Cinema

ಚಿರಂಜೀವಿ ಸರ್ಜಾ ಅಭಿಮಾನಿಗಳು ಕಂಡಿದ್ದ ಆ ಕನಸು ಕಡೆಗೂ ಕನಸಾಗಿಯೇ ಉಳಿಯಿತು!

162

ಹಲವು ಪಾತ್ರಗಳ ಮೂಲಕ ಸಿನಿಪ್ರಿಯರನ್ನು ಚಿರಂಜೀವಿ ಸರ್ಜಾ ರಂಜಿಸಿದ್ದರು. ಹಾಗಿದ್ದರೂ ಅಭಿಮಾನಿಗಳಿಗೆ ಸಮಾಧಾನ ಆಗಿರಲಿಲ್ಲ. ಯಾಕೆಂದರೆ, ಫ್ಯಾನ್ಸ್‌ಗೆ ಇದ್ದ ಮಹತ್ವದ ಆಸೆಯೊಂದು ಇನ್ನೂ ಈಡೇರಿರಲಿಲ್ಲ. ಏನದು? ಸರ್ಜಾ ಕುಟುಂಬದ ಸ್ಟಾರ್‌ ಹೀರೋಗಳೆಲ್ಲ ಜೊತೆಯಾಗಿ ನಟಿಸಬೇಕು ಎಂದು ಅಭಿಮಾನಿಗಳು ಕನಸು ಕಂಡಿದ್ದರು. ಧ್ರುವ ಸರ್ಜಾ, ಚಿರಂಜೀವಿ ಸರ್ಜಾ ಜೊತೆ ಅವರ ಮಾವ ಅರ್ಜುನ್‌ ಸರ್ಜಾರನ್ನು ಒಟ್ಟಿಗೆ ತೆರೆಮೇಲೆ ನೋಡಬೇಕು ಎಂಬ ಆಸೆ ಅವರದ್ದಾಗಿತ್ತು.

ಈ ವಿಚಾರದ ಬಗ್ಗೆ ಸರ್ಜಾ ಕುಟುಂಬದ ಹೀರೋಗಳಿಗೆ ಆಗಾಗ ಪ್ರಶ್ನೆ ಎದುರಾಗುತ್ತಲೇ ಇತ್ತು. ‘ನೀವು ಮೂವರೂ ಯಾವಾಗ ಜೊತೆಯಾಗಿ ನಟಿಸುತ್ತೀರಿ?’ ಎಂದು ಕೇಳಿದಾಗೆಲ್ಲ, ‘ಒಳ್ಳೆಯ ಕಥೆ ಸಿಕ್ಕರೆ ಖಂಡಿತಾ ನಟಿಸುತ್ತೇವೆ’ ಎಂದು ಉತ್ತರ ಅವರಿಂದ ಬರುತ್ತಿತ್ತು. ಒಂದಲ್ಲ ಒಂದು ದಿನ ಅಂಥ ಕಥೆ ಸಿಗಲಿದೆ, ಮೂವರನ್ನೂ ಒಂದೇ ಸಿನಿಮಾದಲ್ಲಿ ನೋಡಬಹುದು ಎಂದು ಅಭಿಮಾನಿಗಳು ಕಂಡಿದ್ದ ಕನಸು ಕಡೆಗೂ ಕನಸಾಗಿಯೇ ಉಳಿಯಬೇಕಾಯಿತು.

ಅರ್ಜುನ್‌ ಸರ್ಜಾ ಅವರಿಗೆ ಸೋದರಳಿಯರಾದ ಚಿರಂಜೀವಿ ಮತ್ತು ಧ್ರುವ ಬಗ್ಗೆ ಅಪಾರ ಕಾಳಜಿ ಇತ್ತು. ಅವರಿಬ್ಬರ ವೃತ್ತಿಜೀವನಕ್ಕೆ ಅರ್ಜುನ್‌ ಅವರೇ ಮಾರ್ಗದರ್ಶಕರು. ಇನ್ನು, ಚಿರು ಮತ್ತು ಧ್ರುವ ನಡುವೆ ಕೂಡ ತುಂಬ ಆತ್ಮೀಯತೆ ಇತ್ತು. ಪರಸ್ಪರರ ಸಿನಿಮಾಗಳಿಗೆ ಬೆಂಬಲವಾಗಿ ನಿಲ್ಲುತ್ತಿದ್ದರು. ಇಬ್ಬರು ಜೊತೆಯಾಗಿ ಕಾಲ ಕಳೆದ ವಿಡಿಯೋಗಳನ್ನು ಟಿಕ್‌ಟಾಕ್‌ ಮೂಲಕ ಚಿರು ಇತ್ತೀಚೆಗೆ ಶೇರ್‌ ಮಾಡಿಕೊಂಡಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಮತ್ತೆ ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ. ಮೋದಿಗೆ ಪತ್ರ ಬರೆದ ಸೋನಿಯಾ ಗಾಂಧಿ.

    ಇಂದು ಪೆಟ್ರೋಲ್ ಬೆಲೆ 55 ಪೈಸೆ ಹಾಗೂ ಡೀಸೆಲ್ 69 ಪೈಸೆ ಹೆಚ್ಚಳವಾಗಿದೆ. ಈ ಮೂಲಕ ಕೇವಲ 11 ದಿನಗಳಲ್ಲಿ ಪೆಟ್ರೋಲ್ ಬೆಲೆ 6 ರೂ. ಹಾಗೂ ಡೀಸೆಲ್ 6.49 ರೂ.ಗಳಷ್ಟು ಹೆಚ್ಚಳವಾಗಿದೆ. ಕಳೆದ 11 ದಿನಗಳಲ್ಲಿ ಪ್ರತಿ ದಿನ 20 ಪೈಸೆಯಿಂದ 80 ಪೈಸೆ ವರೆಗೂ ಪೆಟ್ರೋಲ್, ಡೀಸೆಲ್ ದರವನ್ನು ಹೆಚ್ಚಳ ಮಾಡಲಾಗಿದೆ. ಬೆಲೆ ಹೆಚ್ಚಳದಿಂದಾಗಿ ಜನ ಕಂಗಾಲಾಗಿದ್ದಾರೆ. ಮೊದಲೆ ಕೆಲಸ ಸರಿಯಾಗಿ ಸಿಗುತ್ತಿಲ್ಲ. ಕೆಲಸವಿದ್ದರೂ ಸಂಬಳ ಸರಿಯಾಗಿ ಬರುತ್ತಿಲ್ಲ. ಅಲ್ಲದೆ ಇನ್ನೊಂದೆಡೆ ಸಾರ್ವಜನಿಕ ಸಾರಿಗೆ…

  • ಉಪಯುಕ್ತ ಮಾಹಿತಿ

    ರಿಸರ್ವ್ ಬ್ಯಾಂಕ್ ಕಡೆಯಿಂದ ಏಟಿಎಂ ಬಳಕೆದಾರರಿಗೆ ಸಿಹಿ ಸುದ್ದಿ ..!ತಿಳಿಯಲು ಈ ಲೇಖನ ಓದಿ ..

    ಡಿಜಿಟಲ್ ಪೇಮೆಂಟ್ ಗೆ ಉತ್ತೇಜನ ನೀಡಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಸ ಯೋಜನೆಗಳನ್ನು ಜಾರಿಗೆ ತರ್ತಿದೆ. ಇದೀಗ ಡೆಬಿಟ್ ಕಾರ್ಡ್ ವಹಿವಾಟುಗಳ ಮೇಲಿನ ಶುಲ್ಕವನ್ನು ಕಡಿತ ಮಾಡಲು ನಿರ್ಧರಿಸಿದೆ.

  • ರಾಜಕೀಯ, ಸಿನಿಮಾ

    ರಾತ್ರೋರಾತ್ರಿ ಮಂಡ್ಯದಲ್ಲಿದ್ದ ಮನೆಯನ್ನು ನಟಿ ರಮ್ಯಾ ಖಾಲಿ ಮಾಡಿದ್ದೇಕೆ ಗೊತ್ತಾ..?

    ಅಂಬಿ ಅಂತಿಮ ದರ್ಶನಕ್ಕೆ ಬಾರದೇ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದ ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ, ತಮ್ಮ ರಾಜಕೀಯ ಕಾರ್ಯಕ್ಷೇತ್ರ ಮಂಡ್ಯದಲ್ಲಿ ಮಾಡಿದ್ದ ಬಾಡಿಗೆ ಮನೆಯನ್ನು ರಾತ್ರೋ ರಾತ್ರಿ ಖಾಲಿ ಮಾಡೋ ಮೂಲಕ, ರಾಜಕೀಯವಾಗಿಯೂ ಮಂಡ್ಯದಿಂದ ದೂರ ಸರಿದರೇ ಎನ್ನುವ ಪ್ರಶ್ನೆ ಎದ್ದಿದೆ.ಹಾಗೂ ಖಾಲಿ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದ್ದಾರೆ. ರಮ್ಯಾ ಮೊದಲ ಬಾರಿಗೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಸಂದರ್ಭದಲ್ಲಿ ಮಂಡ್ಯ ನಗರದಲ್ಲಿ ಮನೆ ಮಾಡಿ, ಇಲ್ಲೇ ಇದ್ದು ಜನರ ಕಷ್ಟಕ್ಕೆ…

  • ಸುದ್ದಿ

    ವಿದ್ಯಾರ್ಥಿಗಳನ್ನೇ ಕಾರ್ಮಿಕರನ್ನಾಗಿ ಬಳಸಿದ ಶಾಲೆ..!

    ಚೆನ್ನಾಗಿಓದಲಿ ಎಂದು ಪೋಷಕರು ಆಸೆಯಿಂದ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿದರೆ ಅಲ್ಲಿ ನಡೆಯುವುದೇ ಬೇರೆ.ಓದಿ, ಆಡಬೇಕಾದ ಮಕ್ಕಳು ದೊಡ್ಡವರು ಮಾಡುವ ಕಷ್ಟದ ಕೆಲಸಗಳನ್ನು ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರದ ಖಾಸಗಿ ಶಾಲೆಯಲ್ಲಿ ಮಕ್ಕಳಿಂದಲೇ ಟ್ರಾಕ್ಟರ್‌ಗೆ ಜಲ್ಲಿ ತುಂಬಿಸಲಾಗಿದೆ. ಶಾಲೆಯಲ್ಲಿ ಮಕ್ಕಳಿಗೆ ಪಾಠ ಕಲಿಸ ಬೇಕಾ ದ ಶಿಕ್ಷಕರು, ಸಾವಿರಾರು ರುಪಾಯಿ ಶುಲ್ಕ ಪಡೆಯುವ ಜೊತೆಗೆ ವಿದ್ಯಾರ್ಥಿಗಳನ್ನು ಕೂಲಿ ಕಾರ್ಮಿಕರನ್ನಾಗಿ ದುಡಿಸಿ ಕೊಂಡಿರುವ ಘಟನೆ ತಾಲೂಕಿನ ಚೇಳೂರು ಅರವಿಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ. ಸಾವಿರಾರು ರುಪಾಯಿ ಶುಲ್ಕ ಪಾವತಿಸಿ ಖಾಸಗಿ…

  • ಆರೋಗ್ಯ

    ಯುವಜನರು ಕುಡಿತದ ಪ್ರಮಾಣ ಸಾಕು ಎಂದು ನಿರ್ಧರಿಸುತ್ತಾರೆ, ಹೇಗೆ ಗೊತ್ತಾ???

    ಕುಡಿತದ ಮೇಲೆ ಹಿಡಿತ ಬರುವವರೆಗೂ ಯುವಜನರು ಎಗ್ಗಿಲ್ಲದೆ ಪೆಗ್ ಗಳನ್ನು ಏರಿಸುತ್ತಿರುತ್ತಾರೆ ಎಂದು ಅಧ್ಯಯನ ವರದಿಯೊಂದು ಹೇಳಿದ್ದು, ಕುಡಿತದ ಪ್ರಮಾಣ ನಿರ್ಧರಿಸುವ ಕಲೆ ಹೇಗೆ ಕರಗತವಾಗುತ್ತದೆ ಎಂಬ ಬಗ್ಗೆಯೂ ಮಾಹಿತಿ ನೀಡಿದೆ.

  • ರಾಜಕೀಯ

    ಪ್ರಧಾನಿ ನರೇಂದ್ರ ಮೋದಿಯನ್ನು ಹೊಗಳಿದ್ದೇಕೆ ಗೊತ್ತಾ ಕಾಂಗ್ರೆಸ್ ಪಕ್ಷದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್..?

    ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯ ವೈಖರಿಯನ್ನು ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೊಗಳಿದ್ದಾರೆ. ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೈ ಶಾಸಕಿ ಮೋದಿ ಅವರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವೇದಿಕೆ ಮೇಲೆ ಮಾತನಾಡುತ್ತ ಬಹಳ ಜನ ರಾಜಕಾರಣಿಗಳನ್ನ ಕಳ್ಳರು, ಸುಳ್ಳರು, ಮೋಸಗಾರರು ಎಂದು ಕರೆಯುತ್ತಾರೆ. ಆದ್ರೆ ಎಲ್ಲಾ ರಾಜಕಾರಣಿಗಳು ಆ ಪಟ್ಟಿಗೆ ಸೇರುವುದಿಲ್ಲ. ಕೆಲವು ರಾಜಕಾರಣಿಗಳ ನಡೆಯನ್ನು, ಕೆಲಸವನ್ನು ಸುಳ್ಳು ಎಂದು ಹೇಳಲು ಸಾಧ್ಯವಿಲ್ಲ. ಯಾಕೆಂದರೆ ಪ್ರಧಾನಿ ನರೇಂದ್ರ…