ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರರಂಗದ ನಟರು ಗೌರವದಿಂದ ಮನೆಯಲ್ಲಿ ಇರಬೇಕು. ಪ್ರಚಾರಕ್ಕೆ ಬಂದು ಜೆಡಿಎಸ್ ಪಕ್ಷ ಹಾಗೂ ನಾಯಕರ ವಿರುದ್ಧ ಬಾಯಿಬಿಟ್ಟರೆ ಪರಿಣಾಮ ಸರಿ ಇರುವುದಿಲ್ಲ ಎಂದು ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ.

ಮಂಡ್ಯದಲ್ಲಿ ಕೆ.ಆರ್ ಪೇಟೆ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಕಾಂಗ್ರೆಸ್ ಪರ ಪ್ರಚಾರ ಮಾಡಿದ ಅವರು ಅಂಬರೀಶ್ ಬಗ್ಗೆ ನಮಗೆ ಈಗಲೂ, ಮುಂದೆಯೂ ಗೌರವವಿದೆ. ಆದರೆ ಇತರ ಚಲನಚಿತ್ರ ಕಲಾವಿದರ ಬಗ್ಗೆ ನನಗೆ ಅಸಮಾಧಾನವಿದೆ. ದರ್ಶನ್ ಮತ್ತು ಯಶ್ ಅವರು ಒಬ್ಬ ವ್ಯಕ್ತಿಯ ಪರ ಪ್ರಚಾರ ನಡೆಸುವುದು ಸರಿಯಲ್ಲ. ರಾಜಕೀಯಕ್ಕೂ ಅವರಿಗೂ ಏನು ಸಂಬಂಧ ಎಂದು ಪ್ರಶ್ನಿಸಿದ್ದಾರೆ.

ನಾವು ಟಿಕೆಟ್ ಗೆ ಕೊಟ್ಟ ಹಣದಲ್ಲಿ ಅವರು ಜೀವನ ನಡೆಸುತ್ತಿದ್ದಾರೆ. ಗೌರವದಿಂದ ಇರುವುದನ್ನು ಬಿಟ್ಟು, ನಮ್ಮ ಪಕ್ಷದ ಮತ್ತು ನಾಯಕರ ಬಗ್ಗೆ ರಾಜಕಾರಣ ಮಾತನಾಡಿದರೆ ಸುಮ್ಮನಿರುವುದಿಲ್ಲ. ನಮ್ಮ ಪಕ್ಷ ಅಧಿಕಾರದಲ್ಲಿದ್ದು, ನಿಮ್ಮ ಅಕ್ರಮಗಳ ಜಾತಕ ಹೊರ ತರಬೇಕಾಗುತ್ತದೆ. ನಮ್ಮ ಪಕ್ಷದ ಮುಖಂಡರ ಬಗ್ಗೆ ಲಘುವಾಗಿ ಮಾತನಾಡಿದರೆ ಸರಿ ಇರಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ನೀವು ಮನೆಯಲ್ಲಿ ಇದ್ದರೆ ನಿಮಗೆ ಗೌರವ, ಇಲ್ಲದಿದ್ದರೆ ದೇವೇಗೌಡ ಕುಟುಂಬದ ಬಗ್ಗೆ ಮಾತನಾಡಿದರೆ ನಿಮಗೆ ತಕ್ಕ ಪಾಠ ಕಲಿಸುತ್ತೇವೆ. ಸರ್ಕಾರ ನಮ್ಮದಿದೆ. ಸುಮ್ಮಿನಿದ್ರೆ ಸರಿ. ಇಲ್ಲಾಂದ್ರೆ ನಿಮ್ಮ ಆಸ್ತಿಪಾಸ್ತಿ ಬಗ್ಗೆ ತನಿಖೆ ನಡೆಸ್ತೀವಿ. ಶೂಟಿಂಗ್ ಮಾಡ್ಕೊಂಡು ಗೌರವವಾಗಿ ಇರಿ. ರಾಜಕಾರಣದ ಬಗ್ಗೆ ಮಾತಾಡಲು ನಿಮಗೆ ಹಕ್ಕಿಲ್ಲ. ನೀವು ಭಾರತ ದೇಶವನ್ನೇ ನೋಡಿಲ್ಲ. ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆ ನಿಮಗಿಲ್ಲ ಎಂದು ಹೇಳುವ ಮೂಲಕ ಶಾಸಕರು, ದರ್ಶನ್ ಹಾಗೂ ಯಶ್ಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒನ್ಪ್ಲಸ್ನ ಜನಪ್ರಿಯ ಸ್ಮಾರ್ಟ್ಫೋನ್ ಒನ್ಪ್ಲಸ್ 7 ಮತ್ತು ಒನ್ಪ್ಲಸ್ 7 ಪ್ರೊ ಮಾರುಕಟ್ಟೆಯಲ್ಲಿ ವಿಶೇಷವಾಗಿ ಸದ್ದು ಮಾಡಿದ್ದು, ಪ್ರೀಮಿಯಂ ಸ್ಮಾರ್ಟ್ಫೋನ್ ಬ್ರ್ಯಾಂಡ್ ಎಂಬ ಹೆಸರು ಕೂಡ ಗಳಿಸಿದೆ. ಒನ್ಪ್ಲಸ್ 7 ಸರಣಿಯ ಬಳಿಕ ಒನ್ಪ್ಲಸ್ 7T ಮತ್ತು 7T Pro ಎಂಬ ಎರಡು ನೂತನ ಮಾದರಿಗಳನ್ನು ಮಾರುಕಟ್ಟೆಗೆ ಪರಿಚಯಿಸಲಿದೆ. ಹೊಸ ಸ್ನ್ಯಾಪ್ಡ್ರ್ಯಾಗನ್ 855 Plus ಚಿಪ್ಸಹಿತ ನೂತನ ಸ್ಮಾರ್ಟ್ಫೋನ್ ಒನ್ಪ್ಲಸ್ 7T ಮತ್ತು 7T Pro ಬಿಡುಗಡೆಯಾಗುವ ನಿರೀಕ್ಷೆಯಿದೆ. ಈಗಾಗಲೇ ಒನ್ಪ್ಲಸ್ ಈ ಕುರಿತು ಸಿದ್ಧತೆ ನಡೆಸಿದ್ದು, ಸೋರಿಕೆಯಾದ ಚಿತ್ರದ ಪ್ರಕಾರ,…
ಇಂಗ್ಲಿಷ್ ಸಂಬಳಕ್ಕಾದರೆ, ಕನ್ನಡ ಉಂಬಳಕ್ಕೆ ಎಂಬ ಮಾತು ನಾಡಿನಲ್ಲಿ ಪ್ರಚಲಿತದಲ್ಲಿದೆ. ಆದರೆ, ಕನ್ನಡ ನಮ್ಮ ಸಂಬಳ ಹಾಗೂ ಉಂಬಳ ಎರಡಕ್ಕೂ ಆಗಬೇಕು. ಈ ದಿಸೆಯಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿದ್ದು, ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ದೊರಕಿಸಿಕೊಡುವ ದಿಸೆಯಲ್ಲಿ ಪ್ರಯತ್ನ ನಡೆಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ ಎರಡು ಸಂಸ್ಥೆಗಳು ಸೇರಿ ವಿವಿಧ ಕ್ಷೇತ್ರಗಳ ಸಾಧಕರಿಗೆ ೨೦೧೯ನೇ ಸಾಲಿನ ‘ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ ಮಾಡಿ. ಮಾತನಾಡಿದ…
ಸಾಮಾನ್ಯವಾಗಿ ನಟರ ಮಕ್ಕಳು ತಂದೆಯಂತೆಯೇ ಸಿನಿಮಾ ಕ್ಷೇತ್ರದ ಮೇಲೆ ಹೆಚ್ಚಿನ ಆಶಕ್ತಿ ಹೊಂದಿರುತ್ತಾರೆ. ಆದರೆ ನಟ ಅರುಣ್ ಸಾಗರ್ ಪುತ್ರ ಸಿನಿಮಾ ಬಿಟ್ಟು ಕ್ರೀಡಾ ವಿಭಾಗದಲ್ಲಿ ಆಶಕ್ತಿ ಹೊಂದಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಅರುಣ್ ಸಾಗರ್ ಪುತ್ರ ಸೂರ್ಯ ಸಾಗರ್ ವಿದೇಶಿ ಕ್ರೀಡೆ ಮಾಕ್ಸ್ ಮೌಥಾಯ್ಯಲ್ಲಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಹೌದು, ಅಂತರಾಷ್ಟ್ರೀಯ ಮಟ್ಟದ ಮಾಕ್ಸ್ ಮೌಥಾಯ್ ಸ್ಪರ್ಧೆ ಥಾಯ್ಲಂಡ್ನ ಪಟಾಯಲ್ಲಿ ನಡೆದಿತ್ತು. ಇದರಲ್ಲಿ ವಿವಿಧ ದೇಶಗಳು ಭಾಗಿಯಾಗಿದ್ದವು. ಇದೇ ರೀತಿ ಈ ಸ್ಪರ್ಧೆಯಲ್ಲಿ ಅರುಣ್…
ಈ ಬಾರಿಯ ವಿಶ್ವಕಪ್ನ ಹೈವೋಲ್ಟೇಜ್ ಪಂದ್ಯ ಭಾನುವಾರ ನಡೆಯಲಿದ್ದು, ಭಾರತ ಪಾಕಿಸ್ತಾನ ವಿರುದ್ಧ ಸೆಣಸಾಡಲಿದೆ. ಈ ಬಾರಿಯ ವಿಶ್ವಕಪ್ ಪಂದ್ಯಗಳಿಗೆ ಮಳೆರಾಯನೇ ವಿಲನ್ ಆಗುತ್ತಿದ್ದು, ಭಾನುವಾರವೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶ್ವಕಪ್ನಲ್ಲಿ ಭಾರತ ಹಾಗೂ ಪಾಕಿಸ್ತಾನ ಇದುವರೆಗೆ 6 ಪಂದ್ಯಗಳಲ್ಲಿ ಸೆಣಸಾಡಿದ್ದು, ಆರು ಬಾರಿಯೂ ಭಾರತವೇ ಗೆದ್ದು ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ. ಭಾನುವಾರ 7ನೇ ಪಂದ್ಯ ನಡೆಯಲಿದ್ದು ವಿಜಯಲಕ್ಷ್ಮಿ ಯಾರ ಪರವಾಗಿದ್ದಾಳೆ ಎನ್ನುವುದನ್ನು ಕಾದು ನೋಡಬೇಕಾಗಿದೆ. ವಿಶ್ವಕಪ್ ಪಂದ್ಯಾವಳಿಯಲ್ಲಿ ಬೆಂಗಳೂರಿನ…
ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ.
ಬೆಂಗಳೂರು(05-01-2023): ವಸತಿ ಯೋಜನೆಗಳ ಫಲಾನುಭವಿಗಳಿಗೆ ಗ್ರಾಮೀಣ ಭಾಗದಲ್ಲಿ ನೀಡುತ್ತಿದ್ದ ಸಹಾಯಧನ ಮೊತ್ತವನ್ನು 1.20 ಲಕ್ಷ ರೂ.ನಿಂದ 3 ಲಕ್ಷ ರೂ.ಗೆ ಹಾಗೂ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ನೀಡುತ್ತಿದ್ದ 2.70 ಲಕ್ಷ ರೂ.ನಿಂದ 4 ಲಕ್ಷ ರೂ.ಗೆ ಹೆಚ್ಚಳ ಮಾಡುವ ಮಹತ್ವದ ತರ್ಮಾನಕ್ಕೆ ಸರ್ಕಾರ ಮುಂದಾಗಿದೆ. ಬಡತನರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಸೂರು ಕಲ್ಪಿಸುವ ಬಸವ, ಅಂಬೇಡ್ಕರ್ ಸೇರಿ ರಾಜ್ಯದಲ್ಲಿ ಜಾರಿಯಲ್ಲಿರುವ ವಸತಿ ಯೋಜನೆಗಳಿಗೆ ನೀಡುವ ಸಹಾಯಧನದ ಮೊತ್ತ ಹೆಚ್ಚಳವಾಗಲಿದೆ. ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲ ಮಾಡಿಕೊಡುವ ಹಾಗೂ…