ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರದ ನಗರದಲ್ಲಿ ವಿದೇಶಿ ಎಚ್ಎ- ತಳಿಯ ಹಸುವೊಂದು ದಿಢೀರನೇ ಮೇವು ತಿನ್ನುವುದು ನಿಲ್ಲಿಸಿ ಹಾಲು ಇಳುವರಿಯನ್ನು ಕಡಿತಗೊಳಿಸಿತ್ತು. ಮೇವು ತಿನ್ನುವುದು ನಿಲ್ಲಿಸಿದ್ದರಿಂದ ಹಸು ಬಡಕಲಾಗುತ್ತಾ ಹೋಯಿತು. ಹೊತ್ತಿಗೆ ಸುಮಾರು 1೦ ಲೀಟರ್ ಹಾಲು ನೀಡಿದ್ದ ಹಸು ಕೇವ ಮೂರು ನಾಲ್ಕು ಲೀಟರ್ ಹಾಲು ನೀಡಲು ಶುರುವಿಟ್ಟುಕೊಂಡಿತ್ತು. ಹಸು ಸಾಕುತ್ತಿದ್ದ ಮನೆಯವರು ಹಸುವಿಗೆ ಸಾಕಷ್ಟು ಚಿಕಿತ್ಸೆ ಮಾಡಿಸಿದರೂ ಪ್ರಯೋಜನವಾಗಿರಲಿಲ್ಲ. ಇದೇ ಪರಿಸ್ಥಿತಿ ಕಳೆದರೆ ಹಸು ಪ್ರಾಣ ಕಳೆದುಕೊಳ್ಳುವ ಆತಂಕ ಎದುರಾಗಿತ್ತು. ಇಂತ ಆತಂಕದ ಪರಿಸ್ಥಿತಿಯಲ್ಲಿ ಹಸುವಿನ ನೆರವಿಗೆ ಬಂದವರು ಪಶು ಶಸ್ತ್ರಚಿಕಿತ್ಸಕ ಡಾ.ರಾಹುಲ್ ಮತ್ತು ಪಶು ವೈದ್ಯಾಧಿಕಾರಿ ಡಾ.ರಘುನಾಥ್.
ತೀರಾ ನಿತ್ರಾಣ ಸ್ಥಿತಿಯಲ್ಲಿದ್ದ ಹಸುವಿಗೆ ಇನ್ಯಾವುದು ಚಿಕಿತ್ಸೆ ಫಲಕಾರಿಯಾಗುವುದಿಲ್ಲ ಎಂಬುದನ್ನು ಅರಿತುಕೊಂಡು ಶಸ್ತ್ರಚಿಕಿತ್ಸೆಗೆ ಮುಂದಾದರು. ಬಲಹೀನ ಪರಿಸ್ಥಿತಿಯಲ್ಲಿಯೂ ಹಸು ಶಸಚಿಕಿತ್ಸೆಯನ್ನು ತಡೆದುಕೊಂಡಿತ್ತಲ್ಲದೆ ತನ್ನದೇ ಹೊಟ್ಟೆಯಲ್ಲಿ ಸುಮಾರು ಎರಡು ವರ್ಷಗಳಿಂದಲೂ ಸೇರಿಕೊಂಡಿದ್ದ ——- ಸುಮಾರು ೧೫ ಕೆಜಿ ಯನ್ನು ಹೊರತೆಗೆಯಲು ಸಹಕರಿಸಿತ್ತು.
ಹಸು ಮೇವಿನ ಜೊತೆ ಅನೇಕ ರೀತಿಯ ತ್ಯಾಜ್ಯವನ್ನು ತಿಂದಿರುವುದು ಶಸ್ತ್ರಚಿಕಿತ್ಸೆ ನಂತರ ಪತ್ತೆಯಾಗಿತ್ತು. ಸುಮಾರು ಎರಡು ವರ್ಷಗಳಿಂದಲೂ ಈ ಮಟ್ಟದ ತ್ಯಾಜ್ಯವು ಹಸುವಿನ ಕರುಳುಗಳಲ್ಲಿ ಸುತ್ತಿಕೊಂಡು ಮೇವು ಜೀರ್ಣವಾಗದೇ ಇದ್ದರೂ ಆರೋಗ್ಯಕರವಾಗಿ ಬದುಕಿದ್ದೇ ಆಶ್ಚರ್ಯ ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದರು.
ಯಶಸ್ವಿ ಶಸ್ತ್ರಚಿಕಿತ್ಸೆ ಯ ನಂತರ ಹಸು ಈಗ ಚೇತರಿಸಿಕೊಳ್ಳುತ್ತಿದ್ದು, ಕ್ರಮೇಣ ಮೇವು ತಿನ್ನುವುದು ಮತ್ತು ಯಥಾ ಪ್ರಕಾರ ಗುಣಮಟ್ಟದ ಅಷ್ಟೇ ಪ್ರಮಾಣದ ಹಾಲು ನೀಡಲು ಸಿದ್ಧವಾಗುತ್ತಿರುವುದು ಹಸು ಸಾಕಾಣಿಕೆದಾರರ ಸಂತಸಕ್ಕೆ ಕಾರಣವಾಗಿದೆ.
ಹಸುಗಳಿಗೆ ಮೇವು ತಿನ್ನಲು ಹೊರಗೆ ಬಿಡುವ ಸಂದರ್ಭದಲ್ಲಿ ಪ್ಲಾಸ್ಟಿಕ್ ಮತ್ತಿತರ ತ್ಯಾಜ್ಯ ಹೊಟ್ಟೆ ಸೇರದಂತೆ ಎಚ್ಚರವಹಿಸುವುದು ಪ್ರತಿಯೊಬ್ಬ ಹಸು ಸಾಕಾಣಿಕೆದಾರರ ಜವಾಬ್ದಾರಿಯಾಗಬೇಕು, ಇಲ್ಲವಾದರೆ ಲಕ್ಷಾಂತರ ರೂಪಾಯಿ ಮೌಲ್ಯದ ಉತ್ತಮ ತಳಿಯ ರಾಸುಗಳನ್ನು ಕಳೆದುಕೊಳ್ಳಬೇಕಾಗುತ್ತದೆಯೆಂದು ಪಶು ಶಸಚಿಕಿತ್ಸಕ ಡಾ.ರಾಹುಲ್ ಮತ್ತು ಡಾ.ರಘುನಾಥ್ ಪಶು ಸಾಕಾಣಿಕೆದಾರರಿಗೆ ಸಲಹೆ ನೀಡಿದ್ದಾರೆ.
ಸುಮಾರು ಎರಡು ವರ್ಷಗಳಿಂದಲೂ ಸುಮಾರು ೧೫ ಕೆಜಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಹೊಟ್ಟೆಯಲ್ಲಿಟ್ಟುಕೊಂಡು ಅಚ್ಚರಿಯಾಗಿ ಬದುಕಿದ್ದ ಹಸುವೊಂದಕ್ಕೆ ನಗರದಲ್ಲಿ ಪಶು ವೈದ್ಯರು ಯಶಸ್ವಿ ಚಿಕಿತ್ಸೆ ಮಾಡಿ ಹಸುವಿನ ಪ್ರಾಣ ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾಜಿಕ ಜಾಲತಾಣಗಳಲ್ಲಿ ಕಾಮುಕರು ಅಸಭ್ಯವಾಗಿ ಮೆಸೇಜ್ ಮಾಡಿ ಲೈಂಗಿಕವಾಗಿ ಕಿರುಕುಳ ನೀಡುತ್ತಿರುತ್ತಾರೆ. ಇಲ್ಲೊಬ್ಬ ಕಾಮುಕ ಒಂದು ರಾತ್ರಿಗೆ 2 ಲಕ್ಷ ಹಣ ಕೊಡುವೆ ಎಂದು ನಟಿಗೆ ಕಿರುಕುಳ ನೀಡಿದ್ದಾನೆ. ಮಲಯಾಳಂ ನಟಿ ಗಾಯತ್ರಿ ಅರುಣ್ ಅವರಿಗೆ ರೋಹನ್ ಕುರಿಯಾಕೋಸ್ ಎಂಬಾತ ಫೇಸ್ಬುಕ್ ನಲ್ಲಿ ಅಸಭ್ಯವಾಗಿ ಮೆಸೇಜ್ ಮಾಡುವ ಮೂಲಕ ಕಿರುಕುಳ ನೀಡಿದ್ದಾನೆ. ಆದರೆ ನಟಿ ಕಾಮುಕನಿಗೆ ತಿರುಗೇಟು ಕೊಡುವ ಮೂಲಕ ಆತನ ಚಳಿ ಬಿಡಿಸಿದ್ದಾರೆ. ರೋಹನ್ ಕುರಿಯಾಕೋಸ್, “ಎರಡು ಲಕ್ಷ ರೂ. ಕೊಡುವೆ. ನನ್ನ ಜೊತೆ ಒಂದು…
ಉತ್ತರಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ವಾತಿ ಸಿಂಗ್ ಅವರು ಬಿಯರ್ ಬಾರ್ವೊಂದನ್ನು ಉದ್ಘಾಟಿಸಿದ ಫೋಟೋಗಳು ದೇಶಾದ್ಯಂತ ವೈರಲ್ ಆಗಿದ್ದು, ನೂತನ ಬಿಜೆಪಿ ಸರ್ಕಾರ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ತೀವ್ರ ಮುಜುಗರ
ಪ್ರತಿದಿನದ ಬೆಳಗು ನಮ್ಮ ಬದುಕಿನ ಶುಭಾರಂಭವಿದ್ದಂತೆ. ಹಾಗಾಗಿ ಬೆಳಗ್ಗೆ ಎದ್ದ ತಕ್ಷಣ ಯಾವುದೇ ವಿಘ್ನಗಳು ಎದುರಾಗಬಾರದು. ಅದಕ್ಕಾಗಿ ಕೆಲವೊಂದು ಕೆಲಸಗಳಿಂದ ನೀವು ದೂರವಿರಬೇಕು. ಯಾಕಂದ್ರೆ ಅವು ನಮ್ಮ ಕೆಲಸವನ್ನೇ ಬಿಗಡಾಯಿಸಿಬಿಡುತ್ತವೆ. ಬೆಳಗ್ಗೆ ಎದ್ದ ತಕ್ಷಣ ಕನ್ನಡಿ ನೋಡಬೇಡಿ : ವಾಸ್ತು ಶಾಸ್ತ್ರದ ಪ್ರಕಾರ ಬೆಳಗ್ಗೆ ಏಳ್ತಿದ್ದಂತೆ ಕನ್ನಡಿ ನೋಡುವುದರಿಂದ ರಾತ್ರಿಯ ನಕಾರಾತ್ಮಕತೆ ಪುನಃ ಸ್ಥಾಪಿತವಾಗುತ್ತದೆ. ಇಡೀ ದಿನ ನಿಮ್ಮ ಮನಸ್ಸು ಅದೇ ರೀತಿಯಾಗಿರುತ್ತದೆ. ಹಾಗಾಗಿ ಬೆಳಗ್ಗೆ ಎದ್ದು ಸ್ವಲ್ಪ ಸಮಯದ ನಂತರ ಕನ್ನಡಿಯಲ್ಲಿ ಮುಖ ದರ್ಶನ ಮಾಡಿ. ಬೆಳಗ್ಗೆ…
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊಲದೇವಿ ಗ್ರಾಮವೂ ಐತಿಹಾಸಿಕ ಹಿನ್ನೆಲೆ ಇರುವ ಗರುಡ ದೇವಸ್ಥಾನ ಹೊಂದಿರುವ ಗ್ರಾಮ. ಮುಳಬಾಗಿಲು ತಾಲೂಕು ಕೇಂದ್ರದಿಂದ 14 ಕೀ.ಮೀ. ದೂರದಲ್ಲಿ ಕೊಲದೇವಿ ಗ್ರಾಮ ಸಿಗುತ್ತದೆ. ಈ ದೇವಾಲಯ ಸಾವಿರ ವರ್ಷಗಳ ಹಿಂದೆ ರಾಮಾನುಜಾಚಾರ್ಯರಿಂದ ಪ್ರತಿಷ್ಠಾಪನೆ ಆಗಿದೆ. ಹಾಗು ದ್ರಾವಿಡ ಶೈಲಿಯಲ್ಲಿ ದೇವಾಲಯ ನಿರ್ಮಾಣ ಮಾಡಲಾಗಿದೆ. ಇಲ್ಲಿಯ ಗರುಡ ದೇವರು ಒಂದು ಕೈಯಲ್ಲಿ ನಾರಾಯಣ, ಇನ್ನೊಂದು ಕೈಯಲ್ಲಿ ಲಕ್ಷ್ಮೀಯನ್ನು ಹೊಂದಿರುವುದನ್ನು ಕಾಣಬಹುದು. ಈ ಗ್ರಾಮ ರಾಮಾಯಣ ಮತ್ತು ಮಹಾಭಾರತದ ಮಹಾಕಾವ್ಯಗಳ ಹಿನ್ನೆಲೆ ಹೊಂದಿರುವ…
ಜಿಲ್ಲೆಯಲ್ಲಿ ಅರಬ್ಬೀ ಸಮುದ್ರ ಬುಡಮೇಲಾಗಿದೆ. ನೀಲಿ ಸಮುದ್ರ ಈಗ ಕಪ್ಪು ಸಮುದ್ರವಾಗಿದೆ. ದಡಕ್ಕೆ ಬರುವ ಅಲೆಗಳು, ನಡು ಸಮುದ್ರದ ಚಿತ್ರಣ ಯುರೋಪಿನ ಸಮುದ್ರವನ್ನು ಹೋಲುತ್ತಿದೆ. ಮಳೆಯ ರೌದ್ರನರ್ತನದ ಬಳಿಕ ಇದೀಗ ಅರಬ್ಬೀ ಸಮುದ್ರ ಕಪ್ಪುಬಣ್ಣಕ್ಕೆ ತಿರುಗಿದೆ. ಸಾಮಾನ್ಯವಾಗಿ ಪೂರ್ಣಪ್ರಮಾಣದ ಗಾಳಿಮಳೆಯಾದಾಗ ಸಮುದ್ರ ಪ್ರಕ್ಷುಬ್ಧಗೊಳ್ಳುತ್ತದೆ. ಅಲೆಯ ಅಬ್ಬರವೂ ಜೋರಾಗಿ ಕಡಲ ನೀರು ಸಂಪೂರ್ಣ ಉಲ್ಟಾಪಲ್ಟಾವಾಗುತ್ತದೆ. ಈ ಸಂದರ್ಭದಲ್ಲಿ ಸಮುದ್ರದ ಮರಳು, ಅಲೆಯಲ್ಲಿ ಮಿಶ್ರಣಗೊಂಡಾಗ ಸಮುದ್ರ ಕಪ್ಪು ಬಣ್ಣಕ್ಕೆ ತಿರುಗಿದಂತೆ ಭಾಸವಾಗುತ್ತದೆ. ಇದು ನದಿಗಳ ನೀರು ಸಂಗಮಗೊಳ್ಳುವ ಅಳಿವೆ ಬಾಗಿಲ…
ರಾಜಮೌಳಿ ನಿರ್ದೇಶನದ ‘ಬಾಹುಬಲಿ 2’ ಚಿತ್ರ ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ಬರೆದಿದ್ದು ಈಗ ಹಳೆಯ ಮಾತು