Cinema

ಸಮಾಜ ಸೇವೆಗೆಂದು ಕೈ ಜೋಡಿಸಿದ ದರ್ಶನ್ ಹಾಗು ಚಿಕ್ಕಣ್ಣ…..

32

ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರಿಗೆ ಪ್ರಾಣಿ, ಪಕ್ಷಿ ಹಾಗೂ ಪರಿಸರದ ಮೇಲೆ ಇರುವ ಪ್ರೀತಿಯಿಂದ ಅರಣ್ಯ ಇಲಾಖೆ ನೆರವಿಗೆ ಮುಂದಾಗಿರುವುದು ಎಲ್ಲರಿಗೂ ತಿಳಿದಿದೆ. ಸದ್ಯ ದರ್ಶನ್ ಅವರ ಈ ಕಾರ್ಯಕ್ಕೆ ಹಾಸ್ಯ ನಟ ಚಿಕ್ಕಣ್ಣ ಅವರು ಕೂಡ ಕೈ ಜೋಡಿಸಿದ್ದಾರೆ.

ಹೌದು, ದರ್ಶನ್ ಅವರು ತಮ್ಮ ಸಫಾರಿಯ ವೇಳೆ ಸೆರೆ ಹಿಡಿದಿದ್ದ ಫೋಟೋವನ್ನು ನಟ ಚಿಕ್ಕಣ್ಣ 1 ಲಕ್ಷ ರೂ. ನೀಡಿ ಖರೀದಿ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿ ಟ್ವೀಟ್ ಮಾಡಿರುವ ದರ್ಶನ್, ‘ನಮ್ಮ ಚಿಕ್ಕಣ್ಣ ನಾನು ಸೆರೆಹಿಡಿದಿದ್ದ ಆನೆಯ ಫೋಟೋವನ್ನು ಅರಣ್ಯ ಇಲಾಖೆಯ ನೆರವಿಗಾಗಿ 1 ಲಕ್ಷ ರೂಪಾಯಿಗಳನ್ನು ನೀಡಿ ಖರೀದಿ ಮಾಡಿರುವುದು ಶ್ಲಾಘನೀಯ. ಅವರ ಸಾಮಾಜಿಕ ಕಳಕಳಿಯ ಕಾರ್ಯಕ್ಕೆ ನನ್ನ ಕೃತಘ್ನತೆಗಳು’ ಎಂದು ಬರೆದುಕೊಂಡಿದ್ದಾರೆ.

ಸಿನಿಮಾ ಬ್ಯುಸಿಯ ನಡುವೆಯು ತಮ್ಮ ವಿರಾಮ ವೇಳೆಯನ್ನ ಸದುಪಯೋಗ ಪಡಿಸಿಕೊಳ್ಳುವ ದರ್ಶನ್ ಬಿಡುವಿದ್ದಾಗೆಲ್ಲಾ ಕಾಡಿನಲ್ಲಿ ಕಾಲ ಕಳೆಯುತ್ತಾರೆ. ಅಲ್ಲದೇ ವನ್ಯಜೀವಿ ಹಾಗೂ ಪ್ರಕೃತಿ ಫೋಟೋಗ್ರಾಫಿ ಬಗ್ಗೆ ದರ್ಶನ್ ಹೆಚ್ಚು ಆಸಕ್ತರಾಗಿದ್ದು, ಪ್ರಾಣಿ ಪಕ್ಷಿಗಳ ಅಂದವನ್ನ ಕ್ಯಾಮೆರಾದಲ್ಲಿ ಸೆರೆಹಿಡಿಯುವ ಹವ್ಯಾಸ ಹೊಂದಿದ್ದಾರೆ.

ಈ ಹಿಂದೆ ತಾವು ಸೆರೆ ಹಿಡಿದ್ದ ಪ್ರಕೃತಿಯ ಅದ್ಭುತ ದೃಶ್ಯಗಳ ಫೋಟೋಗಳನ್ನು ಹರಾಜು ಹಾಕಿದ್ದರು. ಮಾರ್ಚ್ 3 ರಂದು ನಡೆದ ಈ ಹರಾಜಿನಲ್ಲಿ 3.75 ಲಕ್ಷ ರೂ. ಸಂಗ್ರಹಣೆಯಾಗಿತ್ತು. ಇದರಲ್ಲಿ ಬಂದ ಹಣವನ್ನು ದರ್ಶನ್ ಅರಣ್ಯ ಸಂರಕ್ಷಣೆಗೆ ಖರ್ಚು ಮಾಡುತ್ತೇನೆ ಎಂದು ತಿಳಿಸಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • govt, Sports

    ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಎಂದರೇನು?

    ಕ್ರೀಡಾ ಮತ್ತು ಕ್ರೀಡಾಕೂಟದಲ್ಲಿ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಎಂದು ಅಧಿಕೃತವಾಗಿ ಕರೆಯಲ್ಪಡುವ ರಾಜೀವ್ ಗಾಂಧಿ ಖೇಲ್ ರತ್ನ, ಇದು ಭಾರತದ ಗಣರಾಜ್ಯದ ಅತ್ಯುನ್ನತ ಕ್ರೀಡಾ ಗೌರವವಾಗಿದೆ. 1984 ರಿಂದ 1989 ರವರೆಗೆ ಕಚೇರಿಯಲ್ಲಿ ಸೇವೆ ಸಲ್ಲಿಸಿದ ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹೆಸರನ್ನು ಈ ಪ್ರಶಸ್ತಿಗೆ ಇಡಲಾಗಿದೆ.  ಇದನ್ನು ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವು ವಾರ್ಷಿಕವಾಗಿ ನೀಡಲಾಗುತ್ತದೆ. ಸ್ವೀಕರಿಸುವವರನ್ನು (ಗಳು) ಸಚಿವಾಲಯವು ರಚಿಸಿದ ಸಮಿತಿಯಿಂದ ಆಯ್ಕೆಮಾಡಲಾಗುತ್ತದೆ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ…

  • ಗ್ಯಾಜೆಟ್

    ನಿಮ್ಮ ಮೊಬೈಲ್ ನೀರಿಗೆ ಬಿದ್ರೆ,ಏನ್ ಮಾಡಬೇಕು..?ಏನ್ ಮಾಡಬಾರದು..?ತಿಳಿಯಲು ಈ ಲೇಖನ ನೋಡಿ…

    ತುಂಬಾ ದುಡ್ಡು ಕೊಟ್ಟು ಸ್ಮಾರ್ಟ್’ಫೋನ್ ಕೊಂಡುಕೊಂಡಿದ್ದೇವೆಂದು ಬಹಳ ಜೋಪಾನ ಮಾಡುತ್ತಿರುತ್ತೇವೆ. ಸದ್ಯಕ್ಕೆ ಸರಾಸರಿ ಹೆಚ್ಚಿನ ಅಂಶಗಳಲ್ಲಿ ಎಲ್ಲರ ಕಡೆಗೆ ಸ್ಮಾರ್ಟ್ ಫೋನ್ ಗಳೇ ಜಾಸ್ತಿ ಇವೇ. ಆದರೆ, ಎಂದಾದರೊಮ್ಮೆ ಆಕಸ್ಮಿಕವಾಗಿ ಮೊಬೈಲ್ ಕೆಳಗೆ ಬೀಳುವುದೋ, ನೀರಿಗೆ ತಾಕುವುದೋ ಅಥವಾ ಕೆಲವೊಮ್ಮೆ ಮಕ್ಕಳ ಕೈಯಿಂದ ಇನ್ನೂ ಕೆಲವೊಂದು ಸಲ ನಮ್ಮ ನಿಮ್ಮ ಕೈಯಿಂದ ಮೊಬೈಲ್ ಆಕಸ್ಮಿಕವಾಗಿ ನೀರಲ್ಲಿ ಬೀಳುತ್ತದೆ.

  • ವೀಡಿಯೊ ಗ್ಯಾಲರಿ

    ಈ ವಿಚಿತ್ರ ಜೀವಿಯನ್ನು ನೋಡಿದ್ದೀರಾ..?ನೋಡಲು ಈ ಚಿತ್ರದ ಮೇಲೆ ಕ್ಲಿಕ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ… ಆ ವಿಚಿತ್ರ ಜೀವಿ ಹೇಗಿದೆ ಗೊತ್ತಾ.?ಈ ವಿಡಿಯೋ ನೋಡಿ..

  • ಆರೋಗ್ಯ

    ಹೊಟ್ಟೆಯ ಕೊಬ್ಬನ್ನು ಕರಗಿಸಲು ಈ ಆಹಾರವನ್ನು ಸೇವಿಸಿ, ಕೊಬ್ಬನ್ನು ಕಡಿಮೆ ಮಾಡಿಕೊಳ್ಳಿ.

    ತೂಕ ನಷ್ಟಕ್ಕೆ ಆಹಾರವನ್ನು ಅನುಸರಿಸುವಾಗ ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ಕಡಿಮೆ ಮಾಡಬೇಕಾಗುತ್ತದೆ. ನೀವು ಸೇವಿಸುವುದಕ್ಕಿಂತ ಹೆಚ್ಚಿನ ಕ್ಯಾಲೊರಿಗಳನ್ನು ನೀವು ಸುಡಬೇಕು. ಅದಕ್ಕಾಗಿಯೇ ತೂಕ ನಷ್ಟಕ್ಕೆ ಯಾವುದೇ ಆಹಾರವು ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ನಿರ್ಬಂಧಿಸುತ್ತದೆ. ಆದರೆ ದಿನದ ಯಾವುದೇ ಸಮಯದಲ್ಲಾದರೂ ಹಸಿವು ಜಾಸ್ತಿಯಾಗಿ ನಿವು ಅಗತ್ಯಕ್ಕಿಂತ ಹೆಚ್ಚಿನದನ್ನು ತಿನ್ನಬಹುದು ಇದರಿಂದ ನಿಮ್ಮ ದೇಹದ ತೂಕ ಕಡಿಮೆಯಾಗುವುದಿಲ್ಲ. ಹೊಟ್ಟೆಯ ಕೊಬ್ಬಿನ ಶೇಖರಣೆಗೆ ಕಾರಣವಾಗುವ ಆಹಾರವನ್ನ ನಿವು ಹಸಿವನ್ನು ನೀಗಿಸಲು ಹೆಚ್ಚಾಗಿ ಹೆಚ್ಚಿನ ಕ್ಯಾಲೊರಿಗಳನ್ನು ಸೇವಿಸುತ್ತೀರಿ. ಅಂತಹ ಪರಿಸ್ಥಿತಿಯನ್ನು…

  • ಆರೋಗ್ಯ

    ನೀವು ರೆಡ್ ವೈನ್ ಕುಡಿದ್ರೆ ಏನೆಲ್ಲಾ ಲಾಭಗಳಿವೆ ಎಂದು ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ರೆಡ್ ವೈನ್ ಎಂಬುದು ಗಾಢ ಬಣ್ಣದ (ಕಪ್ಪು) ದ್ರಾಕ್ಷಿಗಳಿಂದ ತಯಾರಿಸಿದ ಒಂದು ಪಾನಿಯವಾಗಿದೆ ಮತ್ತು ದ್ರಾಕ್ಷಿಗಳು ಅನೇಕ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಕಾರಣ ಇದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳು ಬಹಳಷ್ಟಿವೆ. ಅಷ್ಟೇ ಅಲ್ಲ ಆರೋಗ್ಯಕರ ಮತ್ತು ಸುಂದರ ತ್ವಚೆಯನ್ನು ಸಹ ಪಡೆಯಬಹುದು.

  • ಸುದ್ದಿ

    ಬಿಲ್ಡಿಂಗ್ ಕುಸಿದು 6 ಮಂದಿ ಸೇನಾ ಸಿಬ್ಬಂದಿ ಸೇರಿ ಓರ್ವ ನಾಗರೀಕ ಸಾವು ; ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ…..!

    ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಸೇನಾ ಸಿಬ್ಬಂದಿ ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಸೋಲನ್‍ನಲ್ಲಿ ನಡೆದಿದೆ.ಭಾನುವಾರ ಸೋಲನ್ ಜಿಲ್ಲೆಯಲ್ಲಿ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಭಾನುವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ರಾಜ್ಯ ರಾಜಧಾನಿ ಶಿಮ್ಲಾದಿಂದ 45 ಕಿ.ಮೀ ದೂರದಲ್ಲಿರುವ ಸೋಲನ್‍ನ ಕುಮಾರ್ಹಟ್ಟಿ-ನಹಾನ್ ಹೆದ್ದಾರಿಯಲ್ಲಿ ಈ ಕಟ್ಟಡ ಇದ್ದು, ಭಾರೀ ಮಳೆಯಿಂದಾಗಿ ಕುಸಿದಿದೆ…