ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈತರ ಸಾಲಮನ್ನಾ ಮಾಡುವ ಬದಲು ಅವರು ಬೆಳೆದ ಬೆಲೆಗೆ ಸೂಕ್ತ ಬೆಲೆ ನೀಡಲಿ ಸಾಕು, ಸಾಲವನ್ನು ರೈತರೇ ತೀರಿಸುತ್ತಾರೆ’ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.
ಇಂದು ನಗರದ ಬಿಐಟಿ ಕಾಲೇಜಿನಲ್ಲಿ ನಡೆದ ಜೈ ಜವಾನ್ ಜೈ ಕಿಸಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದರ್ಶನ್, ಸರ್ಕಾರ ರೈತರ ಸಾಲ ಮನ್ನಾ ಮಾಡುವುದು ಬೇಡ. ರೈತರು ಬೆಳೆದ ಉತ್ಪನ್ನಗಳಿಗೆ ನ್ಯಾಯವಾದ ಬೆಲೆ ಕೊಟ್ರೆ ಸಾಕು. ರೈತರೇ ಸಾಲ ಮರು ಪಾವತಿ ಮಾಡಿಕೊಳ್ಳುತ್ತಾರೆ ಎಂದರು.
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೆಸರನ್ನು ನೇರವಾಗಿ ಪ್ರಸ್ತಾಪಿಸದೆ ಮಾತನಾಡಿದ ದರ್ಶನ್, ಕೆಲವರು ಸಾಲ ಮನ್ನಾ ಮಾಡಿದ್ದೀವಿ ಅಂತಾರೆ. ಆದರೆ ರೈತರ ಸಾಲ ಮನ್ನಾ ಮಾಡೋದು ಬೇಡ, ಅವರು ಬೆಳೆದ ಉತ್ಪನ್ನಗಳಿಗೆ ಸೂಕ್ತ ಬೆಲೆ ಕೊಟ್ರೆ ಸಾಕು, ಅವರೇ ಸಾಲ ಮರುಪಾವತಿ ಮಾಡುತ್ತಾರೆ ಎಂದರು.
ರೈತ ಈ ದೇಶದ ಬೆನ್ನೆಲುಬು. ತುಂಬಾ ಕಡೆ ಹೇಳಬೇಕೆಂದಿದ್ದೆ, ಸಾಲ ಮನ್ನಾ, ಸಾಲಾಮನ್ನಾ ಎಂದು ಹೇಳುತ್ತಾರೆ. ಆದರೆ ರೈತರ ಸಾಲಮನ್ನಾ ಮಾಡಬೇಕೆಂದಿಲ್ಲ. ಅವರಿಗೆ ನ್ಯಾಯವಾದ ಬೆಲೆ ನೀಡಿದರೆ ಸಾಕು. ಅವರೇ ಸಾಲ ಕಟ್ಟುತ್ತಾರೆ ಎಂದರು.
ಈ ಹಿಂದೆ ಮಂಡ್ಯದ ಸ್ವಾಭಿಮಾನಿ ಸಮಾವೇಶದಲ್ಲಿ ಮಾತನಾಡಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್, ರೈತರ ಮಗ, ಮಣ್ಣಿನ ಮಕ್ಕಳು ಎಂದು ಹೇಳಿಕೊಳ್ಳುತ್ತಾರಲ್ಲ, ಅವರು ಒಂದು ಲೋಟ ಹಾಲು ಕರೆದು ತೋರಿಸಲಿ ನೋಡೋಣ. ಬೇಡ, ಹಸು ಮರಿ ಹಾಕಿದಾಗ ಅದಕ್ಕೆ ಏನು ಆಹಾರ ಕೊಡುತ್ತಾರೋ ಹೇಳಿ ಬಿಡಲಿ ನೋಡೋಣ ಎಂದು ಪರೋಕ್ಷವಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ, ನಿಖಿಲ್ಗೆ ಸವಾಲು ಹಾಕಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯೋಗಾಭ್ಯಾಸದಿಂದ ವ್ಯಕ್ತಿಯ ಆತ್ಮಗೌರವ, ಹಾಗೂ ಆತ್ಮವಿಶ್ವಾಸವು ವೃದ್ಧಿಸುತ್ತದೆ. ನಿರಂತರವಾಗಿ ಯೋಗಾಭ್ಯಾಸವನ್ನು ರೂಢಿಸಿಕೊಂಡವರು ರೋಗಮುಕ್ತವಾದ ಜೀವನವನ್ನು ನಡೆಸಬಹುದು ಎಂದು ಪತಂಜಲಿ ಯೋಗ ಶಿಕ್ಷಣ ಸಮಿತಿಯ ಬೆಂಗಳೂರು ಪಶ್ಚಿಮ ವಲಯದ ಸಂಚಾಲಕ ಜಯರಾಮ್ ರವರು ಅಭಿಪ್ರಾಯಪಟ್ಟರು. ತಾಲ್ಲೂಕಿನ ಶ್ರೀಕ್ಷೇತ್ರ ಕೈವಾರದ ಶ್ರೀ ಯೋಗಿನಾರೇಯಣ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಯೋಗಾಭ್ಯಾಸ ಶಿಬಿರದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಯೋಗಾಭ್ಯಾಸವನ್ನು ಎಲ್ಲಿ ಬೇಕಾದರೂ ಮಾಡಬಹುದು. ಅದಕ್ಕೆ ವಿಶೇಷ ತಯಾರಿ ಅಥವಾ ಪರಿಕರಗಳೇನೂ ಬೇಕಾಗಿಲ್ಲ. ಯೋಗದಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಪ್ರಸ್ತುತ…
ಪಪ್ಪಾಯಿ ಹಣ್ಣಿನಲ್ಲಿ ಬರೀ ಪೋಷಕಾಂಶಗಳು ಮಾತ್ರವಲ್ಲ, ವ್ಯಾಧಿ ನಿಯಂತ್ರಿಸುವ ಶಕ್ತಿಯು ಅಡಗಿದೆ. ಮುಖ್ಯವಾಗಿ ಇದರಲ್ಲಿರುವ ಜಿಯೋ ಕ್ಯಾಂಟೀನ್ ಎಂಬ ಆಂಟಿ ಆಕ್ಸಿಡೆಂಟ್ ವೃದ್ಧಾಪ್ಯದ ಕಾಯಿಲೆಗಳು ಕಾಡದಂತೆ, ಆಸ್ತಮ ವ್ಯಾಧಿ ತಗುಲದಂತೆ ನೋಡಿಕೊಳ್ಳುತ್ತದೆ. ಅದರ ಜೊತೆಗೆ * ಪಪ್ಪಾಯದಲ್ಲಿನ ಬೀಟಾ ಕೆರೋಟಿನ್ ಕಾರಣದಿಂದ ಹೆಚ್ಚು ಪಪ್ಪಾಯಿ ತಿನ್ನುವವರಲ್ಲಿ ಕ್ಯಾನ್ಸರ್ ರೋಗ ಬರುವುದಿಲ್ಲ. ಪುರುಷರಲ್ಲಿನ ಪ್ರಾಸ್ಟೇಟ್ ಕ್ಯಾನ್ಸರ್ ತೊಂದರೆಯನ್ನು ಪಪ್ಪಾಯಿ ನಿಯಂತ್ರಿಸುತ್ತದೆ. * ಎಲುಬಿನ ಆರೋಗ್ಯಕ್ಕೆ ಅಗತ್ಯದ ವಿಟಮಿನ್ ಕೆ ಕೂಡ ಇದರಲ್ಲಿ ಹೆಚ್ಚಿದೆ. * ಸಕ್ಕರೆ ಕಾಯಿಲೆಯಲ್ಲಿ ಸಕ್ಕರೆ…
ಬಿಟ್ಕಾಯಿನ್ ಎನ್ನುವುದು ಅಂತರಜಾಲ ಲೋಕದಲ್ಲಿ ಬಳಕೆಗೆ ಬರುತ್ತಿರುವ ವರ್ಚುಯಲ್ ಹಣ. ಭಾರತದಲ್ಲಿ ರೂಪಾಯಿ, ಅಮೆರಿಕದಲ್ಲಿ ಡಾಲರುಗಳೆಲ್ಲ ಇದ್ದ ಹಾಗೆ ಅಂತರಜಾಲದ ಹಣ ಇದು. ಅಂತರಜಾಲ ಹೇಗೆ ಮಿಥ್ಯಾಲೋಕವೋ ಅಲ್ಲಿ ಚಲಾವಣೆಯಾಗುವ ಈ ಬಿಟ್ಕಾಯಿನ್” ಕೂಡ ವರ್ಚುಯಲ್, ಅಂದರೆ ಕಣ್ಣಿಗೆ ಕಾಣದ, ಕರೆನ್ಸಿಯೇ. ಮೂಲತಃ ನಾಣ್ಯ- ನೋಟುಗಳಾವುದೂ ಇಲ್ಲದ ಬಿಟ್ಕಾಯಿನ್ ಅಸ್ತಿತ್ವ ಕಂಪ್ಯೂಟರ್ ಪ್ರಪಂಚಕ್ಕೆ ಸೀಮಿತ
ಕರ್ನಾಟಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕಾಯ್ದೆಗೆ ಪ್ರಸ್ತಾವಿತ ತಿದ್ದುಪಡಿಯಲ್ಲಿನ ಕೆಲ ಅಂಶ ಕೈಬಿಡುವಂತೆ ಒತ್ತಾಯಿಸಿ ಖಾಸಗಿ ಆಸ್ಪತ್ರೆಗಳು ಶುಕ್ರವಾರ ಬೆಳಗ್ಗೆ 8 ಗಂಟೆಯಿಂದ ಶನಿವಾರ ಬೆಳಗ್ಗೆ 8ರ
ವರೆಗೆ 24 ತಾಸು ಹೊರರೋಗಿ ವಿಭಾಗದ ಸೇವೆ ಸ್ಥಗಿತಗೊಳಿಸಿ ಹೋರಾಟಕ್ಕಿಳಿದಿವೆ.
ಇತ್ತೀಚೆಗಷ್ಟೇ 1.5 ಕೋಟಿ ರೂಪಾಯಿ ಮೊತ್ತದ ಪ್ರತಿಷ್ಠಿತ ರೋಲೆಕ್ಸ್ ಪ್ರಶಸ್ತಿಗೆ ಪಾತ್ರರಾದ ವನ್ಯಜೀವಿ ತಜ್ಞೆ ಕೃತಿ ಕಾರಂತ್ ಅವರು, ಪ್ರಶಸ್ತಿಗಾಗಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಅರಣ್ಯ ಇಲಾಖೆ ಆರೋಪಿಸಿದೆ. ಖ್ಯಾತ ವನ್ಯಜೀವಿ ತಜ್ಞ ಉಲ್ಲಾಸ್ ಕಾರಂತ್ ಅವರ ಮಗಳು ಮತ್ತು ಖ್ಯಾತ ಸಾಹಿತಿ ದಿ. ಶಿವರಾಮ ಕಾರಂತ್ ಅವರ ಮೊಮ್ಮಗಳಾದ ಕೃತಿ ಕಾರಂತ್, ಆಧಾರ ರಹಿತ ಮತ್ತು ನಕಲಿ ದಾಖಲೆಗಳನ್ನು ನೀಡಿ ಈ ಪ್ರಶಸ್ತಿ ಪಡೆದುಕೊಂಡಿದ್ದಾರೆ ಎಂದು ಅರಣ್ಯ ಇಲಾಖೆ ಗಂಭೀರ ಆರೋಪ ಮಾಡಿದೆ. ಈ…
ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಅವರು ಮಾಜಿ ನಾಯಕ ಎಂಎಸ್ ಧೋನಿಯ ದಾಖಲೆಯೊಂದನ್ನು ಮುರಿಯುವುದರಲ್ಲಿದ್ದಾರೆ. ಶರ್ಮಾ ಇನ್ನೆರಡೇ ಸಿಕ್ಸ್ ಬಾರಿಸಿದರೂ ಏಕದಿನದಲ್ಲಿ ಭಾರತ ಪರ ಧೋನಿ ಮಾಡಿರುವ ಅತ್ಯಧಿಕ ಸಿಕ್ಸ್ ದಾಖಲೆ ಬದಿಗೆ ಸರಿಯಲಿದೆ.ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲೂ ರೋಹಿತ್ ಗೆ ಧೋನಿ ದಾಖಲೆ ಮುರಿಯಲು ಅವಕಾಶವಿತ್ತು. ಆದರೆ ಶರ್ಮಾ ಕೇವಲ 1 ರನ್ನಿಗೆ ಮುಜೀಬ್ ಉರ್ ರಹ್ಮಾನ್ಗೆ ವಿಕೆಟ್ ಒಪ್ಪಿಸಿ ನಿರ್ಗಮಿಸುವ ಮೂಲಕ ಅವಕಾಶ ಕಳೆದುಕೊಂಡಿದ್ದರು. ಗುರುವಾರ (ಜೂನ್ 27) ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ…