ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಳೆ ನರಸೀಪುರ ಪಟ್ಟಣದ ಪ್ರೈಂ ಕ್ಲಬ್ ಮತ್ತು ಗೆಳೆಯರ ಬಳಗ ಈ ಶ್ಲಾಘನೀಯ ಕೆಲಸವನ್ನು ಮಾಡಿದೆ. ತಮ್ಮ ತಮ್ಮ ವಾಟ್ಸಪ್ ಗ್ರೂಪ್ನ ಸ್ನೇಹಿತರೆಲ್ಲ ಒಂದಾಗಿ ನೆರೆ ಪೀಡಿತ ಪ್ರದೇಶಗಳಾದ ಹಾವೇರಿಯ ಕೂಡಲ ಗ್ರಾಮ ಮತ್ತು ಬೆಳಗಾವಿಯ ರಾಮದುರ್ಗ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸ್ಕೂಲ್ ಬ್ಯಾಗ್ಗಳನ್ನು ವಿತರಿಸಿದ್ದಾರೆ. ಎರಡು ಜಿಲ್ಲೆಗಳ ಒಟ್ಟು ಮೂರು ಸರ್ಕಾರಿ ಶಾಲೆಗಳ 350ಕ್ಕೂ ಹೆಚ್ಚು ಮಕ್ಕಳಿಗೆ ಶಾಲಾ ಬ್ಯಾಗ್ ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಿದ್ದಾರೆ.

ಸ್ನೇಹಿತರೆಲ್ಲ ತಮ್ಮ ಶಕ್ತಿಯಾನುಸಾರ ಹಣ ಸಂಗ್ರಹಿಸಿ ನಂತರ ಹೋಲ್ ಸೇಲ್ ದರದಲ್ಲಿ ವಿತರಣಾ ವಸ್ತುಗಳನ್ನು ಖರೀದಿಸಿದ್ದಾರೆ. ನಂತರ ಒಂದು ತಂಡ ನೆರೆ ಪೀಡಿತ ಜಿಲ್ಲೆಗೆ ತಲುಪಿದ್ದಾರೆ. ಮೊದಲಿಗೆ ಹಾವೇರಿಯ ಕೂಡಲ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಗಿದ್ದು, ಸೋಮುವಾರ ಬೆಳಗಾವಿ ಜಿಲ್ಲೆಯಲ್ಲಿ ವಿತರಣೆ ಮಾಡುತ್ತೇವೆ ಎಂದು ಆಯೋಜಕರು ಮಾಹಿತಿನೀಡಿದ್ದಾರೆ.

ಒಂದು ವಿದ್ಯಾರ್ಥಿಗೆ ಒಂದು ಬ್ಯಾಗ್, ನೀರಿನಬಾಟೆಲ್ ಮತ್ತು ಜಾಮೆಟ್ರಿ ಬಾಕ್ಸ್ ಎಂಟು ನೂರು ರೂಪಾಯಿಯಂತೆ ಒಟ್ಟು ಮುನ್ನೂರು ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಗುತ್ತಿದೆ. ಪ್ರೈಂ ಕ್ಲಬ್ ಮತ್ತು ಗೆಳೆಯರ ಸಂಯುಕ್ತ ಆಶ್ರಯದಲ್ಲಿ ಮಾಡುತ್ತಿರುವ ಕೆಲಸಕ್ಕೆ ಶಾಲಾ ಮುಖ್ಯ ಶಿಕ್ಷಕ ಶಿವಪ್ಪ ಕೂಡ ಸಂತಸ ವ್ಯಕ್ತಪಡಿಸಿದ್ದು, ಯುವಕರ ತಂಡದ ಸಮಾಜ ಸೇವೆಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ಹಾನಗಲ್ ತಾಲೂಕಿನ ಕೂಡಲ ಗ್ರಾಮದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ ಮಾಡಲಾಯಿತು ಸರ್ಕಾರಿ ಶಾಲೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ಶಿವಪ್ಪ, ಪ್ರೈಂ ಕ್ಲಬ್ ಸದಸ್ಯರಾದ ಅಶೋಕ್ ಗೌಡ, ಜಾಯ್ಬ್ರಿಗಾಂಝ, ಮೋಹನ್ ಮತ್ತು ಮಹಮದ್ಶಫಿ ಸೇರಿದಂತೆ ಇತರರು ಹಾಜರಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಕಾಂಗ್ರೆಸ್ಗೆ ಕೈ ಕೊಟ್ಟಿತ್ತಾ ಎಂಬ ಪ್ರಶ್ನೆಯೊಂದು ಜಿಲ್ಲೆಯ ಜನರಲ್ಲಿ ಮೂಡಿದೆ. ಯಾಕಂದ್ರೆ ದೋಸ್ತಿ ಅಭ್ಯರ್ಥಿಯನ್ನು ಕೆಡವಲು ದೋಸ್ತಿಗಳೇ ಪ್ಲಾನ್ ಮಾಡಿಕೊಂಡ್ರಾ ಎಂಬ ಮಾತುಗಳು ಕೇಳಿಬರುತ್ತಿವೆ. ಹೌದು. ಜೆಡಿಎಸ್ ಮುಖಂಡ ಮಂಜುನಾಥ್ ಅವರು ಬಿಜೆಪಿ ಅಭ್ಯರ್ಥಿಗೆ ಮತ ಹಾಕುವಂತೆ ಕರೆ ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ಗೆ ವೋಟ್ ಹಾಕಬೇಡಿ, ಬಿಜೆಪಿಗೆ ವೋಟ್ ಹಾಕಿ ಎಂದು ಹೇಳುವ ಮೂಲಕ ಮಂಜುನಾಥ್ ಅವರು ಕಾಂಗ್ರೆಸ್ ಸೋಲಿಸಲು ಹಣ ಹಂಚಿದ್ದಾರೆ ಎಂದು ಆರೋಪಿಸಲಾಗಿದೆ. ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ…
ರೈತರು ಎದುರಿಸುತ್ತಿರುವ ಕಷ್ಟಗಳನ್ನ ಪ್ರಧಾನ ಮಂತ್ರಿ ಅವರಿಗೆ ಮನವರಿಕೆ ಮಾಡಲು ಸಿಂಧನೂರು ತಾಲೂಕಿನ ಯುವಕರೊಬ್ಬರು ತನ್ನ ರಕ್ತದಲ್ಲಿ ಎರಡು ಪತ್ರಗಳನ್ನ ಬರೆದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದ್ದಾರೆ.
ಜೀವನದಲ್ಲಿ ಒಮ್ಮೆಯಾದರೂ ವಿಮಾನ ಪಯಣ ಮಾಡಬೇಕೆಂಬ ಅಸೆ ಎಲ್ಲರಿಗೂ ಕೂಡ ಇರುತ್ತದೆ, ಗಗನದಲ್ಲಿ ಒಮ್ಮೆ ಪ್ರಯಾಣ ಬೆಳೆಸಿ ಆ ಮಧುರ ಕ್ಷಣವನ್ನು ಎಲ್ಲರೊಂದಿಗೆ ಹಂಚಿಕೊಳ್ಳಬೇಕೆಂಬ ಆಸೆ ಕೂಡ ಪ್ರತಿಯೊಬ್ಬರಿಗೆ ಇರುತ್ತದೆ. ನಮ್ಮ ದೇಶದ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಸಂಪರ್ಕ ಬೆಳೆಸಲು ಅದು ಕೂಡ ಕಡಿಮೆ ಅವಧಿಯಲ್ಲಿ ಈ ದೂರ ಕ್ರಮಿಸಲು ವಿಮಾನಯಾನ ಬಹು ಲಾಭಕರ. ಕೇವಲ ಪ್ರಯಾಣಿಕರು ಮಾತ್ರವಲ್ಲ ಸರಕುಗಳು ಕೂಡ ಸಾಗುತ್ತವೆ ಈ ಯಾನದಲ್ಲಿ, ಇನ್ನು ವಿಮಾನ ಎಂದಾಗ ನೆನಪಾಗುವುದು ವಿಮಾನ ಪ್ರಯಾಣದಲ್ಲಿ ಪ್ರಯಾಣಿಕರ…
ಸಿದ್ದಗಂಗಾ ಶ್ರೀಗಳ ಆರೋಗ್ಯ ಗಂಭೀರವಾಗಿದ್ದು, ಹಳೆ ಮಠದಲ್ಲೇ ಶ್ರೀಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಹೇಳಿದ್ದಾರೆ. ಶ್ರೀಗಳ ಆರೋಗ್ಯದ ಕುರಿತಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ 2 ಗಂಟೆಗಳಲ್ಲಿ ಶ್ರೀಗಳ ಆರೋಗ್ಯದ ಬಗ್ಗೆ ಅಪ್ಡೇಟ್ಸ್ ಕೊಡುತ್ತೇವೆ. ಭಾನುವಾರ ರಾತ್ರಿಯಿಂದ ಶ್ರೀಗಳ ಬಿಪಿ ಹಾಗೂ ಶ್ವಾಸಕೋಶದಲ್ಲಿ ಏರುಪೇರುಗಳಾಗುತ್ತಿವೆ. ಹೀಗಾಗಿ ನಮ್ಮ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದೇವೆ. ಇದರಲ್ಲಿ ಎಷ್ಟು ಪ್ರಮಾಣದಲ್ಲಿ ಸಕ್ಸಸ್ ಆಗುತ್ತೇವೆ ಅಂತ ಹೇಳಲು ಸಾಧ್ಯವಿಲ್ಲ. ಯಾಕಂದ್ರೆ ಸ್ವಲ್ಪ ಗಂಭೀರ ಸ್ಥಿತಿಯಲ್ಲೇ…
ಸ್ವಾತಂತ್ರ್ಯಪಡೆದ 72 ವರ್ಷಗಳಾದರೂ ಬಲರಾಂಪುರ್ ಜಿಲ್ಲೆಯ ಗ್ರಾಮಕ್ಕೆ ವಿದ್ಯುತ್ತಲುಪಿಲ್ಲ. ಆದರೆ ವಿದ್ಯುತ್ ಬಿಲ್ಮಾತ್ರ ತಲುಪಿದೆ. ಈ ಗ್ರಾಮಸ್ಥರು ರಾತ್ರಿವೇಳೆ ಲ್ಯಾಂಟರ್ನ್ ಮತ್ತು ಧಿಬ್ರಿಗಳನ್ನು ಬಳಸುತ್ತಾರೆ.ಇದು ಬಿಜೆಪಿ ಆಳ್ವಿಕೆಯಲ್ಲಿ ಸಚಿವರಾಗಿದ್ದ ಮತ್ತು ಪ್ರಸ್ತುತ ರಾಜ್ಯಸಭಾ ಸಂಸದ ರಾಮ್ವಿಚಾರ್ನೇತಮ್ಗೆ ಸೇರಿದ ಗ್ರಾಮವಾಗಿದೆ. ರಾಜ್ಯಸಭಾ ಸಂಸದ ರಾಮ್ವಿಚಾರ್ ನೇತಮ್ಅವರ ಮನೆ ಇಲ್ಲಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿದೆ ಎಂದು ಪತ್ರಿ ಪಾರಿಗ್ರಾಮಸ್ಥರು ಹೇಳುತ್ತಾರೆ. ಇಲ್ಲಿಯವರೆಗೆ ವಿದ್ಯುತ್ ನೀಡುವ ಬಗ್ಗೆ ಕೇವಲ ಭರವಸೆ ದೊರೆತಿದೆ ಅಷ್ಟೇ, ಆದರೆ ವಿದ್ಯುತ್ಮಾತ್ರ ತಲುಪಿಲ್ಲ ಎಂದು ಅವರು…
ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ, ಖ್ಯಾತ ಲೇಖಕಿ ಹಾಗೂ ಜನಾನುರಾಗಿ ಸುಧಾ ಮೂರ್ತಿ ಅವರು ಬಿಗ್ ಬಿ ಅಮಿತಾಭ್ ಬಚ್ಚನ್ ನಡೆಸಿಕೊಡುತ್ತಿರುವ ‘ಕೌನ್ ಬನೇಗಾ ಕರೋಡ್ಪತಿ 11’ರ (ಕೆಬಿಸಿ) ಹಾಟ್ ಸೀಟ್ ಅಲಂಕರಿಸುತ್ತಿದ್ದು ಈ ಎಪಿಸೋಡ್ ಕಿರುತೆರೆ ವೀಕ್ಷಕರಲ್ಲಿ ಸಿಕ್ಕಾಪಟ್ಟೆ ಕ್ರೇಜ್ ಸೃಷ್ಟಿಸಿದೆ. ಕೆಬಿಸಿ ಸೆಟ್ನಲ್ಲಿ ಬಿಗ್ ಬಿಯನ್ನು ಸುಧಾ ಮೂರ್ತಿ ಭೇಟಿಯಾಗಿರುವ ಫೋಟೋಗಳನ್ನು ಬಿಗ್ ಬಿ ತಮ್ಮ ಬ್ಲಾಗ್ನಲ್ಲಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸುಧಾ ಮೂರ್ತಿ, “ನಾನು ಸಿನಿಮಾ ಪ್ರೇಮಿ ಹಾಗಾಗಿ ಅಮಿತಾಭ್ ಬಚ್ಚನ್ ಅವರಂತಹ ಮೇರು ಪ್ರತಿಭೆಯನ್ನು ಭೇಟಿಯಾಗಿದ್ದು ತುಂಬಾ ಖುಷಿಯಾಗಿದೆ….