ಸುದ್ದಿ

ಬ್ರೆಕಿಂಗ್ ನ್ಯೂಸ್!ನಟ ದರ್ಶನ್ ಫಾರ್ಮ್ ಹೌಸ್ ಮೇಲೆ ರೈಡ್!ಅಲ್ಲಿ ಸಿಕ್ಕಿದ್ದು ಏನು ಗೊತ್ತಾ?

156

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಇತ್ತ ಚುನಾವಣಾ ಅಧಿಕಾರಿಗಳು ಅವರ ಫಾರ್ಮ್ ಹೌಸ್ ಪರಿಶೀಲನೆ ನಡೆಸಿದ್ದಾರೆ.

ಮೈಸೂರಿನ ಟಿ ನರಸೀಪುರ ರಸ್ತೆಯಲ್ಲಿರುವ ತೂಗುದೀಪ ಫಾರ್ಮ್ ಹೌಸ್‍ನಲ್ಲಿ ಚುನಾವಣಾ ಅಧಿಕಾರಿಗಳು ಬಂದು ಪರಿಶೀಲನೆ ಮಾಡಿದ್ದಾರೆ. ಅಧಿಕಾರಿಗಳು ಸುಮಾರು ಅರ್ಧ ಗಂಟೆಯ ಕಾಲ ಫಾರ್ಮ್ ಹೌಸ್‍ನಲ್ಲಿರುವ ಇಡೀ ಮನೆ ತಪಾಸಣೆ ಮಾಡಿ ವಾಪಸ್ ಹೋಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ಇಂದು ಬೆಳಗ್ಗೆ ಸುಮಾರು 10.30ಕ್ಕೆ ಅಧಿಕಾರಿಗಳು ಬಂದಿದ್ದರು. ಸದ್ಯಕ್ಕೆ ಅಧಿಕಾರಿಗಳಿಗೆ ಯಾವ ದಾಖಲಾತಿ ಸಿಕ್ಕಿದೆ ಎಂಬುದು ತಿಳಿದು ಬಂದಿಲ್ಲ. ಚುನಾವಣಾ ಅಧಿಕಾರಿಗಳ ಬಗ್ಗೆ ಆಪ್ತ ಸಹಾಯಕ ಮಾಹಿತಿ ಕೊಟ್ಟಿದ್ದಾರೆ. ಆದರೆ ಅದಕ್ಕೆ ದರ್ಶನ್ ಮಾತ್ರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.

ಫಾರ್ಮ್ ಹೌಸಿಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿಲ್ಲ. ಚುನಾವಣಾ ಅಧಿಕಾರಿಗಳು ಮಾತ್ರ ಹೋಗಿ ಪರಿಶೀಲನೆ ಮಾಡಿಕೊಂಡು ಬಂದಿದ್ದಾರೆ. ನಮ್ಮ ತೋಟದಲ್ಲಿ ಹಣ ಹಂಚಿಕೆ ಮಾಡುತ್ತಿದ್ದಾರೆ ಎಂಬ ಸುಳ್ಳು ಮಾಹಿತಿಯನ್ನು ಚುನಾವಣಾ ಅಧಿಕಾರಿಗಳಿಗೆ ಹೇಳಿದ್ದಾರೆ. ಹೀಗಾಗಿ ಅವರು ಬಂದು ಪರಿಶೀಲನೆ ಮಾಡಿದ್ದಾರೆ. ಅವರು ಬಂದಿರುವ ವಿಚಾರವನ್ನು ನಮ್ಮ ಕೆಲಸಗಾರರು ಫೋನ್ ಮಾಡಿ ನಮಗೆ ಹೇಳಿದರು. ನಾವು ಅವರು ಪರಿಶೀಲನೆ ಮಾಡಿಕೊಂಡು ಹೋಗಲಿ ಎಂದು ಹೇಳಿದ್ವಿ ಎಂದರು.

ಈ ಬಗ್ಗೆ ದರ್ಶನ್ ಅವರಿಗೆ ತಿಳಿಸಿದೆವು. ಅದಕ್ಕೆ ಅವರು ಪರಿಶೀಲನೆ ಮಾಡಿಕೊಂಡು ಹೋಗಲಿ ಎಂದು ಹೇಳಿದರು. ನಾವು ಪ್ರಚಾರ ಮಾಡಿಕೊಂಡು ಮಧ್ಯರಾತ್ರಿ ಹೋಗಿ ರೆಸ್ಟ್ ಮಾಡಿಕೊಂಡು ಬರುತ್ತೇವೆ. ಅಲ್ಲಿ ಪ್ರಾಣಿ-ಪಕ್ಷಿ ಬಿಟ್ಟು ಬೇರೆ ಏನು ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ‘ಎಳನೀರಿನಲ್ಲಿದೆ’ ಎಲ್ಲ ರೋಗಗಳನ್ನು ತಡೆಯಬಲ್ಲ ಶಕ್ತಿ ..!ತಿಳಿಯಲು ಈ ಲೇಖನ ಓದಿ ..

    ಎಳನೀರಿನಲ್ಲಿ ಪ್ರೋಟೀನ್, ಕಾರ್ಬೋಹೈಡ್ರೇಟ್, ವಿವಿಧ ಬಗೆಯ ವಿಟಮಿನ್ ಮತ್ತು ಖನಿಜಾಂಶಗಳಿವೆ. ಆಂಟಿಆಕ್ಸಿಡೆಂಟ್ ಗುಣವಿರುವ ಎಳನೀರು ರೋಗಗಳನ್ನು ತಡೆಯಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ಬಾಯಾರಿಕೆ, ದಣಿವಾರಿಸಲು ಮಾತ್ರ ಎಳನೀರು ಬೆಸ್ಟ್ ಅಲ್ಲ. ಎಲ್ಲ ಕಾಲದಲ್ಲಿಯೂ ಎಳನೀರು ಸೇವನೆ ಮಾಡಬೇಕು

  • ಸುದ್ದಿ

    ಭಾರಿ ಮಳೆಗೆ ಒಡೆದ ಸೇತುವೆ : 6 ಬಲಿ,17 ಮಂದಿ ನಾಪತ್ತೆಯಾಗಿದ್ದಾರೆ……!

    ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ ಜೋರಾಗಿದೆ. ಭಾರೀ ಮಳೆಗೆ ರತ್ನಗಿರಿ ತಾವ್ರೆ ಆಣೆಕಟ್ಟು ಮುರಿದು ಬಿದ್ದಿದೆ. ಆಣೆಕಟ್ಟಿನ ಕೆಳಗಿರುವ 7 ಹಳ್ಳಿಗಳು ಪ್ರವಾಹಕ್ಕೆ ಕೊಚ್ಚಿ ಹೋಗಿವೆ. ಈವರೆಗೆ 6 ಶವವನ್ನು ಹೊರ ತೆಗೆಯಲಾಗಿದೆ. 17 ಮಂದಿ ನಾಪತ್ತೆಯಾಗಿದ್ದಾರೆ. ಎನ್‌ಡಿಆರ್‌ಎಫ್‌ ತಂಡ ಪರಿಹಾರ ಕಾರ್ಯದಲ್ಲಿ ನಿರತವಾಗಿದೆ. ಆಣೆಕಟ್ಟೆಯ ಪಕ್ಕದಲ್ಲಿಯೇ ಇದ್ದ 12 ಮನೆಗಳು ಸಂಪೂರ್ಣ ನೆಲಸಮಗೊಂಡಿವೆ. 12 ಮನೆಗಳಲ್ಲಿ ಎಷ್ಟು ಮಂದಿ ವಾಸವಾಗಿದ್ದರು ಎನ್ನುವ ಬಗ್ಗೆ ಸ್ಪಷ್ಟ ಮಾಹಿತಿ ಸಿಗ್ತಿಲ್ಲ. ಘಟನೆ ಬಗ್ಗೆ ಮಾಹಿತಿ ಸಿಗ್ತಿದ್ದಂತೆ ಜಿಲ್ಲಾಡಳಿತ ರಕ್ಷಣಾ ಕಾರ್ಯ…

  • ಸುದ್ದಿ

    ಕೊನೆಗೂ ಶಬರಿ ಮಲೆ ಪ್ರವೇಶ ಮಾಡಿ ಅಯ್ಯಪ್ಪನ ದರ್ಶನ ಪಡೆದ ಇಬ್ಬರು ಮಹಿಳೆಯರು..!ಬಂದ್ ಆಯ್ತು ದೇವಸ್ಥಾನ…

    ಅಯ್ಯಪ್ಪ ಸ್ವಾಮಿ ಭಕ್ತರ ತೀವ್ರ ಪ್ರತಿಭಟನೆ ಹೊರತಾಗಿಯೂ 50 ವರ್ಷದೊಳಗಿನ ಇಬ್ಬರು ಮಹಿಳೆಯರು ಇಂದು ಮುಂಜಾನೆ ಶಬರಿಮಲೆಯಲ್ಲಿ ದರ್ಶನ ಪಡೆದಿದ್ಜಾರೆ ಎಂದು ಹೇಳಲಾಗುತ್ತಿದೆ.50 ವರ್ಷ ಮೀರದ ಇಬ್ಬರು ಮಹಿಳೆಯರು ಶಬರಿಮಲೆ ದೇವಾಲಯವನ್ನು ಪ್ರವೇಶಿಸಿ ಇತಿಹಾಸ ನಿರ್ಮಿಸಿದ್ದು, ಇದೀಗ ಭಾರೀ ಚರ್ಚೆಯಾಗುತ್ತಿದೆ. ಮಧ್ಯರಾತ್ರಿ ಬೆಟ್ಟವನ್ನು ಹತ್ತಲು ಆರಂಭಿಸಿದ ಮಹಿಳೆಯರು ಇಂದು ಬೆಳಗ್ಗೆ 3.45ರ ವೇಳೆಗೆ ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ.ದರ್ಶನ ಪಡೆದ ಮಹಿಳೆಯರನ್ನು ಮಲಪ್ಪುರಂನ ಕನಕ ದುರ್ಗ ಮತ್ತು ಕಲ್ಲಿಕೋಟೆಯ ಬಿಂದು ಎಂದು ಗುರುತಿಸಲಾಗಿದೆ. ಈ ಮಹಿಳೆಯರಿಗೆ…

  • ಆಧ್ಯಾತ್ಮ

    ಇಂದು ವೈಕುಂಠ ಏಕಾದಶಿ ರಾತ್ರಿ 9 ಗಂಟೆಒಳಗೆ ಈ ಚಿಕ್ಕ ಕೆಲಸ ಮಾಡಿದರೆ ಕೋಟ್ಯಾಧಿಪತಿಯಾಗುತ್ತೀರ..!

    ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ. ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ. ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ. ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!…