ಸುದ್ದಿ

ಇಂದು ಚಂದನ್ ಶೆಟ್ಟಿ-ನಿವೇದಿತಾ ಗೌಡ ನಿಶ್ಚಿತಾರ್ಥ..ಎಲ್ಲಿ ಗೊತ್ತ ?

By admin

October 21, 2019

ಗಾಯಕ ಚಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ಗೌಡ ನಿಶ್ಚಿತಾರ್ಥ ಇಂದು (ಸೋಮವಾರ) ನಡೆಯಲಿದೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಮಾತ್ರ ಭಾಗಿಯಾಗಲಿದ್ದಾರೆ.

ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ನಿವೇದಿತಾ ಮತ್ತು ಚಂದನ್ ಪ್ರೇಮ ಜೋಡಿಗಳ ರೀತಿಯಲ್ಲಿಯೇ ಬಿಂಬಿತವಾಗಿದ್ದರು. ರಿಯಾಲಿಟಿ ಶೋ ಬಳಿಕ ನಾವಿಬ್ಬರು ಜಸ್ಟ್ ಫ್ರೆಂಡ್ಸ್ ಅಂತಾ ಹೇಳಿದ್ದರು. ಕಳೆದ ಎರಡು ವರ್ಷಗಳಿಂದ ಚಂದನ್ ಮತ್ತು ನಿವೇದಿತಾ ನಡುವೆ ಪ್ರೇಮಾಂಕುರವಾಗಿದೆ ಎಂಬಿತ್ಯಾದಿ ಸುದ್ದಿಗಳು ಹರಿದಾಡಿದ್ದವು. ಆದ್ರೆ ಎಲ್ಲಿಯೂ ಚಂದನ್ ಮತ್ತು ನಿವೇದಿತಾ ತಮ್ಮ ಸಂಬಂಧದ ಬಗ್ಗೆ ಸ್ಪಷ್ಟವಾಗಿ ಹೇಳಿಕೊಂಡಿರಲಿಲ್ಲ

ಯುವ ದಸರಾ ವೇದಿಕೆ ಮೇಲೆ ತಮ್ಮ ಹಾಡಿನ ನಂತರ ನಿವೇದಿತಾ ಗೌಡಗೆ ಚಂದನ್ ಪ್ರಪೋಸ್ ಮಾಡಿದ್ದರು. ಇದು ದೊಡ್ಡ ವಿವಾದಕ್ಕೆ ಕಾರಣ ಆಗಿತ್ತು. ಸರ್ಕಾರಿ ಕಾರ್ಯಕ್ರಮವನ್ನು ಖಾಸಗಿ ವಿಷಯಕ್ಕೆ ಬಳಸಿಕೊಂಡ ಬಿಗ್ ಬಾಸ್ ಜೋಡಿ, ಮುಂದೆ ದೊಡ್ಡ ವಿರೋಧ ಎದುರಿಸಬೇಕಾಗಿ ಬಂತು. ತಿಳಿಯದೆ ಈ ರೀತಿ ಮಾಡಿದೆ ಎಂದು ಚಂದನ್ ಶೆಟ್ಟಿ ಕ್ಷಮೆ ಹೇಳಿದ್ದು, ಒಂದೆರಡು ದಿನಗಳ ನಂತರ ಆ ವಿವಾದ ತಣ್ಣಗೆ ಆಯ್ತು.

ಅಂದಹಾಗೆ, ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಬಿಗ್ ಬಾಸ್ ಕನ್ನಡ ಸೀಸನ್ 5ರ ಸ್ಪರ್ಧಿ ಆಗಿದ್ದರು. ಇಲ್ಲೇ ಮೊದಲ ಬಾರಿಗೆ ಈ ಇಬ್ಬರು ಭೇಟಿಯಾಗಿದ್ದರು. ಕಾರ್ಯಕ್ರಮದಲ್ಲಿ ಸ್ನೇಹಿತರಾಗಿದ್ದ ಈ ಜೋಡಿ, ಬಿಗ್ ಬಾಸ್ ಮನೆಯಿಂದ ಆಚೆ ಬಂದ ಮೇಲೆ ಪ್ರೇಮಿಗಳಾದರು. ಇವರ ಪ್ರೀತಿಗೆ ಇಬ್ಬರ ಮನೆಯಲ್ಲಿಯೂ ಒಪ್ಪಿಗೆ ಸಿಕ್ಕಿದ್ದು, ಇದೀಗ ನಿಶ್ಚಿತಾರ್ಥಕ್ಕೆ ಸಜ್ಜಾಗಿದ್ದಾರೆ.