ಸುದ್ದಿ

ಸ್ಕೂಟಿ ಹತ್ತಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್. ಎದ್ನೋ ಬಿದ್ನೋ ಅಂತ ಓಡಿದ ಯುವಕ!

230

ಸ್ಕೂಟಿ ಹರಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್ ಮಾಡಿದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ನಗರದ ಎಪಿಎಂಸಿ ಮಾರುಕಟ್ಟೆ ಬಳಿ ಮೊಹ್ಮದ್ ಆಯಾತುಲ್ಲಾ ತಮ್ಮ ಸ್ಕೂಟಿಯಲ್ಲಿ ಹೋಗುತ್ತಿದ್ದರು. ಈ ವೇಳೆ ರಸ್ತೆ ದಾಟುತ್ತಿದ್ದ ಭಾರೀ ಗಾತ್ರದ ನಾಗರ ಹಾವಿನ ಮೇಲೆ ಸ್ಕೂಟಿ ಹತ್ತಿಸಿದ್ದಾರೆ. ಈ ವೇಳೆ ಚಕ್ರಕ್ಕೆ ಸಿಲುಕಿದ ಪರಿಣಾಮ ಸವಾರ ಮೊಹ್ಮದ್ ನಿಯಂತ್ರಣ ತಪ್ಪಿ ಸ್ಕೂಟಿ ಸಮೇತ ಕೆಳಗೆ ಬಿದ್ದಿದ್ದಾರೆ. ಆಗ ನಾಗರಹಾವು ಆತನ ಕಾಲಿಗೆ ಅಟ್ಯಾಕ್ ಮಾಡಿದೆ. ಇದರಿಂದ ಹೆದರಿದ ಮೊಹ್ಮದ್ ಎದ್ನೋ ಬಿದ್ನೋ ಅಂತ ಓಡಿದ್ದಾರೆ.

ಮೊಹ್ಮದ್ ಮೇಲೆ ದಾಳಿ ಮಾಡಿದ ಬಳಿಕವೂ ನಾಗರಹಾವು ಸ್ಕೂಟಿಯ ಮುಂಭಾಗದಲ್ಲಿ ಸೇರಿಕೊಂಡಿತ್ತು. ಇದನ್ನು ನೋಡಿದ ಸ್ಥಳೀಯರು ಉರಗರಕ್ಷಕ ಪೃಥ್ವಿರಾಜ್ ಅವರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಪೃಥ್ವಿರಾಜ್ ಅವರು ಸ್ಕೂಟಿಯಲ್ಲಿ ಸೇರಿಕೊಂಡಿದ್ದ ನಾಗರಹಾವನ್ನು ಸೆರೆ ಹಿಡಿದಿದ್ದಾರೆ. ಅದೃಷ್ಟವಶಾತ್ ಮೊಹ್ಮದ್ ಅವರಿಗೆ ಸಣ್ಣ ಪ್ರಮಾಣದ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಆಹಾರಗಳನ್ನು ಫ್ರಿಜ್ಜಿನಲ್ಲಿ ಇಟ್ಟ ಮಾತ್ರಕ್ಕೆ ಅದು ಸುರಕ್ಷಿತವೇ…?

    ಆಹಾರಗಳನ್ನು ತಾಜಾರೂಪದಲ್ಲಿ ಸೇವಿಸಿದಷ್ಟೂಉತ್ತಮ. ಏಕೆಂದರೆ ಒಮ್ಮೆ ತಯಾರಿಸಿದ ಆಹಾರ ಕೊಂಚಹೊತ್ತಿನ ಬಳಿಕ ಹಳಸಲು ತೊಡಗುತ್ತದೆ. ಈ ಹಳಸುವಿಕೆಯನ್ನುತಡವಾಗಿಸಲು ಈಗ ನಮ್ಮೆಲ್ಲರ ಮನೆಗಳಲ್ಲಿ ಫ್ರಿಜ್ಜುಗಳಿವೆ. ಆದ್ದರಿಂದ ನಾವೆಲ್ಲಾ ಕೊಂಚ ಹೆಚ್ಚಿನ ಪ್ರಮಾಣವನ್ನುತಯಾರಿಸಿ ಫ್ರಿಜ್ಜಿನಲ್ಲಿಟ್ಟು ಮುಂದಿನ ಒಂದೆರಡು ದಿನಗಳವರೆಗೆ ಸೇವಿಸುತ್ತೇವೆ. ಆದರೆ ಫ್ರಿಜ್ಜಿನಲ್ಲಿಟ್ಟಆಹಾರವನ್ನೇ ಪ್ರತಿ ಬಾರಿ ಸೇವಿಸಲು ಮೂರು ಅಥವಾ ನಾಲ್ಕು ಬಾರಿ ಬಿಸಿ ಮಾಡಿ ಮತ್ತೆ ತಣಿಸಿ ಇಡುವುದುಖಂಡಿತಾ ಆರೋಗ್ಯಕರವಲ್ಲ. ಆರೋಗ್ಯವೇ ಭಾಗ್ಯ ನಾಣ್ಣುಡಿ ಮರೆತು, ಕೊರಗಬೇಡಿ! ಫ್ರಿಜ್ಜಿನಲ್ಲಿಟ್ಟರೂಪ್ರತಿ ಆಹಾರವಸ್ತು ತಾಜಾ ಇರುವ ಅವಧಿ ಬೇರೆಬೇರೆಯಾಗಿರುತ್ತದೆ. ಕೆಲವು ಒಂದೆರಡು…

  • ವಿಚಿತ್ರ ಆದರೂ ಸತ್ಯ, ವಿಸ್ಮಯ ಜಗತ್ತು

    ಪ್ಲಾಸ್ಟಿಕ್ ಡಬ್ಬದ ಸಹಾಯದಿಂದ ಸಮುದ್ರ ದಾಟಿ ಬಾಂಗ್ಲಾ ತಲುಪಿದ ಬಾಲಕ ..!ತಿಳಿಯಲು ಇದನ್ನು ಓದಿ..

    ಮ್ಯಾನ್ಮಾರ್‌ನಲ್ಲಿ ಹೆಚ್ಚುತ್ತಿರುವ ರೊಹಿಂಗ್ಯಾ ವಿರೋಧಿ ಹಿಂಸಾಚಾರದಿಂದ ಕಂಗೆಟ್ಟಿರುವ ರೊಹಿಂಗ್ಯಾ ಮುಸ್ಲಿಮರು ಪ್ಲಾಸ್ಟಿಕ್ ಡಬ್ಬಗಳನ್ನು ಬಳಸಿ ಸಮುದ್ರ ದಾಟಿ ಬಾಂಗ್ಲಾದೇಶಕ್ಕೆ ಬರುತ್ತಿದ್ದಾರೆ.

  • ಸುದ್ದಿ

    ಕ್ಯಾನ್ಸರ್ ರೋಗಿಗಳಿಗಾಗಿ ತನ್ನ ತಲೆ ಕೂದಲನ್ನೇ ಬೋಳಿಸಿಕೊಂಡ ಪೊಲೀಸ್ ಅಧಿಕಾರಿ,.!!

    ಅಪರ್ಣಾ ಲವಕುಮಾರ್ ಈ ಹೆಸರು ನೀವೆಂದಾದರೂ ಕೇಳಿದ್ದೀರಾ? ಬಹುಶಃ ಕ್ಯಾನ್ಸರ್ ಪೀಡಿತರಿಗೆ ನೈಸರ್ಗಿಕ ಕೂದಲಿನ ವಿಗ್ ಮಾಡಿಸುವ ಸಲುವಾಗಿ ಈ ಪೊಲೀಸ್ ಹಿರಿಯ ಅಧಿಕಾರಿ ತಮ್ಮ  ತಲೆ ಬೋಳಿಸಿಕೊಂಡಿದ್ದಾರೆ. ಸದ್ಯ ಇವರ ಈ ಮನವೀಯ ನಡೆ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ. ಕೇರಳ ತ್ರಿಶೂರ್ ಜಿಲ್ಲೆಯ ಇರಿಂಜಲಕೂಡಾದ ನಿವಾಸಿಯಾಗಿರುವ ಅಪರ್ಣಾ ತಮ್ಮ ಮೊಣಕಾಲುದ್ದದ ಕೂದಲನ್ನು ಕ್ಯಾನ್ಸರ್ ಪೀಡಿತರಿಗಾಗಿ ಬೋಳಿಸಿಕೊಂಡಿರುವುದು ನೆಟ್ಟಿಗರ ಮನ ಗೆದ್ದಿದೆ ಇನ್ನು ತಮ್ಮ ತಲೆ ಕೂದಲು ಬೋಳಿಸುವ ಮೊದಲು ಇವರು ಈ ಬಗ್ಗೆ…

  • ಹಣ ಕಾಸು

    10 ರೂಪಾಯಿ ನಾಣ್ಯವನ್ನು ಹೊಂದಿರುವವರಿಗೆ ಇಲ್ಲಿದೆ ಗುಡ್ ನ್ಯೂಸ್..!ತಿಳಿಯಲು ಈ ಲೇಖನ ಓದಿ..

    10 ರೂಪಾಯಿ ನಾಣ್ಯವನ್ನು ರದ್ದು ಮಾಡಿರದಿದ್ದರೂ, ಅನೇಕ ಕಡೆಗಳಲ್ಲಿ ವರ್ತಕರು, ಜನ ಸಾಮಾನ್ಯರು ಇವುಗಳನ್ನು ಸ್ವೀಕರಿಸಲು ಹಿಂದೇಟು ಹಾಕ್ತಾರೆ.ಇವೇ ಮೊದಲಾದ ಕಾರಣಗಳಿಂದಾಗಿ ಬ್ಯಾಂಕ್ ಗಳಲ್ಲಿ ನಾಣ್ಯ ಮೇಳ ನಡೆಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್(ಆರ್.ಬಿ.ಐ.) ವಾಣಿಜ್ಯ ಬ್ಯಾಂಕ್ ಗಳಿಗೆ ಸೂಚನೆ ನೀಡಿದೆ.

  • ಜ್ಯೋತಿಷ್ಯ

    ವಿಘ್ನ ವಿನಾಯಕನನ್ನು ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…

  • ತಂತ್ರಜ್ಞಾನ

    ನಿಮ್ಮ ಫೇಸ್ ಬುಕ್ ಪ್ರೊಫೈಲ್ ಫೋಟೋ ಬಗ್ಗೆ, ಇನ್ಮೇಲೆ ನೀವು ತಲೆ ಕೆಡಿಸ್ಕೋಬೇಡಿ!ಏಕೆ ಗೊತ್ತಾ….

    ಫೇಸ್‌ಬುಕ್ನಲ್ಲಿ ಪ್ರೊಫೈಲ್ ಚಿತ್ರವನ್ನು ನಾವು ಹಾಕುವುದಕ್ಕೆ ಮುಂಚೆ ಹಿಂಜರಿಯುವುದು ಸಹಜ.ನಿಮಗೆಲ್ಲಾ ಗೊತ್ತಿರುವ ಹಾಗೆ ಕೆಲವರು ಪ್ರೊಫೈಲ್ ಫೋಟೋಗಳನ್ನು ದುರುಪಯೋಗ ಮಾಡಿಕೊಳ್ಳುವ ತುಂಬಾ ಘಟನೆಗಳು ನಡೆಯುತ್ತಿರುತ್ತವೆ.