ಸುದ್ದಿ

‘ರಾಧಾ ರಮಣ’ ಖ್ಯಾತಿಯ ದೀಪಿಕಾ ಮದುವೆ ತೆಲುಗು ಸ್ಟಾರ್ ನಟನ ಜೊತೆ ಫಿಕ್ಸ್ ವರನು ಯಾರು ಗೊತ್ತೇ ??

56

ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ರಾಧಾ ರಮಣ’ ಧಾರಾವಾಹಿ ಈಗ ಮುಗಿದಿರುವ ವಿಷಯ ನಮಗೆಲ್ಲರಿಗೂ ತಿಳಿದಿದೆ. ಆದರೆ ಈಗ ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದ ದೀಪಿಕಾ ಪಾತ್ರಧಾರಿಯ ಅನುಷಾ ಹೆಗ್ಡೆ  ಅವರು ತೆಲುಗು ನಟನನ್ನು ಮದುವೆಯಾಗಲಿದ್ದಾರೆ ಎಂದು ಹೇಳಿದ್ದಾರೆ . ಅನುಷಾ ತೆಲುಗು ಕಿರುತೆರೆ ನಟ ಪ್ರತಾಪ್ ಸಿಂಗ್ ಶಾ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅನುಷಾ ‘ರಾಧಾ ರಮಣ’ ಧಾರಾವಾಹಿ ಮುಗಿದ ಮೇಲೆ ತೆಲುಗಿನ ‘ನಿನ್ನೆ ಪೆಳ್ಳಾಡಟ’ ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿಯ ನಟನ ಜೊತೆ ಅನುಷಾ ಮದುವೆಯಾಗಲಿದ್ದಾರೆ ಎಂದು ಹೇಳಿಕೊಂಡಿದ್ದಾರೆ .

ಇತ್ತೀಚೆಗೆ ತೆಲುಗಿನ ಖಾಸಗಿ ವಾಹಿನಿಯಲ್ಲಿ ಅವಾರ್ಡ್ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮದಲ್ಲಿ ಪ್ರತಾಪ್ ಸಿಂಗ್ ಶಾ ಅವಾರ್ಡ್ ಸ್ವೀಕರಿಸಿದ ಬಳಿಕ ಅನುಷಾ ಅವರನ್ನು ವೇದಿಕೆ ಮೇಲೆ ಬರಲು ಹೇಳಿದ್ದರು. ಬಳಿಕ ಪ್ರತಾಪ್ ವೇದಿಕೆಯಲ್ಲಿಯೇ ಅನುಷಾ ಬೆರಳಿಗೆ ಉಂಗುರ ತೊಡಿಸಿ ಪ್ರಪೋಸ್ ಮಾಡಿದ್ದರು. ಪ್ರತಾಪ್ ಸಿಂಗ್ ರಜಪೂತ ಸಮುದಾಯದವರಾಗಿದ್ದು, ಹೈದರಾಬಾದ್‍ನಲ್ಲಿ ವಾಸಿಸುತ್ತಿದ್ದಾರೆ. ಪ್ರತಾಪ್ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಅನುಷಾಗೆ ಮಂಡಿಯೂರಿ ಪ್ರಪೋಸ್ ಮಾಡುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಅತ್ಯುತ್ತಮ ಕ್ಷಣ ಎಂದು ಬರೆದುಕೊಂಡಿದ್ದಾರೆ.

ಪ್ರತಾಪ್‍ರನ್ನು ಮದುವೆಯಾಗುವ ಮೂಲಕ ಮಂಗಳೂರಿನ ಬೆಡಗಿ ಅನುಷಾ ಹೈದರಾಬಾದ್‍ನ ರಜಪೂತ ಮನೆತನದ ಸೊಸೆ ಆಗಲಿದ್ದಾರೆ. ಪ್ರತಾಪ್ ಸಿಂಗ್ ತೆಲುಗು ಕಿರುತೆರೆಯಲ್ಲಿ ಸ್ಟಾರ್ ನಟನಾಗಿದ್ದು, ‘ನಿನ್ನೆ ಪೆಳ್ಳಾಡಟ’ ಧಾರಾವಾಹಿಯಲ್ಲಿ ನಟಿಸುವಾಗ ಇಬ್ಬರು ಪ್ರೀತಿಸಲು ಶುರು ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಅನುಷಾ ಹಾಗೂ ಪ್ರತಾಪ್ ಪರಸ್ಪರ ಪ್ರೀತಿಸುತ್ತಿರುವ ವಿಷಯವನ್ನು ಧಾರಾವಾಹಿ ತಂಡದ ಜೊತೆ ಹೇಳಿಕೊಂಡಿರಲಿಲ್ಲ . ತಮ್ಮ ಪ್ರೀತಿ ವಿಷಯವನ್ನು ಇಬ್ಬರು ಗುಟ್ಟಾಗಿ ಇಟ್ಟಿದ್ದರು. ಪ್ರತಾಪ್ ವೇದಿಕೆಯಲ್ಲಿಯೇ ಅನುಷಾ ಬೆರಳಿಗೆ ಉಂಗುರ ತೊಡಿಸಿ ಪ್ರಪೋಸ್ ಮಾಡಿದ್ದಾಗ  ಈ ವಿಷಯ ಎಲ್ಲರಿಗೂ ತಿಳಿದುಬಂದಿದೆ  ಶೀಘ್ರದಲ್ಲೇ ಅನುಷಾ ಹಾಗೂ ಪ್ರತಾಪ್ ಅವರ ಎಂಗೇಜ್‍ಮೆಂಟ್ ನಡೆಯಲಿದ್ದು. ಮುಂದಿನ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ದಾಳಿಂಬೆ ಹಣ್ಣಿನಲ್ಲಿರುವ ಆರೋಗ್ಯಕಾರಿ ಗುಣಗಳು ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ದಿನಕ್ಕೆ ಒಂದು ಸೇಬು ತಿಂದರೆ ವೈದ್ಯರಿಂದ ದೂರವಿರ ಬಹುದು ಎಂಬ ಮಾತು ಅನಾದಿ ಕಾಲದಿಂದಲೂ ಕೇಳಿ ಬರುತ್ತಿದೆ. ಇದಕ್ಕೆ ಆಂಗ್ಲ ಭಾಷೆಯಲ್ಲಿ ಆ್ಯನ್ ಆ್ಯಪಲ್ ಎ ಡೇ ಕೀಪ್ಸ್ ಯು ಫ್ರಂ ದಿ ಡಾಕ್ಟ್ರರ್ ಎ ಡೇ ಅನ್ನುತ್ತಾರೆ..

  • ಸ್ಪೂರ್ತಿ

    ತನ್ನ ತಂದೆಯ ಜೀವ ಉಳಿಸಲು ತನ್ನ ಲೀವರ್ ಅನ್ನೇ ದಾನ ಮಾಡಿದ 19ವರ್ಷದ ಮಗಳು..!

    19 ವರ್ಷದ ಚಿಕ್ಕ ವಯಸ್ಸಿನ ಮಗಳೊಬ್ಬಳು ತಂದೆಯ ಜೀವ ಉಳಿಸಲು ತನ್ನ ಲಿವರ್ ದಾನ ಮಾಡಿ ಆದರ್ಶ ಮಗಳೆನಿಸಿಕೊಂಡಿದ್ದಾಳೆ. ರಾಖಿ ದತ್ತ ತಂದೆಗಾಗಿ ತನ್ನ ಲಿವರ್ ದಾನ ಮಾಡಿದ್ದಾಳೆ. ದೇಹದ ಮೇಲೆ ಲಿವರ್ ಶಸ್ತ್ರಚಿಕಿತ್ಸೆಯ ಕಲೆ ಹಾಗೆ ಉಳಿದುಕೊಳ್ಳುತ್ತದೆ, ತನ್ನ ಮುಂದಿನ ಜೀವನದಲ್ಲಿ ಇದರಿಂದ ತೊಂದರೆಯಾತ್ತದೆ ಎನ್ನುವುದನ್ನೂ ಲೆಕ್ಕಿಸದೇ ಈ ಯುವತಿ ತನ್ನ ತಂದೆಯ ಜೀವ ಉಳಿಸಲು ತನ್ನ 65% ಲಿವರ್‍ನನ್ನು ದಾನ ಮಾಡಿ, ತಂದೆಗೆ ಪುನರ್ಜನ್ಮ ನೀಡಿದ್ದಾಳೆ. ಈ ಬಗ್ಗೆ ವಾಣಿಜ್ಯೋದ್ಯಮಿ ಹರ್ಷ ಗೋಯೆಂಕಾ ಅವರು…

  • ಹಣ ಕಾಸು

    ಡೆಬಿಟ್‌ ಕಾರ್ಡ್‌ ಪಾವತಿಗಿನ್ನು ವ್ಯವಹಾರ ಶುಲ್ಕ ಇಲ್ಲ..!ತಿಳಿಯಲು ಈ ಲೇಖನ ಓದಿ..

    ಡೆಬಿಟ್ ಕಾರ್ಡ್, ಭೀಮ್ ಸೇರಿದಂತೆ ಆನ್ ಲೈನ್ ವಹಿವಾಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿ ಇತರೆ ಆಪ್ ಗಳನ್ನು ಬಳಸುತ್ತಿದ್ದವರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ.

  • ಜ್ಯೋತಿಷ್ಯ

    ಬೆಕ್ಕು ಮನೆಗೆ ಬಂದು ಈ ರೀತಿ ಮಾಡಿದ್ರೆ ಏನಾಗುತ್ತೆ ಗೊತ್ತಾ?ಎಚ್ಚರವಿರಲಿ…

    ಅನೇಕ ಜನರು ಶಕುನ-ಅಪಶಕುನವನ್ನು ನಂಬ್ತಾರೆ. ಒಂದು ಸೀನ್ ಸೀನಿದ್ರೆ, ಹಿಂದಿನಿಂದ ಕೂಗಿದ್ರೆ ಅಪಶಕುನ ಎನ್ನಲಾಗುತ್ತದೆ. ಹಾಗೆ ಬೆಕ್ಕು ಅಡ್ಡ ಹೋದ್ರೆ ಅನೇಕರು ಅಲ್ಲಿ ಸ್ವಲ್ಪ ಹೊತ್ತು ನಿಂತು ಹೋಗ್ತಾರೆ. ಮುಂದೆ ನಡೆಯುವ ಘಟನೆಗಳ ಬಗ್ಗೆ ಪ್ರಾಣಿಗಳಿಗೆ ಮೊದಲೇ ಸೂಚನೆ ಸಿಕ್ಕಿರುತ್ತದೆ. ಆಗಬಹುದಾದ ಅನಾಹುತಗಳ ಬಗ್ಗೆ ಅವು ಮುನ್ಸೂಚನೆ ನೀಡುತ್ತವೆ ಎಂದು ನಂಬಲಾಗಿದೆ. ರಾಹು ಗ್ರಹದ ವಾಹನ ಬೆಕ್ಕು. ಜಾತಕದಲ್ಲಿ ರಾಹು ಬಂದು ಕುಳಿತಾಗ ಅಪಘಾತ, ಪೆಟ್ಟಾಗುವ ಸಾಧ್ಯತೆ ಹೆಚ್ಚಿರುತ್ತದೆ. ಬೆಕ್ಕು ಅಡ್ಡ ಹೋಗಿ ಈ ಬಗ್ಗೆ ಮುನ್ಸೂಚನೆ…

  • ಸುದ್ದಿ

    MNC ಕಂಪನಿಯಲ್ಲಿ ಕೆಲಸ ಮಾಡ್ತಿರೋ ಈ ಜೋಡಿ ಪುಟ್‌ಪಾತ್‌ ಮೇಲೆ ತಿಂಡಿ ಮಾರೋದ್ಯಾಕೆ ಅಂತ ಕಾರಣಾ ಗೊತ್ತಾ..?ತಿಳಿದರೆ ಅಚ್ಚರಿಯಂತು ಗ್ಯಾರಂಟಿ..,!

    ಈ ಸ್ಟೋರಿನಾ ಮೊದಲ ಬಾರಿ ನೋಡಿದವರಿಗೆ ಇದು ವಿಚಿತ್ರ ಎನ್ನಿಸಬಹುದು. ಆದ್ರೆ ಈ ಜೋಡಿಯ ಕೆಲಸದ ಹಿಂದೆ ಒಂದೊಳ್ಳೆ ಸಂದೇಶವಿದೆ. ಅದೇನು ಅನ್ನೋದನ್ನ ಈ ಸ್ಟೋರಿಯಲ್ಲಿ ಓದಿ. ಮುಂಬೈನ ಖಾಂಡಿವಾಲಿ ಸ್ಟೇಷನ್‌ನಲ್ಲಿ ವಿದ್ಯಾವಂತರಾದ, ಒಳ್ಳೆ ಕಂಪನಿಯಲ್ಲಿ ಒಳ್ಳೆ ಸಂಬಳಕ್ಕೆ ಕೆಲಸ ಮಾಡುವ ಜೋಡಿಯೊಂದು ಫೂಟ್‌ಪಾತ್‌ನಲ್ಲಿ ತಿಂಡಿ ಮಾರುತ್ತಾರೆ. ಪ್ರತಿದಿನ ಬೆಳಿಗ್ಗೆ 5 ಗಂಟೆಯಿಂದ 10 ಗಂಟೆಯ ಒಳಗೆ ಫೂಟ್‌ಪಾತ್‌ನಲ್ಲಿ ತಿಂಡಿ ಮಾರಿ, ಇವರು ತಮ್ಮ ತಮ್ಮ ಕೆಲಸಕ್ಕೆ ತೆರಳುತ್ತಾರೆ. ಎಂಬಿಎ ಮಾಡಿರುವ ಈ ಜೋಡಿ ತಿಂಡಿ ಮಾಡೋ…

  • ಸಿನಿಮಾ

    ತೆರಿಗೆಯಲ್ಲಿ ಕೂಡ “ಬಾಹುಬಲಿ” ಮುಂದೆ

    ಕನ್ನಡ ಪರ ಸಂಘಟನೆಗಳ ಪ್ರತಿಭಟನೆಯ ಹಿನ್ನಲೆಯಲ್ಲಿ ಬಾಹುಬಲಿ 2 ಚಿತ್ರ ರಾಜ್ಯದಲ್ಲಿ ಬಿಡುಗಡೆಯಾಗವ ಬಗ್ಗೆಯೇ ಹಲವು ಪ್ರಶ್ನೆಗಳು ಎದ್ದಿದ್ದವು. ಕಡೆಗೂ ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್ ತಮ್ಮ ಹೇಳಿಕೆಯ ಕುರಿತು ಕ್ಷಮೆಯಾಚಿಸಿದ ಬಳಿಕ ಚಿತ್ರ ಬಿಡುಗೆಡೆಯಾಗಿ ಚಿತ್ರಮಂದಿಗಳು ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿಕೊಂಡಿದ್ದವು.