ಸುದ್ದಿ

ಹುಟ್ಟುತ್ತಲೇ ಅಪ್ಪನನ್ನು ನೋಡಿ ಸ್ಮೈಲ್ ಮಾಡಿದ ಮಗು. ಅದರಲ್ಲೂ ಒಂದು ವಿಶೇಷ ಇದೆ.

117

ಮನೆಗೆ ಪುಟ್ಟ ಕಂದ ಬರುತ್ತಿದೆ ಎಂದರೆ ಅದಕ್ಕಿಂತ ಸಂತೋಷದ ಕ್ಷಣ ಬೇರೆ ಯಾವುದಿದೆ ಹೇಳಿ..? ಮಗು ಹುಟ್ಟಿದಾಗಿನಿಂದ ಅದರ ಆಟ, ಪಾಠ, ನಗು, ಅಳು, ಚೇಷ್ಟೆ ಎಲ್ಲವನ್ನೂ ಕಣ್ತುಂಬಿಕೊಳ್ಳುವುದೇ ಚೆಂದ. 
ಅದರಲ್ಲೂ ಆಗ ತಾನೆ ಹುಟ್ಟಿದ ಮಗುವೊಂದು ತನ್ನ ಅಪ್ಪನನ್ನು ನೋಡಿ ಸ್ಮೈಲ್ ಮಾಡಿದರೆ….ಆ ಅನುಭವ ಹೇಗಿರುತ್ತದೆ ನೀವೇ ಊಹಿಸಿಕೊಳ್ಳಿ. ಅಂದಹಾಗೆ ಈ ಫೋಟೋ ಬ್ರೆಜಿಲ್‍ನ ನೌಕಾನೆಲೆಯಲ್ಲಿ ಕೆಲಸ ಮಾಡುತ್ತಿರುವ ಫ್ಲಾವಿಯೋ ಎಂಬ ಸೈನಿಕನ ಪುಟ್ಟ ಕುಟುಂಬದ್ದು. ಫ್ಲಾವಿಯೋ ಪತ್ನಿ ತಾರ್ಸಿಲಾ ಕಳೆದ ಆಗಸ್ಟ್‍ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಹುಟ್ಟುತ್ತಲೇ ಫ್ಲಾವಿಯೋ ಆಪರೇಷನ್ ಥಿಯೇಟರ್‍ಗೆ ಬಂದು ಆ ಮುದ್ದು ಕಂದನನ್ನು ಮಾತನಾಡಿಸಿದ್ದಾರೆ. ಅಪ್ಪನ ಧ್ವನಿ ಕೇಳುತ್ತಿದ್ದಂತೆ ಮಗು ಆಂಟೊನೆಲ್ಲಾ ಆತನನ್ನು ನೋಡಿ ಸ್ಮೈಲ್ ಮಾಡಿದೆ. ಆ ಕ್ಷಣವನ್ನು ಅಲ್ಲೇ ಇದ್ದ ವೈದ್ಯರು ಸೆರೆಹಿಡಿದಿದ್ದಾರೆ.

ಆಗ ತಾನೆ ಹುಟ್ಟಿದ ಮಕ್ಕಳು ಈ ರೀತಿ ನಗುವುದು ಅಪರೂಪ. ಆದರೆ ಆಂಟೊನೆಲ್ಲಾ ಅಪ್ಪನನ್ನು ನೋಡಿ ನಗೆ ಬೀರಿದ ಹಿಂದೆ ಒಂದು ವಿಶೇಷವಿದೆ. ತಾರ್ಸಿಲಾ ಗರ್ಭಿಣಿಯಾದಾಗಿನಿಂದ ಪತಿ ಫ್ಲಾವಿಯೋ ಆಕೆ ಹೊಟ್ಟೆ ಬಳಿ ಬಂದು ಮಗುವನ್ನು ಮಾತನಾಡಿಸುತ್ತಿದ್ದರಂತೆ. ಗಂಟೆಗಂಟೆಗೊಮ್ಮೆ ಗುಡ್ ಮಾರ್ನಿಂಗ್, ಗುಡ್ ಆಫ್ಟರ್ ನೂನ್, ಗುಡ್ ಈವ್ನಿಂಗ್, ಐ ಲವ್ ಯೂ, ಹೀಗೆ ಮಗುವಿನ ಬಳಿ ಮಾತನಾಡುತ್ತಿದ್ದರಂತೆ. ಆಶ್ಚರ್ಯ ಎಂದರೆ ಫ್ಲಾವಿಯೋ ಹಾಗೆ ಮಾತನಾಡುತ್ತಿದ್ದಾಗಲೆಲ್ಲಾ ಗರ್ಭದಲ್ಲಿದ್ದ ಮಗು ಚಲನೆಯಾಡುತ್ತಿತ್ತಂತೆ. 
ಅದೇ ರೀತಿ ಮಗು ಹುಟ್ಟಿದಾಗ ಕೂಡಾ ಫ್ಲಾವಿಯೋ ಮಗಳನ್ನು ಮಾತನಾಡಿಸಿದ್ದಾರೆ. ಅಪ್ಪನ ಧ್ವನಿ ಕೇಳುತ್ತಿದ್ದಂತೆ ಆ ಪುಟ್ಟ ಕಂದ ಆ ಧ್ವನಿಯನ್ನು ಕಂಡುಹಿಡಿದು ಕೂಡಲೇ ಮಿಲಿಯನ್ ಡಾಲರ್ ಸ್ಮೈಲ್ ನೀಡಿದೆ. ಆಂಟೊನೆಲ್ಲಾ ಹುಟ್ಟಿದ್ದು ಆಗಸ್ಟ್‍ನಲ್ಲಾದರೂ ಈ ಅಪರೂಪದ ಫೋಟೋ ಈಗ ಇಂಟರ್‍ನೆಟ್‍ನಲ್ಲಿ ಹರಿದಾಡುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಇಂದು 8 ಮಂದಿ ನೂತನ ಸಚಿವರ ಪ್ರಮಾಣವಚನ!ಈ ಪಟ್ಟಿಯಲ್ಲಿ ನಿಮ್ಮ ಕ್ಷೇತ್ರದ ಶಾಸಕರು ಇದ್ದಾರಯೇ ನೋಡಿ…

    ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮಾತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಧಾನ ಹೊರಹಾಕಿದ್ದ ಶಾಸಕರಿಗೆ ಸಚಿ ಸ್ಥಾನ ಕೊಡುವುದಾಗಿ ಮೈತ್ರಿ ಸರ್ಕಾರ ಭರವಸೆ ನೀಡಿದ್ದು ಅದರಂತೆ ಈಗ ಸಚಿವ ಸಂಪುಟದ ವಿಸ್ತರಣೆ ಶುರುವಾಗಿದೆ. ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಯಂತೆಯೇ ಡಿಸೆಂಬರ್ 22 ರಂದು ಅಂದರೇ ಇಂದು ಸಂಪುಟ ವಿಸ್ತರಣೆಯಾಗಲಿದೆ, ಇಬ್ಬರು ಹಾಲಿ ಸಚಿವರಿಗೆ ಕೊಕ್ ನೀಡಿದ್ದು, 8 ಮಂದಿ ನೂತನ ಸಚಿವರಾಗಿ ಇಂದು ಸಂಜೆ 5.30 ಕ್ಕೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ…

  • ಸುದ್ದಿ

    ಕಸ ತಂದುಕೊಟ್ಟು, ಊಟ ತಿಂಡಿ ಉಚಿತವಾಗಿ ಪಡೆಯಿರಿ:ಇದು ಗಾರ್ಬೇಜ್ ಹೋಟೆಲ್ ನ ವಿಶೇಷತೆ….!

    ಭಾರತವನ್ನು ಸ್ವಚ್ಛವಾಗಿಡಲು ಸ್ವಚ್ಛ ಭಾರತ್ ಅಭಿಯಾನದ ಹೆಸರಿನಲ್ಲಿ ವರ್ಷಗಳಿಂದ ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೇ ಇದೆ. ಈ ಮಧ್ಯೆ ಕಳೆದ ವರ್ಷ ಭಾರತದಲ್ಲೆ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೆ ಸ್ಥಾನ ಪಡೆದುಕೊಂಡ ಛತ್ತೀಸ್‌ಗಢದ ಅಂಬಿಕಾಪುರ ಹೊಸತೊಂದು ಪ್ರಯತ್ನದ ಮೂಲಕ ವಿಶ್ವದ ಗಮನ ಸೆಳೆದಿದೆ. ಹೌದು ಛತ್ತಿಸ್​ಗಢದ ಅಂಬಿಕಾಪುರ ಸ್ವಚ್ಛತಾ ಕಾರ್ಯಗಳಲ್ಲಿ ಬೇರೆ ನಗರಗಳಿಗಿಂತ ಬಹಳ ಮುಂದುವರೆದಿದೆ. ಕಳೆದ ವರ್ಷ ದೇಶದ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೇ ಸ್ಥಾನ ಪಡೆದ ಹೆಗ್ಗಳಿಕೆಯನ್ನು ಗಳಿಸಿದೆ, ಪ್ಲಾಸ್ಟಿಕ್‌ ತ್ಯಾಜ್ಯ ಬಳಸಿ ನಗರದಲ್ಲಿ…

  • ಸುದ್ದಿ

    ಅನಾಮಧೇಯ 40 ಲಕ್ಷ ರೂ. ಬ್ಯಾಂಕಿಗೆ ಬಂತೆಂದು ಎಗ್ಗಿಲ್ಲದೆ ಖರ್ಚು ಮಾಡಿದ ದಂಪತಿಗೆ ಮುಂದೆ ಕಾದಿತ್ತು ಶಿಕ್ಷೆ!

    ಚೆನ್ನೈ,  ತಮ್ಮ ಬ್ಯಾಂಕ್ ಖಾತೆಗೆ ಅನಾಮಧೇಯವಾಗಿ ಬಂದ 40 ಲಕ್ಷ ರೂ. ಹಣವನ್ನು ಖರ್ಚು ಮಾಡಿದ ಕಾರಣಕ್ಕಾಗಿ ಸ್ಥಳೀಯ ಕೋರ್ಟ್ 3 ವರ್ಷ ಶಿಕ್ಷೆ ವಿಧಿಸಿದ ಘಟನೆ ತಮಿಳುನಾಡಿನ ತಿರುಪೂರಿನಲ್ಲಿ ನಡೆದಿದೆ. ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ. ಗುಣಶೇಖರನ್ ಹಾಗೂ ಆತನ ಪತ್ನಿ ರಾಧಾ ಶಿಕ್ಷೆಗೆ ಒಳಗಾಗಿರುವ ದಂಪತಿ. 2012ರಲ್ಲಿ ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ.ಗುಣಶೇಖರನ್ ಎಂಬುವವರ ಅಕೌಂಟಿಗೆ ಅನಾಮಧೇಯವಾಗಿ 40 ಲಕ್ಷ ರೂ. ಜಮೆಯಾಗಿತ್ತು. ಹಣ ಬಂದ ಖುಷಿಗೆ ಎಲ್ಲಿಂದ…

  • ಸುದ್ದಿ

    ಕಬ್ಬಿನ ಹಾಲು ಕುಡಿಯುವುದರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ ,.!

    ಬಿಸಿಲ ಬೇಗೆಯನ್ನು ತಣಿಸಲುಜನರು ಸಾಮಾನ್ಯವಾಗಿ ತಂಪು ಪಾನೀಯಗಳ ಮೊರೆಹೋಗುತ್ತಾರೆ. ಅದರಲ್ಲೂ ಬಿಸಿಲ ಬೇಗೆತಣಿಸಿಕೊಳ್ಳಲು ಬಹುತೇಕ ಮಂದಿ ರಸ್ತೆಬದಿಯಲ್ಲಿ ಸಾಮಾನ್ಯವಾಗಿ ಸಿಗುವ ಎಳನೀರು ಹಾಗೂಕಬ್ಬಿನ ಹಾಲನ್ನು ಕುಡಿಯಲು ಇಷ್ಟಪಡುತ್ತಾರೆ.ಆದರೆ ಕಬ್ಬಿನ ಹಾಲಿನ ಅದ್ಭುತಆರೋಗ್ಯಕರ ಪ್ರಯೋಜನ ಹಲವರಿಗೆ ತಿಳಿದಿಲ್ಲ.ಕಬ್ಬಿನ ಹಾಲು ಕೇವಲ ದಣಿವುನಿವಾರಣೆಯಾಗುವುದಲ್ಲದೆ ಹಲವು ಆರೋಗ್ಯ ಸಮಸ್ಯೆಗಳನ್ನೂಸಹ ನಿವಾರಿಸುವ ಗುಣಗಳನ್ನೂ ಹೊಂದಿದೆ. ಸಕ್ಕರೆ ಹಾಗೂ ಬೆಲ್ಲವನ್ನು ತಯಾರಿಸಲೆಂದು ಭಾರತದಲ್ಲಿ ಹೆಚ್ಚಾಗಿ ಕಬ್ಬು ಬೆಳೆಯುವ ಕಾರಣ ಇಂದು ಭಾರತ ಜಗತ್ತಿನ ಅತಿಹೆಚ್ಚು ಕಬ್ಬು ಬೆಳೆಯುವ ದೇಶವಾಗಿದೆ. ನಮ್ಮ ದೇಶದ ಪ್ರತಿ ಊರಿನಲ್ಲಿಯೂ…

  • ವಿಸ್ಮಯ ಜಗತ್ತು

    ಈ ಬೆಕ್ಕು ಮಗುವನ್ನು ಪ್ರಾಣಪಾಯದಿಂದ ಕಾಪಾಡಿದೆ!ಹೇಗೆ ಅಂತೀರಾ?ಈ ಲೇಖನಿ ಓದಿ…

    ಸಾಕುಪ್ರಾಣಿಗಳು ತಮ್ಮ ಯಜಮಾನನ ಮತ್ತು ಅವರ ಮನೆಯವರನ್ನು ತಮ್ಮ ಪ್ರಾಣ ಒತ್ತೆ ಇಟ್ಟು ರಕ್ಷಣೆ ಮಾಡಿದ ಎಸ್ಟೋ ವಿಚಾರಗಳನ್ನು ನಾವು ಆಗಾಗ್ಗೆ ಕೇಳುತ್ತಿರುತ್ತೇವೆ. ಹಾಗಯೇ ಇಲ್ಲೊಂದು ಬೆಕ್ಕು ಮಗುವನ್ನು ರಕ್ಷಣೆ ಮಾಡಿ ಗಮನಸೆಳೆದಿದೆ.