ಬೇಸಿಗೆ ಕಾಲದಲ್ಲಿ ಬಿಸಿಲಿನ ತಾಪ ಹೆಚ್ಚದಾಗ ಜನರು ತಂಪುಪಾನೀಯಗಳ ಮೊರೆ ಹೋಗುವುದು ಸಹಜ. ಆದರೆ ಆರೋಗ್ಯದ ದೃಷ್ಟಿಯಿಂದ ಎಳನೀರಿನ ಸೇವನೆ ಅತಿ ಉತ್ತಮ ಎಂದು ವೈಜ್ಞಾನಿಕವಾಗಿಯೇ ತಿಳಿದಿರುವ ವಿಷಯ. ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ. ಇದರ ಸೇವನೆಯಿಂದ ದೇಹಕ್ಕೆ ಆರೋಗ್ಯ ನೀಡುವುದಲ್ಲದೇ,ಫಿಟ್ನೆಸ್ ಗೂ ಇದು ಉಪಯೋಗಕರವಾಗಿದೆ.
ಗರ್ಭಿಣಿ ಮಹಿಳೆ ಇದನ್ನು ನಿಯಮಿತವಾಗಿ ಸೇವಿಸಿದರೆ ಸುಂದರ ಹಾಗೂ ಸ್ವಾಸ್ಥ್ಯ ಮಗು ಹುಟ್ಟಲಿದೆ. ಈ ಎಲ್ಲಾ ಗುಣ ಹೊಂದಿರುವುದರಿಂದಲೇ ತೆಂಗಿನ ಮರವನ್ನು ಕಲ್ಪವೃಕ್ಷವೆಂತಲೇ ಕರೆಯಲಾಗುತ್ತದೆ. ಧಾರ್ಮಿಕ ಮಹತ್ವದ ಜೊತೆಗೆ ಔಷಧಿಯ ಗುಣವನ್ನು ಹೊಂದಿದ್ದು, ವಿಟಮಿನ್,ಪೊಟಾಶಿಯಂ,ಫೈಬರ್,ಕ್ಯಾಲ್ಸಿಯಂ,ಮೆಗ್ನೀಶಿಯಂ ಮತ್ತು ಖನಿಜ ಗುಣವನ್ನು ಹೊಂದಿದೆ. ತೆಂಗಿನಲ್ಲಿ ಕೊಬ್ಬು ಹಾಗೂ ಕೊಲೆಸ್ಟ್ರಾಲ್ ಅಂಶವಿಲ್ಲ, ಹಾಗಾಗಿ ಬೊಜ್ಜು ಕರಗಲು ಸಹಾಯಮಾಡುತ್ತದೆ.
ಬೇಸಿಗೆಯಲ್ಲಿ ನೀರು ಸೇವನೆಗಿಂತ ಎಳನೀರು ಸೇವನೆಯಿಂದ ಹೆಚ್ಚು ಖುಷಿ ಕೊಡಲಿದೆ. ಕೇವಲ ಖುಷಿಯಲ್ಲದೇ ದೇಹವನ್ನು ಲವಲವಿಕೆಯಿಂದಲೂ ಇಡಲಿದೆ. ಆರೋಗ್ಯವಷ್ಟೇ ಅಲ್ಲದೆ ಇದರ ಸೇವನೆಯಿಂದ ಮುಖದ ತ್ವಚೆಯನ್ನು ಹೊಂದಿದೆ. ಶಕ್ತಿ ನೀಡುವ ಗುಣ ಹೊಂದಿರುವ ಎಳನೀರುನ್ನು ವ್ಯಾಯಾಮದ ನಂತರ ಸೇವನೆ ಮಾಡುವುದು ಸೂಕ್ತ, ಅತಿ ಹೆಚ್ಚು ವಿಟಮಿನ್ ಹೊಂದಿರುವ ಎಳನೀರು ಸೇವನೆ ದೇಹಕ್ಕೆ ಆರೋಗ್ಯಕರ.