inspirational, ಸುದ್ದಿ

ವಾಹನ ಚಾಲನೆ ವೇಳೆ ಜಾಗೃತರಾಗಿರಿ : ರಸ್ತೆ ಅಪಘಾತದ ಬಗ್ಗೆ ಅಭಿಮಾನಿಗಳ ಬಳಿ ದರ್ಶನ್ ಮನವಿ…

23

ರಸ್ತೆ ಅಪಘಾತದ ಬಗ್ಗೆ ನಟ ದರ್ಶನ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ರಸ್ತೆಯಲ್ಲಿ ಸಂಚಾರ ಮಾಡುವಾಗ ಸುರಕ್ಷಿತವಾಗಿ ಇರಲು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಕಳೆದ ವರ್ಷ ದರ್ಶನ್ ಪುತ್ರ ವಿನೀಶ್ ಹುಟ್ಟುಹಬ್ಬಕ್ಕೆ ದೂರದ ಊರಿನಿಂದ ಅಭಿಮಾನಿಗಳು ಆಗಮಿಸಿದ್ದರು.

ಈ ವೇಳೆ ರಸ್ತೆ ಅಪಘಾತ ಸಂಭವಿಸಿತ್ತು. ಇದರಲ್ಲಿ ಅಭಿಮಾನಿಯೊಬ್ಬರು ನಿಧನ ಹೊಂದಿದರು. ಈ ದುರ್ಘಟನೆಯನ್ನು ದರ್ಶನ್ ಇನ್ನು ಮರೆತಿಲ್ಲ. ಈ ವರ್ಷ ವಿನೀಶ್ ಹುಟ್ಟುಹಬ್ಬ ಹತ್ತಿರದಲ್ಲಿ ಇದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ.

”ಅಭಿಮಾನಿಗಳಲ್ಲಿ ಕಳಕಳಿಯ ಮನವಿ. ಗಾಡಿಯಲ್ಲಿ ಚಲಿಸುವಾಗ ದಯಮಾಡಿ ಅತೀ ಜಾಗೃಕತೆಯಿಂದ ಓಡಿಸಿ. ನಿಮ್ಮ ಕುಟುಂಬ ನಿಮ್ಮ ಮೇಲೆ ಅವಲಂಬಿತವಾಗಿರುತ್ತದೆ ಎಂಬುದನ್ನು ಎಂದೂ ಮರೆಯದಿರಿ. ಕೆಲವೊಮ್ಮೆ ನಮ್ಮ ಪ್ರಜ್ಞೆಯಲ್ಲಿದ್ದರೂ ಸಹ ದುರದೃಷ್ಟವಶಾತ್ ಅಪಘಾತಗಳು ಸಂಭವಿಸುತ್ತವೆ.” ಎಂದು ಟ್ವೀಟ್ ಮಾಡಿದ್ದಾರೆ.

”ಕಳೆದ ವರ್ಷ ವಿನೀಶ್ ಹುಟ್ಟುಹಬ್ಬದ ವೇಳೆ ನಡೆದ ರಸ್ತೆ ಅಪಘಾತದಲ್ಲಿ ಅಭಿಮಾನಿಯೊಬ್ಬ ಸಾವನಪ್ಪಿದ್ದನ್ನು ಇನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ದೂರದ ಸ್ಥಳಗಳಿಗೆ ಹೋಗುವಾಗ ದ್ವಿಚಕ್ರ ವಾಹನಗಳನ್ನು ಆದಷ್ಟು ಉಪಯೋಗಿಸಬೇಡಿ. ಈ ವರ್ಷವೂ ಹುಟ್ಟುಹಬ್ಬಕ್ಕೆ ಬರುವವರು ದಯಮಾಡಿ ಎಚ್ಚರಿಕೆ ವಹಿಸಿ” ಎಂದು ದರ್ಶನ್ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    15,000 ಕೆಜಿ ಕಾಗದ ತ್ಯಾಜ್ಯ ಸಂಗ್ರಹಿಸಿ ಪ್ರಶಸ್ತಿಯನ್ನು ಗೆದ್ದ ಭಾರತೀಯ ಹುಡುಗಿ…!

    ದುಬೈ: 8 ವರ್ಷದ ಭಾರತೀಯ ಬಾಲಕಿಯೊಬ್ಬಳು ಬರೋಬ್ಬರಿ 15 ಸಾವಿರ ಕಿಲೋಗ್ರಾಂ ಕಾಗದದ ತ್ಯಾಜ್ಯವನ್ನು ಸಂಗ್ರಹಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾಳೆ.ಭಾರತೀಯ ಮೂಲದ ನಿಯಾ ಟೋನಿ 15 ಸಾವಿರ ಕೆಜಿ ತೂಕದ ಪೇಪರ್ ತ್ಯಾಜ್ಯ ಸಂಗ್ರಹಿಸಿದ್ದಾಳೆ. ಈಕೆ ಪೋಷಕರ ಜೊತೆ ದುಬೈನಲ್ಲಿ ನೆಲೆಸಿದ್ದಾಳೆ. ಟೋನಿ ಎಮಿರೇಟ್ಸ್ ಎನ್ವಿರಾನ್ಮೆಂಟಲ್ ಗ್ರೂಪ್‍ನ ರಾಷ್ಟ್ರವ್ಯಾಪಿ ಮರುಬಳಕೆ ಅಭಿಯಾನದ ಭಾಗವಾಗಿ ವೇಸ್ಟ್ ಪೇಪರ್‌ಗಳನ್ನು ಸಂಗ್ರಹಿಸಿದ್ದಾಳೆ. ಇತ್ತೀಚೆಗಷ್ಟೆ ದುಬೈಯ ಎಮಿರೇಟ್ಸ್ ರಿಸೈಕ್ಲಿಂಗ್ ಅವಾರ್ಡ್ಸ್ ನ 22ನೇ ಆವೃತ್ತಿಯಲ್ಲಿ ಬಾಲಕಿಯ ಅಸಾಮಾನ್ಯ ಸಾಧನೆಗೆ ಆಕೆಯನ್ನು ಗೌರವಿಸಲಾಗಿದೆ. ಇಂಗಾಲದ…

  • ಆಧ್ಯಾತ್ಮ

    ಹಿಂದೂಗಳಿಗೆ ನಾಗರ ಪಂಚಮಿ ಹಬ್ಬ ಏಕೆ ತುಂಬಾ ಮಹತ್ವ ಗೊತ್ತಾ?ರೋಚಕವಾಗಿದೆ ಈ ಹಬ್ಬದ ವೈಶಿಷ್ಟ್ಯಗಳು…

    ನಾಡಿನೆಲ್ಲೆಡೆ ನಾಗರ ಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಆದರೆ ಬಹಳಷ್ಟು ಜನರು ನಾಗರ ಪಂಚಮಿಯ ಮಹತ್ವವನ್ನು ತಿಳಿಯದೆಯೇ ಅದನ್ನು ಆಚರಿಸುತ್ತಿರುತ್ತಾರೆ. ಈ ನಾಗ ದೇವತೆಯ ಆಚರಣೆಯ, ಪೂಜೆಯ ಮತ್ತು ನೈವೇಧ್ಯಗಳ ಹಿಂದೆ ಕೆಲವೊಂದು ಪುರಾಣ ಕತೆಗಳು ಮತ್ತು ಸತ್ಯಾಂಶಗಳು ಇವೆ.

  • ಸುದ್ದಿ

    ಹಾಸನದ ದೇವಾಲಯದಲ್ಲಿ ಪ್ರತಿ ಸೋಮವಾರ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಪೂಜೆ ನಡೆಯುವದಕ್ಕೆ ಕಾರಣವೇನು ಗೊತ್ತಾ?

    ಪುರಾತನ ಮತ್ತು ಮುಜರಾಯಿ ಇಲಾಖೆಗೆ ಸೇರಿದ ಹಾಸನದ ವಿರೂಪಾಕ್ಷೇಶ್ವರ ದೇವಾಲಯದಲ್ಲಿ ಪ್ರತಿ ಸೋಮವಾರ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಅರ್ಚನೆ ಮಾಡಲಾಗುತ್ತದೆ.ಇದರ ಜೊತೆಗೆ ಅಧಿಕಾರಿಯ ಹೆಸರಿನಲ್ಲಿ ಮರ ಬೆಳೆಸಲಾಗುತ್ತಿದ್ದು ಪ್ರತಿದಿನ ಜಲಾಭಿಷೇಕ ಕೂಡ ನಡೆಯುತ್ತದೆ. ಈ ಪುರಾತನ ದೇವಾಲಯ ಶಿಥಿಲಾವಸ್ಥೆಗೆ ತೆರಳಿದ್ದರೂ ಯಾವ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಗಮನಹರಿಸಲಿಲ್ಲ. ಆದರೆ ರೋಹಿಣಿ ಸಿಂಧೂರಿಯವರು ದೇವಸ್ಥಾನದ ಜೀರ್ಣೋದ್ಧಾರಕ್ಕೆ ಹಣ ಬಿಡುಗಡೆ ಮಾಡಿದ್ದರು. 2017ರಲ್ಲಿ ಹಾಸನ ಜಿಲ್ಲಾಧಿಕಾರಿಯಾಗಿ ಬಂದ ರೋಹಿಣಿ ಸಿಂಧೂರಿ ದೇವಾಲಯದ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ತಕ್ಷಣ 30 ಲಕ್ಷ ಹಣ…

  • ಸುದ್ದಿ

    ತಾನು ಜೀವಂತವಿರುವಾಗಲೇ ತನ್ನ ಸಮಾಧಿ ಸ್ಥಳ ಖರೀದಿಸಿದ ನಟಿ…ಯಾರು ಗೊತ್ತೇ,?

    ಈ ನಟಿ ನಿಮಗೆ ನೆನಪಿದ್ದಾರಾ..? ಕನ್ನಡ ನನ್ನ ಶತ್ರು, ಪೂರ್ಣಚಂದ್ರ, ಪ್ರೇಮಖೈದಿ ಹಾಗೂ ಇತ್ತೀಚೆಗೆ ಬಿಡುಗಡೆಯಾದ ದರ್ಶನ್ ಅಭಿನಯದ ಅಂಬರೀಶ ಸಿನಿಮಾಗಳಲ್ಲಿ ನಟಿಸಿರುವ ಇವರು ಹೆಸರು ರೇಖಾ. ಇವರ ಮೊದಲ ಹೆಸರು ಜೋಸೆಫೆನ್. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದ ರೇಖಾ ಮಲಯಾಳಂ, ತಮಿಳು, ತೆಲುಗು, ಕನ್ನಡ ಭಾಷೆಗಳಲ್ಲಿ ನಟಿಸಿದ್ದಾರೆ. ಈ ನಟಿ ಸಿನಿಮಾಗಳ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಯಾಗಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ ತಾವು ಬದುಕಿರುವಾಗಲೇ ತಮ್ಮ ಸಮಾಧಿ ಸ್ಥಳವನ್ನು ಖರೀದಿಸುವ ಮೂಲಕ ಸುದ್ದಿಯಾಗಿದ್ದಾರೆ. ಇಂತಹ ಘಟನೆಗಳು ಬಹಳ…

  • ಕಾನೂನು

    ತ್ರಿವಳಿ ತಲಾಖ್‌ ರದ್ದು! ಸುಪ್ರಿಂ ಕೋರ್ಟ್‌ನ ಐತಿಹಾಸಿಕ ತೀರ್ಪು…

    ತ್ರಿವಳಿ ತಲಾಖ್‌ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್‌ ಅನ್ನು ರದ್ದು ಪಡಿಸಿದೆ.

  • ಸುದ್ದಿ

    ಮೆಟ್ರೋ ಪ್ರಯಾಣಿಕರಿಗೊಂದು ಸಿಹಿ ಸುದ್ದಿ,.!ಇಲ್ಲಿದೆ ನೋಡಿ ಮುಖ್ಯ ಮಾಹಿತಿ,.!!

    ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ. ಮೆಟ್ರೋದಲ್ಲಿ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದ್ದು, ಇದರಿಂದ ಸರದಿಯಲ್ಲಿ ನಿಲ್ಲುವ ಬಾದೆ ತಪ್ಪಲಿದ್ದು ಆನ್ ಲೈನ್ ಮೂಲಕ ಟಿಕೆಟ್ ಖರೀದಿಸಬಹುದು. ಪ್ರಯಾಣಿಕರು ಬಿಎಂಆರ್ ಸಿಎಲ್ ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಂಡು ಅಗತ್ಯ ಮೊತ್ತದ ರೀಚಾರ್ಜ್ ಮಾಡಿಸಿಕೊಳ್ಳಬಹುದು. ಮೊಬೈಲ್ ಆಪ್ ನಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದಲ್ಲಿ ಪ್ಲಾಟ್ ಫಾರಂ ಪ್ರವೇಶಿಸುವ ದ್ವಾರ ಓಪನ್ ಆಗಲಿದೆ. ಇಳಿಯುವ ನಿಲ್ದಾಣದಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ಪ್ರಯಾಣಿಕರಿಗೆ ಹಣ ಕಡಿತವಾಗಲಿದೆ. ಇನ್ನು…