ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ ‘ಡಿ ಕಂಪನಿ’ ಜಿಲ್ಲೆಯ ಕುಗ್ರಾಮವೊಂದರ ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ. ಸಕಲೇಶಪುರ ತಾಲೂಕಿನ ರಾಮೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯನ್ನು ಎರಡು ವರ್ಷಕ್ಕೆ ದತ್ತು ಪಡೆದಿರುವ ದರ್ಶನ್ ಅಭಿಮಾನಿಗಳು ಶಾಲಾ ಅಭಿವೃದ್ಧಿಗೆ ಮುಂದಾಗಿದ್ದಾರೆ. ಶಾಲೆಯ ಮಕ್ಕಳಿಗೆ ಸಮವಸ್ತ್ರಗಳು, ಪುಸ್ತಕ, ಶಾಲಾ ಕಟ್ಟಡಕ್ಕೆ ಬಣ್ಣ, ಪೀಠೋಪಕರಣ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ನೀಡುವ ವಾಗ್ದಾನವನ್ನು ದರ್ಶನ್ ಅಭಿಮಾನಿಗಳು ನೀಡಿದ್ದಾರೆ.
ಈ ನಿಟ್ಟಿನಲ್ಲಿ ಡಿ ಕಂಪನಿ ಈಗಾಗಲೇ ಶಿಕ್ಷಣ ಇಲಾಖೆಯಿಂದ ಅನುಮತಿ ಪಡೆದಿದ್ದು, ರಾಮೇನಹಳ್ಳಿ ಸರ್ಕಾರಿ ಶಾಲೆಗೆ ಮುಂದಿನ ದಿನಗಳಲ್ಲಿ ಎಲ್ಲಾ ರೀತಿಯ ಸೌಕರ್ಯಗಳನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. ಇದರಿಂದಾಗಿ ಶಾಲಾ ಮಕ್ಕಳೂ ಸೇರಿದಂತೆ ಎಲ್ಲರೂ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಶಾಲೆಯ ಶಿಕ್ಷಕಿ ಕೃಪಾ ಅವರು, ಈಗಾಗಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು ಶಾಲೆಗೆ ಭೇಟಿ ನೀಡಿ, ಅಗತ್ಯಗಳನ್ನು ಪಟ್ಟಿ ಮಾಡಿಕೊಂಡಿದ್ದಾರೆ. ಪೂರ್ವಭಾವಿಯಾಗಿ ಸೆಪ್ಟೆಂಬರ್ 22ರಂದು ದಿನಕರೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ವೇಳೆ ವಿದ್ಯಾರ್ಥಿಗಳಿಗೆ ಟೈ, ಬೆಲ್ಟ್, ಶಾಲೆಗೆ ಗ್ಲೋಬ್, ಗ್ರೀನ್ ಬೋರ್ಡ್ ಸೇರಿದಂತೆ ಅನೇಕ ಉಡುಗೊರೆ ನೀಡಿದ್ದಾರೆ ಎಂದು ತಿಳಿಸಿದರು.
ಬೇಸಿಗೆ ರಜೆಯಲ್ಲಿ ಶಾಲಾ ಕಟ್ಟಡಕ್ಕೆ ಬಣ್ಣ ಹಚ್ಚುವುದು, ಚಿತ್ರಗಳನ್ನು ಬಿಡಿಸುವುದು ಸೇರಿದಂತೆ ವಿವಿಧ ಕೆಲಸಗಳನ್ನು ಮಾಡಲು ದರ್ಶನ್ ಅಭಿಮಾನಿಗಳು ನಿರ್ಧರಿಸಿದ್ದಾರೆ. ಈ ಮೂಲಕ ನಮ್ಮ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಮಾಡಲು ಮುಂದಾಗಿದ್ದಾರೆ. ಈ ವಿಚಾರ ವಿದ್ಯಾರ್ಥಿಗಳ ಪೋಷಕರಿಗೆ ಹಾಗೂ ಗ್ರಾಮಸ್ಥರಿಗೆ ಖುಷಿಯನ್ನು ತಂದಿದೆ ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೆಲ್ಲಿಕಾಯಿ ಹೆಸರು ಕೇಳಿದ ಕೂಡಲೆ ನಿಮ್ಮ ಬಾಯಲ್ಲಿ ನೀರೂರಲು ಆರಂಭವಾಗದಿದ್ದರೆ ನಿಮ್ಮ ನಾಲಿಗೆಯಲ್ಲಿರುವ ಸ್ವಾದ ಗ್ರಂಥಿಗಳು ಸತ್ತಿವೆ ಎಂದೇ ಅರ್ಥ. ಉಪ್ಪು ಖಾರ ಮಿಶ್ರಣವನ್ನು ಹಚ್ಚಿ ಚುರಕ್ ಅಂತ ಕಚ್ಚಿದಾಗ ಲಾವಾರಸದ ಬುಗ್ಗೆಯುಕ್ಕಿಸುವ ಮತ್ತು ಹಲ್ಲನ್ನು ಚುಳ್ ಎನ್ನಿಸುವ ನಾಡಿನ ನೆಲ್ಲಿಕಾಯಿ ಒಂದು ಬಗೆಯದಾದರೆ. ಔಷಧೀಯ ಗುಣಗಳನ್ನು ತನ್ನ ಒಡಲಲ್ಲಿ ತುಂಬಿಕೊಂಡಿರುವ ಒಗರು ಒಗರು ಬೆಟ್ಟದ ನೆಲ್ಲಿಕಾಯಿ ಮಹಿಮೆ ಹೇಳಬೇಕೆಂದರೆ ಒಂದು ಥೀಸಸ್ ಬರೆಯಬೇಕಾಗುತ್ತದೆ. ಶತಮಾನಗಳಿಂದ ಬಳಸಿಕೊಂಡು ಬರಲಾಗುತ್ತಿರುವ, ಆಯುರ್ವೇದದಲ್ಲಿ ಪ್ರಧಾನ ಗಿಡ ಮೂಲಿಕೆಯಾಗಿರುವ ಬೆಟ್ಟದ ನೆಲ್ಲಿಕಾಯಿ ಅಥವಾ…
ಬೆಕ್ಕು ಮತ್ತು ನಾಯಿ ಪರಮ ಶತ್ರುಗಳು ಎಂದು ಹೇಳುತ್ತಾರೆ. ಆದರೆ ಇಲ್ಲೊಂದು ನಾಯಿ ಬೆಕ್ಕಿನ ಮರಿಗೆ ಹಾಲುಣಿಸಿ ತಾಯಿಯ ಪ್ರೀತಿಯನ್ನು ತೋರಿಸುತ್ತಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನೆಮ್ಮಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಚೆಟ್ಟಂಗಡ ಗಿಣಿ ತಿಮ್ಮಯ್ಯ ಅವರ ಮನೆಯಲ್ಲಿ ಈ ಅಪರೂಪದ ದೃಶ ಕಂಡು ಬಂದಿದೆ. ಈ ನಾಯಿ ಪ್ರತಿನಿತ್ಯ ಬೆಕ್ಕಿನಮರಿಗೆ ಹಾಲು ನೀಡುತ್ತಿದೆ. ಈ ನಾಯಿ ಬೆಕ್ಕಿನ ಮರಿಗಳಿಗೆ ಪ್ರತಿದಿನ ಹಾಲನ್ನು ಕುಡಿಸುತ್ತದೆ. ತಾಯಿಯ ಮಮತೆಯನ್ನು ಬಯಸಿ ಬರುವ ಬೆಕ್ಕಿನ ಮರಿಗೆ…
ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ಪತಿ 11ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಬಬಿತಾ ತಾಡೆ ಅವರು 1 ಕೋಟಿ ಗೆದ್ದು ಕೋಟ್ಯಧಿಪತಿಯಾಗಿದ್ದಾರೆ. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಕಿಯಾಗಿ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ಮೂಲದ ಅಮರಾವತಿಯವರಾದ ಬಬಿತಾ ತಾಡೆ ಕೆಬಿಸಿ 11ರಲ್ಲಿ ಕೋಟ್ಯಧಿಪತಿಯಾಗಿ ಹೊರಹೊಮ್ಮೆದ್ದಾರೆ. ಪ್ರತಿದಿನ ಸರಿ ಸುಮಾರು 450 ಕ್ಕೂ ಅಧಿಕ ಮಕ್ಕಳಿಗೆ ಇತರೆ ಅಡುಗೆ ಸಹಾಯಕಿಯರ ಜೊತೆ ಸೇರಿ ಊಟ ಸಿದ್ದಪಡಿಸುತ್ತಾರೆ. ಪ್ರತಿ ತಿಂಗಳು 1,500 ರೂ. ಸಂಬಳ ಪಡೆಯುತ್ತಿದ್ದ ಬಬಿತಾ…
ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಕನ್ನಡ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಹಳ್ಳ ಹಿಡಿಯುವ ಎಲ್ಲಾ ಲಕ್ಷಣಗಳು ಕಾಣಿಸ್ತಿವೆ. ಯಾಕಂದ್ರೆ ಬಿರುಸಿನ ತನಿಖೆಗೆ ಇಳಿದಿದ್ದ ಪೊಲೀಸರು ಕೂಡ ಸಾಕ್ಷಿಗಳ ಕೊರೆತೆಯಿಂದಾಗಿ ಅವಧಿಗೂ ಮುನ್ನವೇ ಬಿ ರಿಪೋರ್ಟ್ ಸಲ್ಲಿಸೋಕೆ ಮುಂದಾಗಿದ್ದಾರೆ. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಇಡೀ ಕನ್ನಡ ಚಿತ್ರರಂಗವನ್ನೇ ತಲ್ಲಣಗೊಳಿಸುವಂತೆ ಮಾಡಿತ್ತು. ಅವರು ದಕ್ಷಿಣ ಭಾರತದ ಬಹುಭಾಷಾ ನಟ ಅರ್ಜುನ್…
ಯಶಸ್ಸಿಗೆ ಯಾವುದೇ ಅಡ್ಡದಾರಿಗಳು ಇರುವುದಿಲ್ಲ. ಆದರೆ ಕೆಲ ಹವ್ಯಾಸಗಳನ್ನು ಅನುಸರಿಸಿದರೆ ಅವು ಸ್ವಯಂ ನಿರ್ಮಿತಕೋಟ್ಯಾಧಿಪತಿ ಆಗುವಂತೆ ಉತ್ತೇಜನ ಹಾಗೂ ಪ್ರೇರೆಪಣೆ ನೀಡಬಲ್ಲವು ಎಂಬುದರಲ್ಲಿ ಸಂಶಯವಿಲ್ಲ. ಟಾಟಾ, ಅಂಬಾನಿ, ನಾರಾಯಣಮೂರ್ತಿ, ಬಿಲ್ ಗೇಟ್ಸ್ ಹೀಗೆ ಹಲವರ ಜೀವನಶೈಲಿ ನಮ್ಮನ್ನು ಸ್ಪೂರ್ತಿ ನೀಡಬಲ್ಲದು.
ಇಂದು ಗುರುವಾರ 08/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…