inspirational

ವಾಟ್ಸಪ್ ಗ್ರೂಪ್ ಸ್ನೇಹಿತರಿಂದ ನೆರೆ ಸಂತ್ರಸ್ತ ಪ್ರದೇಶದ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್ ವಿತರಣೆ…!

60

ಹೊಳೆ ನರಸೀಪುರ ಪಟ್ಟಣದ ಪ್ರೈಂ ಕ್ಲಬ್ ಮತ್ತು ಗೆಳೆಯರ ಬಳಗ ಈ ಶ್ಲಾಘನೀಯ ಕೆಲಸವನ್ನು ಮಾಡಿದೆ. ತಮ್ಮ ತಮ್ಮ ವಾಟ್ಸಪ್ ಗ್ರೂಪ್‌ನ ಸ್ನೇಹಿತರೆಲ್ಲ ಒಂದಾಗಿ ನೆರೆ ಪೀಡಿತ ಪ್ರದೇಶಗಳಾದ ಹಾವೇರಿಯ ಕೂಡಲ ಗ್ರಾಮ ಮತ್ತು ಬೆಳಗಾವಿಯ ರಾಮದುರ್ಗ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸ್ಕೂಲ್ ಬ್ಯಾಗ್‌ಗಳನ್ನು ವಿತರಿಸಿದ್ದಾರೆ. ಎರಡು ಜಿಲ್ಲೆಗಳ ಒಟ್ಟು ಮೂರು ಸರ್ಕಾರಿ ಶಾಲೆಗಳ 350ಕ್ಕೂ ಹೆಚ್ಚು ಮಕ್ಕಳಿಗೆ ಶಾಲಾ ಬ್ಯಾಗ್ ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಿದ್ದಾರೆ.

ಸ್ನೇಹಿತರೆಲ್ಲ ತಮ್ಮ ಶಕ್ತಿಯಾನುಸಾರ ಹಣ ಸಂಗ್ರಹಿಸಿ ನಂತರ ಹೋಲ್ ಸೇಲ್ ದರದಲ್ಲಿ ವಿತರಣಾ ವಸ್ತುಗಳನ್ನು ಖರೀದಿಸಿದ್ದಾರೆ. ನಂತರ ಒಂದು ತಂಡ ನೆರೆ ಪೀಡಿತ ಜಿಲ್ಲೆಗೆ ತಲುಪಿದ್ದಾರೆ. ಮೊದಲಿಗೆ ಹಾವೇರಿಯ ಕೂಡಲ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಗಿದ್ದು, ಸೋಮುವಾರ ಬೆಳಗಾವಿ ಜಿಲ್ಲೆಯಲ್ಲಿ ವಿತರಣೆ ಮಾಡುತ್ತೇವೆ ಎಂದು ಆಯೋಜಕರು ಮಾಹಿತಿನೀಡಿದ್ದಾರೆ.

ಒಂದು ವಿದ್ಯಾರ್ಥಿಗೆ ಒಂದು ಬ್ಯಾಗ್, ನೀರಿನಬಾಟೆಲ್ ಮತ್ತು ಜಾಮೆಟ್ರಿ ಬಾಕ್ಸ್ ಎಂಟು ನೂರು ರೂಪಾಯಿಯಂತೆ ಒಟ್ಟು ಮುನ್ನೂರು ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಗುತ್ತಿದೆ. ಪ್ರೈಂ ಕ್ಲಬ್ ಮತ್ತು ಗೆಳೆಯರ ಸಂಯುಕ್ತ ಆಶ್ರಯದಲ್ಲಿ ಮಾಡುತ್ತಿರುವ ಕೆಲಸಕ್ಕೆ ಶಾಲಾ ಮುಖ್ಯ ಶಿಕ್ಷಕ ಶಿವಪ್ಪ ಕೂಡ ಸಂತಸ ವ್ಯಕ್ತಪಡಿಸಿದ್ದು, ಯುವಕರ ತಂಡದ ಸಮಾಜ ಸೇವೆಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ಹಾನಗಲ್ ತಾಲೂಕಿನ ಕೂಡಲ ಗ್ರಾಮದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ ಮಾಡಲಾಯಿತು ಸರ್ಕಾರಿ ಶಾಲೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ಶಿವಪ್ಪ, ಪ್ರೈಂ ಕ್ಲಬ್ ಸದಸ್ಯರಾದ ಅಶೋಕ್ ಗೌಡ, ಜಾಯ್ಬ್ರಿಗಾಂಝ, ಮೋಹನ್ ಮತ್ತು ಮಹಮದ್ಶಫಿ ಸೇರಿದಂತೆ ಇತರರು ಹಾಜರಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ