ಸ್ಪೂರ್ತಿ

ಸಂಕಷ್ಟದಲ್ಲಿದ್ದಗಲೇ ಕೈ ಬಿಟ್ಟ ಸಿ ಎಂ ಧೋಸ್ತಿ….!

42

ರಾಜ್ಯದಲ್ಲಿ ಸಂಕಷ್ಟದ ಪರಿಸ್ಥಿತಿ ಇದ್ದಾಗಲೇ ಸಚಿವ ಡಿಕೆ ಶಿವಕುಮಾರ್ ಅವರು ವಿದೇಶಕ್ಕೆ ಹೊರಟಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು. ಏನೇ ಸಮಸ್ಯೆ ಇದ್ದರೂ ನಾನೀದ್ದೇನೆ ಎಂದು ಹೇಳುತ್ತಾ, ಸರ್ಕಾರದ ಹಿತ ಕಾಯಲು ನಿಂತಿದ್ದ ಟ್ರಬಲ್ ಶೂಟರ್ ಸಂಕಷ್ಟದ ಸಮಯದಲ್ಲೇ ಕೈ ಕೊಟ್ರಾ ಅನ್ನೋ ಅನುಮಾನವೊಂದು ಮೂಡಿದೆ. ರಾಜ್ಯ ಸಮ್ಮಿಶ್ರ ಸರ್ಕಾರದ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಇನ್ನು 7 ದಿನಗಳ ಕಾಲ ನಾಟ್ ರೀಚೆಬಲ್‍ನಲ್ಲಿ ಇರಲಿದ್ದಾರೆ.


ಭಾನುವಾರ ರಾತ್ರಿ ದೆಹಲಿಯಿಂದ ಕುಟುಂಬ ಸಮೇತ ಆಸ್ಟ್ರೇಲಿಯಾ ಪ್ರವಾಸಕ್ಕೆ ತೆರಳಿದ್ದಾರೆ. ಮೇ 27ರವರೆಗೆ ಆಸ್ಟ್ರೇಲಿಯಾ ಪ್ರವಾಸ ಮಾಡಲಿರುವ ಡಿಕೆಶಿ, ಸಂಪೂರ್ಣವಾಗಿ ರಾಜಕಾರಣ ಮರೆತು ಕುಟುಂಬದೊಂದಿಗೆ ಕಾಲ ಕಳೆಯಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಮೇ 23 ರ ಫಲಿತಾಂಶದ ನಂತರ ರಾಜ್ಯ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು ಅನ್ನುವ ಸ್ಥಿತಿ ಇದೆ. ಇಂತಹ ಸಮಯದಲ್ಲೇ ಡಿ.ಕೆ.ಶಿವಕುಮಾರ್ ಆಸ್ಟ್ರೇಲಿಯಾ ಪ್ರವಾಸಕ್ಕೆ ತೆರಳಿದ್ದಾರೆ. ಡಿಕೆಶಿ ಅವರು ಸರ್ಕಾರಕ್ಕೆ ಸಂಕಷ್ಟ ಬಂದಾಗ ದೋಸ್ತಿಗಳ ನಡುವೆ ಭಿನ್ನಾಭಿಪ್ರಾಯ ಬಂದಾಗೆಲ್ಲ ಮುಂದೆ ನಿಂತು ಸರಿಪಡಿಸಿದ್ದರು.


ಲೋಕ ಸಮರದ ಫಲಿತಾಂಶದ ನಂತರ ರಾಜ್ಯ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು ಎಂಬ ಆತಂಕವಿದ್ದು, ಅದರಲ್ಲೂ ಮೈತ್ರಿ ಸರ್ಕಾರದ ಅಸ್ತಿತ್ವವೇ ಅಲ್ಲಾಡಬಹುದು ಎಂಬ ಮಾತು ಜೋರಾಗಿಯೇ ಕೇಳಿ ಬರುತ್ತಿದೆ. ಈ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಆಸ್ಟ್ರೇಲಿಯಾ ಪ್ರವಾಸ ಕಾಕತಾಳಿಯವೋ ಅಥವಾ ಉದ್ದೇಶ ಪೂರಕವೋ ಅನ್ನುವುದು ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ನೀತಿ ಕಥೆ

    ಮಕ್ಕಳ ಮೋಹಕ್ಕೆ ಸಿಲುಕೀರಿ ಜೋಕೆ…

    ವಕೀಲ ನಾಗನಗೌಡ ಪಾಟೀಲರು ಪ್ರಾಮಾಣಿಕರೆಂದೇ ಗುರುತಿಸಿಕೊಂಡವರು. ಸಹಕಾರಿ ಕಾಯ್ದೆಗಳಿಗೆ ಸಂಬಂಧಿಸಿದ ಬ್ಯಾಂಕ್ಗಳ ಕೇಸುಗಳನ್ನು ನಡೆಸುವುದಲ್ಲಿ ನಿಪುಣರು ಅವರು.  ಕಠಿಣ ಪರಿಶ್ರಮದಿಂದ ಮೇಲೆ ಬಂದು ಹಣ ಸಂಪಾದಿಸಿದರು. ಯಾವ ದುರಭ್ಯಾಸಕ್ಕೂ ಕೈಹಾಕದ ಕಾರಣ, ಬೆಂಗಳೂರಿನ ಬಸವನಗುಡಿಯಲ್ಲಿ ದೊಡ್ಡದಾದ ಬಂಗಲೆಯನ್ನೂ ಕಟ್ಟಿಸಿದರು. ಒಂದು ಹೆಣ್ಣು, ಒಂದು ಗಂಡು ಮಗುವಿನ ತಂದೆಯಾದ ಪಾಟೀಲರಿಗೆ ಎಲ್ಲ ಪೋಷಕರಂತೆ ಮಕ್ಕಳ ಉಜ್ವಲ ಭವಿಷ್ಯದ ಚಿಂತೆ. ಮಕ್ಕಳನ್ನು ಡಾಕ್ಟರ್, ಎಂಜಿನಿಯರ್ ಮಾಡಬೇಕೆಂದು ಕೊಂಡರು. ಭರ್ಜರಿಯಾಗಿ ಅವರ ಮದುವೆ ಮಾಡುವ ಕನಸು ಕಂಡರು. ಹಾಗೂ ಹೀಗೂ ಹಣ…

  • ಉಪಯುಕ್ತ ಮಾಹಿತಿ

    ಲೋ ಬಿಪಿಯನ್ನು ನಿಯಂತ್ರಿಸಲು ಮನೆಯಲ್ಲಿಯೇ ಈ 5 ಸುಲಭ ಮಾರ್ಗಗಳನ್ನು ಅನುಸರಿಸಿ…

    ಲೋ ಬಿಪಿ ಸರ್ವೇ ಸಾಮಾನ್ಯ ಸಮಸ್ಯೆ. ಇದನ್ನು ಕಂಟ್ರೋಲ್ ಮಾಡಲು ಹಲವು ಔಷಧಗಳ ಮೊರೆ ಹೋಗುವುದು ಸಹಜ. ಆದರೆ ಮನೆಯಲ್ಲೇ ಸಿಗೋ ಕೆಲವು ಸಾಮಗ್ರಿಗಳಿಂದ ಕಡಿಮೆ ರಕ್ತದೊತ್ತಡವನ್ನು ಹತೋಟಿಯಲ್ಲಿಡಬಹುದು. ಅದು ಹೇಗೆ ಅಂತ ನೋಡಿ. ಉಪ್ಪಿನಲ್ಲಿನರುವ ಸೋಡಿಯಂ ಅಂಶ ರಕ್ತದೊತ್ತಡ ಹೆಚ್ಚುವಂತೆ ಮಾಡುತ್ತದೆ. ಹಾಗಾಗಿ ಉಪ್ಪಿನ ನೀರು ಕುಡಿಯಬೇಕು. ಅತಿಯಾದ ಉಪ್ಪಿನಂಶ ಇದ್ದರೂ ಒಳ್ಳೆಯದಲ್ಲ. ಹಾಗಾಗಿ ಮಿತವಾಗಿ ಬಳಸಿ. ರಕ್ತದೊತ್ತಡ ಕಡಿಮೆಯಾದಾಗ ಸ್ಟ್ರಾಂಗ್ ಕಾಫಿ ಕುಡಿದಲ್ಲಿ ತಕ್ಷಣ ಪ್ರಭಾವ ಬೀರುತ್ತದೆ. ಇದರ ಹೊರತಾಗಿ ಚಾಕ್ಲೆಟ್, ಕೋಲ ಮತ್ತು…

  • ಸುದ್ದಿ

    ನಿತ್ಯಾನಂದನ ಆಶ್ರಮದಲ್ಲಿ ಸ್ವ ಇಚ್ಛೆಯಿಂದ ಸನ್ಯಾಸತ್ವ ಸ್ವೀಕರಿಸಿದ್ದೇನೆ. ಫೇಸ್‍ಬುಕ್ ಲೈವಿನಲ್ಲಿ ತಂದೆಗೆ ಮಗಳ ಖಡಕ್ ಉತ್ತರ.

    ನಿತ್ಯಾನಂದನ ಆಶ್ರಮದಲ್ಲಿದ್ದ ಯುವತಿ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಸ್ವತಃ ಯುವತಿಯೇ ಫೇಸ್ಬುಕ್ ನಲ್ಲಿ ಲೈವ್ ವಿಡಿಯೋ ಮಾಡುವ ಮೂಲಕ ಎಲ್ಲ ವಿಚಾರಗಳನ್ನು ಸ್ಪಷ್ಟಪಡಿಸಿದ್ದಾಳೆ. ಅಪಹರಣಗೊಂಡಿದ್ದಾಳೆ ಎಂಬ ಆರೋಪ ಕೇಳಿಬಂದ ಯುವತಿ ಫೇಸ್ಪುಕ್ ನಲ್ಲಿ ಪ್ರತ್ಯಕ್ಷವಾಗಿ ತಂದೆಯ ವಿರುದ್ಧವೇ ಕಿಡಿಕಾರಿದ್ದಾಳೆ. ಲೈವ್ ವಿಡಿಯೋ ಮೂಲಕ ತಮ್ಮನ್ನು ಯಾರೂ ಅಪಹರಿಸಿಲ್ಲ. ಆದರೆ ಸುಖಾಸುಮ್ಮನೆ ನಮ್ಮ ಗುರುಗಳಾದ ನಿತ್ಯಾನಂದ ಸ್ವಾಮೀಜಿ ಮೇಲೆ ಆರೋಪಿಸಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇದು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ತಡೆ…

  • ಜ್ಯೋತಿಷ್ಯ

    ಮಹಾಕಾಳೇಶ್ವರನ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಮಾರ್ಚ್, 2019) ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ ಮಾಡುತ್ತದೆ ಮತ್ತು ಅಗತ್ಯವಿರುವ ಬೆಳಕನ್ನು ನೀಡುತ್ತದೆ….