ಸಿನಿಮಾ

ನಮ್ಮ ಮೈಯಲ್ಲಿರುವ ರಕ್ತ ತೆಗೆದು ನಿಮ್ಮ ಕಾಲು ತೊಳಿಬೇಕು ಎಂದ ದರ್ಶನ್..!

144

ಇಂದು ನೀವು ತೋರಿಸುತ್ತಿರುವ ಪ್ರೀತಿಗೆ ನಮ್ಮ ಮೈಯಲ್ಲಿರುವ ರಕ್ತವನ್ನು ತೆಗೆದು ನಿಮ್ಮ ಕಾಲನ್ನು ತೊಳೆದರೂ ಅದು ಕಡಿಮೆಯೇ ಎಂದು ನಟ ದರ್ಶನ್ ಅವರು ಅಭಿಮಾನಿಗಳಿಗೆ ಹೇಳಿದ್ದಾರೆ.

ಪಕ್ಷೇತರ ಅಭ್ಯರ್ಥಿ ಸುಮಲತಾ ಅವರನ್ನು ಬೆಂಬಲಿಸಿ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ದರ್ಶನ್ ನಮ್ಮ ಬಗ್ಗೆ ಏನೇ ಮಾತಾಡಿದ್ರೂ ನಾವು ಕೋಪ ಮಾಡ್ಕೊಳಲ್ಲ, ಬೇಜಾರಿಲ್ಲ, ನೊಂದುಕೊಳ್ಳಲ್ಲ. ನಾವು ಅಂಬರೀಶ್​ ಅವರಿಗಾಗಿ, ಸುಮಲತಾ ಅಮ್ಮನಿಗಾಗಿ ಬಂದಿದ್ದೇವೆ ಎಂದು ನಟ ದರ್ಶನ ಹೇಳಿದರು.

ಮಂಡ್ಯದ ಸಿಲ್ವರ್​ ಜ್ಯುಬಿಲಿ ಪಾರ್ಕ್​ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್, ಇವತ್ತು ಬಹಳ ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ. ಮೈಯಲ್ಲಿರುವ ರಕ್ತವನ್ನು ತೆಗೆದು ನಿಮ್ಮ ಕಾಲನ್ನು ತೊಳೆದರೂ ಅದು ಕಡಿಮೆನೇ. ಯಾಕೆಂದರೆ ಈ ಉರಿ ಬಿಸಿಲಲ್ಲಿ ಅಲ್ಲಿಂದ ನಮ್ಮ ಜೊತೆ ನಡೆದುಕೊಂಡು ಬಂದಿದ್ದೀರಿ. ನಾನು ತಲಾ ಇಷ್ಟಿಷ್ಟು ಅಂತ ಯಾರಿಗೂ ಕೊಟ್ಟಿಲ್ಲ. ಅಪ್ಪಾಜಿ ಮೇಲಿನ ಪ್ರೀತಿಯಿಂದ ನೀವು ಬಂದಿದ್ದೀರಿ ಎಂದು ಹೇಳಿದರು.

ಇವತ್ತಿಂದ 18 ತಾರೀಕಿನವರೆಗೂ ನಮ್ಮ ಪೆರೇಡ್​ ನಡೆಯುತ್ತಿರುತ್ತದೆ.. ಅಣ್ಣಾ ನಿಮ್ಮ ಸೌಂಡ್​ ಜಾಸ್ತಿ ಇದೆ, ಈ ಸೌಂಡ್​ 18ರ ವರೆಗೂ ಹೀಗೇ ಇರಲಿ. 23ಕ್ಕೆ ರಿಸಲ್ಟ್​ ದಿನ ಮತಗಳು ನಿಮಗೇ ಬಿದ್ದಿರುತ್ತವೆ ಎಂದು ಕಾರ್ಯಕರ್ತರೊಬ್ಬರಿಗೆ ಹೇಳಿದರು.

ಅಮ್ಮ ಇಲ್ಲಿಗೆ ಬಂದು ನಿಂತಿದ್ದಾರೆ. ಅವರ ಮೇಲೆ ನೀವು ತುಂಬಾ ಪ್ರೀತಿ ತೋರುತ್ತಿದ್ದೀರ. ಮೇ 23 ರಂದು ಪಟ ಪಟಾ ಮೇಲೆ ಹೋಗುತ್ತಿರಬೇಕು. ನಮ್ಮನ್ನ ಬೈದೋರು ಕೆಳಗೆ ಹೋಗಬೇಕು. ಅಷ್ಟೇ ನಾನು ಕೇಳಿಕೊಳ್ಳೋದು ಎಂದು ದರ್ಶನ್ ಹೇಳಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ‘ಬಟಾಣಿ’ಯಲ್ಲಿರುವ 09 ಆರೋಗ್ಯಕಾರಿ ಉಪಯೋಗಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಬಟಾಣಿ ತಿಂದ್ರೆ ವಾಯು ಬರತ್ತೆ ಅನ್ನೋರೆಲ್ಲಾ ಇಲ್ಕೇಳಿ. ಬಟಾಣಿ ಗಿಡ ನಮ್ ದೇಶದಲ್ಲಿ ಹುಟ್ಟಿದಲ್ಲ. ಇದು ವಿಚಿತ್ರವಾಗಿರೋ ಗಿಡಗಳ ಸಾಲ್ನಲ್ಲಿ ಸೇರತ್ತೆ. ಆದ್ರೂ ಕೂಡಾ ಇದ್ರ ಉಪಯೋಗ ಇದ್ಯಲ್ಲಾ ಅದು ಒಂದೆರಡಲ್ಲ. ಇದ್ರಲ್ಲಿರೋ ಪಿಷ್ಟ ಇದ್ನ ಸಿಹಿಯಾಗಿರೋವಾಗೆ ಮಾಡ್ಸತ್ತೆ. ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಹೊಟ್ಟೆಗೆ ಸಂಬಂಧಿಸಿದ ಕ್ಯಾನ್ಸರನ್ನ ಗುಣಪಡ್ಸತ್ತೆ.

  • ಉಪಯುಕ್ತ ಮಾಹಿತಿ

    ಯಾವುದೇ ಹೊಸ ಗಡಿಯಾರಗಳನ್ನ ನೋಡಿದಾಗ ಅದರಲ್ಲಿ 10:10 ಟೈಮ್ ಗೆ ನಿಂತಿರುತ್ತದೆ ಯಾಕೆ ಗೊತ್ತಾ?

    ಹೌದು ನೀವು ಗಮನಿಸಿರಬಹುದು ನೀವು ಯಾವುದೇ ಗಡಿಯಾರಗಳನ್ನು ತರಲು ಅಂಗಡಿಗಳಿಗೆ ಹೋದಾಗ ಆ ಎಲ್ಲ ಗಡಿಯಾರಗಳು 10:10 ಸಮಯವನ್ನು ತೋರಿಸುತ್ತದೆ ಅಂದರೆ ಗಡಿಯಾರ ರೆಡಿಯಾಗಿ ಬಂದಿರುವಾಗ ಎಲ್ಲವು ಕೂಡ 10 :10 ಸಮಯದಲ್ಲಿ ನಿಂತಿರುತ್ತದೆ, ಅದು ಯಾಕೆ ಅನ್ನೋದು ನಿಮಗೆ ತಿಳಿಯದೆ ಇರಬಹುದು ಆದ್ರೆ ಇದರ ಹಿಂದಿದೆ ಕೆಲವು ಇಂಟ್ರೆಸ್ಟಿಂಗ್ ವಿಚಾರ ಅದು ಏನು ಅನ್ನೋದನ್ನ ಮುಂದೆ ನೋಡಿ. ನೀವು ಇದನ್ನು ಗಮನಿಸಿರಬಹುದು ಒಂದು ವೇಳೆ ಗಮನಿಸದೆ ಇದ್ರೆ ನೀವು ಒಮ್ಮೆ ಯಾವಾಗಲು ಗಡಿಯಾರದ ಅಂಗಡಿಗೆ ಹೋದಾಗ…

  • ಸುದ್ದಿ

    ಇಂದಿರಾ ಕ್ಯಾಂಟೀನ್ ಭವಿಷ್ಯವಿಂದು ಬಿಎಸ್‌ ಯಡಿಯೂರಪ್ಪನ ಕೈಯಲ್ಲಿ, ಮುಂದೆ ಏನಾಗುತ್ತೆ ನೋಡಿ..!

    ಇಂದಿರಾ ಕ್ಯಾಂಟೀನ್ ಪಾಲಿಕೆಗೆ ಹೊರೆಯಾಗುವುದೋ ಅಥವಾ ಇಲ್ಲವೋ ಎಂಬುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ತೀರ್ಮಾನದ ಮೇಲೆ ನಿಂತಿದೆ. ಏಕೆಂದರೆ, ರಾಜ್ಯ ಸರ್ಕಾರ ಪ್ರಸಕ್ತ ಬಜೆಟ್‌ನಲ್ಲಿ ಅನುದಾನ ನೀಡದ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ ಶೇ.50 ರಷ್ಟಾದರೂ ಅನುದಾನ ನೀಡುವಂತೆ ಬಿಬಿಎಂಪಿ ಸಲ್ಲಿಸಿದ್ದ ಪ್ರಸ್ತಾವನೆಗೆ ಹಣಕಾಸು ಇಲಾಖೆಯ ಸಂಪೂರ್ಣ ಒಪ್ಪಿಗೆ ದೊರಕಿಲ್ಲ. ಇಲಾಖೆಯು ಕ್ಯಾಂಟೀನ್ ನಿರ್ವಹಣೆಗೆ ಶೇ.25ರಷ್ಟು ಹಣ ಮಾತ್ರ ನೀಡುವುದಾಗಿ ತಿಳಿಸಿದೆ. ಈ ಸಂಬಂಧ ಕಡತ ಪ್ರಸ್ತುತ ಸಿಎಂ ಅವಗಾಹನೆಗೆ ಬಂದಿದ್ದು, ಮುಖ್ಯಮಂತ್ರಿ ಯವರು ಈ ಬಗ್ಗೆ…

  • ಸುದ್ದಿ

    ತನ್ನ ಬಾಡಿಗಾರ್ಡ್ ಆಗಿದ್ದವಳನ್ನೇ ಮದ್ವೆ ಆಗಿ ರಾಣಿಯನ್ನಾಗಿ ಮಾಡಿದ ರಾಜ.!?

    ಥೈಲ್ಯಾಂಡ್ ಮಹಾರಾಜ ವಜಿರಲೊಂಗ್ ಕಾರ್ನ್ ತಮ್ಮ ಅಂಗರಕ್ಷಕಿ ಯನ್ನೇ ಮದುವೆಯಾಗಿ ಅಚ್ಚರಿ ಮೂಡಿಸಿದ್ದಾರೆ. 66 ವರ್ಷದ ವಜಿರಲೊಂಗ್ ಕಾರ್ನ್ 40 ವರ್ಷದ ಸುಥಿದಾ ತಿಜಯ್‍ರನ್ನು ಮದುವೆಯಾಗಿದ್ದಾರೆ. ಈ ಬಗ್ಗೆ ರಾಜಭವನ ಅಧಿಕೃತವಾಗಿ ಮಾಹಿತಿಯನ್ನು ನೀಡಿದೆ. ಅಲ್ಲದೇ ಮದುವೆ ಸಂಬಂಧದ ವಿಡಿಯೋವನ್ನು ಬಿಡುಗಡೆ ಮಾಡಿದೆ. ಥೈಲ್ಯಾಂಡ್ ರಾಜರಾಗಿ 70 ವರ್ಷ ಆಳ್ವಿಕೆ ನಡೆಸಿದ್ದ ವಜಿರಲೊಂಗ್ ಕಾರ್ನ್ ಅವರ ತಂದೆ 2016ರಲ್ಲಿ ಸಾವನ್ನಪ್ಪಿದ್ದರು. ಆ ಬಳಿಕ ಇವರನ್ನು ರಾಜರನ್ನಾಗಿ ಘೋಷಣೆ ಮಾಡಲಾಗಿತ್ತು. ಸದ್ಯ ಅಧಿಕೃತವಾಗಿ ವಜಿರಲೊಂಗ್ ಕಾರ್ನ್ ಅಧಿಕಾರ ವಹಿಸಿಕೊಳ್ಳಲಿದ್ದು,…

  • ಸುದ್ದಿ

    ಮಧುಮಗಳಿಲ್ಲದೆ ಮದುವೆ ಮಾಡಿ ಮಗನ ಕನಸನ್ನು ನನಸು ಮಾಡಿದ ಪೋಷಕರು…!

    ವಧುವಿಲ್ಲದೆ ತನ್ನ 27 ವರ್ಷದ ಮಗನಿಗೆ ಅದ್ಧೂರಿಯಾಗಿ ಮದುವೆ ಮಾಡಿಸುವ ಮೂಲಕ ಮಗನ ಕನಸನ್ನು ನನಸು ಮಾಡಿದ ತಂದೆ… ಅಜಯ್ ಬಾರೋಟ್ ಸಣ್ಣ ಮಗುವಿರುವಾಗಲೇ ಆತನ ಹೆತ್ತವರು ಮಗ ದೊಡ್ಡವನಾದ ಬಳಿಕ ಆತನಿಗೆ ಅದ್ಧೂರಿಯಾಗಿ ಮದುವೆ ಮಾಡಬೇಕು ಎಂಬ ಕನಸು ಕಂಡಿದ್ದರು. ಆದರೆ ಅಜಯ್ ಬೆಳವಣಿಗೆಯಲ್ಲಿ ಕುಂಠಿತವಾದ ಕಾರಣ ಆತನಿಗೆ ಸಂಗಾತಿ ಹುಡುಕಲು ಮನೆಯವರಿಗೆ ಕಷ್ಟವಾಯಿತು. ಯಾಕಂದರೆ ಅಜಯ್ ಬೆಳೆಯುತ್ತಾ ಅಂಗವೈಕಲ್ಯದಿಂದ ಬಳಲತೊಡಗಿದ. ಹೀಗಾಗಿ ಆತನಿಗೆ ವಧು ಇಲ್ಲದೆ ಮದುವೆ ಮಾಡಲು ಕುಟುಂಬ ತೀರ್ಮಾನ ಮಾಡಿತ್ತು. ಹಾಗೆಯೇ…