ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು : ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ಗೆ ಅಂದಾಜು ಎರಡು ತಿಂಗಳು ಮಾತ್ರವೇ ಬಾಕಿ ಇದೆ. ಈ ಸಂಬಂಧ ಭಾರತೀಯ ಚುನಾವಣೆ ಆಯೋಗವು ಅಧಿಕೃತವಾಗಿ ಚುನಾವಣಾ ವೇಳಾಪಟ್ಟಿ ಪ್ರಕಟಿಸಬೇಕಿದೆ. ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ವೇಳಾಪಟ್ಟಿ ಕುರಿತಂತೆ ಸಾಕಷ್ಟು ವದಂತಿಗಳು, ತಪ್ಪು ವೇಳಾಪಟ್ಟಿ ಮಾಹಿತಿ ಹಬ್ಬುತ್ತಿವೆ. ನೆಟ್ಟಿಗರು ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ವೇಳಾಪಟ್ಟಿ ಫೋಟೊ ಹಂಚುವಾಗ ಸತ್ಯಾಸತ್ಯತೆ ಪರಿಶೀಲಿಸಬೇಕಾದ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ಪರಿಶೀಲನೆಗೆ ಒಂದುಷ್ಟು ಮಾಹಿತಿ, ಸತ್ಯತೆ ಇಲ್ಲಿ ತಿಳಿಯಬಹುದಾಗಿದೆ.
ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯ ಈ ಹಿಂದಿನ ಹಳೆಯ ವೇಳಾಪಟ್ಟಿಯ ಫೋಟೊವನ್ನೆ ಎಡಿಟ್ ಮಾಡಲಾಗಿದೆ. ಈ ಫೋಟೊದಲ್ಲಿ 2018 ಇರುವ ಕಡೆ 2023 ಎಂದು (ಎಡಿಟ್) ತಿದ್ದಲಾಗಿದೆ. ಆ ಎಡಿಟ್ ಮಾಡಿದ ಫೋಟೊವನ್ನೇ ಎಲ್ಲೆಡೆ ಶೇರ್ ಮಾಡಲಾಗುತ್ತಿದ್ದು, ಅದನ್ನೆ ಪ್ರಸಕ್ತ ಸಾಲಿನ ವಿಧಾನಸಭೆಯ ಚುನಾವಣೆಯ ವೇಳಾಪಟ್ಟಿ ಎಂದು ನಂಬಿಸಲಾಗುತ್ತಿದೆ.
ನಿಜವೇನೋ ಎಂಬಂತೆ 2018ರ ಕರ್ನಾಟಕ ವಿಧಾನಸಭೆಯ ವೇಳಾಪಟ್ಟಿ ಯಾರೋ ಕಿಡಿಗೇಡಿಗಳು ಎಡಿಟ್ ಮಾಡಿದ್ದಾರೆ. ಅದರಲ್ಲಿ ವಿಧಾನಸೌಧದ ಚಿತ್ರ ಸಹಿತ ನೀತಿ ಸಂಹಿತಿ ಜಾರಿ , ಚುನಾವಣಾ ಅಧಿಸೂಚನೆ ಪ್ರಕಟ, ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ, ನಾಮಪತ್ರಗಳ ಪರಿಶೀಲನೆ, ಮತದಾನ, ಮತ ಎಣಿಕೆ ಎಂಬೆಲ್ಲ ಅಂಶಗಳನ್ನು ದಿನಾಂಕ ಸಹಿತ ಸೇರಿಸಲಾಗಿದೆ. ಆದರೆ ಇದು ಐದು ವರ್ಷಗಳ ಹಿಂದಿನ (2018ರ) ಚುನಾವಣೆಯ ವೇಳಾಪಟ್ಟಿ ಎಂಬುದು ಖಚಿತವಾಗಿದೆ. ಹೀಗಿದ್ದರೂ ಇದೇ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಕರ್ನಾಟಕ ವಿಧಾನಸಭೆ 2023ರ ಚುನಾವಣೆ ಬಗ್ಗೆ ಆಯೋಗ ವೇಳಾಪಟ್ಟಿ ಘೋಷಿಸಿಲ್ಲ. ಈ ಬಗ್ಗೆ ಅಧಿಕಾರಿಗಳು ಅಧಿಕೃತವಾಗಿ ಮಾಹಿತಿ ಕೆಲವೇ ದಿನಗಳಲ್ಲಿ ನೀಡಲಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ನಮ್ಮ ಜೀವನ ಶೈಲಿಯಲ್ಲಿ ವ್ಯಕ್ತಿಗಳಿಗಿಂತ ವಸ್ತುಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಸಿಗುತ್ತಿದೆ, ಮೊಬೈಲ್, ಲ್ಯಾಪ್ಟಾಪ್, ಐಪಾಡ್, ಐಫೋನ್ ಇವುಗಳಿಗೆ ಪ್ರಾಮುಖ್ಯತೆ ಹೆಚ್ಚುತ್ತಿದೆ. ನಮಗೆ ಗೊತ್ತಿಲದೇ ಐಫೋನ್ ಕಳೆದರೆ ಚಿಂತೆ ಬೇಡ. ಕಳೆದುಹೋದ ಇಪ್ಪಹೋಣೆ ಹುಡುಕುವುದು ಹೇಗೆ ಎಂಬುದುಗೊತ್ತಾ..?
ಕನ್ನಡದ ಸಿನಿಮಾ ಯಾರಿಗೇನು ಕಡಿಮೆ ಇಲ್ಲದಂತೆ ಒಂದರ ಮೇಲೊಂದು ಹಿಟ್ ಆಗುತ್ತಲೇ ಇವೆ.. ಕಿರಿಕ್ ಪಾರ್ಟಿ, ರಾಜಕುಮಾರ, ಹೆಬ್ಬುಲಿ, ತಾರಕ್, ಈಗ ಇದೇ ಲಿಸ್ಟ್ ಗೆ ಸೇರ್ಪಡೆಯಾಗಲು ಯೂತ್ಸ್ ಸಿನಿಮಾ #ಕಾಲೇಜ್ ಕುಮಾರ್ ಬರುತ್ತಿದೆ.
ವಿದ್ಯುತ್ ಉತ್ಪಾದನೆಗೆ ಹಲವು ಆಯ್ಕೆಗಳಿವೆ. ನೀರು, ಗಾಳಿ, ಬೆಳಕು ಹೀಗೆ ವಿವಿಧ ಮಾದರಿಯಲ್ಲಿ ವಿದ್ಯುತ್ ಉತ್ಪಾದನೆಯ ಹೊರತಾಗಿಯೂ ವಿದ್ಯುತ್ ಗಳಿಸಲು ಜನರು ವಿವಿಧ ಆಯ್ಕೆಗಳನ್ನು ಸಂಶೋಧಿಸುತ್ತಿದ್ದಾರೆ.
ಹಿಂದೊಂದು ದಿನ ಊಟ ಇಲ್ಲದೆ, ಮಲಗೋಕೆ ಜಾಗ ಇಲ್ಲದೆ ಚೆನ್ನೈನ ಫುಟ್ಪಾತ್ ಮೇಲೆ ಇದ್ದ ಈ ಹುಡುಗನ ಇವತ್ತಿನ ಸಾಧನೆ ಕೇಳಿದ್ರೆ ನೀವೆಲ್ಲ ಹುಬ್ಬೇರುಸ್ತೀರಾ. ಜೀವನ ಒಂದೇ ರೀತಿಯಲ್ಲಿ ಯಾವತ್ತೂ ಇರೋದಿಲ್ಲ ಅನ್ನೋದಕ್ಕೆ ಈ ಹುಡುಗನೇ ಸ್ಪಷ್ಟ ಉದಾಹರಣ..
ನಾನು ಜೆಡಿಎಸ್ ಕಳ್ಳರ ಪಕ್ಷ ಅಂತಾ ಹೇಳಿದ್ದೇನೆ ಎಂದು ನನ್ನ ಮೇಲೆ ಒಬ್ಬರು ಆರೋಪ ಮಾಡಿದ್ದಾರೆ. ನಾನು ತುಂಬಾ ನಂಬೋದು ಧರ್ಮಸ್ಥಳದ ಮಂಜುನಾಥ ಸ್ವಾಮಿ. ಆ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡುತ್ತೇನೆ. ಒಂದು ವೇಳೆ ನಾನು ಕಳ್ಳರ ಪಕ್ಷ ಅಂತಾ ಹೇಳಿದ್ದರೆ ಅವ್ರು ಹೇಳಿದ್ದನ್ನ ಕೇಳುತ್ತೇನೆ. ಒಂದು ವೇಳೆ ಹಾಗೆ ಹೇಳಿದ್ದು ಸತ್ಯವಾಗಿದ್ದರೆ ನಾನು ಮಂಡ್ಯ ಅಲ್ಲ, ಸಿನಿಮಾ ಇಂಡಸ್ಟ್ರಿ ಅಲ್ಲ, ಕರ್ನಾಟಕವನ್ನೇ ಬಿಟ್ಟು ಹೋಗುತ್ತೇನೆ. ರಾಜ್ಯ ಬಿಡ್ತೀನಿ ಅಂತಾ ಸುಮ್ಮನೇ ಹೇಳುತ್ತಿಲ್ಲ. ಹಾಗೆ ಹೇಳಿ…
ಜಾಮ್ ಬಾಟ್ಲಿಯ ಮುಚ್ಚಳ ತೆಗೆಯುವುದು ಸಾಹಸದ ಕೆಲಸ. ಎರಡೂ ಕೈಗಳನ್ನು ಚೆನ್ನಾಗಿ ಸೋಪು ನೀರಿನಲ್ಲಿ ತೊಳೆದು ಒಣ ಬಟ್ಟೆಯಲ್ಲಿ ಒರೆಸಿ. ಈಗ ಒಣಗಿದ ಕೈಗಳಿಂದ ಬಾಟ್ಲಿಯ ಮುಚ್ಚಳವನ್ನು ತಿರುಗಿಸಿದರೆ ಸುಲಭವಾಗಿ ತೆರೆಯುವುದು.