ಸುದ್ದಿ

D K ಶಿವಕುಮಾರ್ ಕಾಕಿ ವಶಕ್ಕೆ:ಇತಿಹಾಸದಲ್ಲಿ ಇಂದು ಕಪ್ಪು ದಿನ….!

69

ಬಿಜೆಪಿಯವರು ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಡಿ.ಕೆ.ಶಿವಕುಮಾರ್ ಸೇರಿದಂತೆ ಮೂವರು ಶಾಸಕರನ್ನು ವಶಕ್ಕೆ ಪಡೆದಿರುವುದು ಬಹುಶಃ ಇತಿಹಾಸದಲ್ಲಿ ಇಂದು ಕಪ್ಪು ದಿನ ಅಂತ ಭಾವಿಸಿದ್ದೇನೆ ಎಂದು ಸುರೇಶ್ ಬೇಸರದಲ್ಲಿ ಹೇಳಿದ್ದಾರೆ.ಶಿವಕುಮಾರ್ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಭೇಟಿಯಾಗಲು ಹೋಗಿದ್ದರು. ಅವರು ಯಾರನ್ನು ಜೊತೆಯಲ್ಲಿ ಕರೆದುಕೊಂಡು ಹೋಗಿಲ್ಲ. ಕೆಲ ಶಾಸಕರು ಮಾತ್ರ ಜೊತೆಯಲ್ಲಿ ಹೋಗಿದ್ದರು.

ಆದರೆ ಅನಾವಶ್ಯಕವಾಗಿ ಇಂದು ಮಹಾರಾಷ್ಟ್ರ ಬಿಜೆಪಿ ಸರ್ಕಾರ ಕರ್ನಾಟಕದ ಶಾಸಕರನ್ನು ಭೇಟಿ ಮಾಡಲು ಅವಕಾಶ ಮಾಡಿಕೊಡುತ್ತಿಲ್ಲ ಎಂದರೆ ಇದರ ಹಿಂದೆ ಸಂಪೂರ್ಣ ಬಿಜೆಪಿ ನಾಯಕರ ಕೈವಾಡವಿದೆ ಎಂದು ದೂರಿದರು.ನಾವು ಹೋಟೆಲ್‍ನಲ್ಲಿ ರೂಮ್ ಬುಕ್ ಮಾಡಿದ್ವಿ. ಆದರೆ ಇದ್ದಕ್ಕಿದ್ದಂತೆ ರೂಮ್ ಕ್ಯಾನ್ಸಲ್ ಮಾಡಿದ್ದಾರೆ. ಇತ್ತ ನಮ್ಮ ಶಾಸಕರನ್ನು ಭೇಟಿ ಮಾಡಲು ಮಹಾರಾಷ್ಟ್ರ ಪೊಲೀಸರು ಅವಕಾಶ ಮಾಡಿಕೊಡುತ್ತಿಲ್ಲ. ಹೀಗಾಗಿ ಇದರ ಹಿಂದೆ ಬಿಜೆಪಿ ನಾಯಕರಿದ್ದಾರೆ.

ಡಿ.ಕೆ.ಶಿವಕುಮಾರ್ ಅವರನ್ನು ಯಾವುದಾದರೂ ಠಾಣೆಗೆ ಅಥವಾ ಜೈಲಿಗೆ ಕರೆದುಕೊಂಡು ಹೋಗಿರುತ್ತಾರೆ. ಏನ್ ಮಾಡೋಕೆ ಆಗುತ್ತೆ, ಎಲ್ಲವನ್ನು ಅನುಭವಿಸಬೇಕು. ಬಿಜೆಪಿ ಅವರು ಇನ್ನೂ ಏನೇನು ಮಾಡುತ್ತಾರೆ ಎಂದು ಕಾದು ನೋಡಬೇಕಿದೆ. ಇದೆಲ್ಲದಕ್ಕೂ ಬಿಜೆಪಿ ನಾಯಕರ ಅಧಿಕಾರದ ದಾಹವೇ ಕಾರಣ ಎಂದು ಸುರೇಶ್ ಆರೋಪಿಸಿದರು.ನಾನು ಫೋನ್ ಮಾಡಿದಾಗ ಈ ರೀತಿ ಕರೆದುಕೊಂಡು ಹೋಗುತ್ತಿದ್ದಾರೆ ಎಂದು ಹೇಳಿದರು ಅಷ್ಟೇ.

ಹೀಗಾಗಿ ಮಳೆ, ಗಾಳಿ, ಚಳಿ, ಬಿಸಿಲು ಏನೇ ಆದರೂ ಎಲ್ಲದಕ್ಕೂ ಸಿದ್ಧವಾಗಿದ್ದೇವೆ ಎಂದು ಕೋಪದಿಂದ ಸುರೇಶ್ ಹೇಳಿದರು.ಇದು ಪಕ್ಷದ ಅಸ್ಥಿತ್ವದ ಪ್ರಶ್ನೆ. ಮುಂಬೈನಲ್ಲಿರುವ ಅತೃಪ್ತ ಶಾಸಕರು ಕಾಂಗ್ರೆಸ್ ಪಕ್ಷವನ್ನು ಕಷ್ಟಪಟ್ಟು ಕಟ್ಟಿದ್ದಾರೆ. ಹೀಗಾಗಿ ಅಂತಹವರು ಈ ರೀತಿ ರಾಜೀನಾಮೆ ನೀಡಿದ್ದಾರೆ ಎಂದರೆ ನಂಬಲು ಸಾಧ್ಯವಾಗುತ್ತಿಲ್ಲ. ಅವರು ಒತ್ತಡದಲ್ಲಿ ಮಾತನಾಡುತ್ತಿದ್ದಾರೆ. ಅವರು ಕೂಡ ನಾವು ಕಾಂಗ್ರೆಸ್ ಪಕ್ಷದಲ್ಲಿ ಇದ್ದೇವೆ ಎಂದು ಸ್ಪಷ್ಟ ಪಡಿಸಿದ್ದಾರೆ. ಹಾಗಾಗಿ ಕಾಂಗ್ರೆಸ್‍ನವರು ಹೋಗಿ ಮಾತನಾಡುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನೆ ಮಾಡಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ಇನ್ನು ಮುಂದೆ ಸಮುದ್ರದಾಳದಲ್ಲಿ ಕೂಡ ಫೋನ್ ಮಾಡಬಹುದು!!!

    ಸರ್ಕಾರಿ ಒಡೆತನದ ಬಿಎಸ್ಎನ್‌ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ಆರಂಭಿಸಲಿದೆ. ಬುಧವಾರ ಮೇ.25 ರಿಂದ ಈ ಸೇವೆಗೆ ಚಾಲನೆ ದೊರೆಯಲಿದ್ದು, ನೇರವಾಗಿ ಉಪಗ್ರಹಗಳ ಸಹಾಯದಿಂದ ಈ ಸೇವೆಯನ್ನು ಬಿಎಸ್ಎನ್ಎಲ್ ಓದಗಿಸಲಿದೆ ಎನ್ನಲಾಗಿದೆ.

  • ದೇವರು-ಧರ್ಮ

    ಶಾಸ್ತ್ರಗಳ ಪ್ರಕಾರ ಒಂದು ಸಣ್ಣ ಅಡಿಕೆಯಿಂದ ನೀವು ಸುಲಭವಾಗಿ ಶ್ರೀಮಂತರಾಗಬಹುದು..!ತಿಳಿಯಲು ಈ ಲೇಖನ ಈ ಲೇಖನ ಓದಿ..

    ಪೂಜೆಯಲ್ಲಿ ದೀಪ, ಧೂಪದ ಜೊತೆ ಅಡಿಕೆಗೂ ಮಹತ್ವದ ಸ್ಥಾನವಿದೆ. ಸಣ್ಣ ಅಡಿಕೆ ದೊಡ್ಡ ಖುಷಿಗೆ ಕಾರಣವಾಗಬಹುದು. ವಾಸ್ತು ಶಾಸ್ತ್ರದ ಪ್ರಕಾರ ಪೂಜೆ ಮಾಡಿದ್ದ ಅಡಿಕೆ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ. ಸುಖ-ಶಾಂತಿ ಜೊತೆಗೆ ಆರ್ಥಿಕ ಸಮಸ್ಯೆಗೆ ಪರಿಹಾರ ನೀಡುತ್ತದೆ.

  • ಸುದ್ದಿ

    ತಮಿಳುನಾಡು ವಿರುದ್ಧ 1 ರನ್ ರೋಚಕ ಗೆಲುವು ಸಾಧಿಸಿ. ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮನೀಶ್ ಪಾಂಡೆ.

    ಮನೀಶ್ ಪಾಂಡೆ ಹಾಗೂ ಆಶ್ರಿತಾ ಸುಮಾರು ದಿನಗಳಿಂದ ಡೇಟ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಆದರೆ ಈಗ ಇವರಿಬ್ಬರು ಮದುವೆಯಾಗುವ ಮೂಲಕ ಗಾಸಿಪ್‍ಗಳಿಗೆ ತೆರೆ ಎಳೆದಿದ್ದಾರೆ. ಹೌದು ಈಗ ಭಾರತ ತಂಡದ ಕ್ರಿಕೆಟ್ ಆಟಗಾರ ಮನೀಶ್ ಪಾಂಡೆ ಅವರು ತುಳು ಹಾಗೂ ದಕ್ಷಿಣ ಭಾರತದ ನಟಿಯಾಗಿರುವ ನಟಿ ಆಶ್ರಿತಾ ಶೆಟ್ಟಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಐಪಿಎಲ್‍ನಲ್ಲಿ ಮನೀಶ್ ಹೈದರಾಬಾದ್ ತಂಡದ ಪರವಾಗಿ ಆಡುತ್ತಿದ್ದಾರೆ. ಹಾಗಾಗಿ ಮನೀಶ್ ಮದುವೆಯ ಫೋಟೋವನ್ನು ಮೊದಲು ಸನ್‍ರೈಸರ್ಸ್ ಹೈದರಾಬಾದ್ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ….

  • ಸಿನಿಮಾ, ಸುದ್ದಿ

    ಡಾ।ರಾಜಕುಮಾರ್ ಜೊತೆ ನಟಿಸಿದ ಸರಿತಾ ದುಬೈಗೆ ಹೋಗಲು ಕಾರಣವೇನು? ಅವರ ಜೀವನದಲ್ಲಿ ಅಂಥಾದ್ದು ಏನಾಗಿತ್ತು?

    ಸಿನಿ ಲೋಕದಲ್ಲಿ ನೋಡಲು ಸುಂದರವಾಗಿದ್ದರೆ ಗ್ಲಾಮರಸ್ ಆಗಿದ್ದರೆ ಮಾತ್ರ ಬೆಳೆಯಲು ಸಾದ್ಯ! ಆಗ ಮಾತ್ರ ಪ್ರೇಕ್ಷಕರು ಒಪ್ಪಿಕೊಳ್ಳುತ್ತಾರೆ ಎಂದು ಮಾತನಾಡಿಕೊಳ್ಳುವ ಸಮಯದಲ್ಲಿ, ಕಪ್ಪಗಿದ್ದರೆ ವ್ಯಕ್ತಿಗೆ ಅದು ಮೈನಸ್ ಅಲ್ಲ ಪ್ಲಸ್ ಎಂದು ತೋರಿಸಿಕೊಟ್ಟವರು ನಟಿ ಸರಿತಾ.! ಆಕೆಯ ಕಣ್ಣುಗಳನ್ನು ನೋಡಿ ಸೋತವರೆಷ್ಟೋ, ಅವರ ಅಭಿನಯ ಮತ್ತು ವ್ಯಕ್ತಿತ್ವವವನ್ನು ನೋಡಿ ಈ ರೀತಿಯಾದ ಹುಡುಗಿ ನಮಗೆ ಸಿಗಬೇಕು ಎಂದು ಅದೆಷ್ಟೋ ಜನ ಕನಸು ಕಂಡಿದ್ದರು. ಕನ್ನಡ, ತೆಲುಗು, ತಮಿಳು, ಮಲೆಯಾಳ ಮುಚ್ಚಿಗೆ ಮರಗಳಲ್ಲಿ ವಿಜೃಂಭಿಸಿದ ಅವರಿಗೆ ವೈವಾಹಿಕ ಜೀವನ…

  • ಜ್ಯೋತಿಷ್ಯ

    ಆಂಜನೇಯನ ಕೃಪೆಯಿಂದ ನಿಮ್ಮ ದಿನ‌ ಭವಿಷ್ಯ ಶನಿವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಸುದ್ದಿ

    ಈ ಜಾಗದಲ್ಲಿ ನಿಜಕ್ಕೂ ಸಿಗ್ತಾ 3350 ಟನ್ ಚಿನ್ನ, ಸತ್ಯ ಬಾಯ್ಬಿಟ್ಟ ವಿಜ್ಞಾನಿಗಳು.

    ಪ್ರತಿಯೊಂದು ದೇಶವೂ ಕೂಡ ತನ್ನ ದೇಶದ ಭೌಗೋಳಿಕ ಸಂಪತ್ತನ್ನು ಹುಡುಕುವ ಪ್ರಯತ್ನವನ್ನು ಯಾವಾಗಲೂ ಕೂಡ ಮಾಡುತ್ತಲೇ ಇರುತ್ತದೆ. ಅದೇ ರೀತಿಯಲ್ಲಿ ಭಾರತದಲ್ಲಿ ಕೂಡ ಅದೆಷ್ಟೋ ಭಾಗಗಲ್ಲಿ ಚಿನ್ನದ ಗಣಿಯನ್ನು ಹುಡುಕುವ ಅದೆಷ್ಟೋ ಪ್ರಯತ್ನಗಳು ನಡೆದಿದ್ದವು. ಆದರೆ ಯಾವುದು ಕೂಡ ಅಷ್ಟೊಂದು ದೊಡ್ಡ ಮಟ್ಟದ ಯಶಸ್ಸು ನೀಡಿರಲಿಲ್ಲ. ಆದರೆ ಸದ್ಯಕ್ಕೆ ಈಗ ಭಾರತದಲ್ಲಿ ಇರುವ ಒಟ್ಟಾರೆ ಚಿನ್ನದ ನಿಕ್ಷೇಪಕ್ಕಿಂತ ಐದು ಪಟ್ಟು ಹೆಚ್ಚು ಚಿನ್ನದ ಗಣಿ ಪತ್ತೆಯಾಗಿದೆ ಎನ್ನುವ ಸುದ್ದಿಯೊಂದು ಇದ್ದಕಿದ್ದಂತೆ ದೇಶದ ಎಲ್ಲ ಮಾಧ್ಯಮಗಳು ಈ ಸುದ್ದಿ…