ಸುದ್ದಿ

ಇಲಿಗಳನ್ನು ತಿಂದು ಜೀವನವನ್ನು ನಡೆಸುತ್ತಿದ್ದರೆ ಇಲ್ಲಿನ ಜನರು …ಕಾರಣ..?

75

ಬಿಹಾರದ ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಬಿಹಾರದಲ್ಲಿ ಎದುರಾಗಿರುವ ಪ್ರವಾಹದಿಂದಾಗಿ ದೂರದ ಗ್ರಾಮಗಳ ಜನರಿಗೆ ತಿನ್ನಲು ಆಹಾರವೂ ದೊರೆಯುತ್ತಿಲ್ಲ ಎಂಬುದಕ್ಕೆ ಕಟಿಹಾರ್ ಜಿಲ್ಲೆಯ ದಂಗಿ ಟೋಲಾ ಗ್ರಾಮಸ್ಥರೇ ನಿದರ್ಶನ!

ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಈ ಪ್ರದೇಶದಲ್ಲಿ ವಾಸವಿದ್ದ ಸುಮಾರು 300 ಕುಟುಂಬಗಳು ಈಗ ಪ್ರವಾಹದಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ,”ನಮ್ಮ ಮನೆ ಪ್ರವಾಹದಲ್ಲಿ ಕೊಚ್ಚಿ ಹೋದ ಕಾರಣ ಇರಲು ಸೂರಿಲ್ಲ. ತಿನ್ನಲು ಸೂಕ್ತ ಆಹಾರ ಸಿಗುತ್ತಿಲ್ಲ. ಸರ್ಕಾರದಿಂದ ನಮಗೆ ಯಾವುದೇ ಸೌಲಭ್ಯಗಳೂ ದೊರೆತಿಲ್ಲ. ಹಾಗಾಗಿ ಇಲಿಗಳನ್ನು ಹಿಡಿದು ತಿನ್ನುವಂತಹ ದುಸ್ಥಿತಿ ಎದುರಾಗಿದೆ” ಎಂದು ಸ್ಥಳೀಯ ತಲ್ಲಾ ಮುರ್ಮೂರ್ ಎಎನ್ಐಗೆ ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಡ್ವಾ ಕ್ಷೇತ್ರದ ಬ್ಲಾಕ್ ಅಭಿವೃದ್ಧಿ ಅಧಿಕಾರಿ ರಾಕೇಶ್ ಕುಮಾರ್ ಗುಪ್ತಾ, ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಗ್ರಾಮಸ್ಥರ ಸ್ಥಿತಿಯ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ಅವರು ಇಲಿಗಳನ್ನು ತಿನ್ನುತ್ತಿದ್ದರೂ ಸಹ, ಬುಡಕಟ್ಟು ಜನಾಂಗದವರಾದ್ದರಿಂದ ಅದನ್ನು ತಿನ್ನುತ್ತಿರಬಹುದು ಎಂದಿದ್ದಾರೆ.ಏತನ್ಮಧ್ಯೆ, ಕಾಂಗ್ರೆಸ್ ಶಾಸಕ ಶಕೀಲ್ ಅಹ್ಮದ್ ಖಾನ್ ಅವರು ಈ ಗ್ರಾಮದ ಜನರ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದು, ಗ್ರಾಮಸ್ಥರಿಗೆ ನೆರವು ನೀಡುವಂತೆ ಕೋರಿದ್ದಾರೆ.

ಕಳೆದ ಕೆಲ ದಿನಗಳಿಂದ ಬಿಹಾರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿಗಳ ನೀರಿನ ಮಟ್ಟ ಏರುತ್ತಿರುವುದರಿಂದ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಭಾರಿ ಮಳೆಯಿಂದಾಗಿ ಬಿಹಾರದ ಅರೇರಿಯಾ, ದರ್ಭಂಗಾ ಮತ್ತು ಮಧುಬನಿ ಜಿಲ್ಲೆಗಳ ಅನೇಕ ಗ್ರಾಮಗಳು ಪ್ರವಾಹಕ್ಕೆ ಸಿಲುಕಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಅಬ್ಬಾ! ಬೃಹತ್ ಸೇಬಿನ ಹಾರ ಹಾಕಿ ಹೆಚ್.ಡಿ.ಕೆ ಅವರಿಗೆ ಸ್ವಾಗತ…ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ವಿಡಿಯೋ…ನೀವೂ ನೋಡಿ…

    ಮದ್ದೂರು ಕುಮಾರ ಪರ್ವ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ  ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬೃಹತ್ ಸೇಬಿನ ಹಾರ ಹಾಕಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ಸ್ವಾಗತಿಸಿದರು. ಸುಮಾರು 5000ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು  ಅದ್ಧೂರಿ ಬೈಕ್ ರ‍್ಯಾಲಿ ಮೂಲಕ ಅಭೂತಪೂರ್ವಕ ಸ್ವಾಗತ ಮಾಡಿದ್ದಲ್ಲದೆ, ಸುಮಾರು 500 ಕೆಜಿ ಸೇಬಿನ ಹಾರವನ್ನು ಕ್ರೈನ್ ಮೂಲಕ ಹಾಕುವ ಮುಖಾಂತರ ಕುಮಾರಸ್ವಾಮಿಯವರಿಗೆ ತಮ್ಮ ಅಭಿಮಾನ ಮೆರೆದರು. ಅಬ್ಬಾ..ಇಲ್ಲಿದೆ ನೋಡಿ ಬೃಹತ್ ಸೇಬಿನ ಹಾರ ಹಾಕಿದ ವಿಡಿಯೋ…

  • inspirational

    ದೀರ್ಘಾಯುಷ್ಯಕ್ಕಾಗಿ ಉತ್ತಮವಾಗಿ ಉಸಿರಾಡಿ

    ಮಯೂನ್ ಎನ್ಬದುಕಿರುವ ಎಲ್ಲ ಜೀವಿಗಳೂ ಉಸಿರಾಡುತ್ತವೆ ಎಂಬ ವಿಷಯ ಯಾರಿಗೂ ಹೊಸತಲ್ಲ. ಮಾನವನು ಪ್ರತಿನಿಮಿಷಕ್ಕೆ ಹದಿನಾರು ಬಾರಿ ಉಸಿರಾಡುತ್ತಾನೆ. ಉಸಿರಾಟದ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳವುದೇ ಇಲ್ಲ. ಏಕೆಂದರೆ ಉಸಿರಾಟ ನಮ್ಮಇಚ್ಛೆಗೆ ಕಾಯದೆ ಅನೈಚ್ಛಿಕವಾಗಿ ನಡೆಯುತ್ತಿರುತ್ತದೆ. ಜಗತ್ತಿನಲ್ಲಿ ಬಹಳಷ್ಟು ಜನರು ಉಸಿರಾಡುತ್ತಿರುವ ಕ್ರಮ ಸರಿಯಿಲ್ಲ. ಹೇಗೋ ಉಸಿರಾಡಿಕೊಂಡು ಬದುಕಿದ್ದಾರೆ ಎಂದು ಆಧುನಿಕ ವೈದ್ಯರು ಆರೋಪಣೆ ಮಾಡುತ್ತಿದ್ದಾರೆ.ನಿವು ಸರಿಯಾಗಿ ಉಸಿರಾಡುತಿದ್ತ್ದೀರ? ಇದನ್ನು ತಿಳಿದುಕೊಳ್ಳಲು ಒಂದು ಸರಳ ವಿಧಾನ ಇದೆ. ನೀವು ಈಗ ಎಲ್ಲೇ ಇರಿ. ಏನೇ ಮಾಡುತ್ತಿರಿ. ಒಮ್ಮೆ ಆಳವಾಗಿ…

  • ಆರೋಗ್ಯ

    ಆರೋಗ್ಯದ ಮೇಲೆ ಹುರುಳಿ ಟೀ, ಹುರುಳಿ ಟೀ ಇಂದ ಏನೆಲ್ಲಾ ಲಾಭವಿದೆ ಗೊತ್ತಾ.

    ಹುರುಳಿ ಟೀ ಮಾಡುವ ವಿಧಾನ! ಸಾಮಾನ್ಯವಾಗಿ ಹುರುಳಿ ಕಾಳಿನ ಸಾರು, ಪಲ್ಯಾ, ಚಟ್ನಿ ರುಚಿ ಹೇಗಿರುತ್ತೆ ಅಂತ ಸವಿದು ತಿಳಿದಿರುತ್ತೀರಾ. ಆದರೆ ಹುರುಳಿ ಕಾಳಿನಿಂದ ಟೀ ಕೂಡ ಮಾಡುವ ವಿಚಾರ ಕೆಲವರಿಗೆ ಗೊತ್ತಿರಲ್ಲ. ಅಷ್ಟೇ ಅಲ್ಲದೆ ಈ ವಿಶೇಷ ಹುರುಳಿ ಟೀ ಹರ್ಬಲ್ ಟೀ ರೀತಿಯೇ ಆರೋಗ್ಯಕರವಾಗಿದ್ದು, ಹುರುಳಿ ಕಾಳು ಅಥವಾ ಹುರುಳಿ ಎಲೆಯಿಂದಲೂ ಟೀ ತಯಾರಿಸಿ ಸವಿಯಬಹುದಾಗಿದೆ. ಹುರುಳಿ ಟೀ ಸೇವನೆ ಮಾಡುವುದರಿಂದ ಅನೇಕ ಆರೋಗ್ಯಕರ ಲಾಭವಿದೆ. ಇದು ಮದುಮೇಹ ನಿಯಂತ್ರಿಸುತ್ತದೆ, ತೂಕ ಇಳಿಸುತ್ತದೆ, ಕಿಡ್ನಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಇಂದು ಈ ರಾಶಿಗಳಿಗೆ ಶುಭಯೋಗ. ನಿಮ್ಮ ರಾಶಿಯೂ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿರಾಶಾದಾಯಕ ಸಮೀಕ್ಷೆ ಅಥವಾ ವರದಿಗಳು ನಿಮ್ಮನ್ನು ಅಸ್ತವ್ಯಸ್ತಗೊಳಿಸುವ ಸಾಧ್ಯತೆ ಇದೆ. ಆದರೆ ಸ್ಥೈರ್ಯ ಕಳೆದುಕೊಳ್ಳದೆ ಧೈರ್ಯವಾಗಿ ಅವನ್ನು ಸ್ವೀಕರಿಸಿ. ಕೆಲವೊಮ್ಮೆ ಸಮೀಕ್ಷೆಗಳು ಕೂಡಾ ತಪ್ಪಾಗುವ ಸಾಧ್ಯತೆ ಇದೆ.  .ನಿಮ್ಮ…

  • ಸುದ್ದಿ

    ದಯವಿಟ್ಟು ನಮ್ಮನ್ನು ಮರೆಯಬೇಡಿ. ಬಿರಾದರ್ ಅವರ ನೋವಿನ ಮಾತು!

    ತೆರೆಯ ಮೇಲೆ ತಮ್ಮ ನಟನೆಯಿಂದ ಸಿನಿ ಪ್ರೇಕ್ಷಕರನ್ನು ನಗೆಗಡಲಿಗೆ ತೇಲಿಸಿದ ಜೀವವದು. ನೂರಾರು ಸಿನಿಮಾಗಳಲ್ಲಿ ಅಭಿನಯಿಸಿ ಕನ್ನಡ ಚಲನಚಿತ್ರೋದ್ಯಮಕ್ಕೆ ಹೆಮ್ಮೆ ತಂದು ಕೊಟ್ಟ ಹಾಸ್ಯದಿಗ್ಗಜ ಇವರು. ತೆರೆಯ ಮೇಲೆ ಬಣ್ಣ ಹಚ್ಚಿದ್ದರೆ ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಎಲ್ಲಿಲ್ಲದ ನಗು ಖುಷಿ ತಂದುಕೊಟ್ಟವರು. ಅವರ ನಟನೆಗೆ ಅವರೇ ಸರಿಸಾಟಿ. ಅವರು ಬೇರೆಯಾರು ಅಲ್ಲ. ನಮ್ಮ ನಿಮ್ಮೆಲ್ಲ ನೆಚ್ಚಿನ ಹಾಸ್ಯ ದಿಗ್ಗಜ ಬಿರಾದರ್ ಅವೆು. ಬಿರಾದಾರ್ ಅವರು ಸಿನಿಮಾಗಳಲಿ ಕೇವಲ ಸಣ್ಣ ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡರು, ಅವರ…