ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ಪ್ರಜ್ವಲ್ ದೇವರಾಜ್ ಇಂದು (ಜುಲೈ 4) ತಮ್ಮ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಅದ್ಧೂರಿ ಆಚರಣೆಗೆ ಬ್ರೇಕ್ ಹಾಕಿರುವ ಅವರು ಸಾಮಾಜಿಕ ಕೆಲಸಕ್ಕೆ ಮುಂದಾಗಿದ್ದಾರೆ. ಒಂದು ಸಂಸ್ಥೆಯ ಜೊತೆಗೆ ಕೈ ಜೋಡಿಸಿ ಒಂದು ಸರ್ಕಾರಿ ಶಾಲೆಯನ್ನು ಪ್ರಜ್ವಲ್ ದತ್ತು ಪಡೆದಿದ್ದಾರೆ. ಹೀಗಾಗಿ ಬರ್ತ್ ಡೇ ಗೆ ಗಿಫ್ಟ್ ಬದಲು ಶಾಲಾ ಮಕ್ಕಳಿಗೆ ಸಹಾಯ ಆಗುವಂತೆ ನೋಟ್ ಬುಕ್, ಪೆನ್ಸಿಲ್ ನೀಡಿ ಎಂದು ಮನವಿ ಮಾಡಿದ್ದರು.
ಪ್ರಜ್ವಲ್ ಅವರ ಈ ಕೆಲಸಕ್ಕೆ ನಟ ದರ್ಶನ್ ಖುಷಿಯಾಗಿದ್ದಾರೆ. “ನಮ್ಮ ಹುಡ್ಗ ಪ್ರಜ್ಜು ಒಂದು ಕನ್ನಡ ಸರ್ಕಾರಿ ಶಾಲೆಯನ್ನು ದತ್ತು ಪಡೆದಿರುವ ಸುದ್ಧಿ ಕೇಳಿ ತುಂಬಾನೇ ಖುಷಿಯಾಯ್ತು. ಇಂಥ ಸಾಮಾಜಿಕ ಕಳಕಳಿಯ ಕೆಲಸಗಳಲ್ಲಿ ಹೀಗೆ ಸದಾ ಎಂದು ಹಾರೈಸುತ್ತೇನೆ.” ಎಂದು ಟ್ವೀಟ್ ಮಾಡಿದ್ದಾರೆ.
ಪ್ರಜ್ವಲ್ ತಮ್ಮ ಹುಟ್ಟುಹಬ್ಬಕ್ಕೆ ಕೇಕ್, ಹಾರ, ಫ್ಲಾಕ್ಸ್, ಬ್ಯಾನರ್ ಅಂತ ಖರ್ಚು ಮಾಡುವ ಬದಲಿಗೆ ಅದೇ ಹಣದಲ್ಲಿ ನೋಟ್ ಬುಕ್ ನೀಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ಪ್ರಜ್ವಲ್ ಕೆಲಸಕ್ಕೆ ಅಭಿಮಾನಿಗಳು ಹಾಗೂ ಚಿತ್ರರಂಗದ ಸ್ನೇಹಿತರ ಕಡೆಯಿಂದ ಬೆಂಬಲ ಸಿಕ್ಕಿದೆ. ಅಂದಹಾಗೆ, ಇತ್ತೀಚಿಗೆ ‘ಯಜಮಾನ’ ಸಿನಿಮಾದ ಹಾಡಿನಲ್ಲಿ ದರ್ಶನ್ ಜೊತೆಗೆ ಪ್ರಜ್ವಲ್ ದೇವರಾಜ್ ಕಾಣಿಸಿಕೊಂಡಿದ್ದರು.
ಪ್ರಜ್ವಲ್ ಅವರ ಹುಟ್ಟುಹಬ್ಬಕ್ಕೆ ಕುಟುಂಬದವರು ಸುಮಾರು 90 ಲಕ್ಷ ರೂ. ಬೆಲೆ ಬಾಳುವ ಕೆಂಪು ಬಣ್ಣದ ವೋಲ್ವೋ ಎಕ್ಸ್ ಸಿ – 90 ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ಈ ಕಾರಿನ ಮುಂದೆ ಪ್ರಜ್ವಲ್ ಅವರ ತಂದೆ, ನಟ ದೇವರಾಜ್, ತಾಯಿ, ಪತ್ನಿ ರಾಗಿಣಿ ಹಾಗೂ ಸಹೋದರ ಜೊತೆ ನಿಂತು ಫೋಟೋಗೆ ಪೋಸ್ ಕೊಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಡ್ಡ ಬಿಡುವುದು ಇಂದಿನ ಯುವಕರ ಫ್ಯಾಷನ್ ಆಗಿ ಹೋಗಿದೆ. ಹಿಗಂತೂ ಗಡ್ಡ ಬಿಡುವ ಸ್ಟೈಲ್ ಚೇಂಜ್ ಆಗಿದೆ.ವಿವಿದ ರೀತಿಯಲ್ಲಿ ಗಡ್ಡವನ್ನು ಬಿಡುತ್ತಾರೆ. ಅಂದ ಹಾಗೆ ಸಿನೆಮಾ ಸೆಲೆಬ್ರೆಟಿಗಳನ್ನು ಅನು ಕರಿಸುವುದು ಸಹ ಟ್ರೆಂಡ್ ಆಗಿದೆ.
ಕ್ರೇಜಿಸ್ಟಾರ್ ರವಿಚಂದ್ರನ್ ತಮ್ಮ ಪುತ್ರಿ ಗೀತಾಂಜಲಿಯವರ ಮದುವೆಗೆ ವಿಶೇಷ ಉಡುಗೊರೆಯೊಂದನ್ನು ಸಿದ್ಧಪಡಿಸಿಟ್ಟುಕೊಂಡಿದ್ದು, ಮೇ 29ರಂದು ನಡೆಯುವ ಮದುವೆಯಲ್ಲಿ ಅದನ್ನು ನೀಡಲಿದ್ದಾರೆ. ಹೌದು…ಮದುವೆಯಾಗಲಿರುವ ಮಗಳಿಗಾಗಿ ಸ್ವತಃ ಕ್ರೇಜಿಸ್ಟಾರ್ ರವಿಚಂದ್ರನ್ ಅವರೇ ಹಾಡೊಂದನ್ನು ಬರೆದು ಸಂಗೀತ ಸಂಯೋಜಿಸಿದ್ದಾರೆ. “ಬೆಳೆದ ಮೇಲೆ ನೀನು ನಾನು ಮಗುವಾದೆ, ಯಾಕೋ ಏನೋ ತಿಳಿಯದೇನೇ ಚಡಪಡಿಸಿದೆ ಮನಸು, ನೋವು-ನಲಿವು ಜೊತೆಗೆ ಸಂಭ್ರಮ ಅಡಗಿದೆ, ಓ ನನ್ನ ಮಗಳೇ…..” ಎಂಬ ಸಾಹಿತ್ಯ ಇರುವ ಈ ಗೀತೆಯನ್ನು ಗೌತಮ್ ಶ್ರೀವತ್ಸ ಹಾಡಿದ್ದಾರೆ. ಉದ್ಯಮಿ ಅಜಯ್ ಜೊತೆ ಗೀತಾಂಜಲಿಯ ನಿಶ್ಚಿತಾರ್ಥ…
ಪ್ರತಿದಿನದ ಬೆಳಗು ನಮ್ಮ ಬದುಕಿನ ಶುಭಾರಂಭವಿದ್ದಂತೆ. ಹಾಗಾಗಿ ಬೆಳಗ್ಗೆ ಎದ್ದ ತಕ್ಷಣ ಯಾವುದೇ ವಿಘ್ನಗಳು ಎದುರಾಗಬಾರದು. ಅದಕ್ಕಾಗಿ ಕೆಲವೊಂದು ಕೆಲಸಗಳಿಂದ ನೀವು ದೂರವಿರಬೇಕು. ಯಾಕಂದ್ರೆ ಅವು ನಮ್ಮ ಕೆಲಸವನ್ನೇ ಬಿಗಡಾಯಿಸಿಬಿಡುತ್ತವೆ. ಬೆಳಗ್ಗೆ ಎದ್ದ ತಕ್ಷಣ ಕನ್ನಡಿ ನೋಡಬೇಡಿ : ವಾಸ್ತು ಶಾಸ್ತ್ರದ ಪ್ರಕಾರ ಬೆಳಗ್ಗೆ ಏಳ್ತಿದ್ದಂತೆ ಕನ್ನಡಿ ನೋಡುವುದರಿಂದ ರಾತ್ರಿಯ ನಕಾರಾತ್ಮಕತೆ ಪುನಃ ಸ್ಥಾಪಿತವಾಗುತ್ತದೆ. ಇಡೀ ದಿನ ನಿಮ್ಮ ಮನಸ್ಸು ಅದೇ ರೀತಿಯಾಗಿರುತ್ತದೆ. ಹಾಗಾಗಿ ಬೆಳಗ್ಗೆ ಎದ್ದು ಸ್ವಲ್ಪ ಸಮಯದ ನಂತರ ಕನ್ನಡಿಯಲ್ಲಿ ಮುಖ ದರ್ಶನ ಮಾಡಿ. ಬೆಳಗ್ಗೆ…
ಸ್ವಂತ ಮಗಳ ಮೇಲೆಯೇ ತಂದೆ ಅತ್ಯಾಚಾರ ನಡೆಸಿ ನಂತರ ಆಕೆಯ ಬಾಯಿ ಮುಚ್ಚಿಸಲು ಹಣ ನೀಡುತ್ತಿದ್ದ ಅಮಾನವೀಯ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಪ್ರಾಪ್ತ ಮಗಳ ಮೇಲೆಯೇ ತಂದೆ 4 ವರ್ಷಗಳಿಂದ ನಿರಂತರ ಅತ್ಯಾಚಾರವೆಸಗಿದ್ದಾನೆ. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದು, ಆಕೆಗೆ ಗರ್ಭಪಾತವನ್ನೂ ಕೂಡ ಪಾಪಿ ತಂದೆ ಮಾಡಿಸಿದ್ದಾನೆ. ತಾಯಿ ವಿದೇಶಕ್ಕೆ ತೆರಳಿದ ಬಳಿಕ ಬಾಲಕಿ 7 ವರ್ಷದವಳಾಗಿದ್ದಾಗ ತಂದೆ ಜೊತೆ ವಾಸಿಸಲು ಶುರು ಮಾಡಿದ್ದಾಳೆ. ಆದರೆ ಮಗಳಿಗೆ 11 ವರ್ಷವಾಗುತ್ತಿದ್ದಂತೆ ಕಾಮುಕ ತಂದೆ ಮಗಳ…
ರಾಮಮಂದಿರ ನಿರ್ಮಾಣ ಕಾಮಗಾರಿಗೆ ಬುಧವಾರ (ಜೂನ್ 10) ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಸೋಮವಾರ ಅಧಿಕೃತವಾಗಿ ಘೋಷಿಸಿದೆ. ”ಅಂದು ಬೆಳಗ್ಗೆ 8ರಿಂದ 10 ಗಂಟೆವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಮೊದಲು ಉದ್ದೇಶಿತ ಮಂದಿರ ನಿರ್ಮಾಣದ ಸ್ಥಳದಲ್ಲಿರುವ ಕುಬೇರ ತಿಲ ಮಂದಿರದಲ್ಲಿ ಈಶ್ವರನಿಗೆ ರುದ್ರಾಭಿಷೇಕ ನೆರವೇರಿಸಲಾಗುವುದು. ಲಂಕೆಗೆ ಯುದ್ಧಕ್ಕೆ ಹೊರಡುವ ಮುನ್ನ ಶ್ರೀರಾಮ ಈಶ್ವರನನ್ನು ಪ್ರಾರ್ಥಿಸಿದ್ದರು. ಹೀಗಾಗಿ ರುದ್ರಾಭಿಷೇಕದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಲಿವೆ. ಆ ಬಳಿಕ ವಿಧ್ಯುಕ್ತವಾಗಿ ಶಿಲಾನ್ಯಾಸ ನೆರವೇರಿಸಲಾಗುವುದು,” ಕಳೆದ…
ಹೊಸ ವರ್ಷದ ಹಿನ್ನೆಲೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುತ್ತತ್ತಿಗೆ ಒಂದು ದಿನ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಮುತ್ತತ್ತಿಯು ಒಂದು ಪ್ರೇಕ್ಷಣಿಯ ಸ್ಥಳ. ಇಲ್ಲಿ ಸುತ್ತಮುತ್ತಲು ಕಾವೇರಿ ನದಿ ಹರಿಯುವುದರಿಂದ ಬೆಂಗಳೂರು, ಕನಕಪುರ, ಮಳವಳ್ಳಿ ಸೇರಿದಂತೆ ಹಲವೆಡೆಯಿಂದ ಹೊಸ ವರ್ಷದ ಹಿನ್ನೆಲೆಯಲ್ಲಿ ಬಹಳಷ್ಟು ಮಂದಿ ಪ್ರವಾಸಿಗರು ಬಂದು ಆಚರಣೆ ಮಾಡುತ್ತಾರೆ. ನಿಸರ್ಗದ ಮಡಿಲಲ್ಲಿ ಮೋಜು ಮಸ್ತಿ ಮಾಡಿ ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸುತ್ತಾರೆ. ಹೀಗೆ ಸಂಭ್ರಮಿಸುವ ವೇಳೆ…