ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಸೂರಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಆರಾಧನೆಯೊಡನೆ ಆರಂಭವಾಗುವ ನವರಾತ್ರಿ ವೈಭವದ ವಿಜಯ ದಶಮಿಯ ಮೈಸೂರು ದಸರಾ ಮಹೋತ್ಸವಕ್ಕೆ ಅದರದೇ ಆದ ಐತಿಹಾಸಿಕ ಪರಂಪರೆ ಹಾಗೂ ಸಾಂಸ್ಕೃತಿಕ ಹಿರಿಮೆ ಇದೆ.

ವಿಜಯನಗರ ಸಾಮ್ರಾಜ್ಯದ ಅರಸರ ಕಾಲದಲ್ಲಿ ಆರಂಭಗೊಂಡು ಆಚರಿಸಲ್ಪಡುತ್ತಿದ್ದ ನವರಾತ್ರಿ ಉತ್ಸವದ ವಿಜಯ ದಶಮಿಯ ದಸರಾ ಹಬ್ಬಕ್ಕೆ ಇನ್ನೂ ಹೆಚ್ಚಿನ ವೈಭವದ ವರ್ಣಮಯ ಕಳೆ ತಂದುಕೊಟ್ಟವರು ವಿಜಯನಗರ ಅರಸರಲ್ಲೇ ಅತ್ಯಂತ ಪ್ರಖ್ಯಾತರಾಗಿದ್ದ ಶ್ರೀ ಕೃಷ್ಣದೇವರಾಯರು. ಆಗ ಹಂಪೆಯಲ್ಲಿರುವ ಮಹಾನವಮಿ ದಿಬ್ಬ ಮತ್ತು ವಿಜಯ ವಿಠಲ ದೇವಾಲಯಗಳು ಈ ಮಹೋತ್ಸವದ ಕೇಂದ್ರಗಳಾಗಿದ್ದವು.
ತಮ್ಮ ಸಾಮ್ರಾಜ್ಯದ ಶಕ್ತಿ-ಸಾಮರ್ಥ್ಯ, ಸಂಪತ್ತು-ಸಮೃದ್ಧಿ, ವೈಭವ-ವೈಭೋಗ, ವೀರತ್ವ-ಧೀರತ್ವ, ಕಲೆ-ಸಾಹಿತ್ಯ, ಸಂಗೀತ-ನೃತ್ಯ, ಸಂಸ್ಕೃತಿ-ಸಂಪನ್ನತೆ ಹೀಗೆ ಸಕಲ ವಿಧಗಳಲ್ಲೂ ತಮ್ಮ ಹಿರಿಮೆ-ಗರಿಮೆಗಳನ್ನು ತೋರ್ಪಡಿಸಿಕೊಳ್ಳುವ ಹಿನ್ನೆಲೆಯಲ್ಲಿ ಬಹುಮುಖ್ಯವಾಗಿ ವಿಜಯದ ದ್ಯೋತಕವಾಗಿ ವಿಜಯದಶಮಿಯ ಈ ದಸರಾ ಮಹೋತ್ಸವವನ್ನು ವಿಜಯನಗರ ಅರಸರು ಆಚರಿಸುತ್ತಿದ್ದರು.

ವಿಜಯದಶಮಿಯ ದಸರಾ ಮಹೋತ್ಸವವನ್ನು ವಿಜಯನಗರ ಸಾಮ್ರಾಜ್ಯದ ಪತನದ ನಂತರ ಮುಂದುವರಿಸಿಕೊಂಡು ಬಂದವರು ಯದುವಂಶದ ಮೈಸೂರು ಒಡೆಯರು. ಇವರಲ್ಲಿನ 9ನೇ ಆಳ್ವಿಕೆಯ ರಾಜ ಒಡೆಯರು (1578-1617) ಅಂದು ತಮ್ಮ ರಾಜಧಾನಿಯಾಗಿದ್ದ ಶ್ರೀರಂಗಪಟ್ಟಣದಲ್ಲಿ 1610ರಲ್ಲಿ ವಿಜಯನಗರದ ರಾಜ ಪರಂಪರೆಯಂತೆ ನವರಾತ್ರಿ ಉತ್ಸವದ ವಿಜಯ ದಶಮಿಯ ದಸರಾ ಮಹೋತ್ಸವವನ್ನು ಮೊದಲಿಗೆ ಆರಂಭಿಸಿದರು.

ಥೇಟ್ ವಿಜಯನಗರ ಅರಸರ ಸಂಪ್ರದಾಯದಂತೆಯೇ ದಸರಾಕ್ಕೆ ಸಂಬಂಧಿಸಿದ ಎಲ್ಲಾ ರೀತಿಯ ಶಾಸ್ತ್ರ ಹಾಗೂ ವಿಧಿ-ವಿಧಾನಗಳನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಅಳವಡಿಸಿಕೊಂಡರು. ಈ ಪ್ರಕಾರ ಅಶ್ವಯುಜ ಶುದ್ಧ ಪ್ರಥಮೆಯಂದು ನವರಾತ್ರಿ ಉತ್ಸವ ಶುರುವಾಗಿ ಮಹಾನವಮಿಯ ಕಡೇ ದಿನದವರೆವಿಗೂ ಪ್ರತಿನಿತ್ಯ ಪೂಜೆ-ಪುನಸ್ಕಾರ, ಪೂರ್ವಾಹ್ನ ಮತ್ತು ಮಧ್ಯಾಹ್ನ ಸಿಂಹಾಸನಾರೋಹಣ, ಒಡ್ಡೋಲಗ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಬೇಕೆಂದು ಪಕ್ಕಾ ವಿಧೇಯಕವನ್ನೇ ಮಾಡಿ ದಸರಾ ಹಬ್ಬವನ್ನು ಆಚರಣೆಗೆ ತಂದಿದ್ದು, 1799ರವರೆಗೂ ಮೈಸೂರು ರಾಜ್ಯದ ರಾಜಧಾನಿಯಾಗಿದ್ದ ಶ್ರೀರಂಗಪಟ್ಟಣದಲ್ಲೇ ದಸರಾ ನಡೆಯುತ್ತಿತ್ತು.

ಹೈದರಾಲಿ ಮತ್ತು ಟಿಪ್ಪುವಿನ ಆಳ್ವಿಕೆಯ ನಂತರ ಮತ್ತೆ ಅಧಿಕಾರಕ್ಕೆ ಬಂದ ಯದುಕುಲ ತಿಲಕ ಶ್ರೀ ಮುಮ್ಮಡಿ ಕೃಷ್ಣರಾಜ ಒಡೆಯರ್ ಆಳ್ವಿಕೆ ಕಾಲಕ್ಕೆ (1799-1868) ರಾಜ್ಯದ ರಾಜಧಾನಿ ಶ್ರೀರಂಗಪಟ್ಟಣದಿಂದ ಮೈಸೂರಿಗೆ ವರ್ಗವಾಯಿತು. ಅಲ್ಲಿಂದ ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರ ಅತೀವ ಕಾಳಜಿಯಿಂದ ಮತ್ತಷ್ಟು ವಿಜೃಂಭಣೆಯಿಂದ 1800ರಲ್ಲಿ ಮೈಸೂರಿನಲ್ಲಿ ದಸರಾ ಪ್ರಾರಂಭವಾಗಿ “ಮೈಸೂರು ದಸರಾ” ಎಂದು ವಿಶ್ವವಿಖ್ಯಾತಿಯಾಯಿತು.

ವಿಜಯದಶಮಿಯಂದು ಮಧ್ಯಾಹ್ನ ಮಹಾರಾಜರು ಅಲಂಕೃತ ಆನೆಯ ಮೇಲಿನ ಚಿನ್ನದ ಅಂಬಾರಿಯನ್ನೇರಿ ವೈಭವದ ಜಂಬೂಸವಾರಿಯಲ್ಲಿ ಅಂಬಾ ವಿಲಾಸ ಅರಮನೆಯಿಂದ ಹೊರಟು ಬನ್ನಿಮಂಟಪಕ್ಕೆ ತೆರಳಿ ಬನ್ನಿಪೂಜೆ ಮಾಡಿ ಧ್ವಜ ಹಾರಿಸಿ ಸೈನಿಕರಿಂದ ವಂದನೆ ಸ್ವೀಕರಿಸಿ ನಂತರ ತಾವು ಬಂದ ರಾಜ ಮಾರ್ಗದಲ್ಲೇ ಅರಮನೆಗೆ ವಾಪಸ್ಸಾಗುವ ಈ ಜಂಬೂ ಸವಾರಿಯೇ ಮೈಸೂರು ದಸರೆಯ ಅಂದಿನ ಪ್ರಮುಖ ಆಕರ್ಷಣೆಯಾಗಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮತಗಟ್ಟೆಗೆ ಹೋಗುವ ನಾವು, ನಮಗೆ ಇಷ್ಟವಾದ ಪಕ್ಷಕ್ಕೋ, ಅಭ್ಯರ್ಥಿಗೋ ವೋಟ್ ಹಾಕಿ ಬಂದುಬಿಡ್ತಿವಿ.ಆದರೆ ನಾವು ಹಾಕಿದ ವೋಟ್, ನಾವು ಚುನಾಯಿಸಿದ ಅಭ್ಯರ್ಥಿಗೆ ಅಥವಾ ಪಕ್ಷಕ್ಕೆ ಬಿದ್ದಿದೆಯೇ ಎಂಬುವ ಗ್ಯಾರಂಟಿ ಯಾರು ಕೊಡುತ್ತಾರೆ..? ಹೌದು, ಇದು ಸಹಜವಾಗಿ ಎಲ್ಲರಲ್ಲೂ ಮೂಡುವ ಪ್ರಶ್ನೆ. ಹಾಗಾದ್ರೆ ನಾವು ಚುನಾಯಿಸಿದ ಅಭ್ಯರ್ಥಿ ಅಥವಾ ಪಕ್ಷಕ್ಕೆ ನಮ್ಮ ವೋಟ್ ಬಿದ್ದಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳುವುದು ಹೇಗೆ..? ವಿವಿಪ್ಯಾಟ್ ಅಂದ್ರೆ ಏನು..? ವಿವಿಪ್ಯಾಟ್ ಅಂದರೆ “ವೋಟರ್ ವೆರಿಫಯಬಲ್ ಆಡಿಟ್ ಟ್ರಯಲ್” ಎಂದು. ಇದನ್ನು ಇಲೆಕ್ಟ್ರಾನಿಕ್ ವೋಟಿಂಗ್ ಮಷಿನ್’ಗೆ ಜೋಡಿಸಲಾಗಿರುತ್ತದೆ.ಇದರಿಂದ…
ಬಾಯಿ ಹುಣ್ಣು ಸಾಮಾನ್ಯವಾಗಿ ಎಲ್ಲಾ ವಯಸ್ಸಿನವರಲ್ಲೂ ಕಂಡು ಬರುತ್ತದೆ. ಬಾಯಿ ಹುಣ್ಣು ಆದರೆ ಊಟಮಾಡುವುದು, ನೀರು ಕುಡಿಯುವುದು ಎಲ್ಲವೂ ಕಷ್ಟವಾಗುತ್ತದೆ. ಇದಕ್ಕೆ ಹಲವು ಬಗೆಯ ಮಾತ್ರೆಗಳನ್ನ ತೆಗೆದು ಕೊಂಡರು ಇದು ಕಡಿಮೆಯಾಗುವುದಿಲ್ಲ. ಈ ಬಾಯಿ ಹುಣ್ಣು ಕಾಣಿಸಿಕೊಳ್ಳಲು ಕಾರಣವೇನು…? ಈ ಬಾಯಿ ಹುಣ್ಣನ್ನ ಕಡಿಮೆ ಮಾಡುವುದು ಹೇಗೆ…? ಎಂಬುದಕ್ಕೆ ಇಲ್ಲಿದೆ ಮಾಹಿತಿ ಓದಿ ತಿಳಿಯಿರಿ… ಬಾಯಿ ಹುಣ್ಣಿಗೆ ಮುಖ್ಯ ಕಾರಣಗಳು:- ಬಾಯಿ ಸ್ವಚ್ಛವಾಗಿ ಇಲ್ಲದೆ ಇರುವುದು, ಬಿ ಕಾಂಪ್ಲೆಕ್ಸ್ ಕೊರತೆ ಇರುವುದು, ವೈರಸ್ ಬ್ಯಾಕ್ಟೀರಿಯಾ , ಫಂಗಲ್…
ಎಳನೀರಿನಲ್ಲಿ ಪ್ರೋಟೀನ್, ಕಾರ್ಬೋಹೈಡ್ರೇಟ್, ವಿವಿಧ ಬಗೆಯ ವಿಟಮಿನ್ ಮತ್ತು ಖನಿಜಾಂಶಗಳಿವೆ. ಆಂಟಿಆಕ್ಸಿಡೆಂಟ್ ಗುಣವಿರುವ ಎಳನೀರು ರೋಗಗಳನ್ನು ತಡೆಯಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ಬಾಯಾರಿಕೆ, ದಣಿವಾರಿಸಲು ಮಾತ್ರ ಎಳನೀರು ಬೆಸ್ಟ್ ಅಲ್ಲ. ಎಲ್ಲ ಕಾಲದಲ್ಲಿಯೂ ಎಳನೀರು ಸೇವನೆ ಮಾಡಬೇಕು
ಹೊರಗಡೆ ಗಂಡನಾದವನು ಎಷ್ಟೇ ಫೇಮಸ್ ಆಗಿದ್ರೂ ಹೆಂಡತಿಗೆ ಮಾತ್ರ ಗಂಡನೇ ಎಂಬ ಗಾದೆಗೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಹೊಸ ‘ಸಾಕ್ಷಿ’ಯಾಗಿದ್ದಾರೆ. ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಕೂಲ್ ಕ್ಯಾಪ್ಟನ್ ಮಾತ್ರ ಅಲ್ಲ, ಹೆಂಡತಿಗೆ ಒಳ್ಳೆ ಪತಿ ಕೂಡ ಎನ್ನುವುದನ್ನು ತೋರಿಸಿ ಕೊಟ್ಟಿದ್ದಾರೆ. ಟೀಂ ಇಂಡಿಯಾದ ಮಾಜಿ ನಾಯಕನಾದರೂ ಸಾರ್ವಜನಿಕ ಸ್ಥಳದಲ್ಲಿ ಪತ್ನಿ ಸಾಕ್ಷಿ ಕಾಲಿಗೆ ಚಪ್ಪಲಿ ತೊಡಿಸುವ ಮೂಲಕ ಧೋನಿ ಸರಳತೆ ಮೆರೆದಿದ್ದಾರೆ. ಧೋನಿ ಪತ್ನಿ ಕಾಲಿಗೆ ಚಪ್ಪಲಿ…
ಬಿಸಿ ಬಿಸಿ ತಿಂಡಿ ಟೇಬಲ್ ಮೇಲೆ ರೆಡಿ ಇದ್ದರೂ ತಿನ್ನುವಷ್ಟು ವ್ಯವಧಾನ ನಮ್ಮ ಜನರಿಗೆ ಇರುವುದಿಲ್ಲ. ಹರಿಬಿರಿ ಮಾಡಿಕೊಂಡು ಬ್ಯಾಗ್ ನೇತಾಕಿಕೊಂಡು, ನಾನು ಆಫೀಸ್ ನಲ್ಲೇ ತಿನ್ನುತ್ತೇನೆ ಎಂದು ಹೊರಡುವವರೇ ಹೆಚ್ಚು. ಕೆಲವರು ಹಾಸಿಗೆಯಿಂದ ಏಳುವುದು ತಡ ಮಾಡಿಕೊಂಡು ತಿನ್ನದೆ ಹಾಗೆ ಹೊರಟರೆ, ಇನ್ನು ಕೆಲವರಿಗೆ ಬೆಳಗ್ಗೆ ತಿನ್ನಬೇಕೆಂದರೆ ಅಲರ್ಜಿ. ಆದರೆ ನೀವು ಬೆಳಗಿನ ಹೊತ್ತು ಉಪಹಾರ (ಬ್ರೇಕ್ ಫಾಸ್ಟ್) ಸೇವಿಸಿದಿದ್ದರೆ ಮುಂದೆ ಏನೆಲ್ಲಾ ತೊಂದರೆಗಳನ್ನು ಎದುರಿಸ ಬೇಕಾಗುತ್ತದೆ ಗೊತ್ತಾ? ಇಲ್ಲಿ ನೋಡಿ. ಹೃದಯಾಘಾತದ ಸಾಧ್ಯತೆ ಜಾಮಾ…
ಜೀವನದ ಪಾಠವನ್ನು ಹಸಿವು ಅನ್ನೊದ್ದು ಅತಿ ಬೇಗನೆ ಕಲಿಸಿ ಕೊಡುತ್ತದೆ ಅನ್ನಬಹುದು. ಬಡತನದಲ್ಲಿ ಬೆಂದು ನೊಂದು ಹಲವರ ಬಾಯಲ್ಲಿ ಬೋಯಿಸಿಕೊಂಡು ಜೀವನವನ್ನು ಸಾಗಿಸುತ್ತ, ಇವುಗಳ ಮದ್ಯೆ ತನ್ನ ಮಗನನ್ನು ಐಎಎಸ್ ಅಧಿಕಾರಿಯನ್ನಾಗಿ ಮಾಡಬೇಕು ಅನ್ನೋ ಕನಸನ್ನು ಹೊತ್ತು ಶ್ರಮ ಪಟ್ಟ ಆ ಶ್ರಮ ಜೀವಿಗೆ ಆ ದೇವರು ಪ್ರತಿ ಫಲವನ್ನು ಕೊಟ್ಟಿದ್ದಾನೆ.