ಸಿನಿಮಾ

ಮೊದಲ ಬಾರಿಗೆ ತನ್ನ ಅಭಿಮಾನಿ ಮೇಲೆಯೇ ಗರಂ ಆದ ದಾಸ ದರ್ಶನ್..!ಕಾರಣ ಏನು ಗೊತ್ತಾ..?

By admin

May 03, 2019

ಮಾಸ್ಟರ್ ಹಿರಣ್ಣಯ್ಯನವರ ಅಗಲಿಕೆಯ ಕಂಬನಿ ಮಿಡಿದಿರುವ ದರ್ಶನ್ ‘ಗಜ’ ಚಿತ್ರದಲ್ಲಿ ಮಾಸ್ಟರ್ ಹಿರಣ್ಣಯ್ಯ ಅವರೊಂದಿಗೆ ಅಭಿನಯಿಸಿದ ನೆನಪುಗಳು ಸದಾ ನನ್ನೊಂದಿಗೆ ಇರುತ್ತವೆ ಎಂದು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ.

ಹಿರಿಯ ಕಲಾವಿದ ಮಾಸ್ಟರ್ ಹಿರಣ್ಣಯ್ಯ ನಿಧನದ ಹಿನ್ನೆಲೆಯಲ್ಲಿ ಸಂತಾಪಗಳ ಮಹಾಪೂರವೇ ಹರಿದು ಬಂದಿದೆ. ಅನೇಕ ಕಲಾವಿದರು ಮಾಸ್ಟರ್ ಹಿರಣ್ಣಯ್ಯ ಅವರ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದ್ದಾರೆ. ಅಂತೆಯೇ ನಟ ದರ್ಶನ್ ಕೂಡ ಹಿರಣ್ಣಯ್ಯ ಅವರ ದರ್ಶನ ಪಡೆದು ನಮನ ಸಲ್ಲಿಸಿದ್ದಾರೆ.

ಕನ್ನಡ ರಂಗಭೂಮಿಯ ಹಿರಿಯ ಕಲಾವಿದರಾದ ಮಾಸ್ಟರ್ ಹಿರಣಯ್ಯ ಅವರು ವಿಧಿವಶರಾಗಿದ್ದಾರೆ. ದುಃಖ ತಡೆದುಕೊಳ್ಳುವ ಶಕ್ತಿಯನ್ನು ಕುಟುಂಬ ಹಾಗೂ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ‘ಗಜ’ ಚಿತ್ರದಲ್ಲಿ ಅವರೊಂದಿಗೆ ಅಭಿನಯಿಸಿದ ನೆನಪುಗಳು ಸದಾ ನನ್ನೊಂದಿಗೆ ಇರುತ್ತವೆ ಎಂದು ಹೇಳಿದ್ದಾರೆ.

ಹಿರಣ್ಣಯ್ಯ ಅವರ ಅಂತಿಮ ದರ್ಶನ ಪಡೆದು ದರ್ಶನ್ ವಾಪಸ್ ತೆರಳುವ ಸಂದರ್ಭದಲ್ಲಿ ಅಭಿಮಾನಿಯೊಬ್ಬ ಡಿ ಬಾಸ್ ಎಂದು ಘೋಷಣೆ ಕೂಗಲು ಮುಂದಾಗಿದ್ದು, ಇದರಿಂದ ಕೋಪಗೊಂಡ ದರ್ಶನ್ ಸುಮ್ಮನಿರುವಂತೆ ತಿಳಿಸಿದ್ದಾರೆ. ಅಭಿಮಾನಿ ಮೇಲೆ ಗರಂ ಆಗಿದ್ದಾರೆ ಎನ್ನಲಾಗಿದೆ.