ಸುದ್ದಿ

ಇನ್ಮುಂದೆ ಫೇಸ್​ಬುಕ್​ ಬಳಕೆ ಮಾಡಲು ಆಧಾರ್ ಕಾರ್ಡ್ ಕಡ್ಡಾಯ,!? ನಕಲಿ ಲೈಕ್, ಕಮೆಂಟ್, ಶೇರ್​ಗೆ ಬರಲಿದೆ ಕುತ್ತು,.!!

33

ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಗಳು ಹೆಚ್ಚುತ್ತಿವೆ. ಒಬ್ಬ ವ್ಯಕ್ತಿ ಎರಡು, ಮೂರು ಫೇಸ್ ಬುಕ್ ಖಾತೆ ಓಪನ್ ಮಾಡಿಕೊಂಡಿದ್ದಾರೆ.  ನಕಲಿ ಫೇಸ್ಬುಕ್​ ಖಾತೆಗಳಿಂದ ಸಾಕಷ್ಟು ವಂಚನೆ ಪ್ರಕರಣಗಳು ಬೆಳಕಿಗೆ ಬಂದಿವೆ. ಇದನ್ನು ತಡೆಯಲು ಫೇಸ್ ಬುಕ್ ಸೇರಿ ಇತರೆ ಸಾಮಾಜಿಕ ಜಾಲತಾಣ ಬಳಕೆದಾರರ ಪ್ರೊಫೈಲ್​ಗೆ ಆಧಾರ್ ಸಂಖ್ಯೆ ಜೋಡಣೆ ಮಾಡಬೇಕು ಎಂದು ಮದ್ರಾಸ್, ಬಾಂಬೆ ಹಾಗೂ ಮಧ್ಯ ಪ್ರದೇಶದ ಹೈಕೋರ್ಟ್​ನಲ್ಲಿ ಸಲ್ಲಿಕೆಯಾಗಿರೋ ಆರ್ಜಿಗಳನ್ನು ಸುಪ್ರೀಂಕೋರ್ಟ್​ಗೆ ವರ್ಗಾಯಿಸಲು ಕೋರಿರುವ ಅರ್ಜಿ ವಿಚಾರಣೆಗೆ ಸರ್ವೋಚ್ಚ ನ್ಯಾಯಾಲಯ ಸಮ್ಮತಿಸಿದೆ.

ಈ ಕಾನೂನನ್ನು ಜಾರಿಗೆ ತರುವುದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಯೋತ್ಪಾದಕರ ಪರ ನಿಲ್ಲುವ ಮತ್ತು ವದಂತಿಗಳನ್ನು ಹಬ್ಬಿಸುವ ಘಟನೆಗಳನ್ನು ತಡೆಯಬಹುದು. ಈ  ಹಿನ್ನೆಲೆಯಲ್ಲಿ ಫೇಸ್ ಬುಕ್ ಗೆ ಬಳಕೆದಾರರ ಆಧಾರ್ ಸಂಖ್ಯೆ ನಮೂದಿಸಬೇಕು. ಆಗ ಇಂಥಹ ಕೃತ್ಯ ನಡೆಸುವವರನ್ನು ಸುಲಭವಾಗಿ ಪತ್ತೆ ಹಚ್ಚಬಹುದು. ಅಲ್ಲದೆ, ಸಾಮಾಜಿಕ ಜಾಲತಾಣದ ಮೂಲಕ ರಾಷ್ಟ್ರವಿರೋಧಿ ಮತ್ತು ಸಮಾಜವಿರೋಧಿ ಚಟುವಟಿಕೆಗಳ ನಡೆಯುವುದಕ್ಕೆ ಕಡಿವಾಣ ಹಾಕಲು ಸಾಧ್ಯ ಎಂಬುದು ಅರ್ಜಿದಾರರ ಅಭಿಪ್ರಾಯವಾಗಿದೆ .

ಸಾಮಾಜಿಕ ಜಾಲತಾಣದ ಖಾತೆಗೆ ಆಧಾರ್​ ಲಿಂಕ್​ ಮಾಡುವ ವಿಚಾರಕ್ಕೆ ಸಂಬಂಧಿಸಿ  ಅ.13ರ ಒಳಗೆ ಅಭಿಪ್ರಾಯ ತಿಳಿಸುವಂತೆ ಸುಪ್ರೀಂಕೋರ್ಟ್ ಕೇಂದ್ರಸರ್ಕಾರ, ಗೂಗಲ್​, ಟ್ವಿಟ್ಟರ್, ಯೂಟ್ಯೂಬ್​ಗೆ ​ನಿರ್ದೇಶನ ನೀಡಿದೆ.

ದೀಪಕ್​ ಗುಪ್ತಾ ಹಾಗೂ ಅನಿರುದ್ಧ ಬೋಸ್​ ಅವರನ್ನೊಳಗೊಂಡ ಪೀಠ ಅರ್ಜಿಗಳ ವಿಚಾರಣೆಗೆ ಒಪ್ಪಿಗೆ ಸೂಚಿಸಿದ್ದು. ಈ ವಿಚಾರ ಮದ್ರಾಸ್​ ಹೈಕೋರ್ಟ್​​ನಲ್ಲಿದೆ. ಹೀಗಾಗಿ ನಾವು ವಿಚಾರಣೆ ನಡೆಸುತ್ತೇವೆ. ಆದರೆ ಅಂತಿಮ ತೀರ್ಪನ್ನು ನೀಡುವುದಿಲ್ಲ ಎಂದು ಪೀಠ ನೋಟಿಸ್ ನೀಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಮ ಮಕ್ಕಳಿಗೆ ಯಾವ ಯಾವ ತಿಂಗಳಲ್ಲಿ, ಎಷ್ಟು ವರ್ಷದವರೆಗೆ ಲಸಿಕೆ ಹಾಕಿಸಬೇಕು.?ಇಲ್ಲಿದೆ ಸಂಪೂರ್ಣ ಮಾಹಿತಿ..ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಕಾಲವೊಂದಿತ್ತು, ಆಗ ಯಾವುದೇ ಉತ್ತಮ ಆಸ್ಪತ್ರೆಗಳು ಇರಲಿಲ್ಲ.ಹುಟ್ಟುವ ಮಕ್ಕಳಿಗೆ ಆಗ ಯಾವುದೇ ಲಸಿಕೆಗಳನ್ನು ಹಾಕುತ್ತಿರಲಿಲ್ಲ.ಯಾಕಂದ್ರೆ ಆಗಿನ ಆಹಾರ ಪದ್ಧತಿ ಆಗಿತ್ತು.ಯಾವುದೇ ಲಸಿಕೆಗಳು ಆಗ ಅಗತ್ಯವಿರಲಿಲ್ಲ. ಆದ್ರೆ ಈಗ ಆಗಿಲ್ಲ, ಹುಟ್ಟುತ್ತಲೇ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಅಗತ್ಯವಾದ ಲಸಿಕೆಗಳನ್ನು ಹಾಕಿಸಬೇಕಾಗುತ್ತೆ.ಇಲ್ಲವಾದ್ರೆ ನಾನಾ ಖಾಯಿಲೆಗಳು ಬರುವುದು ಗ್ಯಾರಂಟಿ. ಹಾಗಾಗಿ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಲಸಿಕೆ ಹಾಕಿಸುವುದು ಬಹು ಮುಖ್ಯ. ಹಾಗಾದ್ರೆ ಯಾವ ಯಾವ ಲಸಿಕೆಗಳನ್ನು ಯಾವ ಸಮಯಕ್ಕೆ ಹಾಕಿಸಬೇಕೆಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.. ಮಗು ಹುಟ್ಟಿದ ತಕ್ಷಣ ಯಾವ…

  • ಜ್ಯೋತಿಷ್ಯ

    ಶ್ರೀ ವೆಂಕಟೇಶ್ವರ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ. ಈ ದಿನದ ನಿಮ್ಮ ರಾಶಿಯ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ಆರೋಗ್ಯ ಚೆನ್ನಾಗಿರುತ್ತದೆ….

  • ಸುದ್ದಿ

    ಸದ್ಯದಲ್ಲೇ ಜೆಡಿಎಸ್‍ಗೆ ಮತ್ತೊಂದು ಬಿಗ್ ಶಾಕ್ ಕೊಡಲು ಬಿಜೆಪಿ ತಯಾರಿ…!

    ಬೆಂಗಳೂರು, ಆ.4- ಈಗಾಗಲೇ ಮೂವರು ಜೆಡಿಎಸ್ ಶಾಸಕರನ್ನು ತನ್ನತ್ತ ಸೆಳೆದಿರುವ ಬಿಜೆಪಿ ಜೆಡಿಎಸ್‍ಗೆ ಮತ್ತೊಂದು ಭಾರೀ ಶಾಕ್ ಕೊಡಲು ಸಜ್ಜಾಗಿದೆ. ಜೆಡಿಎಸ್‍ನ ಎಲ್ಲ 23 ಶಾಸಕರನ್ನು ಒಂದೇ ಬಂಚ್‍ನಲ್ಲಿ ಸೆಳೆಯಲು ಮಹತ್ವದ ಮಾತುಕತೆ ನಡೆಸುತ್ತಿದೆ ಎನ್ನಲಾಗಿದೆ. ಸಮ್ಮಿಶ್ರ ಸರ್ಕಾರ ಪತನದ ನಂತರ ಜೆಡಿಎಸ್ ಪಕ್ಷವನ್ನು ಸಂಪೂರ್ಣವಾಗಿ ತನ್ನತ್ತ ಸೆಳೆಯಲು ಬಿಜೆಪಿ ರಣತಂತ್ರ ರೂಪಿಸಿದೆ ಎಂದು ತಿಳಿದುಬಂದಿದೆ. ದೇವೇಗೌಡರ ಕುಟುಂಬವನ್ನು ಹೊರತುಪಡಿಸಿ ಎಲ್ಲ 23 ಶಾಸಕರನ್ನು ಬಿಜೆಪಿಗೆ ಕರೆದೊಯ್ಯಲು ಇಬ್ಬರು ಮಾಜಿ ಸಚಿವರೇ ಮುಂದಾಳತ್ವ ವಹಿಸಿದ್ದಾರೆ. ಕುತೂಹಲಕಾರಿ ಅಂಶವೆಂದರೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ ಈ ದಿನದ ರಾಶಿ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ನೋಡಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(7 ನವೆಂಬರ್, 2018) ನಿಮ್ಮ ನಿರ್ಧಾರದಲ್ಲಿ ಪೋಷಕರ ಸಹಾಯ ನಿಮಗೆ ತುಂಬ ಸಹಾಯ ಮಾಡುತ್ತದೆ….

  • ಕಾನೂನು

    ತ್ರಿವಳಿ ತಲಾಖ್‌ ರದ್ದು! ಸುಪ್ರಿಂ ಕೋರ್ಟ್‌ನ ಐತಿಹಾಸಿಕ ತೀರ್ಪು…

    ತ್ರಿವಳಿ ತಲಾಖ್‌ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್‌ ಅನ್ನು ರದ್ದು ಪಡಿಸಿದೆ.