ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೂತನ ಸಿಎಂ ಯಡಿಯೂರಪ್ಪ ಮೊದಲ ಪತ್ರಿಕಾಗೋಷ್ಠಿ| ಕಿಸಾನ್ ಸಮ್ಮಾನ್ ಯೋಜನೆಯ ಸಹಾಯಧನ ಹೆಚ್ಚಳ| ಕೇಂದ್ರದ 6 ಸಾವಿರ ರೂ. ಜೊತೆಗೆ ರಾಜ್ಯ ಸರ್ಕಾರದ 4 ಸಾವಿರ ರೂ. ಸೇರ್ಪಡೆ| ರೈತ ಸಮುದಾಯಕ್ಕೆ ವಾರ್ಷಿಕ 10 ಸಾವಿರ ರೂ. ಸಹಾಯಧನ| ನೇಕಾರರ 100 ಕೋಟಿ ರೂ. ಸಾಲಮನ್ನಾ ಘೋಷಿಸಿದ ಸಿಎಂ ಯಡಿಯೂರಪ್ಪ| 2019ರ ಮಾರ್ಚ್ 30ಕ್ಕೆ ಅನ್ವಯವಾಗುವಂತೆ ನೇಕಾರರ 100 ಕೋಟಿ ರೂ. ಸಾಲಮನ್ನಾ|
ಬೆಂಗಳೂರು(ಜು.26): ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ, ಬಿಎಸ್ ಯಡಿಯೂರಪ್ಪ ರಾಜ್ಯದ ರೈತ ಹಾಗೂ ನೇಕಾರ ಸಮುದಾಯಕ್ಕೆ ಭರ್ಜರಿ ಯೋಜನೆ ಘೋಷಿಸಿದ್ದಾರೆ.ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ವಯ ರೈತರಿಗೆ ದೊರೆಯುತ್ತಿದ್ದ ವಾರ್ಷಿಕ 6 ಸಾವಿರ ರೂ.ಗೆ ರಾಜ್ಯ ಸರ್ಕಾರ 4 ಸಾವಿರ ರೂ. ಅಧಿಕವಾಗಿ ಕೊಡಲಿದೆ. ಅಂದರೆ ರಾಜ್ಯದ ರೈತ ಈ ಯೋಜನೆಯಡಿ ವಾರ್ಷಿಕವಾಗಿ ಒಟ್ಟು 10 ಸಾವಿರ ರೂ. ಸಿಗಲಿದೆ.
ರಾಜ್ಯ ಸರ್ಕಾರ ಕೊಡಮಾಡುವ 4 ಸಾವಿರ ರೂ. ಅನ್ನು ಎರಡು ಕಂತುಗಳಲ್ಲಿ ರೈತರಿಗೆ ಸಂದಾಯ ಮಾಡಲಾಗುವುದು ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಈ ಮೂಲಕ ರೈತರಿಗೆ ಕೇಂದ್ರದ 6 ಸಾವಿರ ರೂ. ಹಾಗೂ ರಾಜ್ಯದ 4 ಸಾವಿರ ರೂ. ಸೇರಿದಂತೆ ಒಟ್ಟು 10 ಸಾವಿರ ರೂ. ಸಿಗಲಿದೆ.
ನೇಕಾರ ಸಮುದಾಯಕ್ಕೆ ಬಂಪರ್ : ಇದೇ ವೇಳೆ ರಾಜ್ಯದ ನೇಕಾರರ 100 ಕೋಟಿ ರೂ. ಸಾಲಮನ್ನಾ ಘೋಷಣೆ ಮಾಡಿರುವ ಸಿಎಂ, ನೇಕಾರ ಸಮುದಾಯಕ್ಕೆ ಭರ್ಜರಿ ಕೊಡುಗೆ ಘೋಷಿಸಿದ್ದಾರೆ. 2019ರ ಮಾರ್ಚ್ 30ಕ್ಕೆ ಅನ್ವಯವಾಗುವಂತೆ ನೇಕಾರರ 100 ಕೋಟಿ ರೂ. ಸಾಲಮನ್ನಾ ಮಾಡಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುಜರಾತ್ನ ಬನಸ್ಕಾಂತ ಜಿಲ್ಲೆಯ ಠಾಕೂರ್ ಸಮುದಾಯದಲ್ಲಿ ಯುವತಿಯರು ಮೊಬೈಲ್ ಪೋನ್ ಬಳಕೆ ಮಾಡದಂತೆ ನಿಷೇಧವೇರಿದೆ. ಇನ್ನು ಬೇರೆ ಜಾತಿ ಯುವಕರನ್ನು ಮದುವೆಯಾದರೇ ಭಾರಿ ಮೊತ್ತದ ದಂಡವನ್ನು ಪಾಲಕರಿಗೆ ವಿಧಿಸಲಾಗುವುದು ಜಿಲ್ಲೆಯ 12 ಗ್ರಾಮಗಳಲ್ಲಿ ಈ ಕಾನೂನು ಜಾರಿಗೆ ಬರಲಿದೆ ಎಂದು ಸಮುದಾಯದ ನಾಯಕರು ಹಾಗೂ ಸ್ಥಳೀಯ ಶಾಸಕರು ತಿಳಿಸಿದ್ದಾರೆ. ಮದುವೆಗೂ ಮುನ್ನ ಯುವತಿಯರು ಮೊಬೈಲ್ ಬಳಸಬಾರದು. ಒಂದೆ ವೇಳೆ ಬಳಸಿದರೆ, ಅದಕ್ಕೆ ಹೆತ್ತವರೇ ಜವಾಬ್ದಾರಿಯಾಗಲಿದ್ದಾರೆ. ಇನ್ನು ಸಮುದಾಯದ ಯುವತಿ ಹಾಗೂ ಯುವಕರು ಬೇರೆ ಜಾತಿಯವರನ್ನು ಪ್ರೀತಿಸಿ ಮದುವೆಯಾದರೆ,…
ಸ್ವಾಮಿನಾರಾಯಣ್ ಅಕ್ಷರ್ಧಮ್ ನವದೆಹಲಿ ಹಿಂದೂ ದೇವಾಲಯ, ಮತ್ತು ಭಾರತದ ನವದೆಹಲಿಯಲ್ಲಿರುವ ಆಧ್ಯಾತ್ಮಿಕ-ಸಾಂಸ್ಕೃತಿಕ ಆವರಣ. ಅಕ್ಷರ್ಧಮ್ ದೇವಸ್ಥಾನ ಅಥವಾ ದೆಹಲಿ ಅಕ್ಷರ್ಧಮ್ ಎಂದೂ ಕರೆಯಲ್ಪಡುವ ಈ ಸಂಕೀರ್ಣವು ಸಾಂಪ್ರದಾಯಿಕ ಮತ್ತು ಆಧುನಿಕ ಹಿಂದೂ ಸಂಸ್ಕೃತಿ, ಆಧ್ಯಾತ್ಮಿಕತೆ ಮತ್ತು ವಾಸ್ತುಶಿಲ್ಪದ ಸಹಸ್ರಮಾನಗಳನ್ನು ಪ್ರದರ್ಶಿಸುತ್ತದೆ. ಯೋಗಿಜಿ ಮಹಾರಾಜ್ ಅವರಿಂದ ಸ್ಫೂರ್ತಿ ಪಡೆದ ಮತ್ತು ಪ್ರಮುಖ್ ಸ್ವಾಮಿ ಮಹಾರಾಜ್ ರಚಿಸಿದ ಇದನ್ನು ಬಿಎಪಿಎಸ್ ನಿರ್ಮಿಸಿದೆ. ಈ ದೇವಾಲಯವನ್ನು ನವೆಂಬರ್ 6, 2005 ರಂದು ಪ್ರಮುಖ್ ಸ್ವಾಮಿ ಮಹಾರಾಜ್ ಅವರು ಡಾ. ಎ. ಪಿ….
ಬಿಹಾರ ರಾಜ್ಯದಲ್ಲಿ ರೌದ್ರಾವತಾರ ತೋರುತ್ತಿರುವ ರಣಬಿಸಿಲ ತಾಪಕ್ಕೆ ಬಲಿಯಾದವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದ್ದು, ಈವರೆಗೆ ಬಿಸಿಲ ಝಳಕ್ಕೆ 117 ಮಂದಿ ಮೃತಪಟ್ಟಿದ್ದಾರೆ.ಕಳೆದ 48 ಗಂಟೆಗಳಲ್ಲಿ ಮುಂಗರ್ನಲ್ಲಿ ಕನಿಷ್ಠ 5 ಮಂದಿ ಸಾವನ್ನಪ್ಪಿದ್ದು, ಔರಂಗಾಬಾದ್ ನಲ್ಲಿ 60, ಗಯಾದಲ್ಲಿ 35, ನವಾಡಾದಲ್ಲಿ 7, ಕೈಮುರ್ ನಲ್ಲಿ 2, ಅರ್ರಾ, ಸಮಸ್ತಿಪುರ್ ನಲ್ಲಿ ತಲಾ 1 ಮತ್ತು ನಳಂದದಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ರಣ ಬಿಸಿಲಿಗೆ ಸಾರ್ವಜನಿಕರು ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಗಯಾ ಜಿಲ್ಲಾಧಿಕಾರಿ ಅಭಿಷೇಕ್…
ನವದೆಹಲಿ: ಸುದೀರ್ಘವಾಗಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದೆ. ಕೊನೆ ಹಂತದ ಮತದಾನ ಮುಗಿದ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿದ್ದು, ಎನ್.ಡಿ.ಎ. ಬಹುಮತ ಗಳಿಸಲಿದೆ ಎಂದು ಬಹುತೇಕ ಸಮೀಕ್ಷೆಗಳಲ್ಲಿ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 24 ರಂದು ಹೊಸ ಸರ್ಕಾರ ರಚನೆಗೆ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಪಕ್ಷಗಳ ನಾಯಕರು ನಾಳೆ ದೆಹಲಿಗೆ ತೆರಳಿ ಸಭೆ ನಡೆಸಲಿದ್ದಾರೆ.ಪ್ರ ಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿಯ ಹಿರಿಯ…
ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಹ್ವಾನ ನೀಡಿದ್ದಾರೆ.
ನಮ್ಮ ಭಾರತೀಯ ಹಿಂದೂ ದೇವಾಲಯಗಳು ತನ್ನದೆಯಾದ ವಿಶೇಷತೆಯನ್ನು ಹೊಂದಿದೆ. ಹಾಗು ಈ ದೇವಾಲಯ ಹಲವಾರು ಮಹತ್ವವನ್ನು ಹೊಂದಿದೆ, ಅಲ್ಲದೆ ಬೇರೆ ಬೇರೆ ರೀತಿಯಲ್ಲಿ ಪ್ರಸಿದ್ದಿ ಪಡೆದಿದೆ.