ಸಿನಿಮಾ

ಮಗನಂತಿರುವ ದರ್ಶನ್ ಚುನಾವಣೆಯಲ್ಲಿ ನಿಂತಿರುವ ಸುಮಲಾತರವರ ಪರ ನಿಲ್ತಾರ? ದರ್ಶನ್ ಹೇಳಿದ್ದೇನು ಗೊತ್ತಾ?

331

ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಸ್ಪರ್ಧಿಸುವುದು ಖಚಿತವಾಗಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿ ಬಿಡಲಿ. ತಾವು ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕಾರಣಕ್ಕೆ ಸುಮಲತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವುದು ಕಷ್ಟ ಎನ್ನಲಾಗಿದ್ದು, ಈ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರ್ ಜೆಡಿಎಸ್ ನಿಂದ ಕಣಕ್ಕಿಳಿಯಲಿದ್ದಾರೆ.

ಇದರ ನಡುವೆಯೇ ನಗರದ ಖಾಸಗಿ ಹೋಟೆಲಿನಲ್ಲಿ ನಡೆದ ‘ಯಜಮಾನ’ ಚಿತ್ರದ ಸಕ್ಸಸ್ ಪ್ರೆಸ್‍ಮೀಟ್ ನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ದರ್ಶನ್, ಅಂಬರೀಶ್ ಅವರು ಚುನಾವಣೆಗೆ ನಿಂತಾಗಲೂ ಪ್ರಚಾರಕ್ಕೆ ಹೋಗಿದ್ದೇನೆ. ಈಗಲೂ ಹೋಗುತ್ತೀನಿ. ಸುಮಲತಾ ಪರ ಪ್ರಚಾರ ಮಾಡುವುದು ನನ್ನ ಕರ್ತವ್ಯ ಎಂದು ಹೇಳಿದ್ದಾರೆ.

ಸುಮಲತಾ ಅಂಬರೀಶ್ ಚುನಾವಣೆಯಲ್ಲಿ ಸ್ಪರ್ಧಿಸಿ, ಚುನಾವಣಾ ಪ್ರಚಾರಕ್ಕೆ ಕರೆದರೆ ನಾನು ಹೋಗುತ್ತೇನೆ. ಅಲ್ಲದೆ ಚುನಾವಣೆಯಲ್ಲಿ ಸ್ಪರ್ಧಿಸಿದ ಸ್ನೇಹಿತರು ಯಾರೇ ಕರೆದರೂ ಪ್ರಚಾರಕ್ಕೆ ಹೋಗುತ್ತೇನೆ ಎಂದು ಇದೇ ವೇಳೆ ದರ್ಶನ್ ತಿಳಿಸಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದ್ದು, ಸುಮಲತಾ ಅಂಬರೀಶ್ ಪರವಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ