ಸುದ್ದಿ

ಟಿಕ್‌ಟಾಕ್‌ಗೆ ಮತ್ತೊಂದು ಬಲಿ : ಕೋಲಾರದಲ್ಲಿ ಕೃಷಿ ಹೊಂಡದ ಬಳಿ ವಿಡಿಯೋ ಮಾಡಲು ಹೋಗಿ ವಿದ್ಯಾರ್ಥಿನಿ ಸಾವು…!

51

ಟಿಕ್ ಟಾಕ್ ಹಾವಳಿ ಎಲ್ಲೇ ಮೀರುತ್ತಿದೆ. ಈ ಆ್ಯಪ್​​ ನಿಷೇಧವಾಗಬೇಕೆಂಬ ಕೂಗು ಕೇಳಿಬರುತ್ತಿರುವ ಬೆನ್ನಲ್ಲೇ ಟಿಕ್​ಟಾಕ್​ ಆ್ಯಪ್​ನಿಂದ ಜೀವ ಕಳೆದುಕೊಳ್ಳುತ್ತಿರುವವ ಸಂಖ್ಯೆಯೂ ಹೆಚ್ಚುತ್ತಿದೆ. ತುಮಕೂರಿನಲ್ಲಿ ಯುವಕನೊರ್ವ ಪ್ರಾಣ ಕಳೆದುಕೊಂಡ ಬೆನ್ನಲ್ಲೇ, ಇದೀಗ ಕೋಲಾರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಟಿಕ್​ಟಾಕ್​ ಕ್ರೇಜ್​​ಗೆ ಬಲಿಯಾಗಿದ್ದಾಳೆ.


ಮಾಲಾಗೆ ವಿಪರೀತ ಟಿಕ್​ಟಾಕ್​ ಗೀಳು ಅಂಟಿಕೊಂಡಿತ್ತು. ಹೀಗಾಗಿ ಕೂತಲ್ಲಿ ನಿಂತಲ್ಲಿ ಟಿಕ್​ಟಾಕ್​ ಚಿತ್ರೀಕರಿಸುತ್ತಿದ್ದಳು. ಇದೇ ರೀತಿ ಅಪಾಯಕಾರಿ ಕೃಷಿ ಹೊಂಡದ ಬಳಿ ಟಿಕ್​ಟಾಕ್​ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾಳೆ. ಕೋಲಾರದ ಸರಕಾರಿ ಮಹಿಳಾ ಕಾಲೇಜಿನಲ್ಲಿ ಮಾಲಾ ಬಿಎ ಅಂತಿಮ ವರ್ಷದ ವ್ಯಾಸಂಗ ಮಾಡುತ್ತಿದ್ದಳು. ಕೃಷಿ ಹೊಂಡದ ಬಳಿ ಟಿಕ್‌ ಟಾಕ್ ವೀಡಿಯೋ ಚಿತ್ರೀಕರಿಸೋ ವೇಳೆ ವಿದ್ಯಾರ್ಥಿನಿ ಕೃಷಿ ಹೊಂಡಕ್ಕೆ ಬಿದ್ದು ಉಸಿರುಗಟ್ಟಿ ಮಾಲಾ ಮೃತಪಟ್ಟಿದ್ದಾಳೆ. ಈ ಸಂಬಂಧ ಕೋಲಾರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ

ಇತ್ತೀಚಿಗಷ್ಟೇ ತುಮಕೂರಿನ ಚಿಕ್ಕನಾಯಕನಹಳ್ಳಿಯ ಯುವಕನೊರ್ವ ಗೋಡೆಕೆರೆ ಗ್ರಾಮದಲ್ಲಿ ವೀಡಿಯೋ ಸ್ಟಂಟ್‌ ಮಾಡಲು ಹೋಗಿದ್ದ ಕುಮಾರ್‌ ಎಂಬವರು ಕತ್ತು, ಬೆನ್ನು ಮೂಳೆ ಮುರಿದುಕೊಂಡು ಆಸ್ಪತ್ರೆ ಸೇರಿದ್ದರು. ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದರು. ಇದೇ ರೀತಿ ದೇಶದಾದ್ಯಂತ ಟಿಕ್​ಟಾಕ್​ ಗೆ ಬಲಿಯಾಗುವವರ ಸಂಖ್ಯೆ ಹೆಚ್ಚುತ್ತಲೇ ಇದೆ.


ಒಟ್ಟಾರೆ, ಸಾಮಾಜಿಕ ಜಾಲತಾಣದಲ್ಲಿ ಜನಪ್ರಿಯ ಆ್ಯಪ್‌ಗಳಲ್ಲಿ ಒಂದಾಗಿರುವ ಟಿಕ್‌ ಟಾಕ್‌ ಹೆಚ್ಚು ಕುಖ್ಯಾತಿ ಪಡೆದುಕೊಳ್ಳುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಭವಿಷ್ಯ

    ಶ್ರೀ ರಾಮ ನವಮಿ ಶುಭದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ. ವೃಷಭ:- ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ…

  • ವಿಚಿತ್ರ ಆದರೂ ಸತ್ಯ

    ಈ ಮಗುವಿನ ತೂಕ ಇದ್ದಕ್ಕಿದ್ದಂತೆ ದಿಢೀರನೆ ಜಾಸ್ತಿಯಾಗುತ್ತಾ ಹೋಗುತ್ತೆ..!ಏಕೆ ಗೊತ್ತಾ..???

    ಈ ಮಗು ತಿಂಗಳಿಗೆ 2 ಕೆಜಿ ಜಾಸ್ತಿ ಆಗ್ತಾ ಇದೆಯಂತೆ! ಮಗುವಿನ ತೂಕ ಹೆಚ್ಚಾಗದಂತೆ ತಡೆಯಲು ಹೆತ್ತವರು ಚಿಕಿತ್ಸೆ ಕೊಡಿಸುತ್ತಿದ್ದಾರೆ. ಚಿಕಿತ್ಸೆಗಾಗಿಯೇ ತಿಂಗಳಿಗೆ ಬರೋಬ್ಬರಿ 2.5 ಇಂದ 3 ಲಕ್ಷ ರೂಪಾಯಿ ಖರ್ಚಾಗುತ್ತಿದೆಯಂತೆ.

  • ಸುದ್ದಿ

    ಕೋಲಾರದಲ್ಲಿ ಹೆರಿಗೆ ನೋವಿಂದ ಆಸ್ಪತ್ರೆಯಲ್ಲಿ ನೆಲದ ಮೇಲೆ 4 ಗಂಟೆ ನರಳಿದ ಮಹಿಳೆ, ವೀಡಿಯೋ ವೈರಲ್….!

    ಚಿನ್ನದ ನಾಡು ಕೆಜಿಎಫ್ ನ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬಳು ಹೆರಿಗೆ ನೋವಿನಿಂಡ ಬಳಲುತ್ತಿದ್ದರೂ ಸೂಕ್ತ ಸಮಯಕ್ಕೆ ವೈದ್ಯರು ಶುಶ್ರೂಷೆ ಮಾಡದ ಕಾರಣ ತಾಯಿಯೊಬ್ಬಳು ತನ್ನ ಮಗುವನ್ನು ಕಳೆದುಕೊಂಡ ಅಮಾನವೀಯ ಘಟನೆ ನಡೆದಿದೆ. ಗರ್ಭಿಣಿ ಮಹಿಳೆ ಹೆರಿಗೆ ನೋವಿನಿಂದ ಒದ್ದಾಡುತ್ತಿರುವ ವೀಡಿಯೋ ದೃಶ್ಯಗಳು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕೆಜಿಎಫ್ 8ನೇ ಬ್ಲಾಕ್‍ನ ರಿಯಾಜ್ ಎಂಬವರ ಪತ್ನಿ ಸಮೀನಾ ಅವರಿಗೆ ಸೋಮವ್ರ ಮಧ್ಯಾಹ್ನ ಹೆರಿಗೆ ನೋವು ಕಾಣಿಸಿದೆ. ಆಕೆಯನ್ನು ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…

  • inspirational

    ಮಗಳನ್ನು ಸರ್ಕಾರಿ ಅಂಗನವಾಡಿಗೆ ಸೇರಿಸಿ ಮಾದರಿಯಾದ ಕೊಡಗು SP..!

    ಕೊಡಗು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ತಮ್ಮ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸುವ ಮೂಲಕ ಮಾದರಿಯಾಗಿದ್ದರೆ. ತಮ್ಮ ಪುಟ್ಟ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸಿ  ಕನ್ನಡ ಕಲಿಗೆ ಒತ್ತು ನೀಡಿದ್ದಾರೆ.ಗ್ರಾಮೀಣ ಮಕ್ಕಳೊಂದಿಗೆ ಬೆರೆಯುವ ಉದ್ದೇಶದಿಂದ ಮಗುವನ್ನು ಅಂಗನವಾಡಿಗೆ ನಿತ್ಯವೂ ಕಳಿಸಿ ತಾವು ಕೆಲಸಕ್ಕೆ ತೆರಳುತ್ತಾರೆ ಸುಮನ್. ಕಲಿಕೆ, ಆಟ, ಊಟದ ಜೊತೆಗೆ ಮಕ್ಕಳೊಂದಿಗೆ ಈ ಅಂಗನವಾಡಿಯಲ್ಲಿ ಎಸ್‍ಪಿ ಮಗಳು ಸಹ ಬೆರೆಯುತ್ತಿದ್ದಾಳೆ. ಸಾಮಾನ್ಯರ ಮಕ್ಕಳಂತೆ ಸರ್ಕಾರಿ ಅಂಗನವಾಡಿಯಲ್ಲಿ ಎಸ್‍ಪಿ ಪುತ್ರಿ ಖುಷಿ ಸಹ ಪಾಠ…

  • India, Sports, ಕ್ರೀಡೆ

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇಟೆಸ್ಟ್‌ಗೆ ಮಳೆ ಕಾಟ

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ 4ದಿನ ಮಳೆ ಕಾಟದಿಂದಾಗಿ ದಿನದಾಟ ಆರಂಭ ವಾಗಿಲ್ಲ ಈ ಪಂದ್ಯದಲ್ಲಿ ಜಯವನ್ನು ಸಾಧಿಸಲು ದಕ್ಷಿಣ ಆಫ್ರಿಕಾಕ್ಕೆ  122ರನ್ ಅಗತ್ಯ ಇದೆ.ಮಳೆಯಿಂದಾಗಿ ಭಾರತ ತಂಡಕ್ಕೆ ಜಯಗಳಿಸುವ ಅವಕಾಶವನ್ನು ಒದಗಿಸುತ್ತದೆ.ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿ 202ರನ್ ಗಳಿಸಿತು.ದಕ್ಷಿಣ ಆಫ್ರಿಕಾ 229ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತ 266ರನ್ಗಳಿಸಿತು.ಭಾರತ ದಕ್ಷಿಣ ಆಫ್ರಿಕಾಕ್ಕೆ 240ಗುರಿ ನೀಡಿದೆ.ಇದಕ್ಕುತ್ತರವಾಗಿ ದಕ್ಷಿಣ ಆಫ್ರಿಕಾ 118/2 ಗಳಿಸಿದೆ

    Loading

  • ಕರ್ನಾಟಕ

    ಪ್ರತ್ತ್ಯೇಕ ನಾಡ ಧ್ವಜ ಕುರಿತು ಸಂವಿಧಾನದಲ್ಲಿ ಏನು ಹೇಳಲಾಗಿದೆ ಗೊತ್ತಾ ???

    ಈಗ ಎಲ್ಲಾ ಕಡೆ ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡ ಧ್ವಜ ಕುರಿತು ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಹಾಗಾದ್ರೆ ನಮ್ಮ ಸಂವಿಧಾನದಲ್ಲಿ ಪ್ರತ್ಯೇಕ ನಾಡ ಧ್ವಜ ಕುರಿತು ಏನು ಹೇಳಲಾಗಿದೆ? ಭಾರತದ ಯಾವ ರಾಜ್ಯವು ಪ್ರತ್ಯೇಕ ಧ್ವಜವನ್ನು ಹೊಂದಿಲ್ಲವೇ?