ಸುದ್ದಿ

ಒಂದು ಕೋಳಿ ರಸ್ತೆ ದಾಟಲು ಪೊಲೀಸ್ ಅಧಿಕಾರಿ ಮಾಡಿದ ಕೆಲಸವೇನು ಗೊತ್ತಾ? ತಿಳಿದರೆ ಶಾಕ್ ಆಗ್ತೀರಾ,.!

32

ಎಲ್ಲರಿಗೂ ರಕ್ಷಣೆಯೊದಗಿಸುವುದು ಪೊಲೀಸರ ಕರ್ತವ್ಯ… ಅದನ್ನು ನಮ್ಮ ಪೊಲೀಸರು ಚೆನ್ನಾಗಿಯೇ ನಿಭಾಯಿಸುತ್ತಿದ್ದಾರೆ… ತಾವು ಕಷ್ಟ ಅನುಭವಿಸಿದರೂ ಬೇರೆಯವರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತಾರೆ ಪೊಲೀಸರು… ಇಲ್ಲಿ ಎಂದಲ್ಲ ವಿಶ್ವದ ಯಾವ ಮೂಲೆಗೆ ಹೋದರೂ ಪೊಲೀಸರ ಕರ್ತವ್ಯ ನಿರ್ವಹಣೆ, ದ್ಯೇಯ ಸಾಮಾನ್ಯವಾಗಿ ಒಂದೇ ರೀತಿ ಇರುತ್ತದೆ. ಆದರೆ, ಕೆಲವೊಮ್ಮೆ ಈ ಕರ್ತವ್ಯ ನಿರ್ವಹಣೆಯ ನಡುವೆ ಸಂಭವಿಸುವ ವಿದ್ಯಮಾನಗಳು ವಿಚಿತ್ರ ಮತ್ತು ವಿಶಿಷ್ಟವೆನಿಸುತ್ತವೆ. ಅಂತಹ ವಿಶಿಷ್ಟ ವಿದ್ಯಮಾನದಲ್ಲಿ ಇದೂ ಒಂದು.

ಏವನ್ ಮತ್ತು ಸೋಮರ್‌ಸೆಟ್‌ ಕಾನ್‌ಸ್ಟಾಬ್ಯುಲರಿಯ ಅಧಿಕಾರಿಯೊಬ್ಬರು ಕೆಲಸ ನಿರ್ವಹಿಸಿ ಮನೆಗೆ ಹೋಗುವ ಸಂದರ್ಭದಲ್ಲಿ ಕೋಳಿಯೊಂದನ್ನು ಕಂಡಿದ್ದರು. ಈ ಕೋಳಿ ರಸ್ತೆಯ ಬದಿಯಲ್ಲಿ ನಿಂತು ದಾಟಲು ಯತ್ನಿಸುತ್ತಿತ್ತು. ಇದನ್ನು ಕಂಡು ಬಹುಶಃ ಈ ಪೊಲೀಸ್ ಅಧಿಕಾರಿಗೆ ಮರುಕ ಉಂಟಾಗಿರಬೇಕು. ಹೀಗಾಗಿ, ಜನವಸತಿ ಪ್ರದೇಶದ ಮಾರ್ಗ ಮಧ್ಯದಲ್ಲೇ ನಿಂತು ಅವರು ಬರುತ್ತಿದ್ದ ಎಲ್ಲಾ ವಾಹನಗಳನ್ನು ಒಮ್ಮೆ ನಿಲ್ಲಿಸಿದ್ದರು.

ಇತ್ತ, ವಾಹನ ಸಂಚಾರ ನಿಲ್ಲುತ್ತಿದ್ದಂತೆಯೇ ಕೋಳಿ ನಿಶ್ಚಿಂತೆಯಿಂದ ರಸ್ತೆಯನ್ನು ದಾಟಿದೆ. ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

ಏವನ್ ಮತ್ತು ಸೋಮರ್‌ಸೆಟ್‌ ಪೊಲೀಸರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ಫೋಟೋವನ್ನು ಹಂಚಿಕೊಂಡಿದ್ದಾರೆ. `ನಮ್ಮ ಅಧಿಕಾರಿ ಗರಿಗಳ ನಾಗರಿಕನನ್ನು ಸುರಕ್ಷಿತವಾಗಿ ರಸ್ತೆ ದಾಟಿಸಿದ್ದಾರೆ’ ಎಂದೂ ಪೊಲೀಸರು ಬರೆದುಕೊಂಡಿದ್ದಾರೆ. ಈ ಫೋಟೋ ಕಂಡು ನೆಟ್ಟಿಗರು ಪೊಲೀಸ್ ಅಧಿಕಾರಿಗೆ ಮೆಚ್ಚುಗೆ ಸೂಚಿಸಿದ್ದಾರೆ. ಒಂದಷ್ಟು ಜನ ಹಾಸ್ಯದ ದಾಟಿಯಲ್ಲಿ ಟ್ವೀಟ್ ಮಾಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಹಿಂದೂ ಧರ್ಮದಲ್ಲಿ ಯಾರಾದ್ರು ಸತ್ತಾಗ ಕೇಶ ಮುಂಡನ ಮಾಡುತ್ತಾರೆ, ಏಕೆ ಗೊತ್ತಾ?

    ನಮ್ಮ ಹಿಂದೂ ಧರ್ಮದಲ್ಲಿ ಇರುವಷ್ಟು ಸಂಪ್ರದಾಯಗಳು ಬೇರೆ ಯಾವುದೇ ಧರ್ಮದಲ್ಲಿ ಇಲ್ಲವೆಂದರೆ ತಪ್ಪಾಗಲಾರದು. ಯಾಕೆಂದರೆ ಹುಟ್ಟಿನಿಂದ ಸಾವಿನ ತನಕ ಹಿಂದೂಗಳು ಹಲವಾರು ರೀತಿಯ ಸಂಪ್ರದಾಯಗಳನ್ನು ಪಾಲಿಸಿಕೊಂಡು ಹೋಗುತ್ತಾರೆ. ಹುಟ್ಟಿದ ಮಗುವಿಗೆ ನಾಮಕರಣದಿಂದ ಹಿಡಿದು ಸತ್ತ ವ್ಯಕ್ತಿಗೆ ಪಿಂಡ ಬಿಡುವ ತನಕ ಪ್ರತಿಯೊಂದು ಸಂಪ್ರದಾಯಗಳು ಹಿಂದೂಗಳಲ್ಲಿ ಇದೆ.

  • ಸುದ್ದಿ

    ದಾರಿ ಮಧ್ಯೆ ಕಾರು ನಿಲ್ಲಿಸಿ ವೃದ್ಧನಿಗೆ ಹಣ ನೀಡಿದ ಕನ್ನಡದ ಟಾಪ್ ನಟ,.!ಯಾರು ಗೊತ್ತೇ

    ಇತ್ತೀಚೆಗೆ ಶಿವರಾಜ್‍ಕುಮಾರ್ ಅವರು ತಮ್ಮ ನಿವಾಸ ನಾಗಾವರದ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅವರು ಬಿಸಿಲಲ್ಲಿ ನಿಂತಿದ್ದ ಹಿರಿಯ ವೃದ್ಧರೊಬ್ಬರನ್ನು ನೋಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಶಿವಣ್ಣ ವ್ಯಕ್ತಿ ನಿಂತಿದ್ದ ಜಾಗದಿಂದ ಸ್ವಲ್ಪ ಮುಂದೆ ಹೋಗಿದ್ದಾರೆ. ನಂತರ ಅವರನ್ನು ನೋಡಿ ಮತ್ತೆ ಕಾರು ರಿವರ್ಸ್ ಮಾಡಿ ವಾಪಸ್ ಬಂದು ಜೇಬಿನಲ್ಲಿದ್ದ ಹಣವನ್ನು ತೆಗೆದುಕೊಂಡು ವೃದ್ಧರೊಬ್ಬರಿಗೆ  ನೀಡಿ ಮಾನವೀಯತೆ ಮೆರೆದಿದ್ದಾರೆ. ಶಿವರಾಜ್‍ಕುಮಾರ್ ಅವರು ಹಣ ನೀಡುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ….

  • ಉಪಯುಕ್ತ ಮಾಹಿತಿ

    ಅತಿ ಸುಲಭವಾಗಿ ತಯಾರಿಸುವ ಈರುಳ್ಳಿ ದೋಸೆ ರೆಸಪಿ, ನೀವು ಒಮ್ಮೆ ಮಾಡಿ ಸವಿಯಿರಿ.

    ಈರುಳ್ಳಿ ದೋಸೆಯನ್ನು ನಿಮ್ಮ ಮನೆಯಲ್ಲೇ ರುಚಿಯಾಗಿ ಈ ಸರಳ ವಿಧಾನದ ಮೂಲಕ ತಯಾರಿಸಿ ಸವಿಯಿರಿ. ದೋಸೆಯನ್ನು ಹೇಗೆ ಮಾಡುವುದು ಅನ್ನೋ ಚಿಂತೆ ಬಿಡಿ ಈ ವಿಧಾನ ಅನುಸರಿಸಿ… ತಯಾರಿಸಲು ಬೇಕಾಗುವ ಸಾಮಗ್ರಿಗಳುಎರಡು ಕಪ್ ಹುಳಿ ಬಂದ ದೋಸೆ ಹಿಟ್ಟು2-3 ಈರುಳ್ಳಿ3-4 ಹಸಿಮೆಣಸಿನ ಕಾಯಿಸ್ವಲ್ಪ ಕರಿಬೇವು ಸ್ವಲ್ಪ ಕೊತ್ತಂಬರಿ ಸೊಪ್ಪುಎರಡು ಚಮಚ ತುರಿದ ಕ್ಯಾರೇಟ್ರುಚಿಗೆ ತಕ್ಕಷ್ಟು ಉಪ್ಪುಎರಡು ಚಮಚ ಎಣ್ಣೆ ತಯಾರಿಸುವ ವಿಧಾನ: ಮೊದಲನೆಯದಾಗಿ ಹುಳಿ ಬಂದ ದೋಸೆ ಹಿಟ್ಟಿಗೆ ಈರುಳ್ಳಿ, ಹಸಿಮೆಣಸು, ಕರಿಬೇವು, ಕೊತ್ತಂಬರಿ ಸೊಪ್ಪು, ತುರಿದ…

  • ಸುದ್ದಿ

    ಈಗಾಗಲೇ ಉಗ್ರರ ದಾಳಿಯಲ್ಲಿ ಒಬ್ಬ ಮಗನನ್ನು ಕಳೆದುಕೊಂಡಿದ್ದರೂ, ಸೇನೆಗೆ ಇನ್ನೊಬ್ಬ ಮಗನನ್ನು ಕಳುಹಿಸುವೆ ಎಂದ ಹುತಾತ್ಮ ಯೋಧನ ತಂದೆ..!

    ಪುಲ್ವಾಮ ಉಗ್ರರ ದಾಳಿಯಲ್ಲಿ 40 ಸೈನಿಕರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ , ಹುತಾತ್ಮ ಯೋಧನ ತಂದೆಯ ಮಾತುಗಳು ಎಲ್ಲರ ಹೃದಯ ಸ್ಪರ್ಶಿಸುತ್ತಿವೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದಲ್ಲಿ ಉಗ್ರರ ಆತ್ಮಾಹುತಿ ದಾಳಿಗೆ ಹುತಾತ್ಮರಾದ ಯೋಧರೊಬ್ಬರ ತಂದೆ ಮಗನ ಸಾವಿನ ನೋವಿನಲ್ಲೂ ದೇಶದ ಮೇಲೆ ತಮಗಿರುವ ಪ್ರೀತಿಯನ್ನು ತೋರಿಸಿದ್ದಾರೆ. ಗುರುವಾರ ಸಂಜೆ ಸಿಆರ್‌ಪಿಎಫ್ ಯೋಧ ರತನ್ ಠಾಕೂರ್ ಜೈಶ್-ಇ-ಮೊಹಮ್ಮದ್ ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಿಂದ ಹುತಾತ್ಮರಾಗಿದ್ದಾರೆ. ರಜೆ ಮುಗಿಸಿ ಮತ್ತೆ ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನ ಅಂತ್ಯ…

  • ಆರೋಗ್ಯ

    ಈ ಸೊಳ್ಳೆಗಳು ಬೇರೆಯವರಿಗಿಂತ ನಿಮ್ಮನ್ನೇ ಯಾಕೆ ಹೆಚ್ಚು ಕಚ್ಚುತ್ತವೆ ಗೊತ್ತಾ…!ಈ ಲೇಖನಿ ಓದಿ, ಗೊತ್ತಾಗುತ್ತೆ…

    ಮನೆಯಲ್ಲಿ ಫ್ಯಾನ್, ಕೂಲರ್ ಇಲ್ಲಾಂದ್ರೆ ನೀವು ಸೊಳ್ಳೆಮಹರಾಯನಿಂದ ತಪ್ಪಿಸಿಕೊಳ್ಳುವುದು ತುಂಬಾ ಕಷ್ಟ. ಅದರಲ್ಲೂ ಮನೆಯಲ್ಲಿ ಕರೆಂಟ್ ಏನಾದ್ರೂ ಹೋದ್ರೆ ನಿಮ್ಮ ಕತೆ ಮುಗಿದ ಹಾಗೆ. ಇನ್ನೂ ಚಳಿಗಾಲದಲ್ಲಂತೂ ಕೇಳದೇ ಬೇಡ. ಕೆಲವೊಂದು ಸಾರಿ ನಮ್ಗೆ ಅನ್ನಿಸುವುದೇನಂದ್ರೆ ಈ ಸೊಳ್ಳೆಗಳು ನಮಗೆ ಯಾಕೆ ಕಚ್ಚುತ್ತವೆ ಅಂತ ಬಹಳ ತಲೆ ಕೆಡಿಸಿಕೊಳ್ಳುತ್ತೇವೆ.