ಸುದ್ದಿ

ಯುವತಿ ಪ್ರೀತಿಸಿದ್ದಕ್ಕೆ ಕರೆಂಟ್​ ಶಾಕ್​ ನೀಡಿ ಯುವಕನ ಮರ್ಮಾಂಗ, ಕಿಡ್ನಿಗೆ ಹಾನಿ: ಕಾಂಗ್ರೆಸ್​ ಮುಖಂಡ ಕೈವಾಡ ಆರೋಪ…!

60

ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನಿಗೆ ಕರೆಂಟ್​ ಶಾಕ್​ ನೀಡಿ, ಆತನ ಮರ್ಮಾಂಗ ಹಾಗೂ ಕಿಡ್ನಿಗೆ ಹಾನಿ ಮಾಡಿ ಕಾಂಗ್ರೆಸ್​ ಮುಖಂಡ ಅಟ್ಟಹಾಸ ಮೆರೆದಿದ್ದಾನೆ ಎಂದು ಆರೋಪಿಸಿ ದೂರು ದಾಖಲಾಗಿರುವ ಘಟನೆ ಬೆಳಗಾವಿಯಲ್ಲಿ ಸೋಮವಾರ ನಡೆದಿದೆ.

ಹಲ್ಲೆಗೊಳಗಾದ ಯುವಕನನ್ನು ಮಡಿವಾಳಿ ರಾಯಭಾಗಕರ(28) ಎಂದು ಗುರುತಿಸಲಾಗಿದ್ದು, ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ವಿನಯ ಕುಲಕರ್ಣಿ ಬೆಂಬಲಿಗನಾಗಿರುವ ಉಳವಯ್ಯ ಚಿಕ್ಕೊಪ್ಪ ಹಾಗೂ ಆತನ ಬೆಂಬಲಿಗರಿಂದ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದೆ.

ಯುವಕನನ್ನು ಬೆಳಗಾವಿಯಿಂದ ಅಪಹರಿಸಿ ಕಾಲಿಗೆ ಮೊಳೆ ಹೊಡೆದು ಕರೆಂಟ್‌ ಶಾಕ್ ನೀಡಿ, ಮರ್ಮಾಂಗವನ್ನು ಜಜ್ಜಿದ್ದಾರೆ. ಉಳವಯ್ಯ ಚಿಕ್ಕೊಪ್ಪ ಎಂಬಾತನ ಮಗಳನ್ನು ಪ್ರೀತಿಸಿದ್ದಕ್ಕೆ ಈ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದೆ.ಎರಡು ವರ್ಷಗಳ ಹಿಂದೆ ಯುವಕನ ಮನೆಯವರ ಮೇಲೆ ಹಲ್ಲೆ ನಡೆಸಿ, ಆಸ್ತಿ ಬರೆಸಿಕೊಂಡು‌ ಊರು ಬಿಡಿಸಿದ್ದರು ಎಂಬ ಆರೋಪವೂ ಉಳವಯ್ಯ ಚಿಕ್ಕೊಪ್ಪ ಮೇಲಿದೆ. ಯುವಕ ಮೂಲತಃ ಧಾರವಾಡ ಸಮೀಪದ ಗರಗ ಗ್ರಾಮದವನಾಗಿದ್ದು, ಗ್ರಾಮ ಬಿಟ್ಟು ಆತನ ಕುಟುಂಬ ಸದ್ಯ ಬೆಳಗಾವಿಯಲ್ಲಿ ನೆಲೆಸಿದೆ.

ಧಾರವಾಡ ಶಾಸಕ ಅಮೃತ ದೇಸಾಯಿ ಹಾಗೂ ಬೆಳಗಾವಿ ಶಾಸಕ ಅನಿಲ ಬೆನಕೆ ಅವರು ಬೆಳಗಾವಿಗೆ ಧಾವಿಸಿ ಬಂದು ಪೊಲೀಸ್​ ಆಯುಕ್ತರನ್ನು ಭೇಟಿ ಮಾಡಿ, ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಅಲ್ಲದೆ, ಯುವಕ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದು, ಕುಟುಂಬಕ್ಕೆ ಧೈರ್ಯ ತುಂಬಿದ್ದಾರೆ. ಈ ಸಂಬಂಧ ಬೆಳಗಾವಿಯ ಮಾಳಮಾರುತಿ ಪೋಲಿಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health

    ವಿದೇಶದಲ್ಲಿ ಬೇಡಿಕೆಯನ್ನು ಪಡೆದ ನುಗ್ಗೆ ಸೊಪ್ಪಿನ ಪುಡಿ…!

    ಅಪಾರ ಔಷಧ ಗುಣ ಹೊಂದಿರುವ ನುಗ್ಗೆ ಸೊಪ್ಪನ್ನು ನೇರವಾಗಿ ಮಾರಾಟ ಮಾಡಿದರೆ ಮಾರುಕಟ್ಟೆಯಲ್ಲಿ ಬೆಲೆ ಕಡಿಮೆ ಎಂದು ತಿಳಿದ, ತಾಲೂಕಿನ ತಾವರಗೇರಾ ಪ್ರದೇಶದ ರೈತರೊಬ್ಬರು, ಸೊಪ್ಪಿನಿಂದ ತಯಾರಿಸಿದ ಪುಡಿಯನ್ನು ವಿದೇಶಗಳಿಗೆ ರಫ್ತುಮಾಡಿ ಗಮನಸೆಳೆದಿದ್ದಾರೆ. ಮೂಲತಃ ಗಂಗಾವತಿ ತಾಲೂಕಿನವರಾದ ಬಸಯ್ಯ ಹಿರೇಮಠ, ತಾವರಗೇರಾ ಪ್ರದೇಶದಲ್ಲಿ 30ಎಕರೆ ಜಮೀನು ಖರೀದಿಸಿ, ನುಗ್ಗೆ ಬೇಸಾಯದಲ್ಲಿ ತೊಡಗಿದ್ದಾರೆ. ತೋಟಗಾರಿಕೆ ಕೃಷಿಯನ್ನು ವಿಶಿಷ್ಟ ರೀತಿಯಲ್ಲಿ ಕೈಗೊಳ್ಳಲು ಅವರಿಗೆ ಸಾಮಾಜಿಕ ಜಾಲತಾಣ ನೆರವಿಗೆ ಬಂದಿದೆ. ನುಗ್ಗೆ ಸೊಪ್ಪನ್ನು ನಿಗದಿತ ಉಷ್ಣಾಂಶದಲ್ಲಿ ಒಣಗಿಸಿ ಪೌಡರ್‌ ಆಗಿ ಪರಿವರ್ತಿಸಿದರೆ…

  • ಜ್ಯೋತಿಷ್ಯ

    ಯಶ್-ರಾಧಿಕಾ ಮುದ್ದು ಮಗಳಿಗೆ ನಾಮಕರಣ ಸಮಾರಂಬ….

    ಸ್ಯಾಂಡಲ್ ವುಡ್ ನ ರಾಕಿಂಗ್ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಮುದ್ದು ಮಗಳ ಹೆಸರಿನ ಬಗ್ಗೆ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಇತ್ತು. ಬೇಬಿ ವೈಆರ್ ಎಂದೇ ಎಲ್ಲರು ಕರೆಯುತ್ತಿದ್ದರು. ಅಭಿಮಾನಿಗಳು ಸಹ ಸಾಕಷ್ಟು ಹೆಸರುಗಿಳಿಂದ್ದ ಯಶ್-ರಾಧಿಕಾ ಮುದ್ದು ಮಗಳನ್ನು ಕರೆಯುತ್ತಿದ್ದರು. ಆದ್ರೀಗ ಬೇಬಿ ವೈಆರ್ ಗೆ ನಾಮಕರಣ ಮಾಡಲಾಗಿದೆ. ನಿನ್ನೆ(ಜೂನ್ 23) ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಯಶ್ ಮುದ್ದು ಮಗಳ ನಾಮಕರಣವನ್ನು ಸರಳವಾಗಿ ಮಾಡಲಾಗಿದೆ. ಈ ಸಮಾರಂಭಕ್ಕೆ ಕುಟುಂಬದವರು, ಆಪ್ತರಿಗೆ ಮಾತ್ರ…

  • ಸುದ್ದಿ

    ಗೌರಿ-ಗಣೇಶ ಹಬ್ಬದ ಆಚರಣೆಯೊಂದಿಗೆ ವಾಹನ ಸವಾರರಿಗೊಂದು ಬಿಗ್ ಶಾಕ್, ಇಷ್ಟಕ್ಕೂ ಏನದು, ಇದನ್ನೊಮ್ಮೆ ಓದಿ ..!

    ಗೌರಿ-ಗಣೇಶ ಹಬ್ಬದ ಆಚರಣೆಯೊಂದಿಗೆ ವಾಹನ ಸವಾರರು ಸಂಚಾರ ನಿಯಮ ಉಲ್ಲಂಘನೆಗೆ ಭಾರೀ ಪ್ರಮಾಣದಲ್ಲಿ ದಂಡ ತೆರಬೇಕಾಗುತ್ತದೆ. 2019ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗಿರುವ ದಂಡ ವನ್ನು ಭಾರೀ ಪ್ರಮಾಣದಲ್ಲಿ ಪರಿಷ್ಕರಿಸಲಾಗಿದೆ. ಸೆಪ್ಟೆಂಬರ್ 1ರಿಂದ ಪರಿಷ್ಕøತ ದಂಡದ ಪ್ರಮಾಣ ಅನುಷ್ಠಾನಕ್ಕೆ ಬರಲಿದೆ. ಮೋಟಾರು ವಾಹನ ಕಾಯ್ದೆ 1988ಕ್ಕೆ ತಿದ್ದುಪಡಿ ತಂದು ವಿವಿಧ ಸಂಚಾರಿ ನಿಯಮ ಗಳಿಗೆ ವಿಧಿಸಲಾಗುವ ದಂಡದ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. ಸಾಮಾನ್ಯ ಅಪರಾಧಕ್ಕೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು 100 ನಿಂದ…

  • ಆಧ್ಯಾತ್ಮ, ಜ್ಯೋತಿಷ್ಯ

    ಚಂಡಿಯಾಗ ಎಂದರೇನು,? ಯಾರು ಯಾವಾಗ ಮಾಡಬೇಕು,? ಇದರಿಂದಾಗುವ ಲಾಭಗಳೇನು ಗೊತ್ತಾ..??

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772 ದೇವಿ ಉಪಾಸನೆಯ ಪ್ರಮುಖ ಭಾಗವೇ ದುರ್ಗಾಸಪ್ತಶತಿ ಪಾರಾಯಣ. ದುರ್ಗಾಸಪ್ತಶತಿಯಲ್ಲಿ 700 ಶ್ಲೋಕಗಳಿವೆ. ಪ್ರತಿಯೊಂದು ಶ್ಲೋಕವನ್ನು ಮಂತ್ರರೂಪಕವಾಗಿ ಚರುವಿನ ಮೂಲಕ ಮಾಡುವ ಯಜ್ಞವೇ ಚಂಡಿಕಾಯಾಗ. ಚಂಡಿಕಾಯಾಗದ ಮೂಲಕ ಮಹಾಲಕ್ಷ್ಮಿ,…

  • ಸುದ್ದಿ

    ರಾತ್ರಿಸಮಯ ಅತಿ ಹೆಚ್ಚು ಸ್ಮಾರ್ಟ್‌ಫೋನ್ ಬಳಸುತ್ತೀರಾ?..ಈ ಶಾಕಿಂಗ್ ಸ್ಟೋರಿ ನೋಡಿ!!

    ಡ್ರಗ್ಸ್, ಆಲ್ಕೋಹಾಲ್‌ನಂತಹ ಕೆಟ್ಟ ಚಟಗಳಿಗೆ ಅಡಿಕ್ಟ್ ಆಗಿರುವಂತೆ ಸ್ಮಾರ್ಟ್‌ಫೋನ್‌ಗಳಿಗೆ ಇಂದಿನ ಜನ ಅಡಿಕ್ಟ್ ಆಗುತ್ತಿದ್ದಾರೆ ಎಂದು ಈಗಾಗಲೇ ಹಲವು ವರದಿಗಳು ಹೇಳಿವೆ. ಆದರೆ, ಇದೀಗ ಬಿಡುಗಡೆಯಾಗಿರುವ ನೂತನ ವರದಿಯೊಂದು ಸ್ಮಾರ್ಟ್‌ಫೋನ್ ಬಳಕೆಗೂ ಒಂದು ಮಿತಿ ಎನ್ನುವುದನ್ನು ಸಾರಿಸಾರಿ ಹೇಳುತ್ತಿದೆ. ಹೌದು, ಜನರಿಗೆ ಸ್ಮಾರ್ಟ್‌ಪೋನ್ ಸಿಕ್ಕನಂತರವಂತೂ ಪ್ರಪಂಚವೇ ಮರೆತುಹೋಗಿದ್ದಾರೆ. ರಾತ್ರಿಹಗಲೂ ಎನ್ನದೇ ಸ್ಮಾರ್ಟ್‌ಫೋನ್ ಬಳಕೆ ಮಾಡುತ್ತಾ ಮಾನಸಿಕ ಖಿನ್ನತೆಗೆ ತುತ್ತಾಗಿ ಆತ್ಮಹತ್ಯೆಯ ದಾರಿ ಹಿಡಿಯುವ ಪ್ರಮಾಣ ಹೆಚ್ಚಾಗಿದೆ ಎಂದು ಅಮೆರಿಕಾದ ‘ಸ್ಯಾನ್ ಡೈಗೊ ಸ್ಟೇಟ್’ ಯೂನಿವರ್ಸಿಟಿಯ ಅಧ್ಯಯನವೊಂದು ಎಚ್ಚರಿಕೆ…