ಆದರೆ ನೆರೆಮನೆಯ ವ್ಯಕ್ತಿಗಳು ಜಗಳವಾಡಿದರೆ ನಾಯಿ ಹೇಗೆ ಜೈಲು ಸೇರುತ್ತದೆ ಎಂಬುವುದರ ಕುರಿತು ಕುತೂಹಲವಿರಬಹುದು.

  • ಮನರಂಜನೆ

    ಬಿಗ್ ಮನೆ ಪ್ರವೇಶ ಮಾಡಿದ ಹಳೆ ಸ್ಪರ್ಧಿಗಳು…ಯಾರೆಲ್ಲಾ ಒಳಗಡೆ ಹೋಗಿದ್ದಾರೆ ಗೊತ್ತಾ..?

    ಬಿಗ್ ಬಾಸ್ ಸೀಸನ್-6 ಕೊನೆಯಾಗುವುದಕ್ಕೆ ಕೆಲವು ದಿನಗಳು ಮಾತ್ರ ಬಾಕಿ ಇದೆ. ಕಳೆದ ವಾರ ಬಿಗ್ ಬಾಸ್ ಮನೆಗೆ ಸ್ಪರ್ಧಿಗಳ ಕುಟುಂಬದವರು ಭೇಟಿ ನೀಡಿದ್ದರು. ಆದರೆ ಈಗ ಹಳೆಯ ಸೀಸನ್ ಸ್ಪರ್ಧಿಗಳು ಬಿಗ್ ಮನೆಗೆ ಎಂಟ್ರಿ ನೀಡಿದ್ದಾರೆ. ಆದರೆ ಅವರಿಗಾಗಿ ಇಲ್ಲಿ ವಿಶೇಷ ಮನೆಯನ್ನು ನಿರ್ಮಿಸಲಾಗಿದೆ. ಬಿಗ್ ಬಾಸ್ ಸೀಸನ್-4 ಸ್ಪರ್ಧಿ ವಿನ್ನರ್, ಒಳ್ಳೆ ಹುಡುಗ ಪ್ರಥಮ್, ರನ್ನರಪ್ ಕಿರಿಕ್ ಕೀರ್ತಿ ಹಾಗೂ ಸಂಜನಾ ಚಿದಾನಂದ್ ಬಿಗ್ ಬಾಸ್ ಮನೆಗೆ ಎಂಟ್ರಿ ನೀಡಿದ್ದಾರೆ. ಬಿಗ್ ಬಾಸ್ ಸೀಸನ್…