ಸುದ್ದಿ

ಮಗಳ ಮದುವೆಗೆ ಲಕ್ಷಾಂತರ ರೂ. ಸಾಲ ಮಾಡಿ ರೈಲಿಗೆ ಸಿಕ್ಕಿ ತಂದೆ ಆತ್ಮಹತ್ಯೆ…!

799

ಉಡುಪಿ: ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲಾಗದೆ ತಂದೆ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ.

ದಿನೇಶ್ ಆತ್ಮಹತ್ಯೆಗೆ ಶರಣಾದ ತಂದೆ. ಇವರು ಮಣಿಪಾಲದಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಅಲ್ಲದೆ ದಿನೇಶ್ ಇತ್ತೀಚೆಗಷ್ಟೇ ಸಾಲ ಮಾಡಿ, ಮಗಳ ಮದುವೆ ಮಾಡಿಸಿದ್ದರು. ಈ ಮದುವೆ ಸಾಲದ ಜೊತೆಗೆ ಟ್ಯಾಕ್ಸಿ ಕೂಡಾ ಅಪಘಾತಕ್ಕೀಡಾಗಿತ್ತು.

ಇದರಿಂದ ಚಿಂತೆಗೀಡಾಗಿದ್ದ ದಿನೇಶ್, ಉಡುಪಿಯ ಇಂದ್ರಾಳಿ ಬಳಿಯ ರೈಲ್ವೆ ಟ್ರ್ಯಾಕ್‍ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟ್ಯಾಕ್ಸಿಯಲ್ಲಿ ದುಡಿದು ಮನೆ ನಿಭಾಯಿಸುವ ಜೊತೆಗೆ ಮದುವೆಗೆ ಮಾಡಿದ್ದ ಸಾಲ ತೀರಿಸುವುದಾಗಿ ಲೆಕ್ಕಾಚಾರ ಹಾಕಿದ್ದರು. ಟ್ಯಾಕ್ಸಿ ಅಪಘಾತಕ್ಕೀಡಾಗಿ ಬಹಳ ನಷ್ಟವಾಗಿತ್ತು.

ಇದರಿಂದ ಮನನೊಂದು ದಿನೇಶ್ ಆತ್ಮಹತ್ಯೆಯ ನಿರ್ಧಾರ ಮಾಡಿರಬಹುದು ಎನ್ನಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ