ಸುದ್ದಿ

‘ಮಿಸ್ ಸೌತ್ ಇಂಡಿಯಾ’ ಕಿರೀಟ ತನ್ನದಾಗಿಸಿಕೊಂಡ ಕಿರುತೆರೆ ನಟಿ ಕುಲವಧು ಧನ್ಯಾ….

98

ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕುಲವಧು’ ಧಾರಾವಾಹಿಯಲ್ಲಿ ಧನ್ಯಾ ಎಂದೇ ಖ್ಯಾತಿ ಪಡೆದಿರುವ ದೀಪಿಕಾ ಇತ್ತೀಚೆಗಷ್ಟೆ ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.

ನಟಿ ದೀಪಿಕಾ ಅವರು ಈ ಬಗ್ಗೆ ತಮ್ಮ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. ತಾವು ವಿನ್ನರ್ ಆದ ತಕ್ಷಣದ ಫೋಟೋವನ್ನು ಕ್ಲಿಕ್ಕಿಸಿಕೊಂಡು ಅದನ್ನು ಅಪ್ಲೋಡ್ ಮಾಡಿ ಅಭಿಮಾನಿಗಳಿಗೆ ಮತ್ತು ತಮ್ಮ ಗೆಳೆಯನಿಗೆ ಧನ್ಯವಾದ ತಿಳಿಸಿದ್ದಾರೆ.

“ಮಿಸ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಕ್ಕೆ ತುಂಬಾ ಸಂತೋಷವಾಗಿದೆ. ಅದರಲ್ಲೂ ನಾನು ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ಗೆದ್ದಿದ್ದಕ್ಕೆ ತುಂಬಾ ಖುಷಿಯಾಗಿದೆ. ನನ್ನ ಮೇಲೆ ನಂಬಿಕೆ ಇಟ್ಟು ವೇದಿಕೆ ಮೇಲೆ ರ‍್ಯಾಂಪ್‌ ಮಾಡಲು ನನಗೆ ಆತ್ಮವಿಶ್ವಾಸ ತುಂಬಿದ ಹಾಗೂ ಎಲ್ಲ ಹಂತದಲ್ಲೂ ಸಪೋರ್ಟ್ ಮಾಡಿದ ಅಭಿಮಾನಿಗಳಿಗೆ ಧನ್ಯವಾದಗಳು” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಅಷ್ಟೇ ಅಲ್ಲದೆ “ಎಲ್ಲಕ್ಕಿಂತ ಮುಖ್ಯವಾಗಿ ನನ್ನ ಜೀವನದ ವಿಶೇಷ ವ್ಯಕ್ತಿಗೆ ಧನ್ಯವಾದಗಳು ಎಂದು ತಮ್ಮ ಗೆಳೆಯ ಆಕರ್ಶ್ ಅವರಿಗೆ ಸಮರ್ಪಿಸಿದ್ದಾರೆ. ನಿಮ್ಮ ಬೆಂಬಲ ಇಲ್ಲದಿದ್ದರೆ ನನ್ನಿಂದ ಈ ಗೆಲವು ಸಾಧಿಸಲು ಸಾಧ್ಯವಾಗುತ್ತಿರಲಿಲ್ಲ. ನಿಮ್ಮ ಸಹಕಾರದಿಂದಲೇ ಈ ಸಾಧನೆ ಮಾಡಿದ್ದೇನೆ” ಧನ್ಯವಾದಗಳು ಮೈ ಸ್ವೀಟ್ ಎಂದು ಹೇಳಿಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ