ಸುದ್ದಿ

D K ಶಿವಕುಮಾರ್ ಕಾಕಿ ವಶಕ್ಕೆ:ಇತಿಹಾಸದಲ್ಲಿ ಇಂದು ಕಪ್ಪು ದಿನ….!

84

ಬಿಜೆಪಿಯವರು ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಡಿ.ಕೆ.ಶಿವಕುಮಾರ್ ಸೇರಿದಂತೆ ಮೂವರು ಶಾಸಕರನ್ನು ವಶಕ್ಕೆ ಪಡೆದಿರುವುದು ಬಹುಶಃ ಇತಿಹಾಸದಲ್ಲಿ ಇಂದು ಕಪ್ಪು ದಿನ ಅಂತ ಭಾವಿಸಿದ್ದೇನೆ ಎಂದು ಸುರೇಶ್ ಬೇಸರದಲ್ಲಿ ಹೇಳಿದ್ದಾರೆ.ಶಿವಕುಮಾರ್ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಭೇಟಿಯಾಗಲು ಹೋಗಿದ್ದರು. ಅವರು ಯಾರನ್ನು ಜೊತೆಯಲ್ಲಿ ಕರೆದುಕೊಂಡು ಹೋಗಿಲ್ಲ. ಕೆಲ ಶಾಸಕರು ಮಾತ್ರ ಜೊತೆಯಲ್ಲಿ ಹೋಗಿದ್ದರು.

ಆದರೆ ಅನಾವಶ್ಯಕವಾಗಿ ಇಂದು ಮಹಾರಾಷ್ಟ್ರ ಬಿಜೆಪಿ ಸರ್ಕಾರ ಕರ್ನಾಟಕದ ಶಾಸಕರನ್ನು ಭೇಟಿ ಮಾಡಲು ಅವಕಾಶ ಮಾಡಿಕೊಡುತ್ತಿಲ್ಲ ಎಂದರೆ ಇದರ ಹಿಂದೆ ಸಂಪೂರ್ಣ ಬಿಜೆಪಿ ನಾಯಕರ ಕೈವಾಡವಿದೆ ಎಂದು ದೂರಿದರು.ನಾವು ಹೋಟೆಲ್‍ನಲ್ಲಿ ರೂಮ್ ಬುಕ್ ಮಾಡಿದ್ವಿ. ಆದರೆ ಇದ್ದಕ್ಕಿದ್ದಂತೆ ರೂಮ್ ಕ್ಯಾನ್ಸಲ್ ಮಾಡಿದ್ದಾರೆ. ಇತ್ತ ನಮ್ಮ ಶಾಸಕರನ್ನು ಭೇಟಿ ಮಾಡಲು ಮಹಾರಾಷ್ಟ್ರ ಪೊಲೀಸರು ಅವಕಾಶ ಮಾಡಿಕೊಡುತ್ತಿಲ್ಲ. ಹೀಗಾಗಿ ಇದರ ಹಿಂದೆ ಬಿಜೆಪಿ ನಾಯಕರಿದ್ದಾರೆ.

ಡಿ.ಕೆ.ಶಿವಕುಮಾರ್ ಅವರನ್ನು ಯಾವುದಾದರೂ ಠಾಣೆಗೆ ಅಥವಾ ಜೈಲಿಗೆ ಕರೆದುಕೊಂಡು ಹೋಗಿರುತ್ತಾರೆ. ಏನ್ ಮಾಡೋಕೆ ಆಗುತ್ತೆ, ಎಲ್ಲವನ್ನು ಅನುಭವಿಸಬೇಕು. ಬಿಜೆಪಿ ಅವರು ಇನ್ನೂ ಏನೇನು ಮಾಡುತ್ತಾರೆ ಎಂದು ಕಾದು ನೋಡಬೇಕಿದೆ. ಇದೆಲ್ಲದಕ್ಕೂ ಬಿಜೆಪಿ ನಾಯಕರ ಅಧಿಕಾರದ ದಾಹವೇ ಕಾರಣ ಎಂದು ಸುರೇಶ್ ಆರೋಪಿಸಿದರು.ನಾನು ಫೋನ್ ಮಾಡಿದಾಗ ಈ ರೀತಿ ಕರೆದುಕೊಂಡು ಹೋಗುತ್ತಿದ್ದಾರೆ ಎಂದು ಹೇಳಿದರು ಅಷ್ಟೇ.

ಹೀಗಾಗಿ ಮಳೆ, ಗಾಳಿ, ಚಳಿ, ಬಿಸಿಲು ಏನೇ ಆದರೂ ಎಲ್ಲದಕ್ಕೂ ಸಿದ್ಧವಾಗಿದ್ದೇವೆ ಎಂದು ಕೋಪದಿಂದ ಸುರೇಶ್ ಹೇಳಿದರು.ಇದು ಪಕ್ಷದ ಅಸ್ಥಿತ್ವದ ಪ್ರಶ್ನೆ. ಮುಂಬೈನಲ್ಲಿರುವ ಅತೃಪ್ತ ಶಾಸಕರು ಕಾಂಗ್ರೆಸ್ ಪಕ್ಷವನ್ನು ಕಷ್ಟಪಟ್ಟು ಕಟ್ಟಿದ್ದಾರೆ. ಹೀಗಾಗಿ ಅಂತಹವರು ಈ ರೀತಿ ರಾಜೀನಾಮೆ ನೀಡಿದ್ದಾರೆ ಎಂದರೆ ನಂಬಲು ಸಾಧ್ಯವಾಗುತ್ತಿಲ್ಲ. ಅವರು ಒತ್ತಡದಲ್ಲಿ ಮಾತನಾಡುತ್ತಿದ್ದಾರೆ. ಅವರು ಕೂಡ ನಾವು ಕಾಂಗ್ರೆಸ್ ಪಕ್ಷದಲ್ಲಿ ಇದ್ದೇವೆ ಎಂದು ಸ್ಪಷ್ಟ ಪಡಿಸಿದ್ದಾರೆ. ಹಾಗಾಗಿ ಕಾಂಗ್ರೆಸ್‍ನವರು ಹೋಗಿ ಮಾತನಾಡುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನೆ ಮಾಡಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಮಾಲೂರು ನಾಗರಸಭೆಯಿಂದ ಪ್ಲಾಸ್ಟಿಕ್ ನಿಷೇಧ ಉಲ್ಲಂಘನೆಗೆ ದಂಡ

    ಮಾಲೂರು: ಪರಿಸರ ಸಂರಕ್ಷಣೆಗಾಗಿ ಸರ್ಕಾರದಿಂದ ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ Malur ನಗರದ ನಾಗರಸಭೆ ಅಧಿಕಾರಿಗಳು ವ್ಯಾಪಕ ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಹಲವು ಅಂಗಡಿಗಳು ನಿಷೇಧಿತ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‌ಗಳನ್ನು ಬಳಸುತ್ತಿರುವುದು ಪತ್ತೆಯಾಗಿದೆ. ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ನಾಗರಸಭೆ ಅಧಿಕಾರಿಗಳು ತಕ್ಷಣ ದಂಡ ವಿಧಿಸಿದ್ದಾರೆ. ಹಲವು ಅಂಗಡಿಗಳಿಗೆ ನೋಟಿಸ್ ನೀಡಲಾಗಿದ್ದು, ಸಾವಿರಾರು ರೂಪಾಯಿಗಳ ದಂಡ ಸಂಗ್ರಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಗರಸಭೆ ಅಧಿಕಾರಿಗಳು ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ್ದು, ಮುಂದಿನ ದಿನಗಳಲ್ಲಿ…

  • ಸುದ್ದಿ

    ದಯಮಾಡಿ ಬಿಟ್ಟುಬಿಡಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ಕೇಳಿಕೊಂಡ ನಟ ಪ್ರಕಾಶ್ ರೈ ಪತ್ನಿ..!

    ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಸ್ವತಂತ್ರ್ಯ ಅಭ್ಯರ್ಥಿ, ಖಳನಟ ಪ್ರಕಾಶ್ ರೈ ಅವರ ಪತ್ನಿ ದಯಮಾಡಿ ಬಿಟ್ಟುಬಿಡಿ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಟ-ನಟಿಯರನ್ನು ಬಳಸಿಕೊಂಡು ಪ್ರಚಾರ ಮಾಡುತ್ತಿರುವ ಬಗ್ಗೆ ಪ್ರಕಾಶ್ ರೈ ಪತ್ನಿ ಪೋನಿ ಟ್ವೀಟ್ ಮಾಡಿದ್ದಾರೆ. ಬಾಲಿವುಡ್ ಆಕ್ಷನ್ ಕಿಂಗ್ ಅಕ್ಷಯ್ ಕುಮಾರ್ ಕೆಲ ದಿನಗಳ ಹಿಂದೆ ಪ್ರಧಾನಿ ಮೋದಿಯೊಂದಿಗೆ ಮಾಡಿದ ರಾಜಕಿಯೇತ್ತರ ಸಂದರ್ಶನ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಪೋನಿ ಪ್ರಧಾನಿಗೆ ಟ್ವೀಟ್…

  • ಸುದ್ದಿ

    ವಯಸ್ಕರಿಗೆ ಬಿಳಿ ಕೂದಲಿನ ಕಾಟವೇ ಆಗಾದರೆ ಈ ನ್ಯಾಚುರಲ್ ರೆಮಿಡಿ ಒಮ್ಮೆ ಟ್ರೈ ಮಾಡಿ ನೋಡಿ,.!

    ಬೆಳ್ಳಗಿನ ಕೂದಲು ಇರುವ ವ್ಯಕ್ತಿಗಳನ್ನು ಕಂಡರೆ ನಾವು ಅಜ್ಜಿ-ತಾತ ಎಂದು ಸಂಭೋಧಿಸುತ್ತೇವೆ. ಅಂದರೆ ಈ ನರೆ (ಬೆಳ್ಳಗಿನ) ಕೂದಲು ಸಂಭವಿಸುವುದು 50ರ ಮೇಲೆ ಎಂದಾಯಿತು. ಆದರೆ ಇತ್ತೀಚಿನ ದಿನಗಳಲ್ಲಿ ಈ ನರೆ ಕೂದಲು 12 ರಿಂದ 20ರ ವಯಸ್ಸಿನಲ್ಲೇ ಕಂಡುಬರುತ್ತಿರುವುದು ಆತಂಕಕಾರಿ ವಿಚಾರ. ಆದರೆ ನರೆ ಕೂದಲು ಇಷ್ಟು ಚಿಕ್ಕ ವಯಸ್ಸಿಗೆ ಕಾಣಿಸಿಕೊಳ್ಳಲು ಕಾರಣವೇನು? ಸಮಸ್ಯೆಗೆ ಪರಿಹಾರ ಅಥವಾ ಮನೆಮದ್ದು ಏನೆಂಬುದನ್ನು ಇಲ್ಲಿ ತಿಳಿಸಲಾಗಿದೆ ನೋಡಿ. ಬಿಳಿ ಕೂದಲಿಗೆ ಕಾರಣವೇನು? : *ಆನುವಂಶಿಕತೆ, *ವಿಟಿಲಿಗೊ, ಟ್ಯೂಬೆರಸ್ ಸ್ಕ್ಲೆರೋಸಿಸ್,…

  • ಸುದ್ದಿ, ಸ್ಪೂರ್ತಿ

    3 ಕೋಟಿ ರೂಪಾಯಿ ಬೆಲೆ ಬಾಳುವ ಕಾರನ್ನ ಸಮಾಧಿ ಮಾಡಿದ, ಕಾರಣ ಮಾತ್ರ ಶಾಕಿಂಗ್.

    ಭೂಮಿಯ ಮೇಲೆ ಇರುವ ಅತ್ಯಮೂಲ್ಯ ಜೀವ ಅಂದರೆ ಅದೂ ಮಾನವ, ಇನ್ನು ಮನುಷ್ಯ ಸತ್ತು ಹೋದಾಗ ಆತನನ್ನ ಮಣ್ಣಿನಲ್ಲಿ ಸಮಾಧಿ ಮಾಡುತ್ತಾರೆ ಅಥವಾ ಆತನನ್ನ ಸುಟ್ಟು ಹಾಕುತ್ತಾರೆ. ಸ್ನೇಹಿತರೆ ಇಲ್ಲೊಬ್ಬ ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ಬೆಲೆ ಬಾಳುವ ಐಷಾರಾಮಿ ಕರಣ ಮಣ್ಣಿನಲ್ಲೂ ಹೂತು ಮುಂದಾಗಿದ್ದಾನೆ, ಹಾಗಾದರೆ ಆ ಕಾರನ್ನ ಹೂತು ಹಾಕಲು ನಿರ್ಧರಿಸಲು ಕಾರಣ ಏನು ಮತ್ತು ಅದನ್ನ ನೋಡಿದ ಅಲ್ಲಿನ ಜನರು ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…

  • ಸುದ್ದಿ

    170 ಕ್ಕೂ ಹೆಚ್ಚು ಭತ್ತದ ತಳಿಗಳ ಜೋಪಾನ ಮಾಡಿದ್ದ ಜಯರಾಮನ್ …!

    ಭಾರತದ ಕೃಷಿ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿದ್ದ, ನೂರಾರು ಭತ್ತದ ತಳಿಗಳ ಪುನಶ್ಚೇತನಕ್ಕೆ ಕಾರಣರಾಗಿದ್ದ ತಮಿಳ್ನಾಡಿನ ಕೆ ಆರ್ ಜಯರಾಮನ್ ನಿಧನರಾಗಿದ್ದಾರೆ. ಅವರು ಕ್ಯಾನ್ಸರಿನಿಂದ ಬಳಲುತ್ತಿದ್ದರು.ನೆಲ್ (ಭತ್ತವನ್ನು ತಮಿಳಿನಲ್ಲಿ ಹೀಗೇ ಕರೆಯುತ್ತಾರೆ) ಎಂದೇ ಹೆಚ್ಚು ಪರಿಚಿತರಾಗಿದ್ದ ಜಯರಾಮನ್, 170 ಕ್ಕಿಂತಲೂ ಹೆಚ್ಚು ಸ್ಥಳೀಯ ಭತ್ತದ ವೈವಿಧ್ಯಗಳನ್ನು ಪುನಶ್ಚೇತನಗೊಳಿಸಿದ್ದುರ. ಮಾತ್ರವಲ್ಲ, ತಮಿಳುನಾಡಿನಲ್ಲಿ ಸಾವಯವ ಕೃಷಿಗೆ ಉತ್ತೇಜನ ನೀಡಿದ್ದರು. ತಮಿಳ್ನಾಡಿನಲ್ಲಿ ‘ಸೇವ್ ಅವರ್ ರೈಸ್’ ಅಭಿಯಾನದ ಸಾರಥಿಯಾಗಿದ್ದ ಜಯರಾಮನ್, ಇದಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಹಲವಾರು ಪ್ರಶಸ್ತಿಗಳಿಗೆ ಪಾತ್ರರಾಗಿದ್ದರು.ಬೀಜಗಳ ಸಂರಕ್ಷಣೆ,…

  • ಸುದ್ದಿ

    ‘ಪ್ರವಾಸೋದ್ಯಮ ಇಲಾಖೆಯಲ್ಲಿ 243 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ’…!

    ಪ್ರವಾಸೋದ್ಯಮ ಇಲಾಖೆಯೂ 40 ಪ್ರಮುಖ ಪ್ರವಾಸಿ ವರ್ತುಲ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ಅವರು ಗುರುವಾರ ಹೇಳಿದರು. ವಿಕಾಸಸೌಧದಲ್ಲಿಂದು ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಪ್ರವಾಸೋದ್ಯಮಕ್ಕೆ ವಿಫಲ ಅವಕಾಶವಿದೆ, ಪ್ರಧಾನ ಮಂತ್ರಿಗಳು ದೇಶವನ್ನು ಟೂರಿಸ್ಟ್ ಹಬ್ ಮಾಡಲು ಉಲ್ಲೇಖ ಮಾಡಿದ್ದಾರೆ ಹೀಗಾಗಿ ದೇಶದ್ಯಂತ ಪ್ರಮುಖವಾಗಿ 17 ಸ್ಥಳಗಳನ್ನು ಗುರುತಿಸಿದ್ದಾರೆ ಅದರಲ್ಲಿ ಕರ್ನಾಟಕದ ಹಂಪಿ ಕೂಡ ಸೇರಿದೆ ಎಂದು ಅವರು ಮಾಹಿತಿ ನೀಡಿದರು. ಇದೇ ವಿಷಯಕ್ಕೆ…