ಸುದ್ದಿ

ರೈತರಿಗೆ ಬಂಪರ್ ಕೊಡುಗೆ, ಇನ್ಮುಂದೆ ಪ್ರತಿ ತಿಂಗಳು ಬಂದು ಕೈಸೇರಲಿದೆ 3000 ರೂ…!

81

ನವದೆಹಲಿ: ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಮೊದಲ ಸಂಪುಟ ಸಭೆಯಲ್ಲಿ ರೈತರ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ವಿಸ್ತರಿಸಲಾಗಿದೆ. ಇದರಿಂದ 14.5 ಕೋಟಿ ರೈತರಿಗೆ ಅನುಕೂಲವಾಗಲಿದೆ. ಇದೇ ವೇಳೆ ಪ್ರಧಾನಮಂತ್ರಿ ಕಿಸಾನ್ ಪಿಂಚಣಿ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಮಾಸಿಕ 3000 ರೂ. ಪಿಂಚಣಿ ನೀಡುವ ಮಹತ್ವದ ಯೋಜನೆ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

60 ವರ್ಷ ಮೇಲ್ಪಟ್ಟ ರೈತರಿಗೆ ಮಾಸಿಕ 3000 ರೂ.ಗಳನ್ನು ಕೇಂದ್ರ ಸರ್ಕಾರದಿಂದ ನೀಡಲಾಗುವುದು. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ವಿಸ್ತರಿಸಲಾಗಿದ್ದು, ವಾರ್ಷಿಕ 6000 ರೂ. ನೀಡಲಾಗುವುದು.

ಸಚಿವ ಸಂಪುಟ ಸಭೆಯ ಬಳಿಕ ಸುದ್ಧಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಎರಡೂ ಯೋಜನೆಗಳಿಂದ 26.5 ಕೋಟಿ ರೈತರಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ