ಸುದ್ದಿ

ಕರೋನ ಎಫೆಕ್ಟ್, 4 ಲಕ್ಷ ಸಂಬಳ ಪಡೆಯುತ್ತಿದ್ದ ಪೈಲಟ್ ಈಗ ಡೆಲಿವರಿ ಬಾಯ್.

309

ಕೊರೊನಾ ಸುಳಿಗೆ ಸಿಲುಕಿ ಹಲವರು ಜೀವವನ್ನ ಕಳೆದುಕೊಂಡದ್ರೆ, ಬಹುತೇಕರು ಜೀವನವನ್ನು ಕಳೆದುಕೊಳ್ಳುವಂತಾಗಿದೆ. ಕೊರೊನಾ ತಡೆಗಾಗಿ ವಿಶ್ವಮಟ್ಟದಲ್ಲಿ ಲಾಕ್‍ಡೌನ್ ಸೂತ್ರ ಜಾರಿಗೊಳಿಸಿದ ಪರಿಣಾಮ ಎಷ್ಟೋ ಜನ ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ಉದ್ಯೋಗ ಕಳೆದುಕೊಂಡ ಕೂಲಿ ಕಾರ್ಮಿಕರು ವಾಹನದ ವ್ಯವಸ್ಥೆ ಇಲ್ಲದೇ ಕಾಲ್ನಡಿಗೆಯಲ್ಲಿಯೇ ತಲೆಯ ಮೇಲೆ ಚೀಲ ಹೊತ್ತು ಹೆಜ್ಜೆ ಹಾಕಿರುವ ದೃಶ್ಯಗಳು ಕಣ್ಮುಂದೆ ಬರುತ್ತವೆ.

42 ವರ್ಷದ ನಾಕರಿನ್ ಇಂಟಾ ನಾಲ್ಕು ವರ್ಷಗಳಿಂದ ಪೈಲಟ್ ವೃತ್ತಿಯಲ್ಲಿದ್ದಾರೆ. ಕೊರೊನಾದಿಂದಾಗಿ ಉದ್ಯೋಗ ಕಳೆದುಕೊಂಡ ನಾಕರಿನ್ ಕುಟುಂಬ ನಿರ್ವಹಣೆಗಾಗಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದಾರೆ. ಈ ಕುರಿತಿ ಮಾತನಾಡಿರುವ ನಾಕರಿನ್, ನಮ್ಮ ಏರ್ ಲೈನ್ಸ್ ಬಹುತೇಕ ಸಿಬ್ಬಂದಿಯನ್ನು ಸಂಬಳ ರಹಿತ ರಜೆಯ ಮೇಲೆ ಕಳುಹಿಸಿದೆ.

ನನ್ನ ಸಹೋದ್ಯೋಗಿಗಳು ಬೇರೆ ವ್ಯವಹಾರಗಳಲ್ಲಿ ತೊಡಗಿಕೊಂಡು ಜೀವನ ನಡೆಸುತ್ತಿದ್ದಾರೆ. ಆದ್ರೆ ಎಲ್ಲರೂ ಏರ್ ಲೈನ್ಸ್ ನಲ್ಲಿ ಪಡೆಯುತ್ತಿದ್ದ ಸಂಬಳಕ್ಕಿಂತ ಕಡಿಮೆ ಹಣಕ್ಕಾಗಿ ಉದ್ಯೋಗ ಮಾಡುತ್ತಿದ್ದಾರೆ. ಆದ್ರೆ ಏರ್ ಲೈನ್ಸ್ ಯಾರನ್ನೂ ಕೆಲಸದಿಂದ ತೆಗೆದು ಹಾಕಿಲ್ಲ. ಮತ್ತೆ ನಮ್ಮನ್ನು ಕೆಲಸಕ್ಕೆ ಕರೆಯುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದೇವೆ ಎಂದು ಹೇಳಿದ್ದಾರೆ.

ಓರ್ವ ಪೈಲಟ್ ತಿಂಗಳಿಗೆ 4 ರಿಂದ 5 ಲಕ್ಷ ರೂ. ಸಂಬಳ ಪಡೆಯುತ್ತಿದ್ದರು. ಈಗ ಅವರಿಗೆ ದಿನಕ್ಕೆ 2 ಸಾವಿರ ರೂ. ಹೊಂದಿಸಲು ಕಷ್ಟವಾಗ್ತಿದೆ. ನನ್ನ ಕ್ಯಾಪ್ಟನ್, ಸಿಬ್ಬಂದಿ ನೆನಪು ಆದಾಗ ಆಕಾಶದಲ್ಲಿ ಹಾರುತ್ತಿರುವ ವಿಮಾನವನ್ನು ನೋಡುತ್ತೇನೆ. ಡೆಲಿವರಿ ಬಾಯ್ ಆಗಿ ಕೆಲಸಕ್ಕೆ ಸೇರಿದಾಗ ಮೊದಲು ಆರ್ಡರ್ ಬಂದಾಗ ನೀಡಿದ ಸೇವೆಯ ಅನುಭವ ತುಂಬಾ ವಿಭಿನ್ನವಾಗಿತ್ತು ಎಂದು ನಾಕರಿನ್ ಹೇಳುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಎರಡು ತಿಂಗಳಿಂದ ರೇಷನ್ ಬಂದಿಲ್ಲ, ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಸ್ಪಷ್ಟನೆ.

    ಮಠಕ್ಕೆ ಪೂರೈಕೆ ಆಗುತ್ತಿದ್ದ ಅಕ್ಕಿ ಹಾಗೂ ಗೋಧಿ ಎರಡು ತಿಂಗಳಿಂದ ಬಂದಿಲ್ಲ ಎಂದು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ತಿಳಿಸಿದ್ದಾರೆ. ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ ಸ್ವಾಮೀಜಿಗಳು, ಮಠಕ್ಕೆ ಪೂರೈಕೆಯಾಗುತ್ತಿದ್ದ ರೇಷನ್ ಎಷ್ಟು ಬಳಕೆಯಾಗುತ್ತಿದೆ ಎಂಬ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ಕೇಳಿತ್ತು. ಅದರಂತೆ ನಾವು ಸೂಕ್ತ ದಾಖಲೆ, ಮಾಹಿತಿ ಸಲ್ಲಿಸಿದ್ದೇವೆ. ಆದರೆ ಕೆಲ ಸಂಸ್ಥೆಗಳು ಸರಿಯಾದ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಸರ್ಕಾರ ಅಕ್ಕಿ ಹಾಗೂ ಗೋಧಿ ವಿತರಣೆಯನ್ನು ನಿಲ್ಲಿಸಿರಬಹುದು. ಮುಂದಿನ ದಿನಗಳಲ್ಲಿ ಆಹಾರ ಮತ್ತು…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಫೆಬ್ರವರಿ, 2019) ನಿಮ್ಮ ಕುಟುಂಬದ ಜೊತೆ ಕಟ್ಟುನಿಟ್ಟಾಗಿ ವರ್ತಿಸಬೇಡಿ ಇದು ಶಾಂತಿ ಭಂಗವುಂಟುಮಾಡಬಹುದು. ಇಂದು ನೀವು…

  • ಉಪಯುಕ್ತ ಮಾಹಿತಿ

    ಕೆಟ್ಟ ಕನಸುಗಳು ಬೀಳದಿರಲು ಹಾಗೂ ಸುಖ ನಿದ್ರೆ ಮಾಡಲು..! ಏನು ಮಾಡಬೇಕು ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಈ ಭೂಮಿಮೇಲೆ ಹುಟ್ಟಿರುವ ಎಲ್ಲ ಜೀವಿಗಳಿಗೂ ನಿದ್ರೆ ಅತೀ ಅವಶ್ಯಕ. ನಿದ್ದೆ ಮಾಡುವುದರಿಂದ ಶರೀರ ಉತ್ತೇಜನಗೊಂಡು ,ಮಾರನೇ ದಿನ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅಗತ್ಯವಿರುವ ಶಕ್ತಿ ಲಭಿಸುತ್ತದೆ. ನಿದ್ರಿಸುವುದರಿಂದ ಶರೀರಕ್ಕೆ ಇನ್ನೂ ಅನೇಕ ರೀತಿಯ ಪ್ರಯೋಜನಗಳು ಆಗುತ್ತವೆ.

  • ಸುದ್ದಿ

    ಸಾನಿಯಾ ಮಿರ್ಜಾ ಪತಿಗೆ ಹೈದರಾಬಾದ್ ಪ್ರವೇಶ ಮಾಡಾಬಾರದೆಂದು ಬೆದರಿಕೆಯೊಡ್ಡಿದ ಶಾಸಕ!ಏಕೆ ಗೊತ್ತಾ?

    ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ…

  • govt

    2000 ರೂ ನೋಟಿನ ಮುದ್ರಣವನ್ನು ಸ್ಥಗಿತಗೊಳಿಸಿದ ರಿಸರ್ವ್ ಬ್ಯಾಂಕ್,..!ಯಾಕೆ ಗೊತ್ತಾ,.??

    ರಿಸರ್ವ್  ಬ್ಯಾಂಕ್  ಆಫ್ ಇಂಡಿಯಾ 2 ಸಾವಿರರೂಪಾಯಿ ಮುಖಬೆಲೆಯ ನೋಟು ಮುದ್ರಣವನ್ನು ಸ್ಥಗಿತಗೊಳಿಸಿದೆ.ಪ್ರಸಕ್ತ ವರ್ಷ ನೋಟು ಮುದ್ರಣಇಲಾಖೆ 2 ಸಾವಿರ ಮುಖಬೆಲೆಯ ಒಂದುನೋಟನ್ನೂ ಮುದ್ರಿಸಿಲ್ಲ ಎಂದು ಆರ್​ಬಿಐಆರ್​ಟಿಐ ಅರ್ಜಿಗೆ ನೀಡಿರುವಉತ್ತರದಲ್ಲಿ ಸ್ಪಷ್ಟಪಡಿಸಿದೆ. ಆದರೆ ಹಾಲಿ ಇರುವ ನೋಟುಗಳ ಚಲಾವಣೆಗೆ ಸಮಸ್ಯೆಯೇನಿಲ್ಲ. ಆರ್​ಬಿಐ ಮಾಹಿತಿ ಪ್ರಕಾರ ನೋಟು ಮುದ್ರಣ ಇಲಾಖೆ 2016-17ನೇ ಹಣಕಾಸು ವರ್ಷದಲ್ಲಿ 2 ಸಾವಿರ ಮುಖಬೆಲೆಯ ಒಟ್ಟು 3,54,29,91,000 ನೋಟುಗಳನ್ನು ಮುದ್ರಣ ಮಾಡಿತ್ತು. 2017-18 ರಲ್ಲಿ 11,15,07,000 ನೋಟು ಹಾಗೂ 2018-19ನೇ ಸಾಲಿನಲ್ಲಿ ಕೇವಲ4,66,90,000 ನೋಟುಗಳನ್ನು…