ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡ್ರೈವಿಂಗ್ ಲೈಸೆನ್ಸ್ ನವೀಕರಣ ಅಥವಾ ಅದರಲ್ಲಿನ ವಿಳಾಸ ಬದಲಾವಣೆಗೆ ಸಾರಿಗೆ ಇಲಾಖೆ ಕಚೇರಿಗಳಿಗೆ ಇನ್ನು ಮುಂದೆ ಪದೇ ಪದೇ ಅಲೆಯಬೇಕಿಲ್ಲ. ಅಲ್ಲದೇ, ಈ ಪ್ರಕ್ರಿಯೆಗೆ ಯಾವುದೇ ನಿರಾಕ್ಷೇಪಣಾ ಪತ್ರ ಅವಶ್ಯಕತೆ ಇಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯ ಹೇಳಿದೆ.
ಬಹುತೇಕ ಜನ ಸ್ವಂತ ಊರಿನ ವ್ಯಾಪ್ತಿಯ ಆರ್.ಟಿ.ಓ. ಕಚೇರಿಯಲ್ಲಿ ಡಿಎಲ್ ಮಾಡಿಸಿಕೊಂಡಿರುತ್ತಾರೆ ಕಾರಣಾಂತರದಿಂದ ಅವರು ಬೇರೆ ನಗರ ಅಥವಾ ರಾಜ್ಯದಲ್ಲಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಡಿಎಲ್ ನವೀಕರಣ ಮತ್ತು ವಿಳಾಸ ಬದಲಾವಣೆಗೆ ಆರ್.ಟಿ.ಓ. ಕಚೇರಿಗೆ ಹೋದ ಸಂದರ್ಭದಲ್ಲಿ ಮೊದಲು ಡಿಎಲ್ ಮಾಡಿಸಿದ್ದ ಆರ್.ಟಿ.ಓ. ಕಚೇರಿಯಿಂದ ಎನ್ಒಸಿ ತರುವಂತೆ ಸೂಚಿಸಲಾಗುತ್ತಿದೆ.
ಈಗ ಸಾರಥಿ ತಂತ್ರಾಂಶ ಬಳಸುತ್ತಿದ್ದು, ಈ ಮೂಲಕ ಎಲ್.ಎಲ್.ಆರ್. ಮತ್ತು ಡಿಎಲ್ ನೀಡಲಾಗುತ್ತಿದೆ. ಡಿಎಲ್ ಪಡೆದ ವ್ಯಕ್ತಿಯ ಮಾಹಿತಿ ಆನ್ ಲೈನ್ ನಲ್ಲಿ ಸಿಗುವುದರಿಂದ ಇನ್ನು ಮುಂದೆ ಡಿಎಲ್ ನವೀಕರಣ ಮತ್ತು ಡಿಎಲ್ ನಲ್ಲಿ ವಿಳಾಸ ಬದಲಾವಣೆಗೆ ಎನ್ಒಸಿ ಅವಶ್ಯಕತೆ ಇಲ್ಲ ಎಂದು ಕೇಂದ್ರ ಸಾರಿಗೆ ಸಚಿವಾಲಯ ತಿಳಿಸಿದೆ.
ಯಾವುದೇ ಆರ್.ಟಿ.ಓ. ಕಚೇರಿಯಲ್ಲಿ ನೀಡಿದ ಡಿಎಲ್ ದೇಶಾದ್ಯಂತ ಮಾನ್ಯತೆ ಹೊಂದಿದ್ದು, ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಆನ್ ಲೈನ್ ಮೂಲಕವೇ ಡಿಎಲ್ ಮಾಹಿತಿ ಪರಿಶೀಲಿಸಲು ಸೂಚನೆ ನೀಡಲಾಗಿದೆ. ಸಾರಥಿ ಡೇಟಾ ಬೇಸ್ ಬಳಸಿಕೊಂಡು ಅರ್ಜಿದಾರರ ಮಾಹಿತಿ ಪರಿಶೀಲಿಸಿ ಡಿಎಲ್ ನವೀಕರಣ ಅಥವಾ ವಿಳಾಸ ಬದಲಾವಣೆಯನ್ನು ಮಾಡಿಕೊಡಬೇಕು ಎಂದು ತಿಳಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಡಲೆ ಬೀಜ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ಕಡಲೆಬೀಜವನ್ನು ಬಡವರ ಬಾದಾಮಿ ಎನ್ನುತ್ತಾರೆ. ಈ ಕಡಲೆಬೀಜ ಬಾದಾಮಿಯಲ್ಲಿರುವಷ್ಟೇ ಪೌಷ್ಠಿಕತೆಯನ್ನ ಒಳಗೊಂಡಿದೆ. ಇದರಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತದೆ. ಇದು ಕೇವಲ ಉತ್ತಮ ಆರೋಗ್ಯಕ್ಕೆ ಮಾತ್ರವಲ್ಲ ಉತ್ತಮ ಸೌಂದರ್ಯಕ್ಕೂ ಸಹಾಯಕ. ಕಡಲೆಬೀಜದಲ್ಲಿನ ಇನ್ನಷ್ಟು ಆರೋಗ್ಯಕರ ಅಂಶಗಳು ಇಲ್ಲಿವೆ ನೋಡಿ.. ಕಡಲೆಬೀಜ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. ಪ್ರತಿದಿನ ಕಡಲೆ ಬೀಜ ಸೇವಿಸುವುದರಿಂದ ಗ್ಯಾಸ್ ಹಾಗೂ ಅಸಿಡಿಟಿಯಂತಹ ಸಮಸ್ಯೆಗಳು ದೂರವಾಗುತ್ತವೆ….
ಅತ್ತೆ-ಸೊಸೆಯರನ್ನು ಒಟ್ಟಿಗೆ ಕೂರಿಸಿಕೊಂಡು ಮಹಿಳಾ ಆಯೋಗದ ಸದಸ್ಯರು ಮಾತುಕತೆ ನಡೆಸುತ್ತಿದ್ದಾರೆ.ಸೊಸೆ ಸದಾ ಸಾಮಾಜಿಕ ಜಾಲತಾಣದಲ್ಲಿ ಚಾಟ್ ಮಾಡ್ತಾಳೆ. ಜೊತೆಗೆ ಪೋನ್ ನಲ್ಲಿ ತನ್ನ ತವರಿನವರ ಜೊತೆ ಮಾತನಾಡ್ತಾಳೆ.
ಒಣದ್ರಾಕ್ಷಿ ಎಂದರೆ ಒಣಗಿಸಿದ ದ್ರಾಕ್ಷಿ. ಒಣದ್ರಾಕ್ಷಿಯನ್ನು ವಿಶ್ವದ ಹಲವು ಪ್ರದೇಶಗಳಲ್ಲಿ ಉತ್ಪಾದಿಸಲಾಗುತ್ತದೆ ಮತ್ತು ಇದನ್ನು ಹಸಿಯಾಗಿ ತಿನ್ನಬಹುದು ಅಥವಾ ಅಡುಗೆ, ಬೇಕಿಂಗ್ ಮತ್ತು ಮದ್ಯ ತಯಾರಿಕೆಯಲ್ಲಿ ಬಳಸಬಹುದು.
ಮಕ್ಕಳಿಗೆ ಹಾಲುಣಿಸುವ ವಿಚಾರದಲ್ಲಿ ತಾಯಿ ಬೇಧಭಾವ ಮಾಡುವುದಿಲ್ಲ. ಆದರೆ ಇಲ್ಲೊಬ್ಬ ತಾಯಿ ಪ್ರಾಣಿಗಳ ವಿಚಾರದಲ್ಲೂ ಬೇಧಭಾವ ಮಾಡದೆ ಮರಿ ಜಿಂಕೆಗೆ ಹಾಲುಣಿಸಿದ್ದು, ಬಿಷ್ಣೋಯಿ ಸಮುದಾಯದ ಮಹಿಳೆಯ ಮಾತೃ ವಾತ್ಸಲ್ಯಕ್ಕೆ ಸಾಮಾಜಿ ಜಾಲತಾಣದಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗಿದೆ. ಈ ಫೋಟೊವನ್ನು ಐಎಫ್ಎಸ್ ಅಧಿಕಾರಿ ಪ್ರವೀಣ್ ಕಾಸ್ವಾನ್ ಎಂಬುವವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಷ್ಣೋಯಿ ಸಮುದಾಯದ ಮಹಿಳೆಯರು ಪ್ರಾಣಿಗಳನ್ನು ತಮ್ಮ ಸ್ವಂತ ಮಕ್ಕಳಂತೆ ನೋಡಿಕೊಳ್ಳುವ ಸಹೃದಯವುಳ್ಳಂತವರು. ಅವರು ತಮ್ಮ ಮಕ್ಕಳಂತೆ ಪ್ರಾಣಿ ಹಾಗೂ ಪಕ್ಷಿಗಳನ್ನು ಪೋಷಣೆ ಮಾಡುತ್ತಾರೆ ಎಂದು…
ಪ್ರತಿಯೊಂದು ಕನಸಿಗೂ ಒಂದೊಂದು ಸಂಕೇತವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿ ಕನಸು ನಮ್ಮ ಭವಿಷ್ಯದ ಮೇಲೆ ಪ್ರಭಾವ ಬೀರುತ್ತದೆ. ಮುಂದೆ ಏನಾಗಬಹುದು ಎಂಬುದನ್ನು ಕನಸಿನಲ್ಲಿ ಕಂಡ ವಿಷ್ಯಗಳಿಂದ ಹೇಳಬಹುದಾಗಿದೆ. ಕನಸು ಅನೇಕ ಮುನ್ಸೂಚನೆಗಳನ್ನು ನೀಡುತ್ತದೆ. ಪ್ರತಿಯೊಬ್ಬರೂ ರಾತ್ರಿ ಮಲಗಿದಾಗ ಕನಸು ಕಾಣ್ತಾರೆ. ಪ್ರತಿಯೊಬ್ಬರಿಗೂ ಪ್ರತಿ ದಿನ ಬೇರೆ ಬೇರೆ ಕನಸುಗಳು ಕಾಣ್ತವೆ. ಕೆಲವರಿಗೆ ಕನಸಿನಲ್ಲಿ ಪದೇ ಪದೇ ದೇವರು ಕಾಣಿಸಿಕೊಳ್ತಾನೆ. ಕನಸಿನಲ್ಲಿ ದೇವರು ಕಂಡ್ರೆ ಖುಷಿಪಡಬೇಕು. ಇದು ಶುಭ ಸಂಕೇತ. ಯಾರಿಗೆ ದೇವರ ಕೃಪೆ ಇರುತ್ತದೆಯೋ ಅವ್ರಿಗೆ…
ದಿನೇ ದಿನೇ ಮಂಡ್ಯ ಲೋಕಸಭಾ ಚುನಾವಣಾ ಕಣಾ ರಂಗೆರುತ್ತಿದ್ದು ಚುನಾವಣೆಗೆ ಎರಡು ದಿನ ಇರುವಾಗ ಅವರ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ನಮ್ಮ ಮೇಲೆ ಹಾಕಲು ಯತ್ನಿಸ್ತಿದ್ದಾರೆ ಎನ್ನುವ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪ್ರಚಾರ ಮಾಡುತ್ತಿದ್ದ ವೇಳೆ ಮಾತನಾಡಿದ ಸುಮಲತಾ, ಒಬ್ಬ ಮುಖ್ಯಮಂತ್ರಿ ಆದವರು ತಮ್ಮ ಪದವಿಯನ್ನು ಮರೆತು ಹೇಗೆಲ್ಲಾ ಮಾತನಾಡುತ್ತಿದ್ದಾರೆ. ನಿಜವಾಗಲೂ ಕಲ್ಲು ಹೊಡೆಸಿ ನಮ್ಮ ಮೇಲೆಯೇ ಗೂಬೆ ಕೂರಿಸಲು ಈ ತರಹದ ಹೇಳಿಕೆ ನೀಡಿದ್ದಾರೆ ಎಂದು ನಮಗೆ ಅನುಮಾನವಾಗುತ್ತಿದ್ದು, ಮುಖ್ಯಮಂತ್ರಿಯವರ ಹೇಳಿಕೆಗಳಿಂದ ನನಗೆ ಭಯವಾಗ್ತಿದೆ…