ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸೆಕೆಂಡರಿ ಸ್ಕೂಲ್ ಲಿವಿಂಗ್ ಸರ್ಟಿಫಿಕೇಟ್ (ಎಸ್ಎಸ್ಎಲ್ಸಿ)ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಂತಿಮ ಗಡುವನ್ನು ವಿಸ್ತರಿಸಿದೆ.ಇದರಂತೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಯಸುವವರಿಗೆ ಮೇ 20 ಕಡೆಯ ದಿನವಾಗಿದೆ.

ವಿದ್ಯಾರ್ಥಿಗಳ ಅನುಕೂಲಕ್ಕಾ ಅಂತಿಮ ದಿನಾಂಕವನ್ನು ಮುಂದೂಡಿದ್ದಾಗಿ ಹೇಳಲಾಗಿದ್ದು ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಮುಖ್ಯೋಪಾಧ್ಯಾಯರ ಸಮೂಹವು ದಿನಾಂಕ ಮುಂದುಡುವಂತೆ ಇಲಾಖೆಗೆ ಮನವಿ ಸಲ್ಲಿಸಿತ್ತು. “ಹೆಚ್ಚಿನ ವಿದ್ಯಾರ್ಥಿಗಳು ಇದಾಗಲೇ ತಮ್ಮ ತಮ್ಮ ಊರುಗಳಿಗೆ ತೆರಳಿದ್ದಾರೆ. ಹಾಗಾಗಿ ಪೂರಕ ಪರೀಕ್ಷೆಯ ಲ್ಕುರಿತ ಗಡುವಿನ ವಿಚಾರ ನಮಗೆ ಗುರುವಾರವಷ್ಟೇ ತಿಳಿದಿತ್ತು. ಇದರಿಂದ ವಿದ್ಯಾರ್ಥಿಗೆ ಅನಾನುಕೂಲವಾಗದಿರಲೆಂದು ನಾವು ಅರ್ಜಿ ಸಲ್ಲಿಕೆಯ ಅಂತಿಮ ದಿನಾಂಕ ಮುಂದೂಡಲು ಕೇಳಿದೆವು” ಬೆಂಗಳುರಿನ ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾದ್ಯಾಯರೊಬ್ಬರು ಹೇಳಿದ್ದಾರೆ.

ಭವಿಷ್ಯದ ಶೈಕ್ಷಣಿಕ ಹಾಗೂ ಔದ್ಯೋಗಿಕ ಜೀವನಕ್ಕೆ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ 40,000 ಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳು ಗೈರಾಗಿದ್ದಾರೆ ಎನ್ನಲಾಗಿದೆ. ಅಲ್ಲದೆ 8.4 ಲಕ್ಷ ವಿದ್ಯಾರ್ಥಿಗಳ ಪೈಕಿ 2.26 ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದಾರೆ.ಇದರಲ್ಲಿ ಕೇವಲ 1.8 ಲಕ್ಷ ವಿದ್ಯಾರ್ಥಿಗಳು ಮಾತ್ರ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಕೆಎಸ್ಇಇಬಿ ನಿರ್ದೇಶಕಿ ಸುಮಂಗಲಾ ಪತ್ರಿಕೆಗೆ ತಿಳಿಸಿದ್ದಾರೆ.

“ಉತ್ತರಪತ್ರಿಕೆ ಮರುಮೌಲ್ಯಮಾಪನ ದಿನಾಂಕಗಳಿಗೆ ಯಾವ ಬದಲಾವಣೆ ಮಾಡಲಾಗಿಲ್ಲ.ಜೂನ್ ನಲ್ಲಿ ಪೂರಕ ಪರೀಶ್ಖೆ ವೇಳಾಪಟ್ಟಿಯನ್ನು ಗಮನದಲ್ಲಿಟ್ಟುಕೊಂಡು ಇದನ್ನು ನಿರ್ವಹಿಸಲಾಗಿದೆ.” ಅವರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ನವೆಂಬರ್ 18 : ಮೂಡೀಸ್ ರೇಟಿಂಗ್ ಕೇಂದ್ರಕ್ಕೆ ಹೊಸ ಚೈತನ್ಯ ತುಂಬಿದಂತಿದೆ. ನೋಟ್ ಬ್ಯಾನ್, ಜಿ.ಎಸ್.ಟಿ ಅನ್ನು ವಿಷಯವಾಗಿರಿಸಿಕೊಂಡು ಕೇಂದ್ರವನ್ನು ಟೀಕೆ ಮಾಡುತ್ತಿದ್ದವರ ಬಾಯಿ ಮುಚ್ಚುವಂತೆ ಮಾಡಿದೆ ಮೂಡೀಸ್ ರೇಟಿಂಗ್.
ಮತದಾನ ಪ್ರತಿಯೊಬ್ಬರ ಹಕ್ಕು. ಆದರೆ ಎಲ್ಲಾ ಸರಿಯಿದ್ದರೂ ತಮ್ಮ ಹಕ್ಕು ಚಲಾಯಿಸದೇ ಅವರು ಸರಿ ಇಲ್ಲ ಇವರು ಸರಿ ಇಲ್ಲ ಅಂತ ಮಾತನಾಡುವವರೇ ಹೆಚ್ಚು. ಆದರೆ ತನ್ನ ಎರಡೂ ಕೈ ಇಲ್ಲದಿದ್ದರೂ ಕಾಲಿನಿಂದಲೇ ಯುವತಿಯೊಬ್ಬರು ಮತದಾನ ಮಾಡಿದ್ದಾರೆ. ಹೌದು, ಕಾನಹೊಸಳ್ಳಿಯ ಲಕ್ಷ್ಮಿಯವರಿಗೆ ಎರಡೂ ಕೈಗಳಿಲ್ಲ. ಆದ್ರೆ ಆ ಬಗ್ಗೆ ತಲೆಕೆಡಿಸಿಕೊಳ್ಳದ ಲಕ್ಷ್ಮಿ ಕಾಲುಗಳಿಂದಲೇ ತಮ್ಮ ಹಕ್ಕು ಚಲಾಯಿಸಿದ್ದಾರೆ. ಗುಂಡಮುಣುಗಿಯ ಮತಗಟ್ಟೆ ಸಂಖ್ಯೆ 118 ರಲ್ಲಿ ಮತ ಚಲಾಯಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಎರಡೂ ಕೈಯಿಲ್ಲದ ಲಕ್ಷ್ಮಿಯವರಿಗೆ ಚುನಾವಣಾ ಸಿಬ್ಬಂದಿ…
ಬಿಟ್ಕಾಯಿನ್ ಎನ್ನುವುದು ಅಂತರಜಾಲ ಲೋಕದಲ್ಲಿ ಬಳಕೆಗೆ ಬರುತ್ತಿರುವ ವರ್ಚುಯಲ್ ಹಣ. ಭಾರತದಲ್ಲಿ ರೂಪಾಯಿ, ಅಮೆರಿಕದಲ್ಲಿ ಡಾಲರುಗಳೆಲ್ಲ ಇದ್ದ ಹಾಗೆ ಅಂತರಜಾಲದ ಹಣ ಇದು. ಅಂತರಜಾಲ ಹೇಗೆ ಮಿಥ್ಯಾಲೋಕವೋ ಅಲ್ಲಿ ಚಲಾವಣೆಯಾಗುವ ಈ ಬಿಟ್ಕಾಯಿನ್” ಕೂಡ ವರ್ಚುಯಲ್, ಅಂದರೆ ಕಣ್ಣಿಗೆ ಕಾಣದ, ಕರೆನ್ಸಿಯೇ. ಮೂಲತಃ ನಾಣ್ಯ- ನೋಟುಗಳಾವುದೂ ಇಲ್ಲದ ಬಿಟ್ಕಾಯಿನ್ ಅಸ್ತಿತ್ವ ಕಂಪ್ಯೂಟರ್ ಪ್ರಪಂಚಕ್ಕೆ ಸೀಮಿತ
ನವದೆಹಲಿ, ಅಕ್ಟೋಬರ್ 04:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2.0 ಸರ್ಕಾರದ ಮೊದಲ ಬಜೆಟ್ ನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳವಾಗಲಿದೆ. ಶೇ 05ರಷ್ಟು ತುಟ್ಟಿಭತ್ಯೆ ಹೆಚ್ಚಳಖಾತ್ರಿಯಾಗಿದೆ. ಇದರ ಜೊತೆಗೆ 7ನೇ ವೇತನಾ ಆಯೋಗದ ಅನ್ವಯ ಕೇಂದ್ರ ಸರ್ಕಾರ ಸ್ವಾಮ್ಯದ ಆರೋಗ್ಯ ಸಂಸ್ಥೆಗಳನೌಕರರಿಗೆ ಸಂಬಳ ಏರಿಕೆ, ಬಾಕಿ ಮೊತ್ತ(Arrears) ಕೂಡಾ ಲಭಿಸುತ್ತಿದೆ. ಆದರೆ, ಸರ್ಕಾರಿ ನೌಕರರ ಬೇಡಿಕೆಗಳುಇನ್ನು ಕಡಿಮೆಯಾಗಿಲ್ಲ. ಪ್ರಮುಖ ಬೇಡಿಕೆಗಳು ಈಡೇರಿಲ್ಲ. ಬೇಡಿಕೆಗೆ ಅನುಸಾರವಾಗಿ ಮೂಲ ವೇತನವನ್ನುಏರಿಕೆ ಮಾಡುವುದು ಹಾಗೂ ಫಿಟ್ಮೆಂಟ್…
ಈ ಬಾರಿ ಚಂದ್ರಗ್ರಹಣ ಧನಸ್ಸು ಮತ್ತು ಮಕರ ರಾಶಿಯವರಿಗೆ ಹೆಚ್ಚು ದೋಷಕರವಾಗಲಿದೆ. ವೃಷಭ ಲಗ್ನ ಮತ್ತು ಮಿಥುನ ಲಗ್ನದಲ್ಲಿ ಚಂದ್ರಗ್ರಹಣ ಸಂಭವಿಸುತ್ತಿದೆ. ಹಾಗಾಗಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರಿಗೆ ಸ್ವಲ್ಪ ಮಟ್ಟದ ದೋಷ ಎದುರಾಗಲಿದೆ ಎಂದು ಜೋತಿಷ್ಯಶಾಸ್ತ್ರಜ್ಞರು ಹೇಳುತ್ತಾರೆ. ದೋಷ ನಿವಾರಣೆ: ಗ್ರಹಣ ಕಾಲದಲ್ಲಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರು ನಿದ್ರೆ ಮಾಡದೇ ಕೆಳಗೆ ನೀಡಲಾಗಿರುವ ಶ್ಲೋಕವನ್ನು ಕ್ರಮಬದ್ಧವಾಗಿ ಹೇಳುತ್ತಾ ಪಾರಾಯಣ ಮಾಡಬೇಕು. ಯೋ ಸೌ ವ್ರಜಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ…
ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಹೋಂವರ್ಕ್ ನೀಡುವ ಶಾಲೆಗಳ ಮಾನ್ಯತೆಯನ್ನೇ ರದ್ದುಪಡಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಖಡಕ್ ಎಚ್ಚರಿಕೆ ನೀಡಿದೆ.2019-20ನೇ ಸಾಲಿನ ಶೈಕ್ಷಣಿಕ ತರಗತಿಗಳು ಈಗಾಗಲೇ ಆರಂಭವಾಗಿವೆ. ಖಾಸಗಿ ಹಾಗೂ ಅನುದಾನಿತ ಶಾಲೆಗಳಲ್ಲಿ ಒಂದು ಮತ್ತು ಎರಡನೇ ತರಗತಿ ಮಕ್ಕಳಿಗೆ ಹೆಚ್ಚಿನ ಹೋಂವರ್ಕ್ ನೀಡಲಾಗುತ್ತಿದೆ. ಇದು ಪಾಲಕ, ಪೋಷಕರಿಗೆ ನೇರ ಹೊರೆಯಾಗಲಿದೆ. ಅಲ್ಲದೆ, ಈ ಮಕ್ಕಳ ಹೋಂ ವರ್ಕ್ನ್ನು ಮನೆಯಲ್ಲಿ ಪಾಲಕ, ಪೋಷಕರೇ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಹೋಂ…