ಸುದ್ದಿ

ಹುಟ್ಟುತ್ತಲೇ ಅಪ್ಪನನ್ನು ನೋಡಿ ಸ್ಮೈಲ್ ಮಾಡಿದ ಮಗು. ಅದರಲ್ಲೂ ಒಂದು ವಿಶೇಷ ಇದೆ.

130

ಮನೆಗೆ ಪುಟ್ಟ ಕಂದ ಬರುತ್ತಿದೆ ಎಂದರೆ ಅದಕ್ಕಿಂತ ಸಂತೋಷದ ಕ್ಷಣ ಬೇರೆ ಯಾವುದಿದೆ ಹೇಳಿ..? ಮಗು ಹುಟ್ಟಿದಾಗಿನಿಂದ ಅದರ ಆಟ, ಪಾಠ, ನಗು, ಅಳು, ಚೇಷ್ಟೆ ಎಲ್ಲವನ್ನೂ ಕಣ್ತುಂಬಿಕೊಳ್ಳುವುದೇ ಚೆಂದ. 
ಅದರಲ್ಲೂ ಆಗ ತಾನೆ ಹುಟ್ಟಿದ ಮಗುವೊಂದು ತನ್ನ ಅಪ್ಪನನ್ನು ನೋಡಿ ಸ್ಮೈಲ್ ಮಾಡಿದರೆ….ಆ ಅನುಭವ ಹೇಗಿರುತ್ತದೆ ನೀವೇ ಊಹಿಸಿಕೊಳ್ಳಿ. ಅಂದಹಾಗೆ ಈ ಫೋಟೋ ಬ್ರೆಜಿಲ್‍ನ ನೌಕಾನೆಲೆಯಲ್ಲಿ ಕೆಲಸ ಮಾಡುತ್ತಿರುವ ಫ್ಲಾವಿಯೋ ಎಂಬ ಸೈನಿಕನ ಪುಟ್ಟ ಕುಟುಂಬದ್ದು. ಫ್ಲಾವಿಯೋ ಪತ್ನಿ ತಾರ್ಸಿಲಾ ಕಳೆದ ಆಗಸ್ಟ್‍ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಹುಟ್ಟುತ್ತಲೇ ಫ್ಲಾವಿಯೋ ಆಪರೇಷನ್ ಥಿಯೇಟರ್‍ಗೆ ಬಂದು ಆ ಮುದ್ದು ಕಂದನನ್ನು ಮಾತನಾಡಿಸಿದ್ದಾರೆ. ಅಪ್ಪನ ಧ್ವನಿ ಕೇಳುತ್ತಿದ್ದಂತೆ ಮಗು ಆಂಟೊನೆಲ್ಲಾ ಆತನನ್ನು ನೋಡಿ ಸ್ಮೈಲ್ ಮಾಡಿದೆ. ಆ ಕ್ಷಣವನ್ನು ಅಲ್ಲೇ ಇದ್ದ ವೈದ್ಯರು ಸೆರೆಹಿಡಿದಿದ್ದಾರೆ.

ಆಗ ತಾನೆ ಹುಟ್ಟಿದ ಮಕ್ಕಳು ಈ ರೀತಿ ನಗುವುದು ಅಪರೂಪ. ಆದರೆ ಆಂಟೊನೆಲ್ಲಾ ಅಪ್ಪನನ್ನು ನೋಡಿ ನಗೆ ಬೀರಿದ ಹಿಂದೆ ಒಂದು ವಿಶೇಷವಿದೆ. ತಾರ್ಸಿಲಾ ಗರ್ಭಿಣಿಯಾದಾಗಿನಿಂದ ಪತಿ ಫ್ಲಾವಿಯೋ ಆಕೆ ಹೊಟ್ಟೆ ಬಳಿ ಬಂದು ಮಗುವನ್ನು ಮಾತನಾಡಿಸುತ್ತಿದ್ದರಂತೆ. ಗಂಟೆಗಂಟೆಗೊಮ್ಮೆ ಗುಡ್ ಮಾರ್ನಿಂಗ್, ಗುಡ್ ಆಫ್ಟರ್ ನೂನ್, ಗುಡ್ ಈವ್ನಿಂಗ್, ಐ ಲವ್ ಯೂ, ಹೀಗೆ ಮಗುವಿನ ಬಳಿ ಮಾತನಾಡುತ್ತಿದ್ದರಂತೆ. ಆಶ್ಚರ್ಯ ಎಂದರೆ ಫ್ಲಾವಿಯೋ ಹಾಗೆ ಮಾತನಾಡುತ್ತಿದ್ದಾಗಲೆಲ್ಲಾ ಗರ್ಭದಲ್ಲಿದ್ದ ಮಗು ಚಲನೆಯಾಡುತ್ತಿತ್ತಂತೆ. 
ಅದೇ ರೀತಿ ಮಗು ಹುಟ್ಟಿದಾಗ ಕೂಡಾ ಫ್ಲಾವಿಯೋ ಮಗಳನ್ನು ಮಾತನಾಡಿಸಿದ್ದಾರೆ. ಅಪ್ಪನ ಧ್ವನಿ ಕೇಳುತ್ತಿದ್ದಂತೆ ಆ ಪುಟ್ಟ ಕಂದ ಆ ಧ್ವನಿಯನ್ನು ಕಂಡುಹಿಡಿದು ಕೂಡಲೇ ಮಿಲಿಯನ್ ಡಾಲರ್ ಸ್ಮೈಲ್ ನೀಡಿದೆ. ಆಂಟೊನೆಲ್ಲಾ ಹುಟ್ಟಿದ್ದು ಆಗಸ್ಟ್‍ನಲ್ಲಾದರೂ ಈ ಅಪರೂಪದ ಫೋಟೋ ಈಗ ಇಂಟರ್‍ನೆಟ್‍ನಲ್ಲಿ ಹರಿದಾಡುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • ಸುದ್ದಿ

    ಬಿಗ್ ಶಾಕಿಂಗ್..ಹಿರಿಯ ನಟ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಇನ್ನಿಲ್ಲ..ಏನಾಗಿತ್ತು..?

    ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಕೊನೆಯುಸಿರೆಳೆದಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ರಂಗಭೂರ್ಮಿ ಕಲಾವಿದ ಹಿರಣ್ಣಯ್ಯ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಮೂಲದ 84 ವರ್ಷದ ಮಾಸ್ಟರ್ ಹಿರಣ್ಣಯ್ಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಗುರುವಾರ ಬೆಳಗ್ಗೆ 8:30ರ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಲಂಚಾವತರ ಮೂಲಕ ಮನೆಮಾತಾಗಿದ್ದ ಹಿರಣಯ್ಯ ಅನಾರೋಗ್ಯದಿಂದಾಗಿ ತೆರೆಯ ಹಿಂದೆ ಸರಿದಿದ್ದರು. ಫೆಬ್ರವರಿ 15, 1934ರಂದು ಮೈಸೂರಿನಲ್ಲಿ ಮಾಸ್ಟರ್ ಹಿರಣಯ್ಯ ಜನಿಸಿದ್ದರು. ಅವರ ಮೂಲ ಹೆಸರು ನರಸಿಂಹಮೂರ್ತಿ….

  • ಉಪಯುಕ್ತ ಮಾಹಿತಿ

    ನಿಮ್ಮ ಜಮೀನಿನ/ಊರಿನ ಯಾವುದೇ ಆಸ್ತಿಯ ವಿವರಗಳನ್ನು ನಿಮ್ಮ ಮೊಬೈಲ್’ನಲ್ಲೇ ನೋಡಿ ಪಡೆಯಿರಿ..!ತಿಳಿಯಲು ಈ ಲೇಖನ ಓದಿ…

    ಈಗಂತೂ ಸರ್ಕಾರಿ ಸಂಸ್ಥೆಗಳಲ್ಲಿ ನಮಗೆ ಬೇಕಾದ ದಾಖಲಾತಿಗಳನ್ನು ಪಡೆಯುವುದು ಅಷ್ಟು ಸುಲಭವಲ್ಲ…ಆದರೆ ನಮಗೆ ಗೊತ್ತಿಲ್ಲದ ವಿಷಯವೇನೆಂದರೆ ಕೆಲವೊಂದು ಸೌಲಭ್ಯಗಳನ್ನು ತುಂಬಾ ಸರಳವಾಗಿ ನಾವು ಪಡೆದುಕೊಳ್ಳಬಹುದು.ಅದರಲ್ಲಿ ಒಂದು, ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.

  • ಸುದ್ದಿ

    ಹುಟ್ಟುಹಬ್ಬಕ್ಕೆ ಸರ್ಕಾರಿ ಶಾಲೆ ದತ್ತು ಪಡೆದ ಪ್ರಜ್ವಲ್ ದೇವರಾಜ್ ಸಾಮಾಜಿಕ ಕಳಕಳಿ ಮೆಚ್ಚಿದ ದರ್ಶನ್…!

    ನಟ ಪ್ರಜ್ವಲ್ ದೇವರಾಜ್ ಇಂದು (ಜುಲೈ 4) ತಮ್ಮ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಅದ್ಧೂರಿ ಆಚರಣೆಗೆ ಬ್ರೇಕ್ ಹಾಕಿರುವ ಅವರು ಸಾಮಾಜಿಕ ಕೆಲಸಕ್ಕೆ ಮುಂದಾಗಿದ್ದಾರೆ. ಒಂದು ಸಂಸ್ಥೆಯ ಜೊತೆಗೆ ಕೈ ಜೋಡಿಸಿ ಒಂದು ಸರ್ಕಾರಿ ಶಾಲೆಯನ್ನು ಪ್ರಜ್ವಲ್ ದತ್ತು ಪಡೆದಿದ್ದಾರೆ. ಹೀಗಾಗಿ ಬರ್ತ್ ಡೇ ಗೆ ಗಿಫ್ಟ್ ಬದಲು ಶಾಲಾ ಮಕ್ಕಳಿಗೆ ಸಹಾಯ ಆಗುವಂತೆ ನೋಟ್ ಬುಕ್, ಪೆನ್ಸಿಲ್ ನೀಡಿ ಎಂದು ಮನವಿ ಮಾಡಿದ್ದರು. ಪ್ರಜ್ವಲ್ ಅವರ ಈ ಕೆಲಸಕ್ಕೆ ನಟ ದರ್ಶನ್ ಖುಷಿಯಾಗಿದ್ದಾರೆ. “ನಮ್ಮ ಹುಡ್ಗ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…!

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯ‌ವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ(18 ಫೆಬ್ರವರಿ, 2019) ನಿಮ್ಮ ಕುಟುಂಬದ ಸದಸ್ಯರ ಭಾವನೆಗಳನ್ನು ನೋಯಿಸುವುದನ್ನು ತಪ್ಪಿಸುವ ಮೂಲಕ ನಿಮ್ಮ…