ಸುದ್ದಿ

ಸ್ಕೂಟಿ ಹತ್ತಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್. ಎದ್ನೋ ಬಿದ್ನೋ ಅಂತ ಓಡಿದ ಯುವಕ!

227

ಸ್ಕೂಟಿ ಹರಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್ ಮಾಡಿದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ನಗರದ ಎಪಿಎಂಸಿ ಮಾರುಕಟ್ಟೆ ಬಳಿ ಮೊಹ್ಮದ್ ಆಯಾತುಲ್ಲಾ ತಮ್ಮ ಸ್ಕೂಟಿಯಲ್ಲಿ ಹೋಗುತ್ತಿದ್ದರು. ಈ ವೇಳೆ ರಸ್ತೆ ದಾಟುತ್ತಿದ್ದ ಭಾರೀ ಗಾತ್ರದ ನಾಗರ ಹಾವಿನ ಮೇಲೆ ಸ್ಕೂಟಿ ಹತ್ತಿಸಿದ್ದಾರೆ. ಈ ವೇಳೆ ಚಕ್ರಕ್ಕೆ ಸಿಲುಕಿದ ಪರಿಣಾಮ ಸವಾರ ಮೊಹ್ಮದ್ ನಿಯಂತ್ರಣ ತಪ್ಪಿ ಸ್ಕೂಟಿ ಸಮೇತ ಕೆಳಗೆ ಬಿದ್ದಿದ್ದಾರೆ. ಆಗ ನಾಗರಹಾವು ಆತನ ಕಾಲಿಗೆ ಅಟ್ಯಾಕ್ ಮಾಡಿದೆ. ಇದರಿಂದ ಹೆದರಿದ ಮೊಹ್ಮದ್ ಎದ್ನೋ ಬಿದ್ನೋ ಅಂತ ಓಡಿದ್ದಾರೆ.

ಮೊಹ್ಮದ್ ಮೇಲೆ ದಾಳಿ ಮಾಡಿದ ಬಳಿಕವೂ ನಾಗರಹಾವು ಸ್ಕೂಟಿಯ ಮುಂಭಾಗದಲ್ಲಿ ಸೇರಿಕೊಂಡಿತ್ತು. ಇದನ್ನು ನೋಡಿದ ಸ್ಥಳೀಯರು ಉರಗರಕ್ಷಕ ಪೃಥ್ವಿರಾಜ್ ಅವರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಪೃಥ್ವಿರಾಜ್ ಅವರು ಸ್ಕೂಟಿಯಲ್ಲಿ ಸೇರಿಕೊಂಡಿದ್ದ ನಾಗರಹಾವನ್ನು ಸೆರೆ ಹಿಡಿದಿದ್ದಾರೆ. ಅದೃಷ್ಟವಶಾತ್ ಮೊಹ್ಮದ್ ಅವರಿಗೆ ಸಣ್ಣ ಪ್ರಮಾಣದ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ